ಶಿಥಿಲಾವಸ್ಥೆಯಲ್ಲಿರುವ ಕಾಲುಸಂಕ, ಸೇತುವೆಗಳನ್ನು ಗುರುತಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು : ಕೃಷ್ಣ ಭೈರೇಗೌಡ

Saturday, August 17th, 2024
ಶಿಥಿಲಾವಸ್ಥೆಯಲ್ಲಿರುವ ಕಾಲುಸಂಕ, ಸೇತುವೆಗಳನ್ನು ಗುರುತಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು : ಕೃಷ್ಣ ಭೈರೇಗೌಡ

ಮಂಗಳೂರು : ರಾಜ್ಯದಲ್ಲಿ ಭಾರಿ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಪರಿಶೀಲಿಸಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ವಿಡಿಯೋ ಕಾನ್ಫೆರೆನ್ಸ್ ಸಭೆಯು ನಡೆಯಿತು. ಸಚಿವರು ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ಭಾರಿ ಮಳೆಯಿಂದ ಹಲವಾರು ಹಾನಿಗಳು ಉಂಟಾಗಿದ್ದು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಿದರು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ಯನ್ನು ಸ್ಥಾಪಿಸಬೇಕು. ಶಿಥಿಲ ಅವಸ್ಥೆಯಲ್ಲಿರುವಂತಹ ಶಾಲೆಗಳು ಅಂಗನವಾಡಿಗಳನ್ನು ಗುರುತಿಸಿ ಕೂಡಲೇ ಸ್ಥಳಾಂತರಿಸಬೇಕು ಹಾಗೂ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಶಿಥಿಲಾವಸ್ಥೆಯಲ್ಲಿರುವ ಕಾಲುಸಂಕ, […]

ಪುರಭವನದಲ್ಲಿ ಶ್ರಾವಣ ಸಂಭ್ರಮ ಕವಿಗೋಷ್ಠಿ, ಸಾಧಕರಿಗೆ ಸನ್ಮಾನ

Saturday, August 17th, 2024
shravana-sambrama

ಮಂಗಳೂರು : ಆಷಾಡದ ಬಿರುಸಿನ ಮಳೆಯ ಸಂಕಷ್ಟಗಳನ್ನು ಮನೆಯ ಒಳಗೆ ಅನುಭವಿಸಿ ಪರಿಸರದ ಬದುಕಿಗೆ ತೆರೆದುಕೊಳ್ಳುವ ಮೂಲಕ ಹಬ್ಬ ಹರಿದಿನಗಳಲ್ಲಿ ಸಂತೋಷ ಕಂಡುಕೊಳ್ಳುವುದಕ್ಕೇ ಶ್ರಾವಣ ಬಂದಿದೆ. ಹೆಂಗಸರೆಲ್ಲ ವರಮಹಾಲಕ್ಷ್ಮಿಯನ್ನು ಪೂಜಿಸಿ, ಮನೆ ಮತ್ತು ಮನಸಿನ ಸಂಕಟಗಳನ್ನು ಕಳೆಯಲು ಉಪವಾಸ ವೃತಗಳನ್ನು ಕೈಗೊಳ್ಳುವ ಈ ತಿಂಗಳ ದಿನಗಳು ಎಲ್ಲರ ಸಂಭ್ರಮದ ದಿನಗಳಾಗಿರುತ್ತವೆ ಎಂದು ಭುವನೇಂದ್ರ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಸುಲೋಚನ ಪಚಿನಡ್ಕ ರವರು ಹೇಳಿದರು. ಅವರು ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು 16-08-2024 ರಂದು ಮಂಗಳೂರು […]

ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ

Saturday, August 17th, 2024
ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ

ಮಾಣಿಲ : ಧಾರ್ಮಿಕ ಕಾರ್ಯಕ್ರಮಗಳಲ್ಲಿ ಯುವ ಪೀಳಿಗೆಯನ್ನು ಹೆಚ್ಚುತೊಡಗಿಸಿಕೊಳ್ಳುವಂತೆ ಮಾಡಬೇಕು. ಭೂಮಿಯ ಋಣವನ್ನು ಜನ್ಮದಲ್ಲಿ ತೀರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು. ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಮಡಿಕೇರಿ ನ್ಯಾಯಾಧೀಶೆ ರೇಣುಕಾ ಮಾತನಾಡಿ ನಾವು ಮಾಡುವ ಸೇವೆಯಲ್ಲಿ ತೃಪ್ತ್ತಿ ಕಾಣುವ ಕೆಲಸವಾಗಬೇಕು. ಬಡವರ ಕಷ್ಟಕ್ಕೆ ಸ್ಪಂದಿಸುವ ಜತೆಗೆ ತಾಯಿಯ ಸೇವೆಯಲ್ಲಿ ತೊಡಗಿಸಿಕೊಳ್ಳಲು […]

ಸ್ವಾತಂತ್ರ್ಯೋತ್ಸವ ಭಾಷಣ : ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸರಿಗೆ ದೂರು

Friday, August 16th, 2024
nagesh-kumar gowda

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ಸಮಾಜದಲ್ಲಿ ಹಿಂದೂ-ಮುಸ್ಲಿಂ ಸಮುದಾಯದವರಲ್ಲಿ ಕಂದಕವನ್ನು ಸೃಷ್ಟಿ ಮಾಡಿ ಸಮಾಜದ ನೆಮ್ಮದಿ ಮತ್ತು ಶಾಂತಿಯನ್ನು ಕದಡುವಂತೆ ಪ್ರೇರೇಪಿಸುತ್ತಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಮಹಾತ್ಮ ಗಾಂಧೀಜಿಯ ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ತಾಲೂಕು […]

ವೃತ್ತಿ-ಉದ್ಯೋಗ ಆಯ್ಕೆಗೂ ಕಾಲಿಟ್ಟ ಕೃತಕ ಬುದ್ದಿಮತ್ತೆ!

Friday, August 16th, 2024
ವೃತ್ತಿ-ಉದ್ಯೋಗ ಆಯ್ಕೆಗೂ ಕಾಲಿಟ್ಟ ಕೃತಕ ಬುದ್ದಿಮತ್ತೆ!

ಮಂಗಳೂರು: ಪ್ರಸ್ತುತ ದೇಶದಲ್ಲಿ 250 ಕ್ಕೂ ಹೆಚ್ಚು ವಿವಿಧ ರೀತಿಯ ಉದ್ಯೋಗಗಳು, ವೃತ್ತಿ ಅವಕಾಶಗಳಿದ್ದರೂ, 14 ರಿಂದ 21 ವರ್ಷ ವಯೋಮಾನದ 93% ವಿದ್ಯಾರ್ಥಿಗಳು ಕೇವಲ ಏಳು ಏಳು ವೃತ್ತಿಗಳ ಬಗ್ಗೆ ಮಾತ್ರ ತಿಳಿದಿದ್ದಾರೆ ಅನ್ನುವ ನಾನಾ ಸಮೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು, ನಗರದಲ್ಲಿ ಇದೆ ಮೊದಲ ಬಾರಿಗೆ ಕೃತಕ ಬುದ್ದಿಮತ್ತೆ ಆಧಾರಿತ, ಸುಧಾರಿತ ವೃತ್ತಿ ಮೌಲ್ಯಮಾಪನ ಬಳಸಿಕೊಂಡು, ಯುವ ವರ್ಗಕ್ಕೆ ಅವರಿಗೆ ಸೂಕ್ತ ವೃತ್ತಿ ಸಲಹೆ, ಶಿಕ್ಷಣ ನೀಡುವ ಡ್ರಾ ಮೈ ಕೆರಿಯರ್ ಸಂಸ್ಥೆ ನಗರದಲ್ಲಿ ಆರಂಭವಾಗಲಿದೆ. 175 […]

ಅಡ್ಡೂರು ಸೇತುವೆ ಘನ ವಾಹನ ಸಂಚಾರ ನಿಷೇಧ – ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಂಕಷ್ಟ

Friday, August 16th, 2024
adooru-bridge

ಬಂಟ್ವಾಳ : ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮಂಗಳೂರು ಲೋಕೋಪಯೋಗಿ ಇಲಾಖೆಯಡಿಯಲ್ಲಿ ಬರುವ ಅಡ್ಡೂರು ಪಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ತನ್ನ ಸಾಮಾರ್ಥ್ಯವನ್ನು ಕಳೆದುಕೊಂಡ ಕಾರಣ ಘನವಾಹನ ಸಂಚಾರ ನಿಷೇಧಿಸಿ ದ..ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅದೇಶ ನೀಡಿದ್ದರು. ಹಳೆ ಸೇತುವೆಗಳ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ಅಡ್ಡೂರ ಸೇತುವೆಯಲ್ಲಿ ಸಂಚಾರ ನಿಷೇಧಗೊಳಿಸಿ ಆದೇಶ ಹೊರಡಿಸಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರೊಂದಿಗೆ ಆ. ೧೬ರಂದು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ […]

ಮಂಗಳೂರು ನೆಹರೂ ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

Thursday, August 15th, 2024
78th independece

ಮಂಗಳೂರು : ದಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೆಹರೂ ಮೈದಾನದಲ್ಲಿ ದ.ಕ ಜಿಲ್ಲಾಡಳಿತ ಆಯೋಜಿಸಿದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಇದಕ್ಕೂ ಮೊದಲು ಪೊಲೀಸ್ ವಾದ್ಯವೃಂದ, ಸಂಚಾರಿ ಪೊಲೀಸ್, ಅಬಕಾರಿ ಇಲಾಖೆ, ಗೃಹ ರಕ್ಷಕ ದಳ, ಆರ್ ಎಸ್ ಪಿ ಬಾಲಕ- ಬಾಲಕಿಯರ ತಂಡ, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾ ದಳ ತಂಡಗಳು ಸೇರಿದಂತೆ ಒಟ್ಟು 16 ತಂಡಗಳಿಂದ ಪಥಸಂಚಲನ ನಾಡೆಯಿತು. ರಾಜ್ಯದಲ್ಲಿ ಸುಸ್ಥಿರ ಮೂಲಸೌಕರ್ಯ […]

ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Thursday, August 15th, 2024
hebbalkar

ಉಡುಪಿ: ಕಳೆದ ವರ್ಷ ಗ್ಯಾರಂಟಿ ಯೋಜನೆಗಳಿಂದ 7 ಕೋಟಿ ಜನರಿಗೆ ಅನುಕೂಲವಾಗಿದೆ. 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ. ಇದುವರೆಗೂ ಬಜೆಟ್ ನಲ್ಲಿ ಶೇ. 4 ರಿಂದ 5 ರಷ್ಟು ಅನುದಾನ ಮಾತ್ರ ಬಡವರಿಗೆ ಹಂಚಿಕೆಯಾಗುತ್ತಿತ್ತು. ಈ ಬಾರಿ ಬಜೆಟ್ ‌ನಲ್ಲಿ ಶೇ. 15 ರಷ್ಟು ಅನುದಾನ ಬಡವರಿಗೆ ಹಂಚಿಕೆಯಾಗಿರುವುದು ವಿಶೇಷ. ಇದರಿಂದ ಬಡವರ ಬದುಕು ಸುಧಾರಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ […]

ದುರಂತ ಮರಣವನ್ನಪ್ಪಿದ ಮೂವರಿಗೆ ಮಂಗಳೂರು ಮೇಯರ್ ರಿಂದ ಪರಿಹಾರ ವಿತರಣೆ

Wednesday, August 14th, 2024
sudhir-shetty

ಮಂಗಳೂರು : ಮಹಾನಗರ ಪಾಲಿಕೆಯ ವ್ಯಾಪ್ತಿಯ ಕೊಟ್ಟಾರಚೌಕಿಯಲ್ಲಿ ರಿಕ್ಷಾ ತೋಡಿಗೆ ಬಿದ್ದು ದುರ್ಮರಣವನ್ನಪ್ಪಿದ ದೀಪಕ್ ಅಚಾರ್, ಅವರಿಗೆ ತಾಯಿ ಚಿನ್ನಮ್ಮ ಆಚಾರ್ ಅವರಿಗೆ ಪಾಂಡೇಶ್ವರದಲ್ಲಿ ರೈಲ್ವೆ ನಿಲ್ದಾಣದ ಬಳಿ ರಿಕ್ಷಾ ತೊಳೆಯುತ್ತಿದ್ದಾಗ ವಿದ್ಯುತ್ ತಂತಿ ಬಿದ್ದು,ಮೃತಪಟ್ಟ ರಾಜು‌ ಅವರ ಪತ್ನಿ ವಿಜಯ ಅವರಿಗೆ, ಹಾಗೂ ದೇವರಾಜು ಪತ್ನಿ ಭವಾನಿ ಅವರಿಗೆ ತಲಾ ಒಂದು ಲಕ್ಷ ರೂ.ಪ್ರಾಕೃತಿಕ ವಿಕೋಪ ದಡಿ ಪರಿಹಾರವನ್ನು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಹಸ್ತಾಂತರಿಸಿದರು. ಮಾನವೀಯ ನೆಲೆಯಲ್ಲಿ ಪಾಲಿಕೆ ಹಸ್ತಾಂತರ ಮಾಡಿದ ಗರಿಷ್ಟ […]

ಶಾಸಕ ವೇದವ್ಯಾಸ ಕಾಮತ್ ನಿವಾಸದಲ್ಲಿ ಹರ್ ಘರ್ ತಿರಂಗ

Wednesday, August 14th, 2024
Tiranga

ಮಂಗಳೂರು : ದೇಶವು 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹೊಸ್ತಿಲಲ್ಲಿದ್ದು ಹೆಮ್ಮೆಯ ಪ್ರಧಾನಿ ನರೇಂದ್ರ ಮೋದೀಜಿಯವರ ಕರೆಯಂತೆ ನಮ್ಮೆಲ್ಲರ ಮನೆಗಳಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸುವ ಅಭಿಯಾನದಲ್ಲಿ ಪಾಲ್ಗೊಳ್ಳೋಣವೆಂದು ಶಾಸಕ ವೇದವ್ಯಾಸ ಕಾಮತ್ ಅವರು ಹೇಳಿದರು. ತಮ್ಮ ನಿವಾಸದಲ್ಲಿ ಧ್ವಜವನ್ನು ಕಟ್ಟಿ ಮಾತನಾಡಿದ ಶಾಸಕರು ಆಗಸ್ಟ್ 13 ರಂದು ಆರಂಭವಾಗಿರುವ ಈ ಅಭಿಯಾನ ಆಗಸ್ಟ್ 15ರ ಸಂಜೆ ಕೊನೆಗೊಳ್ಳಲಿದೆ. ದೇಶವನ್ನು ಕಟ್ಟಲು ಅನೇಕ ಮಹನೀಯರು ತಮ್ಮ ಅಮೂಲ್ಯ ಬದುಕನ್ನೇ ಮುಡಿಪಾಗಿಟ್ಟಿದ್ದು ತಾಯಿ ಭಾರತಿಯನ್ನು ಬ್ರಿಟಿಷ್ ದಾಸ್ಯದಿಂದ ಮುಕ್ತಿಗೊಳಿಸುವ ಹೋರಾಟದಲ್ಲಿ ಕೆಲವರು […]