ಒಂಬತ್ತನೇ ಮಹಡಿಯಿಂದ ಬಿದ್ದ ಭದ್ರತಾ ಸಿಬ್ಬಂದಿ ಮೃತ್ಯು

Monday, November 23rd, 2020
mutturaj

ಮಂಗಳೂರು : ಒಂಬತ್ತನೇ ಮಹಡಿಯಿಂದ  ಕಾಲು ಜಾರಿ ಕೆಳಗೆ ಬಿದ್ದ ಭದ್ರತಾ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲದಲ್ಲಿ ನಡೆದಿದೆ. ಇಲ್ಲಿನ ಠಾಣಾ ವ್ಯಾಪ್ತಿಯ ನಗರಸಭೆ ಕಚೇರಿ ಬಳಿ ಇರುವ ಇನ್‌ಪಾಲ ಬಹುಮಹಡಿ ಕಟ್ಟಡದಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಚೆಂಬುಗುಡ್ಡೆ ನಿವಾಸಿ ಮುತ್ತುರಾಜ(55) ಎಂದು ಗುರುತಿಸಲಾಗಿದೆ. ಕಟ್ಟಡದ 9ನೆ ಮಹಡಿಗೆ ತೆರಳಿದ್ದ ಅವರು, ಟ್ಯಾಂಕ್ ನಲ್ಲಿ ನೀರು ಪರಿಶೀಲನೆ ಮಾಡುತ್ತಿದ್ದ ಸಂದರ್ಭ ಅಕಸ್ಮಾತ್ ಕಾಲುಜಾರಿ ಕೆಳಗೆ ಬಿದ್ದಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರರಕಣ ದಾಖಲಾಗಿದೆ.

ಕುದ್ರೆಬೆಟ್ಟು ಎಂಬಲ್ಲಿ ಕಾರು ಮತ್ತು ಬೈಕ್ ಅಪಘಾತ ಕಲ್ಲಡ್ಕ ನಿವಾಸಿ ಮೃತ್ಯು

Monday, November 23rd, 2020
Yatiraj

ಬಂಟ್ವಾಳ : ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ರವಿವಾರ ರಾತ್ರಿ ನಡೆದಿದೆ. ಕಲ್ಲಡ್ಕ ನಿವಾಸಿ, ಸಂಘಪರಿವಾರದ ಕಾರ್ಯಕರ್ತ ಯತಿರಾಜ್ (30) ಮೃತ ಯುವಕ. ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಓಮ್ನಿ ಕಾರು ಯತಿರಾಜ್ ಸಂಚರಿಸುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡಿದ್ದ ಯತಿರಾಜ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ […]

ದ.ಕ. ಜಿಲ್ಲೆಯಲ್ಲಿ ಹೊಸದಾಗಿ 46 ಮಂದಿಯಲ್ಲಿ ಸೋಂಕು, ಮೂವರು ಮೃತ

Sunday, November 22nd, 2020
corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಹೊಸದಾಗಿ 46 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಕೊರೋನ ಸೋಂಕಿನಿಂದಾಗಿ ಮತ್ತೆ ಮೂವರು ಮೃತಪಟ್ಟಿದ್ದಾರೆ ಶನಿವಾರ  92 ಮಂದಿ ಕೊರೋನ ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿನ 31,520 ಸೋಂಕಿತರ ಪೈಕಿ 30,234 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ಗೆ ಜಿಲ್ಲೆಯಲ್ಲಿ 704 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 582 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 13,714 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೆ 14,83,612 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆ ತಿಳಿಸಿದೆ.

ಮಂಗಳೂರು ವ್ಯಾಪ್ತಿಯ ಎಂಟು ಪೊಲೀಸರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ

Friday, November 20th, 2020
Police Medal

ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಎಸ್ಪಿ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ಸಲ್ಲಿಸಿದ ಎಂಟು ಮಂದಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಶುಕ್ರವಾರ ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಪಶ್ಚಿಮ ವಲಯದ ಬೆರಳಚ್ಚು ವಿಭಾಗದ ಡಿವೈಎಸ್ಪಿ ಗೌರೀಶ್ ಎ.ಸಿ., ಪಣಂಬೂರು ಪೊಲೀಸ್ ಇನ್‌ಸ್ಪೆಕ್ಟರ್ ಆಗಿದ್ದು, ಪ್ರಸ್ತುತ ಬೆಂಗಳೂರು ವಿವೇಕ ನಗರ ಇನ್‌ಸ್ಪೆಕ್ಟರ್ ಆಗಿರುವ ರಫೀಕ್ ಕೆ.ಎಂ., ಸಿಸಿಬಿ ಎಎಸ್‌ಐ ಆಗಿರುವ ಹರೀಶ್ ಪದವಿನಂಗಡಿ, ಎನ್‌ಸಿಪಿಎಸ್‌ನ ಚಂದ್ರಶೇಖರ್, ಡಿಸಿಐಬಿನ ಉದಯ ರೈ ಮಂದಾರ, ಸಿಎಆರ್ ಹೆಡ್ ಕಾನ್‌ಸ್ಟೇಬಲ್ […]

ಜ್ಯೋತಿಷಿಯಂತೆ ನಟಿಸಿ ಹಲವಾರು ಮಂದಿಗೆ ವಂಚನೆ

Friday, November 20th, 2020
Jyotishi

ಪುತ್ತೂರು :  ನಕಲಿ ಜ್ಯೋತಿಷಿಯೊಬ್ಬ ಜನರಿಂದ ಹಣ  ಪಡೆದು ವಂಚಿಸಿದ  ವಿಡಿಯೋವೊಂದು  ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಮಂಡ್ಯದ  ವ್ಯಕ್ತಿ  ಜ್ಯೋತಿಷಿಯಂತೆ ನಟಿಸಿದನ್ನು ಹಲವಾರು  ಮಂದಿ ನಂಬಿದ್ದರು.  ಹಣ ಕೊಟ್ಟ ಬಳಿಕ ಅವರಿಗೆ ಮೋಸದ ಅರಿವಾಗಿದೆ ಎಂದು ಹೇಳಲಾಗಿದೆ. ಈ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಜ್ಯೋತಿಷಿ ಹಲವಾರು ಜನರಿಂದ ಹಣ ತೆಗೆದುಕೊಂಡು ವಂಚನೆ ಮಾಡಿದ್ದರಿಂದ , ಅವರು ಜ್ಯೋತಿಷಿಯ ಕಚೇರಿಗೆ ಧಾವಿಸಿ ತಮ್ಮ ಹಣವನ್ನು ಮರುಪಾವತಿಸುವಂತೆ ಒತ್ತಾಯಿಸಿದ್ದಾರೆ. ನಕಲಿ ಜ್ಯೋತಿಷಿ ಗೂಗಲ್‌ ಪೇ ಮೂಲಕ ಹಣವನ್ನು ಪಡೆಯುತ್ತಿದ್ದ ಎಂದು ಹೇಳಲಾಗಿದೆ. ವಿಡಿಯೋ  ವೈರಲ್ ಆಗುತ್ತಿದ್ದಂತೆ ಜ್ಯೋತಿಷಿ ಗೂಗಲ್‌ ಪೇ […]

ಸುರತ್ಕಲ್: ಪ್ರಯಾಣಿಕನ ಜೀವ ಉಳಿಸಲು ಆಸ್ಪತ್ರೆ ಅಲೆದಾಡಿದ ಬಸ್ ನಿರ್ವಾಹಕ

Friday, November 20th, 2020
Ganesh

ಮಂಗಳೂರು  : ತನ್ನ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಜೀವ ಉಳಿಸಲು ನಿರ್ವಾಹಕನೋರ್ವ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಲು ಸ್ವತಹ ಮುಂದಾಗಿ ಮಾನವೀಯತೆ ಮೆರೆದಿದ್ದಾರೆ. ಗಣೇಶ್ ಅವರು ಕಳೆದ  ನವಂಬರ್ 16 ರಂದು ಬೆಳಗ್ಗೆ ಎಂದಿನಂತೆ  ಬಜಪೆ ಕೈಕಂಬ ಮಾರ್ಗವಾಗಿ ಸಂಚರಿಸುವ ಶಾನ್ ಎಂಬ ಸರ್ವಿಸ್ ಬಸ್ ನಲ್ಲಿ ತನ್ನ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ದಿನ ಪ್ರಯಾಣಿಸುತ್ತಿದ್ದ ಉತ್ತರಪ್ರದೇಶದ ವಾರಣಾಸಿ ನಿವಾಸಿ ರಾಜೇಶ್ ಚೌಹಾನ್ (40) ಸುರತ್ಕಲ್ ಸಮೀಪದ ಕಾಟಿಪಳ್ಳ ಬಳಿ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದರು.ತಕ್ಷಣ ಗಣೇಶ್ […]

ತಲಪಾಡಿಯ ಶಾರದಾ ಆಸ್ಪತ್ರೆಯಲ್ಲಿ ಪೋಸ್ಟ್-ಕೋವಿಡ್ ಆಯುಷ್ ಕೇರ್ ಕೇಂದ್ರ ಲೋಕಾರ್ಪಣೆ

Friday, November 20th, 2020
sharadha

ಮಂಗಳೂರು  : ಬಹು ನಿರೀಕ್ಷೆಯ ಪೋಸ್ಟ್-ಕೋವಿಡ್ ಆಯುಷ್ ಕೇರ್ ಕೇಂದ್ರವನ್ನು ನವೆಂಬರ್ 18 ರಂದು ಮಂಗಳೂರಿನ ತಲಪಾಡಿಯ ಶಾರದಾ ಆಯುರ್ಧಾಮ ಕ್ಯಾಂಪಸ್‌ನಲ್ಲಿ ಉದ್ಘಾಟಿಸಲಾಯಿತು. ಕೋವಿಡ್19ನಿಂದ ಗುಣಮುಖರಾದರೂ ಹಲವರಲ್ಲಿ ಬಳಲಿಕೆ, ಮೈಕೈ ನೋವು, ಉಸಿರಾಟದ ತೊಂದರೆ, ಶ್ವಾಸಕೋಶದ ಸಮಸ್ಯೆ, ತಲೆನೋವು, ನರದೌರ್ಬಲ್ಯ, ಮಲಬದ್ಧತೆ, ಮತ್ತು ಮಾನಸಿಕವಾಗಿ ಒತ್ತಡ, ಆತಂಕ, ಖಿನ್ನತೆಯಂತಹ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಕೋವಿಡ್ ನಂತರದ ಆರೈಕೆ ಸೇವೆಗಳ ಅಗತ್ಯವನ್ನು ಪರಿಗಣಿಸಿ, ಮಂಗಳೂರಿನ ತಲಪಾಡಿಯಲ್ಲಿರುವ ಶಾರದಾ ಆಯುರ್ವೇದ, ಪ್ರಕೃತಿಚಿಕಿತ್ಸೆ ಮತ್ತು ಯೋಗ ಆಸ್ಪತ್ರೆಗಳು, ಈ ಕೇಂದ್ರವನ್ನು ತೆರೆದಿದ್ದು, ಕಡಿಮೆ […]

ಕಾಸರಗೋಡಿನಲ್ಲಿ ಚಾಲನಾ ಲೈಸನ್ಸ್ ಪಡೆಯಲು ಕೋವಿಡ್ ನೆಗಟಿವ್ ಸರ್ಟಿಫಿಕೇಟ್ ಕಡ್ಡಾಯ

Friday, November 20th, 2020
SajithBabu

ಕಾಸರಗೋಡು : ವಾಹನ ಚಾಲನಾ ಲೈಸನ್ಸ್ ಪಡೆಯಲು ಅರ್ಜಿ ಜೊತೆ ಕೋವಿಡ್ ನೆಗಟಿವ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಗುರುವಾರ 145 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಾಞಂಗಾಡ್ ಕಿಯಾಸ್ಕ್ ನಲ್ಲಿ ಉಚಿತ ಆಂಟಿಜನ್ ಟೆಸ್ಟ್ ಸೌಲಭ್ಯ ಕಲ್ಪಿಸಲಾಗಿದ್ದು, ಈ ಪರಿಸರದ ವರ್ತಕರು, ನೌಕರರು, ಚಾಲಕರು, ಸರಕಾರಿ ನೌಕರರು 14 ದಿನಗಳಿಗೊಮ್ಮೆ ತಪಾಸಣೆಗೆ ಒಳಗಾಗಬೇಕು. ಜಿಲ್ಲೆಯಲ್ಲಿ 145 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, 137 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿದೆ.  ಈಗ […]

ಮಲೈಕಾ ದಿಂದ ಗ್ರಾಹಕರಿಂದ ಕೋಟ್ಯಂತರ ರೂ. ವಂಚನೆ

Thursday, November 19th, 2020
Malaika

ಮಂಗಳೂರು : ಮಲೈಕಾ ಸೊಸೈಟಿ ಹೆಸರಲ್ಲಿ ಗ್ರಾಹಕರಿಗೆ ಕೋಟ್ಯಂತರ ರೂ. ಠೇವಣಿ ಸಂಗ್ರಹಿಸಿ ಅವಧಿ ಪೂರ್ಣಗೊಂಡಾಗ ಅದನ್ನು ಹಿಂತಿರುಗಿಸದೆ ವಂಚನೆ ಮಾಡಿದ ಬಗ್ಗೆ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಮಂಗಳೂರು, ತೊಕ್ಕೊಟ್ಟು, ಬಂಟ್ವಾಳ, ಪುತ್ತೂರು, ಸುಳ್ಯ, ವಿಟ್ಲ, ಮೂಡುಬಿದಿರೆ ಮೊದಲಾದ ಕಡೆ ಮಲೈಕಾ ಎಲೆಕ್ಟ್ರಾನಿಕ್ಸ್ ಮಳಿಗೆಗಳಿವೆ. ಇದರ ಜೊತೆ ಮುಂಬೈ, ಮಂಗಳೂರು, ಉಡುಪಿ ಮತ್ತಿತರ ಕಡೆ ಮಲೈಕಾ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿ ಶಾಖೆಗಳನ್ನು ಸ್ಥಾಪಿಸಿ ಅದರಲ್ಲಿ ಸಂಗ್ರಹವಾದ ಠೇವಣಿ ಹಣವನ್ನು ಮಾಲಕರು ತಮ್ಮ ಖಾತೆಗೆ ಜಮೆ ಮಾಡಿರುವುದು ಬೆಳಕಿಗೆ […]

ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ರಿಗೆ ಕೋವಿಡ್​ ಸೋಂಕು ದೃಢ

Thursday, November 19th, 2020
DV Sadananda Gowda

ಮಂಗಳೂರು  : ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರಿಗೆ ಕೋವಿಡ್ ಸೋಂಕು ದೃಢವಾಗಿದೆ. ಈ ಕುರಿತು ಅಧಿಕೃತವಾಗಿ ಟ್ವಿಟರ್ನಲ್ಲಿ ತಿಳಿಸಿರುವ ಸಚಿವರು, ಕೊರೋನಾ ಸೋಂಕಿನ ಪ್ರಾಥಮಿಕ ಲಕ್ಷಣಗಳ ಹಿನ್ನಲೆ ಪರೀಕ್ಷೆಗೆ ಒಳಗಾಗಿದ್ದೆ. ಈ ವೇಳೆ ಸೋಂಕು ದೃಢಪಟ್ಟಿದೆ. ಈ ಹಿನ್ನಲೆ ಪ್ರತ್ಯೇಕ ವಾಸಕ್ಕೆ ಒಳಗಾಗಿತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಒಳಗಾದವರು ಮುಂಜಾಗ್ರತೆ ವಹಿಸುವುದರೊಂದಿಗೆ ಪರೀಕ್ಷೆಗೆ ಒಳಪಡಿ ಎಂದು ಮನವಿ ಮಾಡಿದ್ದಾರೆ. ಇನ್ನು ಸಚಿವರು ಕೊರೋನಾ ಸೋಂಕಿಗೆ ಒಳಗಾಗಿದ್ದ ಸುದ್ದಿ ತಿಳಿಯುತ್ತಿದ್ದಂತೆ […]