ಉಡುಪಿ ಬಸ್ ನಲ್ಲಿ ಯುವತಿ ಅಸ್ವಸ್ಥ, ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಸಿಬ್ಬಂದಿ

Monday, August 5th, 2024
naveen-bus

ಉಡುಪಿ : ಸೋಮವಾರ ಆಗಸ್ಟ್ 5 ರ ಬೆಳಿಗ್ಗೆ ಶಿರ್ವದಿಂದ ಉಡುಪಿಗೆ ಹೋಗುತ್ತಿದ್ದ ‘ನವೀನ್’ ಎಂಬ ಬಸ್ ನಲ್ಲಿ ಯುವತಿಯೊಬ್ಬಳು ಅಸ್ವಸ್ಥಳಾಗಿದ್ದು. ಆಕೆಯನ್ನು ಬಸ್ ಚಾಲಕ, ನಿರ್ವಾಹಕರೇ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ. ಬಸ್ಸುಉಡುಪಿಯ ಹಳೆ ತಾಲೂಕು ಕಚೇರಿ ಬಳಿ ತಲುಪಿದಾಗ ಅದರಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಅಸ್ವಸ್ಥಳಾಗಿದ್ದಾಳೆ. ಬಸ್ ನಲ್ಲೇ ವಾಂತಿ ಮಾಡಿದ ಆಕೆ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಳು. ಕೂಡಲೇ ಬಸ್ ನ ಚಾಲಕ ಶಶಿಕಾಂತ್ ಮತ್ತು ನಿರ್ವಾಹಕ ಸಲೀಂ ಅವರು ಬಸ್ಸನ್ನು ನೇರವಾಗಿ ಹತ್ತಿರದ ಡಾಕ್ಟರ್ […]

ಕಾಸರಗೋಡು ಜಿಲ್ಲಾ ನ್ಯಾಯಾಲಯದೊಳಗೆ ನುಗ್ಗಿದ ಅಪರಚಿತ ವ್ಯಕ್ತಿ

Monday, August 5th, 2024
Kasaragod Jail

ಕಾಸರಗೋಡು : ಅಪರಚಿತ ವ್ಯಕ್ತಿಯೋರ್ವ ಜಿಲ್ಲಾ ನ್ಯಾಯಾಲಯ ಸಮುಚ್ಛಯದೊಳಗೆ ನುಗ್ಗಿದ ಘಟನೆ ಶನಿವಾರ ರಾತ್ರಿ ನಡೆದಿದೆ. ನ್ಯಾಯಾಲಯದ ಕಾವಲುಗಾರ ನನ್ನು ಕಂಡು ಈತ ಪರಾರಿಯಾಗಿದ್ದಾನೆ. ನ್ಯಾಯಾಲಯ ಕಟ್ಟಡದೊಳಗೆ ನುಗ್ಗಿದ ಈತ ಜಿಲ್ಲಾ ನ್ಯಾಯಾಧೀಶ ರವರ ಕಚೇರಿ ತನಕ ತೆರಳಿದ್ದು , ಈತನ ಬಳಿ ಕಬ್ಬಿಣದ ರಾಡ್ ಇತ್ತು ಎನ್ನಲಾಗಿದೆ. ಈತ ಕಳವಿಗಾಗಿ ಬಂದಿದ್ದನೇ ಅಥವಾ ಕಡತಗಳನ್ನು ಕೊಂಡೊಯ್ಯುವ ಉದ್ದೇಶದಿಂದ ಒಳನುಗ್ಗಿದ್ದನೇ ಎಂಬ ಬಗ್ಗೆ ಸ್ಪಷ್ಟ ಗೊಂಡಿಲ್ಲ . ವಿದ್ಯಾನಗರ ಠಾಣಾ ಪೊಲೀಸರು ಸ್ಥಳಕ್ಕಾಮಿಸಿ ತನಿಖೆ ಆರಂಭಿಸಿದ್ದಾರೆ. ಬೆರಳಚ್ಚು […]

ದಶದಿನ ಸಂಸ್ಕೃತ ಸಂಭಾಷಣಾ ಶಿಬಿರ ಸಮಾರೋಪ

Monday, August 5th, 2024
ದಶದಿನ ಸಂಸ್ಕೃತ ಸಂಭಾಷಣಾ ಶಿಬಿರ ಸಮಾರೋಪ

ಮಂಗಳೂರು: ಸಂಸ್ಕೃತ ಭಾರತೀ, ಮಂಗಳೂರು ಇದರ ವತಿಯಿಂದ ನಡೆಸಲಾದ ದಶದಿನ ಸಂಸ್ಕೃತ ಸಂಭಾಷಣಾ ಕಾರ್ಯಕ್ರಮ ಇಂದು ಸಮಾರೋಪಗೊಂಡಿತು. ನಗರದ ಕೋಡಿಕಲ್ ಜಿ.ಎಸ್.ಬಿ ಸಭಾಭವನದಲ್ಲಿ ನಿರಂತರ ಹತ್ತು ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಮೂವತ್ತಕ್ಕೂ ಮಿಕ್ಕಿ ವಿವಿಧ ವಯೋಮಾನದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಮಾರೋಪ ಸಮಾರಂಭದ ಮುಖ್ಯ ಭಾಷಣಕಾರರಾಗಿದ್ದ ಸರಕು ಮತ್ತು ಸೇವಾ ತೆರಿಗೆಯ ಸಹಾಯಕ ಆಯುಕ್ತರಾದ ಶ್ರೀ ಮಧುಸೂದನ ಭಟ್ ಮಾತನಾಡಿ ಸಂಸ್ಕೃತ ಭಾಷೆಯ ಕಲಿಕೆಯಿಂದ ಆಗುವ ಪ್ರಯೋಜನಗಳನ್ನು ತಿಳಿಸಿದರು. ವೇದಗಳು, ಪುರಾಣಗಳು, ಉಪನಿಷತ್ತುಗಳು, ರಾಮಾಯಣ ಮಹಾಭಾರತದಂತಹ ಮಹಾ […]

ಕುರಿಗಳ ಮೃತದೇಹಗಳನ್ನು ರಸ್ತೆ ಬದಿ ಎಸೆದು ಪರಾರಿಯಾದ ದುಷ್ಕರ್ಮಿಗಳು

Monday, August 5th, 2024
dead-sheep

ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಮುಕ್ಕ ಭಾಗದಲ್ಲಿ ಹಳೇಯ ಟೋಲ್‌ಗೇಟ್ ಬಳಿಯ ಸರ್ವಿಸ್ ರಸ್ತೆಯಲ್ಲಿ ದುಷ್ಕರ್ಮಿಗಳು ಕುರಿಗಳ ಮೃತದೇಹಗಳನ್ನು ರಸ್ತೆ ಬದಿ ಎಸೆದು ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ನಗರಪಾಲಿಕೆಯ ಕಾರ್ಮಿಕರ ಸಹಾಯದಿಂದ ಸ್ಥಳೀಯ ಪಾಲಿಕೆ ಸದಸ್ಯರಾದ ಶ್ವೇತಾ ಪೂಜಾರಿ ಅವರು ಇವುಗಳನ್ನು ಬೇರೆಡೆ ಸ್ಥಳಾಂತರಿಸಿ ಮಣ್ಣು ಮಾಡುವ ಮೂಲಕ ಪರಿಸರ ಹಾಗೂ ಜನರ ಆರೋಗ್ಯ ಉಳಿಸುವ ಕೆಲಸ ಮಾಡಿದ್ದಾರೆ. ಈ ಪ್ರದೇಶದಲ್ಲಿ ಈ ಹಿಂದೆ ಕೂಡ ವಧೆ ಮಾಡಿದ ಪ್ರಾಣಿಗಳ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿ […]

ಕೆತ್ತಿಕ್ಕಲ್‌ನಲ್ಲಿ ಭೂಕುಸಿತದ ಭೀತಿ ಇರುವ ಪ್ರದೇಶಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Sunday, August 4th, 2024
Brijesh Chowta

ಮಂಗಳೂರು : ವಾಮಂಜೂರು ಬಳಿಯ ಕೆತ್ತಿಕ್ಕಲ್‌ನಲ್ಲಿ ಭೂಕುಸಿತದ ಭೀತಿಗೊಳಗಾದ ಪ್ರದೇಶಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆತ್ತಿಕಲ್ ಗುಡ್ಡದ ಮೇಲೆ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಿರ್ಮಿಸುತ್ತಿರುವ ವೆಟ್ ವೆಲ್‌ಗೆ ಭೇಟಿ ನೀಡಿದ ಬಳಿಕ ರಾ.ಹೆ ಬಳಿಯಿರುವ ಕೆತ್ತಿಕಲ್ ಗುಡ್ಡ ಕುಸಿತ ಸಂಭವಿಸಿದ ಪ್ರದೇಶಕ್ಕೆ ಭೇಟಿ ನೀಡಿ ಜಾಗದ ಪರೀಶೀಲನೆ ನಡೆಸಿದ ಸಂಸದರು ಅಲ್ಲಿನ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದರು. ಮುಂಬರುವ […]

“ರಾಜ್ಯ ಸರಕಾರ ದ.ಕ. ಜಿಲ್ಲೆಗೆ 300 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು“-ವೇದವ್ಯಾಸ ಕಾಮತ್

Sunday, August 4th, 2024
BJP-South

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದ್ದು ಅಪಾರ ಪ್ರಮಾಣದ ಸೊತ್ತು ನಷ್ಟ ಉಂಟಾಗಿದೆ. ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರಕಾರ 300 ಕೋಟಿ ರೂ. ವಿಶೇಷ ಪರಿಹಾರ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಪತ್ರಿಕಾಗೋಷ್ಟಿಯಲ್ಲಿ ಒತ್ತಾಯಿಸಿದರು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದಾಗಿ ಹಲವು ಮನೆಗಳು ಕುಸಿದಿದ್ದು ಮನೆಗಳ ಮೇಲೆ ಮರಗಳು ಉರುಳಿಬಿದ್ದು ಸುಮಾರು 300 ಕೋಟಿಗೂ ಅಧಿಕ ಹಾನಿ […]

ಮಾನವೀಯತೆ ಮೆರೆದ ಬಸ್ ಸಿಬ್ಬಂದಿಗೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘದಿಂದ ಅಭಿನಂದನೆ

Sunday, August 4th, 2024
Bus-drivers

ಮಂಗಳೂರು: ಬಸ್‌ನಲ್ಲಿ ಅನಾರೋಗ್ಯಕ್ಕೀಡಾದ ವಿದ್ಯಾರ್ಥಿನಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕೃಷ್ಣ ಪ್ರಸಾದ್ ಟ್ರಾವೆಲ್ಸ್ ಬಸ್ ಚಾಲಕ ಗಜೇಂದ್ರ ಕುಂದ‌ರ್, ನಿರ್ವಾಹಕರಾದ ಸುರೇಶ್, ಮಹೇಶ್‌ರನ್ನು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ಬಂಟ್ಸ್ ಹಾಸ್ಟೇಲ್ ಬಳಿಯ ಹೊಟೇಲ್ ವುಡ್ ಲ್ಯಾಂಡ್ ನ‌ ಸಭಾಂಗಣದಲ್ಲಿ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಅಭಿನಂದಿಸಲಾಯಿತು. ಸಂಘದ ಅಧ್ಯಕ್ಷ ಆರ್ ಧನರಾಜ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ, ಬಸ್ ಸಿಬ್ಬಂದಿಗಳ ಮಾನವೀಯತೆಯ ಕಾಳಜಿ ಮೆಚ್ಚುವಂತದ್ದು, ಅವರೆಲ್ಲರೂ […]

ಲಯನ್ಸ್ ಪ್ರಾಯೋಜಿತ ಎಂಫ್ರೆಂಡ್ಸ್ ಮೀಲ್ಸ್ ಆನ್ ವ್ಹೀಲ್ಸ್- ಕಾರುಣ್ಯ ಕಿಚನ್ ಉದ್ಘಾಟನೆ

Saturday, August 3rd, 2024
Karunya

ಮಂಗಳೂರು: ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಸಹವರ್ತಿಗಳಿಗೆ ರಾತ್ರಿ ಊಟ ನೀಡುವ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟಿನ ಕಾರುಣ್ಯ ಯೋಜನೆಗೆ ಲಯನ್ಸ್ ಜಿಲ್ಲೆ 317 ಡಿ ವತಿಯಿಂದ ಲಯನ್ಸ್ ಕ್ಲಬ್ಸ್ ಇಂಟರ್‌ನ್ಯಾಶನಲ್ ಫೌಂಡೇಶನ್ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ `ಮೀಲ್ಸ್ ಆನ್ ವ್ಹೀಲ್ಸ್’ ಫುಡ್ ಟ್ರಕ್ ಮತ್ತು ಸುಸಜ್ಜಿತ ಕಾರುಣ್ಯ ಅಡುಗೆ ಮನೆ ಉದ್ಘಾಟನೆ ಶನಿವಾರ ನಡೆಯಿತು. ಜೆಪ್ಪು ವೆಲೆನ್ಸಿಯಾದ ಹೋಲಿ ರೊಸಾರಿಯೊ ಕಾನ್ವೆಂಟ್ ರಸ್ತೆಯಲ್ಲಿ ನಿರ್ಮಿಸಿದ ಅಡುಗೆ ಮನೆ, ಸ್ವಯಂಚಾಲಿತ ಚಪಾತಿ ಯಂತ್ರ, ಇಡ್ಲಿ […]

“ಬಿಜೆಪಿಗರು ಕೋಟ, ಬೊಮ್ಮಾಯಿ, ಸುಧಾಕರ್ ಮನೆಗೆ ಪಾದಯಾತ್ರೆ ಮಾಡಲಿ!“ಐವನ್ ಡಿಸೋಜ ಗುಡುಗು

Saturday, August 3rd, 2024
Ivan-D-Souza

ಮಂಗಳೂರು: ಬಿಜೆಪಿ ಆತ್ಮವಂಚನೆ ಮಾಡಿಕೊಳ್ತಾ ಇದೆ. ವಾಲ್ಮೀಕಿ ಇಲಾಖೆಯಲ್ಲಿ ಹಗರಣ ಆಗಿದೆ ಕ್ರಮ ಕೈಗೊಂಡಿದ್ದೇವೆ. ಅದನ್ನೇ ರಾಜಕೀಯಕ್ಕೆ ಬಳಸಿಕೊಂಡು ಪಾದಯಾತ್ರೆ ಮಾಡುವುದಾದರೆ ನಿಮ್ಮ ಸರಕಾರ ಇದ್ದಾಗ ಇಲಾಖೆಯ ಹಣ ನುಂಗಿ ನೀರು ಕುಡಿದಿರುವ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುಧಾಕರ್ ಮನೆಗೆ ಮಾಡಿ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಪತ್ರಿಕಾಗೋಷ್ಟಿಯಲ್ಲಿ ಗುಡುಗಿದ್ದಾರೆ. ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತಾಡಿದ ಅವರು, ಸುಧಾಕರ್ ಕೊರೋನ ಹೆಸರಲ್ಲಿ ನೂರಾರು ಕೋಟಿ ರೂಪಾಯಿ […]

ಬೀದಿ ಬದಿ ವ್ಯಾಪಾರಿಗಳ ಮೇಲಿನ ಟೈಗರ್ ಕಾರ್ಯಾಚರಣೆ ನಿಲ್ಲಿಸಿ : ರಮಾನಾಥ ರೈ ಆಗ್ರಹ

Saturday, August 3rd, 2024
Ramanatha-Rai

ಮಂಗಳೂರು‌: ನಗರದ ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡುವ ಬಿಜೆಪಿ ಆಡಳಿತದ ಮಂಗಳೂರು ಮಹಾನಗರ ಪಾಲಿಕೆಯ ಟೈಗರ್ ಕಾರ್ಯಾಚರಣೆ ಅನ್ಯಾಯ ಮತ್ತು ತಾರತಮ್ಯದಿಂದ ಕೂಡಿದೆ. ಕೂಡಲೆ ಟೈಗರ್ ಕಾರ್ಯಾಚರಣೆ ಸ್ಥಗಿತಗೊಳಿಸಿ ಬೀದಿ ಪಾಲಾಗಿರುವ ಬೀದಿ ಬದಿ ವ್ಯಾಪಾರಿಗಳಿಗೆ ಮಹಾನಗರ ಪಾಲಿಕೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೆ ಬದಲಿ ವ್ಯವಸ್ಥೆ ಮಾಡದೆ ಅವರ ಸೊತ್ತುಗಳನ್ನು ಜೆಸಿಬಿ ಬಳಸಿ ಧ್ವಂಸ ಮಾಡಿ ತೆರವು ಮಾಡಿರುವ ಪಾಲಿಕೆಯ ಕಾರ್ಯಾಚರಣೆ ಅನ್ಯಾಯ ಮತ್ತು ಅಮಾನವೀಯ. ಬೀದಿ […]