ಡ್ರಗ್ಸ್‌ ಪ್ರಕರಣ ನಿರೂಪಕಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರ ನೋಟಿಸ್‌

Thursday, September 24th, 2020
Anushree

ಮಂಗಳೂರು : ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ  ಡ್ಯಾನ್ಸರ್‌ ಕಿಶೋರ್ ಶೆಟ್ಟಿಯನ್ನು  ವಿಚಾರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು ನಿರೂಪಕಿ, ನಟಿ ಅನುಶ್ರೀ ಅವರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ. ಡ್ರಗ್ಸ್ ವಿಚಾರದಲ್ಲಿ ತನಿಖೆಗಾಗಿ ಮಂಗಳೂರು 4- 5 ಸಿಸಿಬಿ ಪೊಲೀಸರ ತಂಡ ಗುರುವಾರ ಬೆಂಗಳೂರಿಗೆ ತೆರಳಿತ್ತು. ವಿಚಾರಣೆಯ ಸಂದರ್ಭ ಕಿಶೋರ್‌ ಅಮನ್‌ ಶೆಟ್ಟಿ ಅವರ ಆಪ್ತ ಸ್ನೇಹಿತ ತರುಣ್‌ ಅನುಶ್ರೀ ಅವರೊಂದಿಗೆ ಪಾರ್ಟಿ ಮಾಡಿದ್ದ ಎನ್ನುವ ವಿಚಾರವನ್ನು ತಿಳಿಸಿದ್ದು, ಅನುಶ್ರೀ ಅವರಿಗೆ ಸಿಸಿಬಿ ನೋಟಿಸ್‌ ಜಾರಿ ಮಾಡಿದೆ ಎನ್ನಲಾಗಿದೆ. “ಪ್ರತೀಕ್ ಶೆಟ್ಟಿ, ಕಿಶೋರ್ […]

ಹಿರಿಯಡ್ಕ ಪೇಟೆಯಲ್ಲಿ ಹಾಡುಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯನ್ನು ಅಟ್ಟಾಡಿಸಿ ಕೊಲೆ

Thursday, September 24th, 2020
kishan Hegde

ಉಡುಪಿ: ಎರಡು ಇನ್ನೋವಾ ಕಾರುಗಳಲ್ಲಿ ಬಂದ ತಂಡವೊಂದು ಹಿರಿಯಡ್ಕ ಪೇಟೆಯಲ್ಲಿ ಹಾಡುಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ಅಟ್ಟಾಡಿಸಿ ಮಾರಕಾಯುಧಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಪಡುಬಿದ್ರಿ ಇನ್ನಾದ  ಕಿಶನ್ ಹೆಗ್ಡೆ (42) ಕೊಲೆಯಾದ ವ್ಯಕ್ತಿ. ಈತ ರಿಯಲ್ ಎಸ್ಟೇಟ್ ಉದ್ಯಮವನ್ನು ನಡೆಸುತ್ತಿದ್ದ ಎನ್ನಲಾಗಿದೆ. ಈತನ ಮೇಲೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣಗಳಿವೆ, ರೌಡಿ-ಶೀಟರ್ ಎಂದು ಹೇಳಲಾಗಿದೆ. ಮಂಗಳೂರು ಮೂಲದ ಗ್ಯಾಂಗ್ ಒಂದು ಈ ಹತ್ಯೆ ಮಾಡಿದೆ ಎಂದು ಹೇಳಲಾಗಿದೆ. ಗುರುವಾರ ಮಧ್ಯಾಹ್ನ ಹಿರಿಯಡ್ಕ ಪೇಟೆಯ ನಡುರಸ್ತೆಯಲ್ಲಿ ತಲೆಗೆ […]

ಅಕ್ರಮವಾಗಿ ಕರುಗಳನ್ನು ಸಾಗಾಟ : ಆರೋಪಿಗಳಿಬ್ಬರು ಪರಾರಿ

Thursday, September 24th, 2020
calf

ಮಂಗಳೂರು  : ಅಕ್ರಮವಾಗಿ  ಕರುಗಳನ್ನು ಸಾಗಾಟ ನಡೆಸುತ್ತಿದ್ದ ಕಾರನ್ನು ಉಳ್ಳಾಲ ಪೊಲೀಸರು ಕಲ್ಲಾಪು ಸಮೀಪ ಅಡ್ಡ ಗಟ್ಟಿ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ವೇಳೆ ಆರೋಪಿಗಳಿಬ್ಬರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಜಾನುವಾರು ಸಾಗಾಟ ನಡೆಸುತ್ತಿದ್ದ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕಲ್ಲಾಪು ಸಮೀಪ ಅಡ್ಡಗಟ್ಟಿದ್ದರು. ಈ ಸಂದರ್ಭ ಕಾರಿನಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ‌. ಕಾರನ್ನು ಉಳ್ಳಾಲ ಪೊಲೀಸರು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಮಾಸ್ಕ್ ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ 200 ರೂ ದಂಡ : ಜಿಲ್ಲಾಧಿಕಾರಿ

Thursday, September 24th, 2020
Rajendra KV

ಮಂಗಳೂರು: ಮಾಸ್ಕ್ ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ 200 ರೂ. ಮತ್ತು ಇನ್ನುಳಿದ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮಾಂತರ, ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಬಳಕೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಹೊಟೇಲ್‌, ರೆಸ್ಟೋರೆಂಟ್‌ಗಳು, ವಾಣಿಜ್ಯ ಸಂಕೀರ್ಣಗಳು, ಮಾಲ್‌ಗಳು, ಅಂಗಡಿಗಳಲ್ಲಿ ಕಾರ್ಯನಿರ್ವಹಿ ಸುವ ಎಲ್ಲ ಸಿಬಂದಿ ಹಾಗೂ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯ. ಪ್ರತಿ […]

ಎಲ್ಲರ ಸಮ್ಮತಿ ಪಡೆದು ನಾಮಕರಣ ಮಾಡಬೇಕೆಂದು ಕೋರ್ಟ್ ಆದೇಶವಿದ್ದರೂ, ಅದನ್ನು ಉಲ್ಲಂಘಿಸಿರುವುದು ಹೇಡಿತನ

Wednesday, September 23rd, 2020
Aloysius Rector

ಮಂಗಳೂರು : ಮುಲ್ಕಿ ಸುಂದರ ರಾಮ ಶೆಟ್ಟರ ಹೆಸರನ್ನು ಯಾವುದೇ ರಸ್ತೆಗೆ ಇಡಬಹುದಿತ್ತು. 140 ವರ್ಷಗಳ ಇತಿಹಾಸವಿರುವ ಸಂತ ಅಲೋಶಿಯಸ್ ರಸ್ತೆಯೆಂದು ಇರುವ ರಸ್ತೆಗೆ ದ.ಕ.ಜಿಲ್ಲಾಡಳಿತ ಮುಲ್ಕಿ ಸುಂದರ ರಾಮ ಶೆಟ್ಟಿ ಎಂದು ನಾಮಕರಣ ಮಾಡಿರುವುದರ ಹಿಂದೆ ಯಾವ ಉದ್ದೇಶ ಇದೆ ಎಂದು ತಿಳಿಸಬೇಕು ಎಂದು ಅಲೋಶಿಯಸ್ ಶಿಕ್ಷಣ ಸಂಸ್ಥೆಯ ರೆಕ್ಟರ್ ರೆ.ಫಾ.ಮೆಲ್ವಿನ್ ಜೋಸೆಫ್ ಪಿಂಟೊ ಒತ್ತಾಯಿಸಿದ್ದಾರೆ. ಸಂತ ಅಲೋಶಿಯಸ್ ಶಿಕ್ಷಣ  ಸಂಸ್ಥೆಯ ಸೇವೆಯನ್ನು ನಿರ್ನಾಮಗೊಳಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು  ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲೋಶಿಯಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ […]

ರಾಜಮನೆತನದ ಆರಾಧ್ಯದೈವನ ಕತೆ

Wednesday, September 23rd, 2020
southadka

ಬಯಲ ಆಲಯದ ಗಣಪ ಎಂದೇ ಪ್ರಸಿದ್ದಿ ಪಡೆದಿರುವ ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಸೌತಡ್ಕ ಶ್ರೀ ಮಹಾಗಣಪತಿ. ವಿಶಾಲ ಮೈದಾನದಲ್ಲಿ ಮಡಿ ಮೈಲಿಗೆ ಮುಂತಾದ ಯಾವುದೇ ಭವ ಬಂದನಗಳಿಂದ ಮುಕ್ತವಾಗಿ ಭಕ್ತರಿಗೆ ಇಲ್ಲಿ ಸರ್ವಕಾಲದಲ್ಲೂ ದರ್ಶನ ನೀಡುತ್ತಿದ್ದಾನೆ. ಸೌತೆಕಾಯಿಗಳಿಂದ ಪೂ ಜಿಸಲ್ಪಡುವುದರಿಂದ ದೇವನ ತಾಣ ಸೌತಡ್ಕ ಎಂಬ ಹೆಸರು ಹೊಂದುವಂತಾಯಿತು. ಇಲ್ಲಿನ ಮುಖ್ಯ ದೇವರು ಎಂದರೆ ಗಣಪತಿ. ಹಾಗೆಯೇ ಗಣಪತಿಯ ಕಪ್ಪು ಶಿಲೆಯ ಮೂರ್ತಿಯ ಪಕ್ಕದಲ್ಲೇ ಸಿದ್ಧಿ ಬುದ್ಧಿಯ ಮೂರ್ತಿಗಳೂ ಇವೆ.ಇಲ್ಲಿ ಬರುವ ಭಕ್ತಾದಿಗಳು ತಮ್ಮ ಕೋರಿಕೆಗಳನ್ನು ಈಡೇರಿಸಿಕೊಳ್ಳಲು […]

ಶುದ್ಧೀಕರಿಸದೇ ನಗರಕ್ಕೆ ನೀರನ್ನು ಪೂರೈಸಿದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ ಆಯುಕ್ತರು

Tuesday, September 22nd, 2020
Palike sabhe

ಮಂಗಳೂರು:  ಚರ್ಚೆ ಗದ್ದಲಗಳ ನಡುವೆ ಮಂಗಳೂರು ಮಹಾ ನಗರ ಪಾಲಿಕೆ ಸಾಮಾನ್ಯ ಸಭೆ  ಇಂದು ಮೇಯರ್ ದಿವಾಕರ್ ಪಾಂಡೇಶ್ವರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕುಡಿವ ನೀರು ಸಂಸ್ಕರಣಾ ಘಟಕದ ನೀರಿನ ಗುಣಮಟ್ಟ 36.4 ಇದೆ ಎಂದು ವರದಿ ಬಂದ ಹಿನ್ನೆಲೆಯಲ್ಲಿ  ನೀರಿಗೆ ಅಗತ್ಯ ರಾಸಾಯನಿಕ ಬಳಸಿ ಶುದ್ಧೀಕರಿಸದೇ ನೀರನ್ನು ಪೂರೈಸಿರುವ ಕಾರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಪ್ರಸ್ತಾಪಿಸಿದರು. ಈ ಬಗ್ಗೆ ಹಿರಿಯ ಆರೋಗ್ಯಾಧಿಕಾರಿಗಳು ಈ ನೀರು ಸೇವನೆಯಿಂದ […]

ಸುರತ್ಕಲ್ ಅಪಾರ್ಟ್‌ಮೆಂಟ್‌ನಲ್ಲಿ ದರೋಡೆ, ನಾಲ್ವರು ಆರೋಪಿಗಳ ಬಂಧನ

Tuesday, September 22nd, 2020
VikasKumar

ಮಂಗಳೂರು : ಅಪಾರ್ಟ್‌ಮೆಂಟ್‌ನಲ್ಲಿ  ಯಾರು ಇಲ್ಲದೆ ಇರುವುದನ್ನು ಗಮನಿಸಿ ಸುರತ್ಕಲ್ ಇಡ್ಯಾದಲ್ಲಿ  ಆಗಸ್ಟ್‌ನಲ್ಲಿ ನಡೆದ ಕಳ್ಳತನಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನದ ಪ್ರಮುಖ ಸೂತ್ರಧಾರ ಆರೋಪಿ ಅದೇ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ನಿವೃತ್ತ ಸೈನಿಕನಾಗಿದ್ದು, ಪ್ರಕರಣದ ಇನ್ನಿಬ್ಬರು ಆರೋಪಿಗಳ ಪತ್ತೆ ಕಾರ್ಯ ಮುಂದವರಿದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಪ್ರಕರಣದ ಕುರಿತಂತೆ ಮಾಹಿತಿ ನೀಡಿದ ಅವರು, ಆಗಸ್ಟ್ 17ರಂದು ಇಡ್ಯಾ ಗ್ರಾಮದ ಜಾರ್ಡಿನ್ ಅಪಾರ್ಟ್ ಮೆಂಟ್‌ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ […]

ಸಮುದ್ರ ತೀರಕ್ಕೆ ತೇಲಿ ಬಂದ ಕ್ಷಿಪಣಿ ಮಾದರಿಯ ವಸ್ತು

Tuesday, September 22nd, 2020
misile

ಬೈಂದೂರು: ಶಿರೂರು ಕರಾವಳಿ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ವಸ್ತುವೊಂದು ಮಂಗಳವಾರ ಮುಂಜಾನೆ ತೇಲಿ ಬಂದಿದೆ. ಸುಮಾರು 10ರಿಂದ 15 ಅಡಿ ಉದ್ದದ ಕೆಂಪು ಬಣ್ಣದ ವಸ್ತು ಇದಾಗಿದ್ದು, ಕಬ್ಬಿಣದಿಂದ ತಯಾರಿಸಲಾಗಿದೆ. ಸ್ಥಳೀಯರಿಗೆ ಈ ಕ್ಷಿಪಣಿ ಮಾದರಿಯ ವಸ್ತು ಕುತೂಹಲಕ್ಕೆ ಕಾರಣವಾಗಿದೆ. ಕರಾವಳಿ ಮೀಸಲು ಪಡೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಆರೆಂಜ್‌‌ ಅಲರ್ಟ್, ಜಲಾವೃತ್ತ ಪ್ರದೇಶಗಳಲ್ಲಿ ಕೊಂಚ ನೀರು ಇಳಿಕೆ

Tuesday, September 22nd, 2020
Rain

ಮಂಗಳೂರು : ಜಿಲ್ಲೆಯಲ್ಲಿ ನೈರುತ್ಯ ಮಾರುತ ಮಳೆ ನಿರಂತರವಾಗಿ ಸುರಿಯುತ್ತಿದೆ. ಆದರೆ, ಮಂಗಳವಾರ ಮಳೆಯ ತೀವ್ರತೆ ಮಾತ್ರ ಕಡಿಮೆಯಾಗಿದ್ದು ಜಲಾವೃತ್ತ ಪ್ರದೇಶಗಳಲ್ಲಿ ನೀರು ಇಳಿಕೆಯಾಗಿದೆ. ಬೆಳ್ತಂಗಡಿ ಸೇರಿದಂತೆ ಕಡಬ ಹಾಗೂ ಸುಳ್ಯ ತಾಲೂಕಿನಲ್ಲಿ ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶಗಳಾದ ಪುತ್ತೂರು ಹಾಗೂ ವಿಟ್ಲದಲ್ಲಿ ಮಳೆ ಮುಂದುವರೆದಿದೆ. ನಗರದ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಈ ನಡುವೆ ಭಾರಿ ಮಳೆಯಾಗುತ್ತಿದೆ. ಮುಂಜಾನೆ ವೇಳೆ ಸ್ವಲ್ಪ ಹಾಗೂ ಸಾಧಾರಣ ಮಳೆಯಾಗಿದ್ದು, ಜಿಲ್ಲೆಯಲ್ಲಿ ಆರೆಂಜ್‌‌ ಅಲರ್ಟ್‌ ಘೋಷಿಸಲಾಗಿದೆ. ಫಾಲ್ಗುಣಿ, ನಂದಿನಿ […]