ಬೆಳೆ ಸ್ಪರ್ಧೆ : ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ

Sunday, August 30th, 2020
Agriculture

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2020-21ನೇ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕೃಷಿ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಲು ಕಾರಣವಾದ ಶ್ರಮಿಕ ರೈತರನ್ನು ಗುರುತಿಸಿ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಕೃಷಿ ಪ್ರಶಸ್ತಿ ಬಹುಮಾನಗಳನ್ನು ನೀಡಿ ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುವುದೇ ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿರುತ್ತದೆ. ಈ ಯೋಜನೆಯಡಿಯಲ್ಲಿ ತಾಲೂಕು ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ ವಿವಿಧ ಬೆಳೆಗಳಲ್ಲಿ ಬೆಳೆ ಸ್ಪರ್ಧೆ […]

ಕಾಪುವಿನಲ್ಲಿ ಮೀನುಗಾರರ ಬಲೆಗೆ ಬಿದ್ದ ಟನ್‌ಗಟ್ಟಲೆ ಮೀನು, ಮತ್ಸ್ಯಪ್ರಿಯರಿಗೆ ಫುಲ್ ಖುಷಿ

Saturday, August 29th, 2020
fish

ಕಾಪು : ಬಲೆಗೆ ಬಿದ್ದ ಟನ್‌ಗಟ್ಟಲೆ ಮೀನುಗಳನ್ನು ದಡಕ್ಕೆ ಎಳೆಯಲು ಮೀನುಗಾರರು ಬಹಳಷ್ಟು ಶ್ರಮಪಡುತ್ತಿದ್ದರು . ಭಾರೀ ಪ್ರಮಾಣದ ಮೀನಿನಿಂದಾಗಿ ಕೈರಂಪಣಿಯ ಬಲೆ ಹರಿದು, ಮೀನು ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ತೀರದಲ್ಲಿ ಮೀನುಗಳು ಮೇಲಕ್ಕೆ ಚಿಮ್ಮುತ್ತಿ ರುವ ದೃಶ್ಯಗಳು ಕಂಡುಬರುತ್ತಿದ್ದವು ಇದು ನಡೆದದ್ದು ಶುಕ್ರವಾರ ಕಟಪಾಡಿ ಮಟ್ಟು ಕಡಲ ತೀರದಲ್ಲಿ. ಕಳೆದ ಎರಡು ದಿನಗಳಿಂದ ಮಟ್ಟು ಕಡಲತೀರದಲ್ಲಿ ರಾಶಿರಾಶಿಯಾಗಿ ಮೀನುಗಳು ಕಂಡುಬರುತ್ತಿದ್ದು. ಕೈರಂಪಣಿ ಬಲೆಗೆ  ಸಿಕ್ಕಿಬಿದ್ದ ಭಾರೀ ಪ್ರಮಾಣದ ಮೀನುಗಳನ್ನು ತೀರಕ್ಕೆ ಎಳೆದು ತರಲು ಮೀನುಗಾರರು ಹರ ಸಾಹಸಪಟ್ಟರು. ಇಲ್ಲಿ ಹೆಜಮಾಡಿಯ ಮೀನುಗಾರರ ತಂಡ […]

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಸಿ ಖಮರುದ್ದೀನ್ ಹಣ ಪಡೆದು ವಿರುದ್ಧ ವಂಚನೆ

Saturday, August 29th, 2020
Kamaruddin

ಮಂಜೇಶ್ವರ : ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚಿಗೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾಗಿದ್ದ ಯುಡಿಎಫ್ ಶಾಸಕ ಎಂ. ಸಿ ಖಮರುದ್ದೀನ್ ಠೇವಣಿದಾರರಿಂದ ಹಣ ಪಡೆದು ವಂಚನೆ ನಡೆಸಿರುವುದಾಗಿ ಚಂದೇರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫ್ಯಾಶನ್ ಗೋಲ್ಡ್ ಜುವೆಲ್ಲರಿ ಅಧ್ಯಕ್ಷರಾಗಿರುವ ಎಂ. ಸಿ ಖಮರುದ್ದೀನ್ ಜುವೆಲ್ಲರಿಗೆ ಠೇವಣಿ ಇರಿಸಿದ ಆರಿಫ್, ಅಬ್ದುಲ್ ಶುಕೂರ್ ಹಾಗೂ ಝುಹರಾ ಎಂಬವರು ನೀಡಿದ ದೂರಿನಂತೆ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ. ಚೆರ್ವತ್ತೂರು ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಫ್ಯಾಶನ್ ಗೋಲ್ಡ್ ಪಯ್ಯನ್ನೂರು, ಚೆರ್ವತ್ತೂರು ಹಾಗೂ ಕಾಸರಗೋಡಿನಲ್ಲಿರುವ […]

ವಾಟ್ಸಪ್ ಗ್ರೂಪ್ ನಲ್ಲಿ ಹರಿದಾಡುತ್ತಿದೆ ಕಲ್ಲಡ್ಕ ಪ್ರಭಾಕರ ಭಟ್ ಕೊರೋನಾದಿಂದ ಸಾವಿನ ಸುದ್ದಿ

Friday, August 28th, 2020
Kalladka Prabhakara Bhat

ಮಂಗಳೂರು :  ಆರ್.ಎಸ್.ಎಸ್. ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಕಲ್ಲಡ್ಕ ಪ್ರಭಾಕರ ಭಟ್ ಕೊರೋನಾದಿಂದ ಸಾವನ್ನಪ್ಪಿದ್ದಾರೆ ಎಂದು ಆರ್ ಎಸ್ ಎಸ್ ಟೆರರಿಸ್ಟ್ ಗ್ರೂಪ್ ಎಂಬ ಹೆಸರಿನ ವಾಟ್ಸಪ್ ಗ್ರೂಪ್ ನಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ವಿದೇಶಿ ಮೂಲದ ಸಂಖ್ಯೆಯಲ್ಲಿ ಪ್ರಭಾಕರ ಭಟ್ ಸಾವು ಎಂಬ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ  ಪ್ರತಿಕ್ರಿಯಿಸಿದ ಕಲ್ಲಡ್ಕ ಪ್ರಭಾಕರ ಭಟ್, ನಾನು ಆರೋಗ್ಯವಾಗಿದ್ದೇನೆ, ಯಾವುದೇ ತೊಂದರೆಯಿಲ್ಲ. ಪುತ್ತೂರಿನಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ, ಸುಳ್ಳು ಸುದ್ದಿ ಹಬ್ಬಿರುವ ಬಗ್ಗೆ ಮಿತ್ರರೊಬ್ಬರಿಂದ ಮಾಹಿತಿ ಸಿಕ್ಕಿತು. ಕೆಲವೊಂದು ಜನರಿಗೆ  ಇಂಥ ಕೆಲಸ […]

ಶಾಸಕ ಎಸ್. ಅಂಗಾರ ಅವರಿಗೆ ಕೊರೋನ ಪಾಸಿಟಿವ್ ದೃಢ

Friday, August 28th, 2020
S Angara

ಸುಳ್ಯ : ಬೆಂಗಳೂರಿನಿಂದ ಆಗಮಿಸಿದ  ಶಾಸಕ ಎಸ್. ಅಂಗಾರ ಅವರಿಗೆ ಕೊರೋನ ಪಾಸಿಟಿವ್ ದೃಢವಾಗಿದ್ದು, ಹೊಮ್ ಕ್ವಾರಂಟೈನ್ ಗೆ ಒಳಗಾಗಿರುವುದಾಗಿ ಅವರು ತಿಳಿಸಿದ್ದಾರೆ. ಶಾಸಕರಿಗೆ ತಲೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಕೊವಿಡ್ ಪರೀಕ್ಷೆ ಮಾಡಿಕೊಂಡಿದ್ದು, ರಿಪೋರ್ಟ್ ನಲ್ಲಿ ಕೊರೋನ ಪಾಸಿಟಿವ್ ದೃಢವಾಗಿದ್ದು, ಕ್ವಾರಂಟೈನ್ ನಲ್ಲಿ ಇರುವುದಾಗಿ ತಿಳಿಸಿದ್ದಾರೆ.

ಕಾರು ಢಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ನ್ಯಾಯವಾದಿ ನಿಧನ

Friday, August 28th, 2020
duggappa

ಮಂಗಳೂರು :  ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನ್ಯಾಯವಾದಿ ಬಿಎಂ ದುಗ್ಗಪ್ಪ ಶುಕ್ರವಾರ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ‌ ನಿಧನರಾಗಿದ್ದಾರೆ. ಸುಳ್ಯ ಮೂಲದ ಇವರು ನಗರದ ಆಕಾಶಭವನ ಬಳಿ ನೆಲೆಸಿದ್ದರು. ಬುಧವಾರ ಸಂಜೆ ಸುಮಾರು 4:30ರ ವೇಳೆಗೆ ತನ್ನ ಮನೆಯಿಂದ ಬೆಸೆಂಟ್ ಶಿಕ್ಷಣ ಸಂಸ್ಥೆಯ ಬಳಿ ಇರುವ ಕಚೇರಿಗೆ ತೆರಳುತ್ತಿದ್ದಾಗ ಇವರು ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಕಾರು ಢಿಕ್ಕಿ ಹೊಡೆಯಿತು. ಗಂಭೀರ ಗಾಯಗೊಂಡ ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ  ಮೃತಪಟ್ಟರು. ಇವರು ಪತ್ನಿ […]

ಕೃಷಿ ಯಂತ್ರಧಾರಾ ಯೋಜನೆಯ ಮ್ಯಾನೇಜರ್ ಶವ ನಾಗಜೆ ಕೆರೆಯಲ್ಲಿ ಪತ್ತೆ

Friday, August 28th, 2020
Rakshith

ಬೆಳ್ತಂಗಡಿ : ನಾವೂರು ಗ್ರಾಮದ ನಾಗಜೆ ಎಂಬಲ್ಲಿ ಯುವಕನ ಶವ ಕೆರೆಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ನಾಗಜೆ ಎಂಬಲ್ಲಿ ಆ.28 ರಂದು ನಡೆದಿದೆ. ನಾವೂರು ಗ್ರಾಮದ ನಾಗಜೆ ನಿವಾಸಿ ರಕ್ಷಿತ್ (25) ಮೃತಪಟ್ಟ ವ್ಯಕ್ತಿ. ಕಳೆದ ಒಂಭತ್ತು ದಿನಗಳ ಹಿಂದೆ ಖಾಸಗಿ ಸಂಸ್ಥೆಯೊಂದರ ಕೃಷಿಯಂತ್ರಧಾರೆಯಲ್ಲಿ ಕೃಷಿ ಯಂತ್ರಧಾರಾ ಯೋಜನೆಯ ಮ್ಯಾನೇಜರ್ ಆಗಿ ಚನ್ನರಾಯಪಟ್ಟಣದಲ್ಲಿ ಉದ್ಯೋಗಕ್ಕೆ ಸೇರ್ಪಡೆಗೊಂಡಿದ್ದರು. ಆ.22 ರಂದು ಮನೆಗೆ ಬಂದು ಆ.24 ರಂದು ಕೆಲಸಕ್ಕೆ ತೆರಳಿದ್ದರು. ಬಳಿಕ ಮೊಬೈಲ್ ಸಂಪರ್ಕಕ್ಕೆ ಸಿಗದಿದ್ದರಿಂದ ಅನುಮಾನ […]

ಕೊರೊನಾ ಪಾಸಿಟಿವ್ : ದಕ್ಷಿಣ ಕನ್ನಡ 297, ಉಡುಪಿ ಜಿಲ್ಲೆ 209

Friday, August 28th, 2020
CORONA

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 297ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11389ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 2372 ಮಂದಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದು 257 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 8680 ಕ್ಕೆ ಏರಿಕೆಯಾಗಿದೆ. ಪ್ರಾಥಮಿಕ ಸಂಪರ್ಕದಿಂದ 61ಮಂದಿಗೆ ಸೋಂಕು ದೃಢಪಟ್ಟಿದೆ. 99 ಐಎಲ್‌ಐ ಪ್ರಕರಣಗಳಾಗಿದ್ದು, 14 ಸಾರಿ ಪ್ರಕರಣಗಳಾಗಿವೆ. ಈ ನಡುವೆ 123ಮಂದಿಯ ಸೋಂಕಿನ ಮೂಲ […]

ಎಚ್‌.ವಿಶ್ವನಾಥ್‌ ಅವರ ಹೇಳಿಕೆ ವೈಯಕ್ತಿಕ, ಟಿಪ್ಪು ಓರ್ವ ಮತಾಂಧ ಎಂಬುದಕ್ಕೆ ಪಕ್ಷ ಬದ್ಧವಾಗಿದೆ : ಕಾರ್ಣಿಕ್

Thursday, August 27th, 2020
Karnik

ಮಂಗಳೂರು :  ಬಿಜೆಪಿ ಎಂದಿಗೂ ಟಿಪ್ಪುವನ್ನು ಉತ್ತಮ ಆಡಳಿತಗಾರ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ’ ‘ಟಿಪ್ಪು ಸುಲ್ತಾನ್‌ ಕುರಿತು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಅವರ ಹೇಳಿಕೆ ವೈಯಕ್ತಿಕವಾಗಿದ್ದು, ಪಕ್ಷಕ್ಕೂ ಅದಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌ ಹೇಳಿದ್ದಾರೆ. ‘ಟಿಪ್ಪು ಓರ್ವ ಮತಾಂಧ ಎಂಬುದಕ್ಕೆ ಪಕ್ಷ ಬದ್ಧವಾಗಿದೆ ಮತ್ತು ಈ ವಾದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಟಿಪ್ಪು ಕೊಡಗಿನಲ್ಲಿ ಹಿಂದುಗಳು ಮತ್ತು ಮಂಗಳೂರಿನಲ್ಲಿ ಕ್ರೈಸ್ತರ ಮಾರಣ ಹೋಮ ಮಾಡಿದ್ದನ್ನು ಮರೆಯಲಾಗುತ್ತದೆಯೇ’ ಎಂದು ‘ಟಿಪ್ಪು ಕತ್ತಿಯ ಮೂಲಕ ಜನರನ್ನು ಬೆದರಿಸಿ, ಜನರನ್ನು ಮತಾಂತರಗೊಳಿಸಲು […]

ಇನ್‌ಸ್ಪೆಕ್ಟರ್ ಗಂಗಿರೆಡ್ಡಿ ಅಪರಾಧಿ, ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ ದಂಡ

Thursday, August 27th, 2020
Gangi Reddy

ಮಂಗಳೂರು : ಲೋಕಾಯುಕ್ತ ಡಿ. ವೈ.ಎಸ್.ಪಿ. ಸದಾನಂದ ವರ್ಣೇಕರ್ ಮತ್ತು ಅವರ ತಂಡ  2009 ರಲ್ಲಿ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಕರಾವಳಿ ಕಾವಲು ಪಡೆಯ ಇನ್‌ಸ್ಪೆಕ್ಟರ್ ಗಂಗಿರೆಡ್ಡಿ ಅವರನ್ನು ಮಂಗಳೂರು ಲೋಕಾಯುಕ್ತ ನ್ಯಾಯಾಲಯ ಅಪರಾಧಿ ಎಂದು ಪರಿಗಣಿಸಿ ನಾಲ್ಕು ವರ್ಷ ಸಾದಾ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ ದಂಡ ವಿಧಿಸಿ ಆ.27ರಂದು ಆದೇಶ ನೀಡಿದೆ. ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. […]