ಕೊರೊನಾ ಸೋಂಕು ಆಗಸ್ಟ್ 24 : ದಕ್ಷಿಣ ಕನ್ನಡ 201, ಉಡುಪಿ 103, ಕಾಸರಗೋಡು 118

Monday, August 24th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 201 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 10531ಕ್ಕೆ ಏರಿಕೆಯಾಗಿದೆ. ಸೋಮವಾರ  ಪತ್ತೆಯಾದ ಸೋಂಕಿತರ ಪೈಕಿ ಪ್ರಾಥಮಿಕ ಸಂಪರ್ಕದಿಂದ 49 ಮಂದಿಗೆ ಸೋಂಕು ತಗುಲಿದೆ. 70 ಐಎಲ್‌ಐ ಪ್ರಕರಣಗಳಾಗಿವೆ. 9 ಸಾರಿ ಪ್ರಕರಣಗಳು ದೃಢಪಟ್ಟಿವೆ. 72 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಅಂತರ್ ರಾಜ್ಯ ಪ್ರಯಾಣ ಮುಗಿಸಿ ಬಂದ ಓರ್ವ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಆಗಸ್ಟ್ 24ರಂದು 241 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ […]

ಎರಡನೇ ಬಾರೀ ಕ್ವಾರಂಟೈನ್ ಕೇಂದ್ರದಿಂದ ತಪ್ಪಿಸಿಕೊಂಡ ಕಳವು ಪ್ರಕರಣದ ಆರೋಪಿ

Monday, August 24th, 2020
shainuddin

ಕಾಸರಗೋಡು : ವಾಹನ ಕಳವು ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಗುರುತಿಸಿಕೊಂಡ ಆರೋಪಿ ಕೊರೊನಾ ಸೋಂಕಿತ  ವ್ಯಕ್ತಿ ಕ್ವಾರಂಟೈನ್ ಕೇಂದ್ರದಿಂದ ಎರಡನೇ ಬಾರೀ  ಪರಾರಿಯಾ ಘಟನೆ ನಡೆದಿದೆ. ಕಾಸರಗೋಡು ತೆಕ್ಕಿಲ್ ಮಾಂಗಾಡ್ ನ ರಂಶಾನ್ ಸೈನುದ್ದೀನ್(20) ಪರಾರಿಯಾದವನು. ಕೆಲ ದಿನಗಳ ಹಿಂದೆ ಕಣ್ಣೂರು ಎಡಕ್ಕಾಡ್ ಕ್ವಾರಂಟೈನ್ ಕೇಂದ್ರದಿಂದ ಪರಾರಿಯಾಗಿದ್ದ  ಈತನನ್ನು ಹಿಡಿದು ಬಳಿಕ ಅಂಜರ ಕಂಡಿಯಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿರಿಸಲಾಗಿತ್ತು. ಈ ಕೆಂದ್ರದಿಂದಲೂ ಈತ ತಪ್ಪಿಸಿಕೊಂಡಿದ್ದು, ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದೆ. ಈತನಿಗಾಗಿ ಶೋಧ ನಡೆಯುತ್ತಿದೆ. ಈತನನ್ನು ಎಡಕ್ಕಾಡ್ ಪೊಲೀಸರು ಬಂಧಿಸಿ ಕ್ವಾರಂಟೈನ್ […]

ಪ್ರವಾಹ ಪರಿಹಾರ ನಿಧಿ ಸಂಗ್ರಹದ ಲೆಕ್ಕ ಕೇಳಲು ಹರೀಶ್ ಪೂಂಜಾ ಕಚೇರಿಗೆ ಮುತ್ತಿಗೆ

Monday, August 24th, 2020
belthangady Congress

ಮಂಗಳೂರು: ಕಳೆದ ವರ್ಷ ಪ್ರವಾಹದ ಸಂದರ್ಭದಲ್ಲಿ ನಿಧಿಯನ್ನು ಸ್ಥಾಪನೆ ಮಾಡಲಾಗಿದ್ದು ಅದರ ಲೆಕ್ಕ ಕೊಡಲಿಲ್ಲ ಎಂದು ಆರೋಪಿಸಿ ಮಾಜಿ ಶಾಸಕ ವಸಂತ್ ಬಂಗೇರಾ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಮುತ್ತಿಗೆ ಹಾಕಿ ಪ್ರವಾಹ ಪರಿಹಾರದ ಲೆಕ್ಕ ತೋರಿಸಬೇಕೆಂದು ಒತ್ತಾಯಿಸಿದ ಘಟನೆ  ಸೋಮವಾರ ಬೆಳ್ತಂಗಡಿಯಲ್ಲಿ ನಡೆದಿದೆ. ಶಾಸಕರ ಕಚೇರಿಯನ್ನು ಮುತ್ತಿಗೆ ಹಾಕುವ ಪ್ರಯತ್ನದ ವೇಳೆ ವಸಂತ್ ಬಂಗೇರಾ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಶಾಸಕರ ಕಚೇರಿಯ ಗೇಟಿನ ಬಳಿಯೇ ಪ್ರತಿಭಟನಾಕಾರರನ್ನು ಪೊಲೀಸರಿಗೆ ತಡೆದಿದ್ದಾರೆ. ಪ್ರತಿಭಟನಾಕಾರರು ಮಾಸ್ಕ್ ಗಳನ್ನು ಧರಿಸಿರಲಿಲ್ಲ ಮತ್ತು […]

ವಾಕಿಂಗ್ ಮಾಡುತ್ತಿದ್ದ ಟ್ಯಾಕ್ಸಿ ಡ್ರೈವರ್ ಮೇಲೆ ತಲವಾರು ದಾಳಿ ನಡೆಸಿ ಕೊಲೆ

Monday, August 24th, 2020
Belthangady

ಬೆಳ್ತಂಗಡಿ : ಬೆಳಗ್ಗಿನ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಮೂವರು ದುಷ್ಕರ್ಮಿಗಳ  ತಂಡ ದಾಳಿ ನಡೆಸಿದಾಗ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಾಸು ಸಪಲ್ಯ(65) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸೋಮವಾರ ಬೆಳಿಗ್ಗೆ ಬೆಳ್ತಂಗಡಿಯ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿ ವಾಕಿಂಗ್ ಹೋಗುತ್ತಿದ್ದ ವಾಸು ಸಪಲ್ಯ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು ಪರಿಣಾಮ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ವಾಸು ಸಪಲ್ಯ ವೃತ್ತಿಯಲ್ಲಿ ಬೆಳ್ತಂಗಡಿಯಲ್ಲಿ ಟ್ಯಾಕ್ಸಿ ವಾಹನದ ಚಾಲಕರಾಗಿ ಕೆಲಸ‌ ಮಾಡುತ್ತಿದ್ದರು. ಮಗ ಕೂಡ ಚಾಲಕ […]

ಕೊರೊನಾ ಸೋಂಕು : ದಕ್ಷಿಣ ಕನ್ನಡ ಜಿಲ್ಲೆ 193 ಐದು ಸಾವು, ಉಡುಪಿ ಜಿಲ್ಲೆ 117 ಎರಡು ಸಾವು

Sunday, August 23rd, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಆಗಸ್ಟ್ 23 ರಂದು 193 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10330 ಕ್ಕೆ ಏರಿದೆ. ಉಡುಪಿ ಜಿಲ್ಲೆಯಲ್ಲಿ ಭಾನುವಾರ  117 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 10126 ಕ್ಕೆ ಏರಿಕೆಯಾಗಿದೆ. ಭಾನುವಾರದ ಪಾಸಿಟಿವ್ ಪ್ರಕರಣಗಳಲ್ಲಿ ಮಂಗಳೂರಿನಲ್ಲಿ 130, ಬಂಟ್ವಾಳದಲ್ಲಿ 21, ಸುಳ್ಯದಲ್ಲಿ 19, ಪುತ್ತೂರಿನಲ್ಲಿ 6, ಬೆಳ್ತಂಗಡಿಯಲ್ಲಿ 8 ಜನರಿಗೆ ಸೋಂಕು ದೃಢಪಟ್ಟಿದ್ದು ಇದನ್ನು ಹೊರತುಪಡಿಸಿ ಇತರೆ ಜಿಲ್ಲೆಯ 9 ಮಂದಿಗೆ ಪಾಸಿಟಿವ್‌ ಆಗಿದೆ.  193 ಸೋಂಕಿತರ […]

ತಂಬಾಕು ಹಾಗೂ ಪಾನ್ ಮಸಾಲ ಜಗಿದು ಉಗಿಯುವುದರಿಂದ ಕೋವಿಡ್ 19, ದಂಡ ವಸೂಲಿ

Saturday, August 22nd, 2020
siptting

ಮಂಗಳೂರು : ಸಾರ್ವನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಹಾಗೂ ಪಾನ್ ಮಸಾಲ ಉತ್ಪನ್ನಗಳನ್ನು ಜಗಿದು ಉಗಿಯುವುದರಿಂದ ಕೋವಿಡ್ 19 ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಇತರರಿಗೆ ಹರಡುವ ಸಂಭವ ಹೆಚಾಗ್ಚಿದು, ಆ ಕಾರಣದಿಂದ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆ ತಂಡವು ಆಗಸ್ಟ್ 20 ರಂದು ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ಹಾಗೂ COTPA-2003 ಕಾಯಿದೆ ಉಲ್ಲಂಘನೆ ವಿರುದ್ಧ ಉರ್ವಸ್ಟೋರ್ ಪರಿಸರದಲ್ಲಿ ಕಾರ್ಯಚರಣೆ ನಡೆಸಿ 21 ಕೇಸ್ ದಾಖಲಿಸಿ ಸುಮಾರು ರೂ. […]

ಸರಕಾರದ ಆರೋಗ್ಯ ಇಲಾಖೆಯ ವೈಫಲ್ಯತೆ ಮೈಸೂರು ವೈದ್ಯಾಧಿಕಾರಿಯನ್ನು ಬಲಿ ಪಡೆದಿದೆ

Saturday, August 22nd, 2020
dyfi

ಮಂಗಳೂರು  : ರಾಜ್ಯದಲ್ಲಿ ಸರಕಾರಿ ಆಸ್ಪತ್ರೆಗಳಿಗೆ ಕೊರೊನಾ ಪ್ರಕರಣ ನಿಭಾಯಿಸಲು ವೈದ್ಯರು ಸಹಿತ ನುರಿತ ಸಿಬ್ಬಂಧಿಗಳ ವ್ಯವಸ್ಥೆ ಮಾಡದೆ ಬರೇ ಇರುವ ವೈದ್ಯರುಗಳಿಂದಲೇ ವಿಪರೀತ ಕೆಲಸಗಳನ್ನು ನಿರ್ವಹಿಸಿದ ಕಾರಣ ಒತ್ತಡಕ್ಕೆ ಸಿಲುಕಿದ ವೈದ್ಯರು ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಸ್ಥಿತಿಯ ನಿರ್ಮಾಣ ಇದು ಸರಕಾರದ ಆರೋಗ್ಯ ಇಲಾಖೆಯ ವೈಫಲ್ಯತೆ. ಮೈಸೂರಿನ ತಾಲೂಕು ವೈದ್ಯಾಧಿಕಾರಿ ಡಾ ನಾಗೇಂದ್ರ ಅವರನ್ನು ಬಲಿಪಡೆದಿದೆ ಎಂದು ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಇಂದು ಉರ್ವಸ್ಟೋರ್ ನಲ್ಲಿ ಡಿವೈಎಫ್ಐ ನೇತೃತ್ವದಲ್ಲಿ ನಡೆದ ಸರಕಾರಿ […]

ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳ ಸೆರೆ

Saturday, August 22nd, 2020
ganja

ಉಡುಪಿ : ಕಂಟೈನರ್ ಲಾರಿಯಲ್ಲಿ ಉತ್ತರಪ್ರದೇಶದಿಂದ ಮಂಗಳೂರಿಗೆ ಬಿದಿರು ತುಂಬಿಸಿಕೊಂಡು ಅದರೊಳಗೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 49 ಕೆಜಿ ಗಾಂಜಾವನ್ನು ಉಡುಪಿ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬ್ರಹ್ಮಾವರ ತಾಲೂಕು ಹೇರೂರು ಬಳಿ ಪೊಲೀಸರು ತಡೆದು ತಪಾಸಣೆ ನಡೆಸಿ ಸುಮಾರು 49 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರು ತಮಿಳುನಾಡಿನ ತಿರುವನ್ ವೆಲ್ಲಿ ಜಿಲ್ಲೆಯ ಕರುತಪಾಂಡಿ (40) ಮತ್ತು ಪಶ್ಚಿಮ ಬಂಗಾಳದ ವಾನು ಹಲ್ ದಾರ್ (30) ಎಂದು ಗುರುತಿಸಲಾಗಿದೆ. ಆರೋಪಿಗಳು  ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಅಕ್ರಮವಾಗಿ […]

ರಸ್ತೆ ಬದಿಯಲ್ಲಿ ಕಸ ಎಸೆಯುವವರನ್ನು ಕಾದು ಕುಳಿತು 5 ಸಾವಿರ ದಂಡ ಹಾಕಿದ ಪುತ್ತೂರು ನಗರಸಭೆ ಅಧಿಕಾರಿಗಳು

Saturday, August 22nd, 2020
Puttur Garbage

ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯ ಮುಕ್ರಂಪಾಡಿಯಲ್ಲಿ ರಸ್ತೆ ಬದಿಯಲ್ಲೇ ತ್ಯಾಜ್ಯ ಕಸಗಳನ್ನು ಎಸೆದು ಹೋಗುತ್ತಿದ್ದ ಉಸ್ಮಾನ್ ಮತ್ತು ಅಶ್ರಫ್ ಎಂಬುವರಿಗೆ ತಲಾ ರೂ. 5 ಸಾವಿರ ದಂಡ ವಿಧಿಸಿ ಪುತ್ತೂರು ನಗರಸಭೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಮನೆ ಮನೆ ತ್ಯಾಜ್ಯ ಸಂಗ್ರಹ ನಡೆಯುತ್ತಿದ್ದರೂ ಕೆಲವೊಂದು ಕಡೆ ರಸ್ತೆ ಬದಿಯಲ್ಲಿ ರಾಶಿ ರಾಶಿ ಕಸಗಳನ್ನು ಹಾಕಿ ಪರಿಸರ ಮಲೀನಗೊಳಿಸುತ್ತಿದ್ದರು. ನಗರಸಭೆ ಅಧಿಕಾರಿಗಳು, ಸಿಬ್ಬಂದಿ ಕಸದ ರಾಶಿ ಇರುವ ಸ್ಥಳಗಳ ಬಳಿ ಕಸ ಹಾಕುವವರನ್ನು ಹಿಡಿಯಲು ಕಾದು ಕುಳಿತಿದ್ದರು. ಸಂಪ್ಯ ಕಡೆಯಿಂದ ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ಇಬ್ಬರು […]

ಆಗಸ್ಟ್ 21ರಂದು ಗೌರಿ ಹಬ್ಬ, ಶನಿವಾರ ಗಣೇಶೋತ್ಸವ; ಆದರೆ ಸಂಭ್ರಮವಿಲ್ಲ

Friday, August 21st, 2020
ganeshaotsava

ಮಂಗಳೂರು  :  ನಗರದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಗಣೇಶೋತ್ಸವದ ತಯಾರಿ ಸಂಭ್ರಮವಿಲ್ಲ. ತರಕಾರಿ, ಕಬ್ಬು ಹೂ ಹಣ್ಣುಗಳ ಬೇಡಿಕೆಗಳು ಕಡಿಮೆಯಾಗಿದೆ. ಮಂಗಳೂರು ನೆಹರೂ ಮೈದಾನದಲ್ಲಿ ಹಿಂದೂ ಯುವ ಸೇನೆ ಏಳು ದಿನದ ಕಾಲ ಆಚರಿಸುತ್ತಿದ್ದ ಸಾರ್ವಜನಿಕ ಗಣೇಶೋತ್ಸವಕ್ಕೆ ಈ ಬಾರಿ ಅನುಮತಿ ಇಲ್ಲದೆ ಇರುವುದರಿಂದ ಸರಳವಾಗಿ ಬಾಳಂಭಟ್ಟ ಹಾಲಿನಲ್ಲಿ ಕೇವಲ ಒಂದೇ ದಿನ ಆಚರಿಸಲು ನಿರ್ಧರಿಸಲಾಗಿದೆ. ಅದೇ ರೀತಿ ಮಂಗಳಾದೇವಿ ಗಣೇಶೋತ್ಸವ ಸಮಿತಿ , ಕೆಏಸ್ಆರ್ಟಿಸಿ, ಪೊಲೀಸ್ ಲೈನ್,  ಸಿದ್ಧಿವಿನಾಯಕ ಪ್ರತಿಷ್ಠಾನಗಳಲ್ಲೂ ಸರಳವಾಗಿ ಒಂದೇ ದಿನ ಆಚರಿಸಲಾಗುತ್ತಿದೆ. ಸಂಘನಿಕೇತನದಲ್ಲಿ ಸರಳವಾಗಿ […]