“ ಬೀಚ್ ಫೆಸ್ಟಿವಲ್ ನಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ -ಮೇಯರ್ ಸುಧೀರ್ ಶೆಟ್ಟಿ

Sunday, July 14th, 2024
Beach-Festival

ಮಂಗಳೂರು : “ತಪಸ್ಯ ಫೌಂಡೇಶನ್” ವತಿಯಿಂದ ನಡೆಯಲಿರುವ ಮಂಗಳೂರು ಟ್ರಿಯಾಥ್ಲನ್‌, ಬೀಚ್‌ ಫೆಸ್ಟಿವಲ್‌ ಉದ್ಘಾಟನೆ ಕಾರ್ಯಕ್ರಮ ಆದಿತ್ಯವಾರ ಸಂಜೆ ನಗರದ ಟಿಎಂಎ ಪೈ ಸ್ಟಾರ್‌ ಕಾನ್ಫರೆನ್ಸ್ ಹಾಲ್‌ನಲ್ಲಿ ಜರುಗಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತಾಡಿದ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು, “ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ಮಂಗಳೂರು ಟ್ರಿಯಾಥ್ಲನ್ ಹಾಗೂ ಮಂಗಳೂರು ಬೀಚ್ ಫೆಸ್ಟಿವಲ್ ಕಾರ್ಯಕ್ರಮ ಆಯೋಜನೆಯಾಗಿದೆ. ಮಕ್ಕಳಲ್ಲಿ ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸುತ್ತಿರುವ ತಪಸ್ಯ ಫೌಂಡೇಶನ್ […]

ಕಾರ್ಕಳದಲ್ಲಿ ರಾಜಕೀಯ ಅಸ್ತಿತ್ವವೇ ಇಲ್ಲದೆ ಕಂಗಾಲಾಗಿರುವ ಕಾಂಗ್ರೆಸ್ ನಿಂದ ದಾಂಧಲೆ – ನವೀನ್ ನಾಯಕ್

Sunday, July 14th, 2024
naveen-nayak

ಕಾರ್ಕಳ : ಯಾವ ವೇದಿಕೆಯಲ್ಲಿ ಯಾವ ವಿಚಾರ ಪ್ರಸ್ತಾಪ ಮಾಡಬೇಕೆಂಬ ಪರಿಜ್ಞಾನವಿಲ್ಲದ ಕಾರ್ಕಳ ಕಾಂಗ್ರೆಸ್, ಕಾರ್ಕಳದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ದಾಂಧಲೆ ನಡೆಸಿ ತಾಲೂಕಿನ ಜನರಿಗೆ ಘೋರ ಅನ್ಯಾಯ ಎಸಗಿದೆ. ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ನೀಡದಂತೆ ತಡೆದಿರುವುದು ಅಕ್ಷಮ್ಯ. ಕಾರ್ಕಳದ ಜನತೆ ಈ ಕಾಂಗ್ರೆಸ್ಸನ್ನು ಯಾವತ್ತಿಗೂ ಕ್ಷಮಿಸಲಾರರು ಎಂದು ಬಿಜೆಪಿಯ ಕಾರ್ಕಳ ಮಂಡಲ ಅಧ್ಯಕ್ಷ ನವೀನ್ ನಾಯಕ್ ಆರೋಪಿಸಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ನೀಡುವ ಸದುದ್ದೇಶವನ್ನಿಟ್ಟುಕೊಂಡು, ಮಾನ್ಯ ಜಿಲ್ಲಾಧಿಕಾರಿ ಹಾಗೂ ಮಾನ್ಯ ಶಾಸಕರ ಉಪಸ್ಥಿತಿಯಲ್ಲಿ ಜನರ ಸಮಸ್ಯೆಯನ್ನು […]

ಕೂಳೂರಿನ ಹಿಂದು ರುದ್ರಭೂಮಿ ಪರಿಸರದಲ್ಲಿ ಹತ್ತನೇ ತಿಂಗಳ ಸ್ವಚ್ಛ ಮಂಗಳೂರು ಅಭಿಯಾನದ ಶ್ರಮದಾನ ಸಂಪನ್ನ

Sunday, July 14th, 2024
Ramakrishna-Mission

ಮಂಗಳೂರು : ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ ಎರಡನೇ ಆವೃತ್ತಿಯ ಹತ್ತನೇ ತಿಂಗಳ ಸ್ವಚ್ಛತಾ ಅಭಿಯಾನವನ್ನು, ಭಾನುವಾರ ಬೆಳಗ್ಗೆ ಕೂಳೂರಿನ ಹಿಂದು ರುದ್ರಭೂಮಿ ಪರಿಸರದಲ್ಲಿ ನಡೆಯಿತು. ಎಮ್.ಆರ್.ಪಿ.ಎಲ್. ಸಂಸ್ಥೆಯ ಸಾಮಾಜಿಕ ಕಾರ್ಯಕ್ರಮಗಳ ಮುಖ್ಯಸ್ಥರಾದ ಪ್ರಶಾಂತ್ ಬಾಳಿಗಾ ಹಾಗೂ ನಿಟ್ಟೆ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಧನೇಶ್ ಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಬೆಳ್ಳಾಲ ಗೋಪಿನಾಥ್ ರಾವ್, ಸಹಾಯಕ ಪ್ರಾಧ್ಯಾಪಕರಾದ ಪ್ರಕಾಶ್, ಕಮಲಾಕ್ಷ ಪೈ, […]

ಭಾರೀ ಮಳೆ : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜುಲೈ 15 ರಂದು ರೆಡ್ ಅಲರ್ಟ್

Sunday, July 14th, 2024
Red-Alert

ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜುಲೈ 15 ರಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಉಭಯ ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿರುವ ಹಿನ್ನಲೆ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ16 ರಿಂದ 18ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ರವಿವಾರ ದಿನವಿಡೀ ಉತ್ತಮ ಮಳೆ ಮುಂದುವರೆದಿದೆ. ಭಾರೀ ಮಳೆ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ನಾಳೆ […]

ರಾಷ್ಟ್ರೀಯ ಸಂಸ್ಥೆಗಳ ಶೈಕ್ಷಣಿಕ ಸಮಿತಿ ಸದಸ್ಯರಾಗಿ ರಮೇಶ್ ಸಾಲ್ಯಾನ್ ನೇಮಕ

Sunday, July 14th, 2024
Ramesh-Saliyan

ಮಂಗಳೂರು: ಫರೀದಾಬಾದ್ ಅರುಣ್ ಜೇಟ್ಲಿ ಹಣಕಾಸಿನ ನಿರ್ವಹಣೆಯ ರಾಷ್ಟ್ರೀಯ ಸಂಸ್ಥೆ ಮತ್ತು ಸಿಮ್ಲಾ ನ್ಯಾಷನಲ್ ಅಕಾಡೆಮಿ ಆಫ್ ಆಡಿಟ್ ಮತ್ತು ಅಕೌಂಟ್ಸ್‌ನ ಶೈಕ್ಷಣಿಕ ಸಮಿತಿ ಸದಸ್ಯರಾಗಿ ನವದೆಹಲಿಯ ಜವಾಹರಲಾಲ್ ವಿಶ್ವವಿದ್ಯಾಲಯದ (ಜೆಎನ್‌ಯು ) ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ.ರಮೇಶ್ ಸಾಲ್ಯಾನ್ ಅವರನ್ನು ಎರಡು ವರ್ಷಗಳ ಅವಧಿಗೆ ಜೆಎನ್‌ಯು ಕುಲಪತಿ ನಾಮನಿರ್ದೇಶನಗೊಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಶೆಟ್ಟೇಪಾಲ್ ಚಂದ್ರಶೇಖರ ಪೂಜಾರಿ ಮತ್ತು ರತ್ನಾವತಿ ದಂಪತಿ ಪುತ್ರರಾಗಿರುವ ಇವರು, ತುಮಕೂರು ವಿವಿಯಲ್ಲಿ 13 ವರ್ಷ, ಸಹಾಯಕ, […]

ಮಂಗಳೂರು ಎಂಎಸ್‌ಪಿಸಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ

Saturday, July 13th, 2024
lakshimi-hebbalkar

ಮಂಗಳೂರು : ಮಂಗಳೂರು ಹೊರವಲಯದ ಮೂಡುಶೆಡ್ಡೆ- ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ (ಎಂಎಸ್‌ಪಿಸಿ) ಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಕೇಂದ್ರದ ಉದ್ಯೋಗನಿರತ ಮಹಿಳೆಯರಿಂದಲೇ ಆಹಾರ ಸಾಮಗ್ರಿಗಳ ತಯಾರಿಕೆಯ ಬಗ್ಗೆ ಮಾಹಿತಿ ಪಡೆದರು. ಪುಷ್ಟಿ ನ್ಯೂಟ್ರಿಮಿಕ್ಸ್, ಹಾಲಿನ ಪುಡಿ ಮತ್ತಿತರ ಆಹಾರ ಸಾಮಗ್ರಿಗಳ […]

ಕರಾವಳಿ ಲೇಖಕಿಯರ ಮತ್ತು ವಾಚಿಕೆಯರ ಸಂಘದ ನವೀಕೃತ ಕಟ್ಟಡ ‘ಸಾಹಿತ್ಯ ಸದನ’ ಲೋಕಾರ್ಪಣೆ

Saturday, July 13th, 2024
Karavali-Lekhakiyara Sangha

ಮಂಗಳೂರು : ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ. ಶನಿವಾರ ಮಂಗಳೂರು ನಗರದ ಉರ್ವಸ್ಟೋರ್ ಬಳಿಯಿರುವ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ನವೀಕೃತ ಕಟ್ಟಡ ‘ಸಾಹಿತ್ಯ ಸದನ’ ವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಿದೆ. […]

ಸೂಕ್ತ ಅಧ್ಯಯನ ಹಾಗೂ ಶ್ರೇಷ್ಠ ಅಧ್ಯಾಪನ ಬದುಕು ರೂಪಿಸುತ್ತದೆ: ಕಜಂಪಾಡಿ ಸುಬ್ರಹ್ಮಣ್ಯ ಭಟ್

Saturday, July 13th, 2024
ಸೂಕ್ತ ಅಧ್ಯಯನ ಹಾಗೂ ಶ್ರೇಷ್ಠ ಅಧ್ಯಾಪನ ಬದುಕು ರೂಪಿಸುತ್ತದೆ: ಕಜಂಪಾಡಿ ಸುಬ್ರಹ್ಮಣ್ಯ ಭಟ್

ಪುತ್ತೂರು: ಭಾರತೀಯ ಸಂಸ್ಕೃತಿಯಲ್ಲಿ ಶಬ್ದಗಳಿಗೆ ಅದರದ್ದೇ ಆದ ಮಹತ್ವವಿದೆ. ಗುರು ಎಂಬ ಶಬ್ದವು ಬಹಳ ಶ್ರೇಷ್ಠ ಪದ. ವಿದ್ಯಾರ್ಥಿಗಳ ಬುದ್ಧಿಯನ್ನು ಜಾಗೃತಗೊಳಿಸಿ ಅವರನ್ನು ವಿಕಾಸಗೊಳಿಸುವುದು ಗುರುಗಳ ಕೆಲಸ.ತನ್ನ ಶಿಷ್ಯನಲ್ಲಿ ಅಜ್ಞಾನದ ಕತ್ತಲೆಯನ್ನು ಹೋಗಲಾಡಿಸಿ, ಜ್ಞಾನದ ದೀಪವನ್ನು ಯಾರು ಬೆಳಗುತ್ತಾನೆಯೋ ಆತ ನಿಜವಾದ ಗುರು ಎಂದು ಕರೆಸಿಕೊಳ್ಳುತ್ತಾನೆ, ಎಂದು ಕಾಸರಗೋಡಿನ ನಿವೃತ್ತ ಶಿಕ್ಷಕ, ಖ್ಯಾತ ವಾಗ್ಮಿ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಹೇಳಿದರು. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗದ ವತಿಯಿಂದ ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ […]

ಯುವ ಸ್ಪಂದನ ಅಧ್ಯಕ್ಷರಾಗಿ ಜಿತಿನ್‌ ಜೀಜೋ, ಉಪಾಧ್ಯಕ್ಷರಾಗಿ ಡಿ.ಎಂ.ದೀಕ್ಷಾ ಆಯ್ಕೆ

Saturday, July 13th, 2024
yuva-spandana

ಮಂಗಳೂರು: ಯುವ ಸ್ಪಂದನ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ಲಿ. ಇದರ ಅಧ್ಯಕ್ಷರಾಗಿ ಜಿತಿನ್‌ ಜೀಜೋ ಹಾಗೂ ಉಪಾಧ್ಯಕ್ಷರಾಗಿ ಡಿ.ಎಂ.ದೀಕ್ಷಾ ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಜುಲೈ 12 ಶುಕ್ರವಾರ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಈ ಚುನಾವಣಾಪ್ರಕ್ರಿಯೆಯು ನಡೆಯಿತು. ರಿಟರ್ನಿಂಗ್ ಅಧಿಕಾರಿಯಾಗಿ ಸಹಕಾರ ಸ್ಪಂದನದ ಲೆಕ್ಕ ಪರಿಶೋಧನಾ ಇಲಾಖೆಯ ಶ್ರೀಯುತ ನವೀನ್ ಎಂ.ಎಸ್. ಇವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಯುವ ಸ್ಪಂದನ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಇದರ ನಿರ್ದೇಶಕ ಮಂಡಳಿಗೆ ನಡೆದ […]

ಹಿಂದೂ ಯುವತಿಯನ್ನು ಪ್ರೀತಿಯ ನಾಟಕವಾಡಿ ಕಿಡ್ನಾಪ್ ಮಾಡಿದ ಮುಸ್ಲಿಂ ಯುವಕ, ಆತನ ಮೇಲಿದೆ 15 ಕೇಸುಗಳು

Friday, July 12th, 2024
Mohammed Aspak Vidyanagara

ಮಂಗಳೂರು : ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗದೆ ಕೆಲಸಕ್ಕೆ ಸೇರಿದ್ದ ಬಡ ಕುಟುಂಬಕ್ಕೆ ಸೇರಿದ್ದ ಹಿಂದೂ ಯುವತಿಯೊಬ್ಬಳನ್ನು ಮುಸ್ಲಿಂ ಯುವಕ ಪ್ರೀತಿಯ ನಾಟಕವಾಡಿ ಕಿಡ್ನಾಪ್ ಮಾಡಿರುವುದಾಗಿ ಮಂಗಳೂರು ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಸರಗೋಡಿನ ವಿದ್ಯಾನಗರ ನಿವಾಸಿಯೇ ಆಗಿರುವ ಮಹಮ್ಮದ್ ಅಶ್ಫಾಕ್ ಎಂಬಾತ ಯುವತಿಯನ್ನು ಪ್ರೇಮ ಪಾಶಕ್ಕೆ ಸಿಲುಕಿಸಿ ಕಿಡ್ನ್ಯಾಪ್ ಮಾಡಿದ್ದಾನೆ. ಅಶ್ಫಾಕ್ ಮೇಲೆ ಕಾಸರಗೋಡು ನಗರದ ಎರಡು ಠಾಣೆಗಳಲ್ಲಿ 15 ಕೇಸು ದಾಖಲಾಗಿದ್ದು, ಮೂರು ಪ್ರಕರಣದಲ್ಲಿ ಶಿಕ್ಷೆಯಾಗಿದೆ. ಅಲ್ಲದೆ, ಈ ಹಿಂದೆ ಎರಡು ಹೆಣ್ಮಕ್ಕಳನ್ನು ಮದುವೆಯಾಗಿ ಬಿಟ್ಟಿದ್ದಾನೆ. ಇಂಥ […]