ಕುವೈತ್ ನ ಅಗ್ನಿ ದುರಂತದಲ್ಲಿ ಕಾಸರಗೋಡಿನ ಇಬ್ಬರು ಸೇರಿ, ಕೇರಳದ ಹನ್ನೊಂದು ಮಂದಿ ಮೃತ

Thursday, June 13th, 2024
Kerala-Residents

ಕಾಸರಗೋಡು : ಕುವೈತ್ ನ ಬಹುಮಹಡಿ ಕಟ್ಟಡದಲ್ಲಿ ಬುಧವಾರ ಮುಂಜಾನೆ ಉಂಟಾದ ಭೀಕರ ಅಗ್ನಿ ಅನಾಹುತದಲ್ಲಿ ಕಾಸರಗೋಡು ಮೂಲದ ಇಬ್ಬರು ಸೇರಿ ರಾಜ್ಯದ ಒಟ್ಟು ಹನ್ನೊಂದು ಮಂದಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಚೆರ್ಕಳ ಕುಂಡಡ್ಕದ ರಂಜಿತ್ ( 34) ಹಾಗೂ ತೃಕ್ಕರಿಪುರ ಎಳಂಬಚ್ಚಿಯ ಪಿ . ಕುಂಞ ಕೇಳು ( 55) ಮೃತಪಟ್ಟವರು. ರಂಜಿತ್ ಕಳೆದ ಎಂಟು ವರ್ಷಗಳಿಂದ ಕುವೈತ್ ನಲ್ಲಿ ಉದ್ಯೋಗದಲ್ಲಿದ್ದರು. ಒಂದು ವರ್ಷದ ಹಿಂದೆ ಊರಿಗೆ ಬಂದು ಮರಳಿದ್ದರು . ಚೆರ್ಕಳ – ಕುಂಡಡ್ಕದ […]

ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು CPIM ಒತ್ತಾಯ

Wednesday, June 12th, 2024
cpim

ಮಂಗಳೂರು : ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ನಿರ್ಮಾಣ ಕಾರ್ಯ ಕಳೆದ ಮೂರು ವರ್ಷಗಳಿಂದ ನಿಧಾನಗತಿಯಲ್ಲಿ ಸಾಗುತ್ತಿದ್ದ ಪರಿಣಾಮ ಉಳ್ಳಾಲ, ತೊಕ್ಕೋಟ್ಟು, ಬಜಾಲ್, ಜಪ್ಪಿನಮೊಗರು ಸೇರಿದಂತೆ ಆಸುಪಾಸಿನ ಸಾವಿರಾರು ಜನತೆ ತೀರಾ ಸಂಕಷ್ಟಕ್ಕೊಳಗಾಗಿ ದಿನನಿತ್ಯ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ರೈಲ್ವೆ ಇಲಾಖೆ ಕೆಳಸೇತುವೆ (ಅಂಡರ್ ಪಾಸ್) ನಿರ್ಮಾಣ ಕಾರ್ಯವನ್ನು ಆದಷ್ಟು ಶೀಘ್ರದಲ್ಲಿ ಮುಗಿಸಿ ಜನರ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸ್‌ವಾದಿ)ಕೇಂದ್ರ ವಿಭಾಗ ಸಮಿತಿಯು ಒತ್ತಾಯಿಸಿದ್ದು, ಈ ಬಗ್ಗೆ ಇಂದು( 12-06-2024) […]

ಮಳೆಗಾಲದಲ್ಲಿ ಅವಘಡ ಗಳ ಬಗ್ಗೆ ಎಚ್ಚರಿಕೆ‌ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Wednesday, June 12th, 2024
Lalshmi-Hebbalkar

ಉಡುಪಿ: ಮುಂಗಾರು ಮಳೆಯಲ್ಲಿ ನೆರೆ ಸೇರಿದಂತೆ ಮತ್ತಿತರ ಅವಘಡ ಗಳಿಂದ ಜನ ಜಾನುವಾರುಗಳಿಗೆ ಸಾವು ನೋವುಗಳು ಆಗದಂತೆ ಹಾಗೂ ಆಸ್ತಿ ಹಾನಿ‌ ಆಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಈ ಬಾರಿ ಹವಾಮಾನ ಇಲಾಖೆ, […]

ಸುಳ್ಯದಲ್ಲಿ ಕಲ್ಲು ಎತ್ತಿ ಹಾಕಿ ಮಹಿಳೆಯ ಕೊಲೆ, ಆರೋಪಿಯ ಬಂಧನ

Wednesday, June 12th, 2024
ಸುಳ್ಯದಲ್ಲಿ ಕಲ್ಲು ಎತ್ತಿ ಹಾಕಿ ಮಹಿಳೆಯ ಕೊಲೆ, ಆರೋಪಿಯ ಬಂಧನ

ಸುಳ್ಯ: ಮಹಿಳೆಯೋರ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಜೋಗಿಯಡ್ಕದ ಜಯರಾಮ ನಾಯ್ಕ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳ್ಳಾರೆಯ ಪಾಟಾಜೆಯ ನಳಿನಿ(55) ಎಂಬವರ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ರವಿವಾರ ರಾತ್ರಿ ನಡೆದಿದ್ದು, ಜಯರಾಮ ನಾಯ್ಕನೇ ಕೃತ್ಯ ನಡೆಸಿದ್ದಾಗಿ ಪೊಲೀಸರು ಪತ್ತೆ ಹಚ್ಚಿದ್ದರು. ಬೆಳ್ಳಾರೆ ಗ್ರಾಮದ ಪಾಟಾಜೆ ನಿವಾಸಿ ಸುಂದರ ಎಂಬವರ ಪತ್ನಿ ನಳಿನಿ ಅವರು ಎರಡು ವರ್ಷಗಳ ಹಿಂದೆ ಮನೆ ಬಿಟ್ಟಿದ್ದರು. ವಾರಕೊಮ್ಮೆ ಮನೆಗೆ […]

ವೃಕ್ಷ ಬಿಸಿನೆಸ್ ಸೊಲ್ಯೂಷನ್ ಮತ್ತು ಕೆನರಾ ಫಿಶ್ ಫಾರ್ಮರ್ಸ್ ಕಂಪೆನಿ ವಂಚನೆ ಪ್ರಕರಣ ಸಿಬಿಐಗೆ ಒಪ್ಪಿಸಲು ಒತ್ತಾಯ

Tuesday, June 11th, 2024
vruksha

ಮಂಗಳೂರು: ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ವೃಕ್ಷ ಬಿಸಿನೆಸ್ ಸೊಲ್ಯೂಷನ್ ಮತ್ತು ಕೆನರಾ ಫಿಶ್ ಫಾರ್ಮರ್ಸ್ ಕಂಪೆನಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ವಂಚನೆ ಎಸಗಿರುವ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ. “ವೃಕ್ಷ ಬಿಸಿನೆಸ್ ಸೊಲ್ಯೂಶನ್ ಎಂಬ ಸಂಸ್ಥೆಯು ಮಂಗಳೂರಿನಲ್ಲಿ ಸ್ಥಾಪನೆಯಾಗಿ ಗ್ರಾಹಕರ ಹಣಕ್ಕೆ ಹೆಚ್ಚಿನ ಬಡ್ಡಿ ದರ ನೀಡುವುದಾಗಿ ನಂಬಿಸಿ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ದೇಶದಾದ್ಯಂತ ಹಣ […]

ಬಹುನಿರೀಕ್ಷಿತ “ತುಡರ್” ತುಳು ಸಿನಿಮಾ ಜೂನ್ 14 ರಂದು ತೆರೆಗೆ

Tuesday, June 11th, 2024
tudar

ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಜೂನ್ 14 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಸಿನಿಮಾ ತೆರೆಕಾಣಲಿದೆ ಎಂದು ಚಿತ್ರತಂಡ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿತು. ಚಿತ್ರದ ಬಗ್ಗೆ ಮಾತಾಡಿದ ಮೋಹನ್ […]

ಕಲ್ಲಡ್ಕ ರಾಷ್ಟ್ರೀಯ ಹೆದ್ಧಾರಿ ಒಂದು ವಾರದೊಳಗೆ ದುರಸ್ತಿ ಪೂರ್ಣಗೊಳಿಸಲು ಉಸ್ತುವಾರಿ ಸಚಿವರ ಸೂಚನೆ

Monday, June 10th, 2024
Dinesh -Gundurao

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾದುಹೋಗಿರುವ ಎಲ್ಲಾ ರಾಷ್ಟ್ರೀಯ ಹೆದ್ಧಾರಿಗಳನ್ನು ಸಮರ್ಪಕ ದುರಸ್ತಿ ಮಾಡಿ ಸುಗಮ ಸಂಚಾರಕ್ಕೆ ಅನುಕೂಲಕರವಾಗಿ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೆದ್ದಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಳೆಗಾಲದಲ್ಲಿ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿ ಮಾತನಾಡಿದರು. ಬಿಸಿ.ರೋಡ್-ಕಲ್ಲಡ್ಕ-ಮಾಣಿ ರಾಷ್ಟ್ರೀಯ ಹೆದ್ಧಾರಿಯಲ್ಲಿ ದುರಸ್ತಿಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು, ಮಳೆಯ ನೀರು ಹರಿದು […]

ಕಾಂಗ್ರೆಸ್ ಬೆಂಬಲಿತ ಮತೀಯ ಶಕ್ತಿಗಳ ಅಟ್ಟಹಾಸಕ್ಕೆ ಕಡಿವಾಣ ಯಾವಾಗ..? : ಕ್ಯಾಪ್ಟನ್ ಬ್ರಿಜೇಶ್ ಚೌಟ

Monday, June 10th, 2024
Brijesh-Chowta

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಪದಗ್ರಹಣದ ಅಂಗವಾಗಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ನಡೆದ ಸಂಭ್ರಮಾಚರಣೆಯನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್‌ ಹಾಗೂ ವಿನೋದ್ ಅವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪ್ರತಿಕ್ರಯಿಸಿ “ಜಿಲ್ಲೆಯಲ್ಲಿ ಇದೇ ಮಾದರಿಯ ಘಟನೆಗಳು ಪದೇ ಪದೇ ನಡೆಯುತ್ತಿದ್ದು ರಾಜ್ಯ ಸರಕಾರ ಏನು ಮಾಡುತ್ತಿದೆ” ಎಂದು ಪ್ರಶ್ನಿಸಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ನಡೆಯುತ್ತಿರುವ […]

ಕಲ್ಲಾಪು ಬಳಿ 25 ಅಂಗಡಿಗಳಿಗೆ ಬೆಂಕಿ, ಕೋಟ್ಯಂತರ ರೂಪಾಯಿ ನಷ್ಟ

Monday, June 10th, 2024
Kallapu-shops

ಮಂಗಳೂರು : ಕಲ್ಲಾಪು ಬಳಿಯಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿ 5 ದೊಡ್ಡ ಹಾಗೂ 20 ಸಣ್ಣ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಭಾನುವಾರ ಮುಂಜಾನೆ 4 ಗಂಟೆ ವೇಳೆಗೆ ನಡದಿರುವ ಬಗ್ಗೆ ವರದಿಯಾಗಿದೆ. ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಲ್ಲಿನ ನವೀದ್ ಮಾಲೀಕತ್ವದ ಎಸ್.ಎನ್ ಫ್ರೂಟ್ಸ್ , ಸುಹೈಲ್ ಎಂಬವರಿಗೆ ಸೇರಿದ ಕೆಎಫ್ ಕೆ, ಲತೀಫ್ ಎಂಬವರ ಕೆ.ಕೆ.ಫ್ರೂಟ್ಸ್ , ಇಂಡಿಯನ್ (60 ),ಸಲಾಂ ಅವರ ಬಿ.ಎಸ್.ಆರ್, ಝುಲ್ಫೀಕರ್ ಅವರ ಪಿಕೆಎಸ್, ನಾಸೀರ್ ಎಂಬವರ ಕೆಜಿಎನ್ […]

ಬಿಜೆಪಿಯ ವಿಜಯೋತ್ಸವದಲ್ಲಿ ಚೂರಿ ಇರಿತ, 10 ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಿಸಿದ ಪೊಲೀಸರು

Monday, June 10th, 2024
ಬಿಜೆಪಿಯ ವಿಜಯೋತ್ಸವದಲ್ಲಿ ಚೂರಿ ಇರಿತ, 10 ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಿಸಿದ ಪೊಲೀಸರು

ಮಂಗಳೂರು : ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಬೋಳಿಯಾರ್‌ ಗ್ರಾಮ ಸಮಿತಿಯು ಬೋಳಿಯಾರುದಿಂದ ಧರ್ಮನಗರದವರೆಗೆ ವಿಜಯೋತ್ಸವವನ್ನು ಆಚರಿಸುತ್ತಿರುವ ವೇಳೆ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚಾಕುವಿನಿಂದ ಇರಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಬೇಜವಾಬ್ದಾರಿ ವರ್ತನೆಯನ್ನು ಪ್ರಶ್ನಿಸಿ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರು ಭಾನುವಾರ ತಡರಾತ್ರಿ ಕೊಣಾಜೆ ಪೊಲೀಸ್ ಠಾಣೆಗೆ ಘೇರಾವ್ ಹಾಕಿದ್ದಾರೆ. ವಿಜಯೋತ್ಸವ ಮೆರವಣಿಗೆ ವೇಳೆ ಮಸೀದಿ ಬಳಿ ಡಿಜೆ ಮ್ಯೂಸಿಕ್ ನುಡಿಸದಂತೆ ಮೆರವಣಿಗೆಯಲ್ಲಿದ್ದವರಿಗೆ ಗ್ಯಾಂಗ್ ಸೂಚನೆ ನೀಡಿತ್ತು. ಇದರಿಂದ ಮಾತಿನ ಚಕಮಕಿ ನಡೆದಿದೆ […]