ಮಹಿಳೆಯನ್ನು ಕಡಿದ ಹಾವು ಅವರ ಅಂತ್ಯಸಂಸ್ಕಾರದ ದಿನವೂ ಬಂದಿತ್ತು !

Saturday, July 6th, 2024
ಮಹಿಳೆಯನ್ನು ಕಡಿದ ಹಾವು ಅವರ ಅಂತ್ಯಸಂಸ್ಕಾರದ ದಿನವೂ ಬಂದಿತ್ತು !

ಮಂಜೇಶ್ವರ : ಮಂಜೇಶ್ವರ ತಾಲೂಕಿನ ಕುರುಡುಪದವಿನಲ್ಲಿ ನಾಗರ ಹಾವು ಕಡಿತಕ್ಕೊಳಗಾಗಿ ಮೃತಪಟ್ಟ ಮಹಿಳೆಯ ಅಂತ್ಯ ಅಂತ್ಯಸಂಸ್ಕಾರ ಕ್ಕೆಂದು ಇಟ್ಟ ನೀರನ್ನು ಕುಡಿದು ಮನೆಯವರಲ್ಲಿ ಅಚ್ಚರಿ ಮೂಡಿಸಿದೆ. ಕುರುಡುಪದವಿನ ಪೈವಳಿಕೆ ಎಂಬಲ್ಲಿ ಜುಲೈ 4 ರಂದು ರಾತ್ರಿ 64 ವಯಸ್ಸಿನ ಚೋಮು ಎಂಬವರು ಹಾವುಕಡಿತಕ್ಕೊಳಗಾಗಿ ಮೃತಪಟ್ಟಿದ್ದರು. ಆಶ್ಚರ್ಯವೆಂದರೆ ಮರುದಿನ ಅವರ ಅಂತ್ಯಸಂಸ್ಕಾರದ ವಿಧಿಗೆ ಇಟ್ಟ ನೀರುನ್ನು ಕುಡಿಯುವ ಮೂಲಕ ಕಾಣಿಸಿಕೊಂಡು ಕಣ್ಮರೆಯಾಗಿದೆ. ಮಹಿಳೆಯ ಸಾವಿಗೆ ಕಾರಣವಾದ ನಾಗರ ಹಾವು ಮರುದಿನವೂ ಬಂದು ನೀರುಕುಡಿದಿರುವುದರ ಬಗ್ಗೆ ಮನೆಯವರಿಗೆ ಪ್ರಶ್ನಾರ್ಥಕವಾಗಿದೆ. ಅಂತ್ಯಸಂಸ್ಕಾರದ […]

ಎಮ್ಮೆಕೆರೆ ಅಂತರಾಷ್ಟ್ರೀಯ ಈಜುಕೊಳದಲ್ಲಿ ಸ್ವಿಮ್ಮಿಂಗ್ ಮಾಡಿದ ಸಚಿವ ದಿನೇಶ್ ಗುಂಡೂರಾವ್

Saturday, July 6th, 2024
ಎಮ್ಮೆಕೆರೆ ಅಂತರಾಷ್ಟ್ರೀಯ ಈಜುಕೊಳದಲ್ಲಿ ಸ್ವಿಮ್ಮಿಂಗ್ ಮಾಡಿದ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಎರಡು ದಿನಗಳ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ದಿನೇಶ್ ಗುಂಡೂರಾವ್ ಜುಲೈ 6 ಶನಿವಾರ ಎಮ್ಮೆಕೆರೆ ಅಂತರಾಷ್ಟ್ರೀಯ ಈಜುಕೊಳದಲ್ಲಿ ಸ್ವಿಮ್ಮಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಇಂದು ಮುಂಜಾನೆ ಎಮ್ಮೆಕೆರೆ ಈಜುಕೊಳದಲ್ಲಿ ಈಜಾಡಿದ್ದಾರೆ. ಬಳಿಕ ಈಜುಕೊಳದಲ್ಲಿ ಕೆಲವೊಂದು ವ್ಯವಸ್ಥೆಗಳನ್ನು ಮಾಡಲು ಸೂಚಿಸಿದ್ದಾರೆ. ಲಾಕರ್ ಫೆಸಿಲಿಟಿ , ಕುಡಿಯುವ ನೀರಿನ ವ್ಯವಸ್ಥೆ ಮೊದಲಾದ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈಜಲು ಬರುವವರು ತಮ್ಮ ಅಮೂಲ್ಯ ವಸ್ತುಗಳನ್ನು ಇರಿಸಲು ಲಾಕರ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಶುದ್ಧ ಕುಡಿಯುವ […]

ಮಳೆಗಾಲದಲ್ಲಿ ಗಿರಿಶಿಖರಗಳ ಟ್ರೆಕ್ಕಿಂಗ್ ನಿಷೇಧ

Saturday, July 6th, 2024
kumara-parvatha

ಮಂಗಳೂರು : 2024-2025ನೇ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಈ ಸಂಬಂಧ ಯಾವುದೇ ಅನಾಹುತಗಳು ಸಂಭವಿಸದಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗೃತಾ ಕ್ರಮ ವಹಿಸಬೇಕಾಗಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರು ಪ್ರವಾಸಿಗರು ವಿವಿಧ ಗಿರಿತಾಣಗಳಿಗೆ ಚಾರಣಕ್ಕಾಗಿ ತಂಡೋಪ ತಂಡವಾಗಿ ಭೇೀಟಿ ನೀಡುವುದು, ಸಾಹಸ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಜಿಲ್ಲಾಡಳಿತ ಗಮನಕ್ಕೆ ಬಂದಿರುತ್ತದೆ. ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ ಜಿಲ್ಲೆಯಾದ್ಯಂತ ಪ್ರಾಕೃತಿಕ ವಿಕೋಪದ ಘಟನೆಗಳು ಸಂಭವಿಸುತ್ತಿರುತ್ತವೆ. ಆದ್ದರಿಂದ ಸಾರ್ವಜನಿಕರ ಹಿತಾಸಕ್ತಿಯನ್ನು ಗಮನಿಸಿ ಸೂಕ್ತ ಸುರಕ್ಷತಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. […]

ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ

Friday, July 5th, 2024
Kumble-Sridhar-Rao

ಉಜಿರೆ : ನಮ್ಮ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹಿರಿಯ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ. ಆತ ನಾನು ಮೆಚ್ಚಿದ ಶ್ರೇಷ್ಠ ಕಲಾವಿದರಾಗಿದ್ದು, ಕೇರಳ ಮೂಲದವರಾದರೂ, ಸ್ಪಷ್ಟ ಉಚ್ಛಾರ, ಭಾಷಾಶುದ್ಧಿ ಹಾಗೂ ಪಾತ್ರಗಳಿಗೆ ಜೀವತುಂಬುವ ಕಲೆ ಅವರಲ್ಲಿ ಅದ್ಭುತವಾಗಿತ್ತು. ನೃತ್ಯ, ಅಭಿನಯ ಮತ್ತು ಉತ್ತಮ ವಾಕ್ಪಟುತ್ವದೊಂದಿಗೆ ಅವರು ಕಲಾಭಿಮಾನಿಗಳ ಮುಕ್ತ ಪ್ರಶಂಸೆಗೆ ಪಾತ್ರರಾಗಿದ್ದರು. ಅವರ ನಿಧನದಿಂದ ಶ್ರೇಷ್ಠ ಯಕ್ಷಗಾನ ಕಲಾವಿದರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು […]

ತಲಪಾಡಿ ಹೆದ್ದಾರಿ ಪಕ್ಕ ಇರುವ ಗೂಡಂಗಡಿಗಳನ್ನು ತೆರವು ಮಾಡಲು ಮುಂದಾದ ಟೋಲ್ ಗೇಟ್ ಕಂಪೆನಿ

Friday, July 5th, 2024
Talapady Toll-gate

ಮಂಗಳೂರು : ಕುಂದಾಪುರದಿಂದ ತಲಪಾಡಿವರೆಗಿನ ರಸ್ತೆ ಬದಿಯ ಅಂಗಡಿಗಳನ್ನು ತೆರವು ಗೊಳಿಸಲು ಮುಂದಾಗಿರುವ ಟೋಲ್ ಗೇಟ್ ಕಂಪೆನಿ ತಲಪಾಡಿ ಟೋಲ್ ಗೇಟ್ ಸುತ್ತಮುತ್ತ ನಿರ್ಮಿಸಲಾಗಿದ್ದ ಅಂಗಡಿಗಳನ್ನು ತೆರವುಗೊಳಿಸಲು ಮುಂದಾದಾಗ ಸ್ಥಳೀಯರು ಹಾಗೂ ತಲಪಾಡಿ ಗ್ರಾಮ ಪಂಚಾಯಿತಿ ಸದಸ್ಯರು ಕಾರ್ಯಾಚರಣೆ ನಿಲ್ಲಿಸಿದರು. ನವಯುಗ ಉಡುಪಿ ಟೋಲ್ ವೇ ಖಾಸಗಿ ಲಿಮಿಟೆಡ್ ಸಿಬ್ಬಂದಿಗಳು ಟೋಲ್ ಗೇಟ್ ಸುತ್ತಮುತ್ತಇರುವ ಅಂಗಡಿಗಳನ್ನು ಜುಲೈ 20ರೊಳಗೆ ತೆರವುಗೊಳಿಸಲು ಗಡುವು ನೀಡಿದ್ದಾರೆ. ಅಂಗಡಿಗಳನ್ನು ಜುಲೈ 20ರೊಳಗೆ ತೆರವುಗೊಳಿಸದೇ ಇದ್ದಲ್ಲಿ ನೆಲಸಮಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಈ ವರ್ಷ […]

ಸ್ನೇಹಿತರ ಜೊತೆ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

Friday, July 5th, 2024
Maichel

ಬಂಟ್ವಾಳ : ಸ್ನೇಹಿತರ ಜೊತೆ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯುತ್ತಿದ್ದ ವ್ಯಕ್ತಿಯೊಬ್ಬರು ಆಯತಪ್ಪಿ ನದಿಗೆ ಬಿದ್ದು ಕಣ್ಮರೆಯಾಗಿದ್ದರು. ಅಗ್ನಿಶಾಮಕ ದಳದವರು ವ್ಯಕ್ತಿಯ ಮೃತದೇಹವನ್ನು ಇಂದು ಪತ್ತೆಹಚ್ಚಿದ್ದಾರೆ. ಮೃತರನ್ನು ಮೈಕಲ್ (53) ಎಂದು ಗುರುತಿಸಲಾಗಿದೆ. ಸುರತ್ಕಲ್ ನ ಸರಪಾಡಿ ಸಮೀಪದ ಮಾವಿನ ಕಟ್ಟೆ ಎಂಬಲ್ಲಿಂದ ನೆಂಟರ ಮನೆಗೆ ಬಂದ ವ್ಯಕ್ತಿಗಳು ಸೇರಿದಂತೆ ನಾಲ್ಕು ಮಂದಿ ಗುರುವಾರ ಸಂಜೆ ಗಾಳ ಹಾಕಿ ಮೀನು ಹಿಡಿಯಲು ಬಂಟ್ವಾಳದ ಅಜಿಲಮೊಗರು ಸಮೀಪದ ಕೂಟೇಲು ಸೇತುವೆಯ ಸಮೀಪದ ಕಿಂಡಿ ಅಣೆಕಟ್ಟಿಗೆ ಹೋಗಿದ್ದರು. ಈ ವೇಳೆ […]

ಭಂಡಾರಿ ಬಿಲ್ಡರ್ಸ್ ವಿರುದ್ಧ ಜಿಲ್ಲಾಧಿಕಾರಿಗೆ ದೂರು ನೀಡಿದ ಬಂಟರ ಮಾತೃಸಂಘ

Friday, July 5th, 2024
bhandary-builders

ಮಂಗಳೂರು: ಬಂಟ್ಸ್ ಹಾಸ್ಟೆಲ್‌ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯ ಕಟ್ಟಡದ ಸಮೀಪದಲ್ಲಿ ಭಂಡಾರಿ ಬಿಲ್ಡರ್ಸ್ ನಿರ್ಮಿಸುತ್ತಿರುವ ಬಹುಮಹಡಿ ಕಟ್ಟಡದಿಂದ ನಮ್ಮ ಸಂಸ್ಥೆಯ ಕಟ್ಟಡಕ್ಕೆ ಆತಂಕ ಎದುರಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃಸಂಘವು ಜಿಲ್ಲಾಧಿಕಾರಿ ಮತ್ತು ಮೇಯರ್‌ಗೆ ದೂರು ನೀಡಿದೆ. ಶತಮಾನದ ಹಿಂದೆಯೇ ಇಲ್ಲಿ ಪ್ರಾಕೃತಿಕವಾಗಿ ನೀರು ಹರಿಯುವ ಸಣ್ಣ ತೋಡಿನ ರೂಪದ ಚರಂಡಿ ಇದ್ದು, ಭಂಡಾರಿ ಬಿಲ್ಡರ್ಸ್ ಸಂಸ್ಥೆ ನಿರ್ಮಾಣ ಮಾಡುವ ಕಟ್ಟಡದಿಂದ ಚರಂಡಿಗೆ ಹಾನಿಯಾಗಿದೆ. ಅಲ್ಲದೆ ಕಟ್ಟಡಕ್ಕಾಗಿ ತುಂಬಾ ಆಳದಲ್ಲಿ ಭೂಮಿಯನ್ನು ಅಗೆಯಲಾಗಿದ್ದು, […]

ಧರ್ಮದೈವ ತುಳುನಾಡಿನ ಕಾರಣಿಕ ಶಕ್ತಿಗಳ ಕುರಿತಾದ ಸಿನಿಮಾ: ಕನ್ಯಾನ

Friday, July 5th, 2024
dharma-daiva

ಮಂಗಳೂರು: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿಯವರ ನಿರ್ಮಾಣದಲ್ಲಿ ತಯಾರಾದ ಧರ್ಮದೈವ ತುಳು ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಬಿಡುಗಡೆ ಮಾಡಿ ಶುಭ ಹಾರೈಸಿದರು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಧರ್ಮದೈವ ಈಗಾಗಲೇ ದೇಶ ವಿದೇಶಗಳಲ್ಲಿ ಪ್ರೀಮಿಯರ್ ಶೋ ಪ್ರದರ್ಶನ ಕಂಡಿದೆ. ನೋಡಿದವರೆಲ್ಲರೂ ಸಿನಿಮಾ ಕುರಿತು ಮುಕ್ತವಾಗಿ ಶ್ಲಾಘಿಸಿದ್ದಾರೆ. ಬಹಳ […]

ಮಧ್ಯರಾತ್ರಿ ರಿಕ್ಷಾ ನಿಲ್ಲಿಸಿ ದರ್ಶನ ಪಾತ್ರಿ ನದಿಗೆ ಹಾರಿರುವ ಶಂಕೆ

Thursday, July 4th, 2024
Girish

ಬಂಟ್ವಾಳ : ಕುಕ್ಕಿಪಾಡಿ ಗ್ರಾಮದ ನಿವಾಸಿ ದರ್ಶನ ಪಾತ್ರಿ ಗಿರೀಶ್ ಎಂಬವರು ಕಾಣೆಯಾಗಿದ್ದಾರೆ ಎಂಬ ದೂರು ಪೂಂಜಲ್‌ಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬಾಡಿಗೆ ಹೋಗಲು ಇದೆ ಎಂದು ಹೇಳಿ ಮನೆಯಿಂದ ತೆರಳಿದ್ದು, ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಪೊಳಲಿ ಸೇತುವೆ ಮೇಲೆ ರಿಕ್ಷಾ ಒಂದು ಅಡ್ಡವಾಗಿ ನಿಂತಿದ್ದನ್ನು ಗಮನಿಸಿ ಪರಿಶೀಲನೆ ನಡೆಸಿದಾಗ ರಿಕ್ಷಾದಲ್ಲಿ ಯಾರೂ ಇಲ್ಲದೇ ಇರುವುದರಿಂದ ರಿಕ್ಷಾವನ್ನು ಪರಿಶೀಲಿಸಿದ ಪೊಲೀಸರು ಗಿರೀಶನ ಮನೆಗೆ ಮಾಹಿತಿ ತಿಳಿಸಿದ್ದಾರೆ. ಅಡ್ಡೂರು-ಪೊಳಲಿ ಸೇತುವೆಯಿಂದ […]

ಕಲರ್ಸ್‌ನಲ್ಲಿ ಹೊಸ ಧಾರಾವಾಹಿ ‘ನನ್ನ ದೇವ್ರು’ ಜುಲೈ 8ರಿಂದ ನಿತ್ಯ ಸಂಜೆ 6:30ಕ್ಕೆ ಪ್ರಸಾರ ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ ಮರಳಿ ಕಿರುತೆರೆಗೆ

Thursday, July 4th, 2024
nanna-devru

ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್‌ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಜುಲೈ 8, 2024 ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ 6.30 ರಿಂದ ವೀಕ್ಷಿಸಬಹುದು. ‘ನನ್ನ ದೇವ್ರು’ ಧಾರಾವಾಹಿಯ ವಿಶೇಷವೆಂದರೆ “ಅಶ್ವಿನಿ ನಕ್ಷತ್ರ’ದಿಂದ ಮನೆಮಾತಾಗಿದ್ದ ಮಯೂರಿ ಮತ್ತೆ ಕಿರುತೆರೆಗೆ ಮರಳಿರುವುದು. ಈ ಧಾರಾವಾಹಿಯಲ್ಲಿ ಮಯೂರಿಯದು ಸಣ್ಣ ಊರಿನ ಬಡ ನರ್ಸ್‌ ಪಾತ್ರ. ಊರೇ ಮೆಚ್ಚುವ […]