ವೃಕ್ಷ ಬಿಸಿನೆಸ್ ಸೊಲ್ಯೂಷನ್ ಮತ್ತು ಕೆನರಾ ಫಿಶ್ ಫಾರ್ಮರ್ಸ್ ಕಂಪೆನಿ ವಂಚನೆ ಪ್ರಕರಣ ಸಿಬಿಐಗೆ ಒಪ್ಪಿಸಲು ಒತ್ತಾಯ

Tuesday, June 11th, 2024
vruksha

ಮಂಗಳೂರು: ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ವೃಕ್ಷ ಬಿಸಿನೆಸ್ ಸೊಲ್ಯೂಷನ್ ಮತ್ತು ಕೆನರಾ ಫಿಶ್ ಫಾರ್ಮರ್ಸ್ ಕಂಪೆನಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ವಂಚನೆ ಎಸಗಿರುವ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ. “ವೃಕ್ಷ ಬಿಸಿನೆಸ್ ಸೊಲ್ಯೂಶನ್ ಎಂಬ ಸಂಸ್ಥೆಯು ಮಂಗಳೂರಿನಲ್ಲಿ ಸ್ಥಾಪನೆಯಾಗಿ ಗ್ರಾಹಕರ ಹಣಕ್ಕೆ ಹೆಚ್ಚಿನ ಬಡ್ಡಿ ದರ ನೀಡುವುದಾಗಿ ನಂಬಿಸಿ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ದೇಶದಾದ್ಯಂತ ಹಣ […]

ಬಹುನಿರೀಕ್ಷಿತ “ತುಡರ್” ತುಳು ಸಿನಿಮಾ ಜೂನ್ 14 ರಂದು ತೆರೆಗೆ

Tuesday, June 11th, 2024
tudar

ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಜೂನ್ 14 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಸಿನಿಮಾ ತೆರೆಕಾಣಲಿದೆ ಎಂದು ಚಿತ್ರತಂಡ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿತು. ಚಿತ್ರದ ಬಗ್ಗೆ ಮಾತಾಡಿದ ಮೋಹನ್ […]

ಕಲ್ಲಡ್ಕ ರಾಷ್ಟ್ರೀಯ ಹೆದ್ಧಾರಿ ಒಂದು ವಾರದೊಳಗೆ ದುರಸ್ತಿ ಪೂರ್ಣಗೊಳಿಸಲು ಉಸ್ತುವಾರಿ ಸಚಿವರ ಸೂಚನೆ

Monday, June 10th, 2024
Dinesh -Gundurao

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾದುಹೋಗಿರುವ ಎಲ್ಲಾ ರಾಷ್ಟ್ರೀಯ ಹೆದ್ಧಾರಿಗಳನ್ನು ಸಮರ್ಪಕ ದುರಸ್ತಿ ಮಾಡಿ ಸುಗಮ ಸಂಚಾರಕ್ಕೆ ಅನುಕೂಲಕರವಾಗಿ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೆದ್ದಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಳೆಗಾಲದಲ್ಲಿ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿ ಮಾತನಾಡಿದರು. ಬಿಸಿ.ರೋಡ್-ಕಲ್ಲಡ್ಕ-ಮಾಣಿ ರಾಷ್ಟ್ರೀಯ ಹೆದ್ಧಾರಿಯಲ್ಲಿ ದುರಸ್ತಿಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು, ಮಳೆಯ ನೀರು ಹರಿದು […]

ಕಾಂಗ್ರೆಸ್ ಬೆಂಬಲಿತ ಮತೀಯ ಶಕ್ತಿಗಳ ಅಟ್ಟಹಾಸಕ್ಕೆ ಕಡಿವಾಣ ಯಾವಾಗ..? : ಕ್ಯಾಪ್ಟನ್ ಬ್ರಿಜೇಶ್ ಚೌಟ

Monday, June 10th, 2024
Brijesh-Chowta

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಪದಗ್ರಹಣದ ಅಂಗವಾಗಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ನಡೆದ ಸಂಭ್ರಮಾಚರಣೆಯನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್‌ ಹಾಗೂ ವಿನೋದ್ ಅವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪ್ರತಿಕ್ರಯಿಸಿ “ಜಿಲ್ಲೆಯಲ್ಲಿ ಇದೇ ಮಾದರಿಯ ಘಟನೆಗಳು ಪದೇ ಪದೇ ನಡೆಯುತ್ತಿದ್ದು ರಾಜ್ಯ ಸರಕಾರ ಏನು ಮಾಡುತ್ತಿದೆ” ಎಂದು ಪ್ರಶ್ನಿಸಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ನಡೆಯುತ್ತಿರುವ […]

ಕಲ್ಲಾಪು ಬಳಿ 25 ಅಂಗಡಿಗಳಿಗೆ ಬೆಂಕಿ, ಕೋಟ್ಯಂತರ ರೂಪಾಯಿ ನಷ್ಟ

Monday, June 10th, 2024
Kallapu-shops

ಮಂಗಳೂರು : ಕಲ್ಲಾಪು ಬಳಿಯಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿ 5 ದೊಡ್ಡ ಹಾಗೂ 20 ಸಣ್ಣ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಭಾನುವಾರ ಮುಂಜಾನೆ 4 ಗಂಟೆ ವೇಳೆಗೆ ನಡದಿರುವ ಬಗ್ಗೆ ವರದಿಯಾಗಿದೆ. ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಲ್ಲಿನ ನವೀದ್ ಮಾಲೀಕತ್ವದ ಎಸ್.ಎನ್ ಫ್ರೂಟ್ಸ್ , ಸುಹೈಲ್ ಎಂಬವರಿಗೆ ಸೇರಿದ ಕೆಎಫ್ ಕೆ, ಲತೀಫ್ ಎಂಬವರ ಕೆ.ಕೆ.ಫ್ರೂಟ್ಸ್ , ಇಂಡಿಯನ್ (60 ),ಸಲಾಂ ಅವರ ಬಿ.ಎಸ್.ಆರ್, ಝುಲ್ಫೀಕರ್ ಅವರ ಪಿಕೆಎಸ್, ನಾಸೀರ್ ಎಂಬವರ ಕೆಜಿಎನ್ […]

ಬಿಜೆಪಿಯ ವಿಜಯೋತ್ಸವದಲ್ಲಿ ಚೂರಿ ಇರಿತ, 10 ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಿಸಿದ ಪೊಲೀಸರು

Monday, June 10th, 2024
ಬಿಜೆಪಿಯ ವಿಜಯೋತ್ಸವದಲ್ಲಿ ಚೂರಿ ಇರಿತ, 10 ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಿಸಿದ ಪೊಲೀಸರು

ಮಂಗಳೂರು : ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಬೋಳಿಯಾರ್‌ ಗ್ರಾಮ ಸಮಿತಿಯು ಬೋಳಿಯಾರುದಿಂದ ಧರ್ಮನಗರದವರೆಗೆ ವಿಜಯೋತ್ಸವವನ್ನು ಆಚರಿಸುತ್ತಿರುವ ವೇಳೆ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚಾಕುವಿನಿಂದ ಇರಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಬೇಜವಾಬ್ದಾರಿ ವರ್ತನೆಯನ್ನು ಪ್ರಶ್ನಿಸಿ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರು ಭಾನುವಾರ ತಡರಾತ್ರಿ ಕೊಣಾಜೆ ಪೊಲೀಸ್ ಠಾಣೆಗೆ ಘೇರಾವ್ ಹಾಕಿದ್ದಾರೆ. ವಿಜಯೋತ್ಸವ ಮೆರವಣಿಗೆ ವೇಳೆ ಮಸೀದಿ ಬಳಿ ಡಿಜೆ ಮ್ಯೂಸಿಕ್ ನುಡಿಸದಂತೆ ಮೆರವಣಿಗೆಯಲ್ಲಿದ್ದವರಿಗೆ ಗ್ಯಾಂಗ್ ಸೂಚನೆ ನೀಡಿತ್ತು. ಇದರಿಂದ ಮಾತಿನ ಚಕಮಕಿ ನಡೆದಿದೆ […]

ಉಳ್ಳಾಲ ಪರಿಸರದಲ್ಲಿ ಶ್ರೀಮಂತ ವ್ಯಕ್ತಿಗಳನ್ನು ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ಮೂವರ ಬಂಧನ

Sunday, June 9th, 2024
Ullala

ಮಂಗಳೂರು : ನಗರದ ಉಳ್ಳಾಲ ಮುಕ್ಕಚ್ಚೇರಿ ಪರಿಸರದಲ್ಲಿ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಸ್ಥರನ್ನು ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಕೊಲೆ, ಕೊಲೆಯತ್ನ, ದರೋಡೆ, ಮಾದಕ ವಸ್ತು ಮಾರಾಟ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ತಂಡವೊಂದು ಮಂಗಳೂರು ನಗರದ ಉಳ್ಳಾಲದ ಪರಿಸರದಲ್ಲಿ ಮಾರಾಕಾಯುಧಗಳಾದ ತಲವಾರುಗಳೊಂದಿಗೆ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಸ್ಥರನ್ನು ದರೋಡೆ ನಡೆಸಲು ಸಂಚು ರೂಪಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ […]

ನೇಪಾಳ ಮೂಲದ ಅಪ್ರಾಪ್ತ ಬಾಲಕಿ, ತೊಕ್ಕೊಟ್ಟು ಸಮೀಪದ ಮನೆಯಲ್ಲಿ ಆತ್ಮಹತ್ಯೆ

Saturday, June 8th, 2024
Rabina

ಮಂಗಳೂರು : ತೊಕ್ಕೊಟ್ಟು, ಚೆಂಬುಗುಡ್ಡೆಯ ಮನೆಯೊಂದರಲ್ಲಿ ನೇಪಾಳ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತ ಬಾಲಕಿ. ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ತೊಕ್ಕೊಟ್ಟು, ಚೆಂಬುಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ರಾಮ್ ಶರಣ್ ಅವರ ಎರಡನೇ ಮಗಳಾದ ರಬೀನಾ ನೇಪಾಳದಲ್ಲಿ ಎಂಟನೇ […]

ಬಸ್ಸಿನಲ್ಲಿ ಯುವತಿಯ ಸೊಂಟಕ್ಕೆ ಕೈ ಹಾಕಿ ಅಸಭ್ಯ ವರ್ತನೆ : ಯುವಕನಿಗೆ ಥಳಿಸಿರುವ ವಿಡಿಯೋ ವೈರಲ್

Saturday, June 8th, 2024
ಬಸ್ಸಿನಲ್ಲಿ ಯುವತಿಯ ಸೊಂಟಕ್ಕೆ ಕೈ ಹಾಕಿ ಅಸಭ್ಯ ವರ್ತನೆ : ಯುವಕನಿಗೆ ಥಳಿಸಿರುವ ವಿಡಿಯೋ ವೈರಲ್

ಮಂಗಳೂರು : ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಯುವತಿಯ ಸಂಬಂಧಿಕರು ಧರ್ಮದೇಟು ನೀಡಿರುವ ಘಟನೆ ಮಂಗಳೂರಿನ ಬಲ್ಲಾಳ್‌ ಬಾಗ್ ಎಂಬಲ್ಲಿ ನಡೆದಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಮಂಗಳೂರು ನಗರದ ನಾಗೂರಿಯಲ್ಲಿರುವ ಎಸ್​ಕೆ ಗ್ರೂಪ್ ಆಫ್ ಕಂಪನಿಯಲ್ಲಿ ಪ್ರೊಡಕ್ಟ್​ಗಳನ್ನು ಸೇಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಯುವತಿ ಶುಕ್ರವಾರ (ಜೂ.07) ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ನಾಗೂರಿಯಲ್ಲಿರುವ ಕಚೇರಿಗೆ ಹೋಗಿ ಪ್ರೊಡಕ್ಟ್​ಗಳನ್ನು ತೆಗೆದುಕೊಂಡಿದ್ದಾಳೆ. ಬಳಿಕ ಪ್ರೊಡಕ್ಟ್​ಗಳನ್ನು ಮಾರಾಟ ಮಾಡಲು ನಾಗೂರಿಯಿಂದ ಬಸ್​​ನಲ್ಲಿ ಹೊರಟು 9 […]

ಸ್ಕೂಟರ್‌ಗೆ ಲಾರಿ ಡಿಕ್ಕಿ, ಪೆಟ್ರೋಲ್ ಪಂಪ್ ಮ್ಯಾನೇಜರ್ ಮೃತ್ಯು

Saturday, June 8th, 2024
Rama-Naik

ಬಂಟ್ವಾಳ : ಲಾರಿಯೊಂದು ದ್ವಿಚಕ್ರವಾಹನಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳ, ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ಇಂದು ಸಂಜೆ ನಡೆದಿದೆ. ಅಮ್ಟಾಡಿ ಗ್ರಾಮದ ಕಲಾಯಿ ನಿವಾಸಿ ರಾಮನಾಯ್ಕ (47) ಮೃತಪಟ್ಟ ವ್ಯಕ್ತಿ. ರಾಮನಾಯ್ಕ ಅವರು ಸ್ಕೂಟರ್‌ನಲ್ಲಿ ಬಿಸಿರೋಡಿನಿಂದ ಮುಡಿಪು ಕಡೆಗೆ ತೆರಳುತ್ತಿದ್ದರು. ಈ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಲಾರಿ ಚಾಲಕ ರಾಮನಾಯ್ಕ ಅವರು ತೆರಳುತ್ತಿದ್ದ ಸ್ಕೂಟರ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್ […]