ಕಯ್ಯಾರರ ಕುಟೀರದಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿಯಿಂದ 109ನೇ ಜನ್ಮದಿನಾಚರಣೆ

Saturday, June 8th, 2024
Kayyara

ಬದಿಯಡ್ಕ: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ ಕಾಸರಗೋಡು ಮತ್ತು ಕಯ್ಯಾರರ ಕುಟುಂಬ ಜಂಟಿ ಆಶ್ರಯದಲ್ಲಿ ಕಯ್ಯಾರರ ಇಂಜ್ಜಕ್ಕ ನಿವಾಸದಲ್ಲಿ ಕಯ್ಯಾರರ 109ನೆ ಜನ್ಮ ದಿನಾಚರಣೆಯನ್ನು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿಯ ಅಧ್ಯಕ್ಷರಾದ ಚನಿಯಪ್ಪ ನಾಯ್ಕ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಕಾಸರಗೋಡು ಬ್ಲಾಕ್ ಪಂಚಾಯತ್ ಸದಸ್ಯರಾದ ಸುಕುಮಾರ್ ಕುದ್ರೆಪಾಡಿ ನಾಡೋಜ ಡಾ.ಕಯ್ಯಾರ ಕಿಞಣ್ಣ ರೈಯವರ ಬದುಕು ಹಾಗೂ ಬರಹ ಅನುಸ್ಮರಣೀಯ. ರಾಜಕೀಯ, ಸಾಮಾಜಿಕ, ಸಾಹಿತ್ಯ, ಶೈಕ್ಷಣಿಕ ಕ್ಷೇತ್ರದಲ್ಲಿ ಅವರು ತೋರಿದ ಅಸಾಮಾನ್ಯ […]

ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್

Friday, June 7th, 2024
shreyas-naika

ಉಡುಪಿ : ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಕುಂದಾಪುರ ಮೂಲದ ಯುವಕನನ್ನು ಜೂ.7ರಂದು ಪೊಲೀಸರು ಬಂಧಿಸಲಾಗಿದೆ. ಕುಂದಾಪುರ ಮೂಲದ ಉದ್ಯಮಿ ಶ್ರೇಯಸ್ ನಾಯ್ಕ (25) ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿದ್ದ. ಆರೋಪಿಯು ತನ್ನ ಪ್ರಭಾವಿ ಅಧಿಕಾರವನ್ನು ಬಳಸಿಕೊಂಡು ಹಲವಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕಳೆದ ಒಂದು ವರ್ಷದಿಂದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧ ಮೇ 18ರಂದು […]

ಶ್ರೀನಿವಾಸ ಹೆಲ್ತ್‌ಕೇರ್ ಪೋರ್ಟ್ ಹಾಸ್ಪಿಟಲ್ ಪ್ರೈವೇಟ್ ಲಿಮಿಟೆಡ್ ಮತ್ತು ಎನ್ಎಂಪಿಎ ನಡುವೆ ರಿಯಾಯಿತಿ ಒಪ್ಪಂದ ಸಹಿ ಸಮಾರಂಭ

Friday, June 7th, 2024
srinivas-hospital

ಮಂಗಳೂರು: ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ರಿಸರ್ಚ್ ಸೆಂಟರ್ ಮತ್ತು ನವಮಂಗಳೂರು ಬಂದರು ಪ್ರಾಧಿಕಾರ ನಡುವೆ ರಿಯಾಯಿತಿ ಒಪ್ಪಂದಕ್ಕೆ ಜೂನ್ 7, 2024 ರಂದು ಮಂಗಳೂರಿನ ಹೋಟೆಲ್ ಸ್ಯಾಫ್ರಾನ್‌ನಲ್ಲಿ ಸಹಿ ಹಾಕಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಮಂಗಳೂರು ನವಮಂಗಳೂರು ಬಂದರು ಪ್ರಾಧಿಕಾರದ ಅಧ್ಯಕ್ಷ ಡಾ. ವೆಂಕಟ ರಮಣ ಅಕ್ಕರಾಜು ಮಾತನಾಡಿ, ನೆಮ್ಮದಿಯ ಜೀವನ ನಡೆಸಲು ಆರೋಗ್ಯ ಅತ್ಯಗತ್ಯ. ದೊಡ್ಡ ಜನಸಂಖ್ಯೆಯೊಂದಿಗೆ, ಭಾರತವು ರಾಷ್ಟ್ರದ ಆರ್ಥಿಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ವ್ಯಾಪಾರವು ಅತ್ಯಗತ್ಯ, ಆದರೆ ನಾಗರಿಕರ […]

ಬಿಜೆಪಿಯ ಬೃಹತ್ ಹೋರಾಟದ ಫಲವಾಗಿ ಸಚಿವರ ರಾಜೀನಾಮೆ : ಶಾಸಕ ವೇದವ್ಯಾಸ ಕಾಮತ್

Thursday, June 6th, 2024
vedavyas-kamatha

ಮಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಿಂದಲೇ ಎಲ್ಲವನ್ನೂ ಮುಚ್ಚಿ ಹಾಕುವ ಸರ್ಕಾರದ ಪ್ರಯತ್ನಕ್ಕೆ ವಿರುದ್ಧವಾಗಿ ಬಿಜೆಪಿ ರಾಜ್ಯಾದ್ಯಂತ ನಡೆಸಿದ ಬೃಹತ್ ಹೋರಾಟದ ಫಲವಾಗಿ ಸಚಿವರು ರಾಜೀನಾಮೆ ನೀಡುವಂತಾಗಿದ್ದು ಕಾಂಗ್ರೆಸ್ಸಿನ ಭ್ರಷ್ಟಾಚಾರದ ದಾಹಕ್ಕೆ ತಾತ್ಕಾಲಿಕ ಕಡಿವಾಣ ಬಿದ್ದಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಹೇಳಿದರು. ನಾಡಿನ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಡಲಾದ ಅನುದಾನವನ್ನು ಭ್ರಷ್ಟರು ತಿಂದು ತೇಗುತ್ತಿದ್ದರೂ ಸರ್ಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದು, ಪ್ರಸ್ತುತ ರಾಜ್ಯದಲ್ಲಿ ಸರ್ಕಾರಕ್ಕೆ ನಿರ್ದಿಷ್ಟ […]

ವಿಧಾನ ಪರಿಷತ್ ನ ಸದಸ್ಯರಾಗಿ ಐವನ್ ಡಿಸೋಜ ಆಯ್ಕೆ

Thursday, June 6th, 2024
Ivan-D-Souza

ಮಂಗಳೂರು : ಕರ್ನಾಟಕ ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ 7 ಮಂದಿ, ಬಿಜೆಪಿಯಿಂದ 3 ಮಂದಿ ಹಾಗೂ ಜೆಡಿಎಸ್ ನಿಂದ ಒಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದು, ಚುನಾವಣಾ ಅಧಿಕಾರಿಯು ಮೇಲಿನ ಎಲ್ಲಾ 11 ಮಂದಿ ಉಮೇದ್ವಾರರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದ್ದಾರೆ. ನಂತರ ಚುನಾವಣಾ ಅಧಿಕಾರಿ ಶ್ರೀಮತಿ ಎಂ ಕೆ ವಿಶಾಲಾಕ್ಷಿ ರವರು ಐವನ್ ಡಿಸೋಜ ಇವರಿಗೆ ಚುನಾಯಿತರಾಗಿದ್ದಾರೆಂದು ಪ್ರಮಾಣ ಪತ್ರವನ್ನು ವಿತರಿಸಿದರು. ಈ ಚಿತ್ರದಲ್ಲಿ ಕಾಂಗ್ರೆಸ್ ಪಕ್ಷದ ವಿಜೇತ ವಿಧಾನ ಪರಿಷತ್ತಿನ ಸದಸ್ಯರು ಹಾಗೂ […]

ಆಟೋಚಾಲಕನ ಕುಟುಂಬಕ್ಕೆ ಬೆಳಕಾದ ಪದ್ಮರಾಜ್ ಆರ್. ಪೂಜಾರಿ

Thursday, June 6th, 2024
padmaraj-r

ಮಂಗಳೂರು : ಲೋಕಸಭೆ ಚುನಾವಣೆಯಲ್ಲಿ ಸೋತರೂ ಧೃತಿಗೆಡದೆ ಮತ್ತೆ ಸಮಾಜಮುಖಿ ಸೇವೆಯಲ್ಲಿ ತೊಡಗಿದ್ದಾರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷರಾದ ಪದ್ಮರಾಜ್ ಆರ್.ಪೂಜಾರಿ. ನಾನು ಬಡವರ ಕಣ್ಣೀರೊರೆಸುವ ಕಾರ್ಯ ಮಾಡಬೇಕು ಎನ್ನುವ ಮನದಾಸೆಯಿಂದ ಇತ್ತೀಚೆಗೆ ನಿಧನರಾದ ಕೊಡಿಪ್ಪಾಡಿ ಗ್ರಾಮದ ಬಟ್ರುಪ್ಪಾಡಿ ನಿವಾಸಿ, ಆಟೋಚಾಲಕ ದಿ.ಅನಿಲ್ ಪೂಜಾರಿಯವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳುವುದರ ಜತೆಗೆ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಗುರುಬೆಳದಿಂಗಳು ಫೌಂಡೇಶನ್ ಮೂಲಕ ಧನಸಹಾಯ ನೀಡಿ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಭರವಸೆಯ […]

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್​ನ ಭೋಜೇಗೌಡ ಭಾರೀ ಅಂತರದಿಂದ ಗೆಲವು

Thursday, June 6th, 2024
Bhoje Gowda

ಉಡುಪಿ : ನೈರುತ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಮುಕ್ತಾಯವಾಗಿತ್ತು, ಫಲಿತಾಂಶ ಪ್ರಕಟವಾಗಿದೆ. ನೈರುತ್ಯ ಶಿಕ್ಷಕರ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜೆಡಿಎಸ್​ನ ಭೋಜೇಗೌಡ ಭಾರೀ ಅಂತರದಿಂದ ಗೆಲವು ಸಾಧಿಸಿದ್ದಾರೆ. ಮೊದಲ ಪ್ರಾಶಸ್ತ್ಯ ಮತದಲ್ಲೇ 5267 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ ಭೋಜೇಗೌಡ. ಒಟ್ಟು ಆಗಿದ್ದ ಮತ 19479 ಮತಗಳು ಚಲಾವಣೆಯಾಗಿದ್ದವು. ಇದರಲ್ಲಿ 18658 ಮತಗಳು ಸಿಂಧುವಾದರೆ, 821 ಕುಲಗೆಟ್ಟ ಮತಗಳ ಪಟ್ಟಿ ಸೇರಿದ್ದವು. 9,330 ಖೋಟಾ ನಿಗಧಿಯಾಗಿತ್ತು. ಭೋಜೇಗೌಡರು 9829 ಮತಗಳನ್ನ ಮೊದಲ […]

ಉಡುಪಿ ಕಾಂಗ್ರೆಸ್‌ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋ ಬ್ಯಾಕ್ ಅಭಿಯಾನ

Wednesday, June 5th, 2024
Laxmi-Hebbalar

ಉಡುಪಿ : ಉಡುಪಿ ಕಾಂಗ್ರೆಸ್‌ನಲ್ಲಿ ಗೋ ಬ್ಯಾಕ್ ಅಭಿಯಾನ ಆರಂಭವಾಗಿದೆ. ಕಾಂಗ್ರೆಸ್ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಗರಂ ಆಗಿದ್ದಾರೆ. ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಜಿಲ್ಲೆಗೆ ಆಗಮಿಸದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಉಡುಪಿಯ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಗೋ ಬ್ಯಾಕ್ ಅಭಿಯಾನ ನಡೆಸುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲೂ ಬಂದಿಲ್ಲ, ನೀರಿನ ಸಮಸ್ಯೆಯಾದಾಗಲೂ ಬಂದಿಲ್ಲ. ಇದರಿಂದ ಕಾರ್ಯಕರ್ತರಿಗೆ ತುಂಬಾ ನೋವಾಗಿದೆ ಎಂದು ಜಿಲ್ಲಾ ಉಸ್ತುವಾರಿ […]

ಸೋಲಿನ ನೈತಿಕ ಹೊಣೆಯನ್ನು ನಾನೇ ಹೊತ್ತುಕೊಳ್ಳುತ್ತೇನೆ : ಪದ್ಮರಾಜ್ ಆರ್. ಪೂಜಾರಿ

Wednesday, June 5th, 2024
ಸೋಲಿನ ನೈತಿಕ ಹೊಣೆಯನ್ನು ನಾನೇ ಹೊತ್ತುಕೊಳ್ಳುತ್ತೇನೆ : ಪದ್ಮರಾಜ್ ಆರ್. ಪೂಜಾರಿ

ಮಂಗಳೂರು : ಸಾಮಾನ್ಯ ಕಾರ್ಯಕರ್ತನಾಗಿದ್ದ ನನಗೆ ಗೌರವ ನೀಡಿ ಪಕ್ಷದ ಹಿರಿಯ ನಾಯಕರು ಟಿಕೆಟ್ ನೀಡಿದ್ದಾರೆ. ಟಿಕೆಟ್ ಬಳಿಕ ಮತದಾರರನ್ನು ಭೇಟಿಯಾಗಲು ಸಿಕ್ಕಿದ ಕೆಲವೇ ದಿನಗಳ ಕಾಲಾವಧಿಯಲ್ಲಿ ಜಿಲ್ಲೆಯ 6.15 ಲಕ್ಷ ಮತದಾರರ ಮನಸ್ಸು ಗೆಲ್ಲಲು ಸಾಧ್ಯವಾಗಿರುವ ಬಗ್ಗೆ ಖುಷಿ ಇದೆ ಎಂದು ದ.ಕ. ಜಿಲ್ಲಾ ಲೋಕಸಭಾ ಅಭ್ಯರ್ಥಿಯಾಗಿದ್ದ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಕ್ಷ ಸಂಘಟನೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಮುಂದಿನ ಒಂದೂವರೆ ವರ್ಷದ […]

ದೇಶದಾದ್ಯಂತ ತಾಯಂದಿರ ಹೆಸರಿನಲ್ಲಿ ಗಿಡನೆಡುವ ಅಭಿಯಾನ ಯಶಸ್ವಿಯಾಗಬೇಕು: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Wednesday, June 5th, 2024
Brijesh-Chowta

ಮಂಗಳೂರು : ಪ್ರಧಾನಿ ನರೇಂದ್ರ ಮೋದಿರವರು ವಿಶ್ವ ಪರಿಸರ ದಿನದ ಅಂಗವಾಗಿ ದೇಶದಾದ್ಯಂತ ʻಏಕ್‌ ಪೇಡ್‌ ಮಾಂ ಕೆ ನಾಮ್‌ʼ, ತಾಯಂದಿರ ಹೆಸರಿನಲ್ಲಿ ಗಿಡನೆಡುವ ಅಭಿಯಾನಕ್ಕೆ ನೀಡಿದ ಕರೆಯ ಮೇರೆಗೆ ದಕ್ಷಿಣ ಕನ್ನಡ ನೂತನ ಲೋಕಸಭಾ ಸದಸ್ಯರಾದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟರವರು ವೃದ್ದಾಶ್ರಮದ ಆವರಣದಲ್ಲಿ ಹಣ್ಣಿನ ಗಿಡನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಡಾ.ಗಿರಿಧರ್‌ ರಾವ್ ಸಂಜೀವಿ ಭಾಯಿ ವೃದ್ದಾಶ್ರಮದಲ್ಲಿರುವ ತಾಯಂದಿರ ಹೆಸರಿನಲ್ಲಿ ಗಿಡನೆಟ್ಟ ಗಳಿಗೆ ಅವಿಸ್ಮರಣೀಯ, ಪ್ರಧಾನಿ ನರೇಂದ್ರ ಮೋದಿಯವರು ಅಪಾರವಾಗಿ ಗೌರವಿಸುವ ನಾರೀಶಕ್ತಿ ನನ್ನ […]