ನಾನೆಂದೂ ಕಾರ್ಯಕರ್ತರ ಪರ – ಲಕ್ಷ್ಮಿ ಹೆಬ್ಬಾಳ್ಕರ್

Saturday, January 27th, 2024
Lkshmi-Hebbalkar

ಉಡುಪಿ: ನಾನೆಂದೂ ಕಾರ್ಯಕರ್ತರ ಪರ, ಅಧಿಕಾರ ಬರುತ್ತೆ, ಹೋಗುತ್ತೆ‌. ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೆ ಜೀವಾಳ‌. ಕಾರ್ಯಕರ್ತರನ್ನು ಕಡೆಗಣಿಸುವ ಮಾತೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಒಂದು ಕುಟುಂಬ, ಒಂದು ಪರಿವಾರ ಇದ್ದಂತೆ ಎಂದು ಹೇಳಿದರು. ನಾನು ಕೂಡ ತಳಮಟ್ಟದಿಂದ ಬೆಳೆದು […]

ನರ್ತನದ ಹೊತ್ತಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದ ಪಾತ್ರಿ, ಮಕ್ಕಳನ್ನೇ ದೈವ ನರ್ತಕರನ್ನಾಗಿ ಮಾಡಿದ ದೈವ

Saturday, January 27th, 2024
shiradi-daiva

ಕಡಬ : ದೈವ ನರ್ತನದ ಹೊತ್ತಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದ ದೈವ ನರ್ತಕನ ಮಕ್ಕಳನ್ನೇ ನರ್ತಕರನ್ನಾಗಿ ದೈವ ನೇಮಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲದ ಶಿರಾಡಿಯಲ್ಲಿ ನಡೆದಿದೆ. ಕಳೆದ 2023ರ ಮಾರ್ಚ್‌ನಲ್ಲಿ ದೈವ ನರ್ತನದ ವೇಳೆ ಕಾಂತು ಅಜಿಲ ಎನ್ನುವರು ಕುಸಿದು ಬಿದ್ದು ಸಾವಿಗೀಡಾಗಿದ್ದರು. ಕಾಂತು ಅಜಿಲ ಸಾವಿನ ಬಳಿಕ ಗ್ರಾಮಸ್ಥರು ಹೊಸ ದೈವದ ನರ್ತಕನ ಹುಡುಕಾಟದಲ್ಲಿದ್ದರು. ದೈವಜ್ಞರ ಪ್ರಶ್ನೆಯಲ್ಲಿ ಕಂಡುಬಂದಂತೆ ಕಾಂತು ಅಜಿಲರ ಮಕ್ಕಳಾದ ಮೋನಪ್ಪ ಮತ್ತು ದಿನೇಶ್‌ರನ್ನು ಮುಂದಿನ ದೈವ […]

ಪತ್ರಿಕೆ ಛಾಯಾಗ್ರಾಹಕನ ಮೇಲೆ ಪತ್ನಿ ಮತ್ತು ಪ್ರಿಯಕರ ಸೇರಿ ಕಾರು ಹತ್ತಿಸಿ ಕೊಲೆಯತ್ನ, ದೂರು ದಾಖಲು

Saturday, January 27th, 2024
ಪತ್ರಿಕೆ ಛಾಯಾಗ್ರಾಹಕನ ಮೇಲೆ ಪತ್ನಿ ಮತ್ತು ಪ್ರಿಯಕರ ಸೇರಿ ಕಾರು ಹತ್ತಿಸಿ ಕೊಲೆಯತ್ನ, ದೂರು ದಾಖಲು

ಬಂಟ್ವಾಳ : ಸರಕಾರೀ ಶಾಲೆಯ ಶಿಕ್ಷಕಿಯೊಬ್ಬರು ತನ್ನ ಸಹೋದ್ಯೋಗಿಯ ಜತೆಗೆ ಸೇರಿಕೊಂಡು ಪತಿಯ ಮೇಲೆ ಕಾರು ಹತ್ತಿಸಿ ಕೊಲೆಯತ್ನ ನಡೆಸಿರುವ ಘಟನೆಯು ಬಂಟ್ವಾಳ ಪಾಣೆಮಂಗಳೂರಿನ ಮೆಲ್ಕಾರಿನಲ್ಲಿ ನಡೆದಿದ್ದು, ಪತಿ ಕಿಶೋರ್ ಕುಮಾರ್ ಎದೆನೋವಿನಿಂದಾಗಿ ಆಸ್ಪತ್ರೆ ಸೇರಿದ್ದಾರೆ. ಪ್ರಜಾವಾಣಿ ಪತ್ರಿಕೆಯ ಛಾಯಾಗ್ರಾಹಕರಾಗಿರುವಂತಹ ಕಿಶೋರ್ ಕುಮಾರ್ ಬೋಳಾರ್ ಅವರು ನೀಡಿದ ದೂರಿನಂತೆ ಬಂಟ್ವಾಳ ನಗರ ಠಾಣೆಯಲ್ಲಿ ಕಿಶೋರ್ ಅವರ ಪತ್ನಿ ಶಿಕ್ಷಕಿ ಶುಭಾ ಮತ್ತು ಶಿಕ್ಷಕ ಶಿವಪ್ರಸಾದ್‌ ಶೆಟ್ಟಿ ಮಂಚಿ ಎಂಬವರ ಮೇಲೆ ದೂರು ದಾಖಲಾಗಿದೆ. ಸರಕಾರೀ ಶಾಲೆಯ ಶಿಕ್ಷಕಿ […]

ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ

Friday, January 26th, 2024
ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ

ಉಡುಪಿ : ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ರಾಜ್ಯ ಸರ್ಕಾರದ ಯೋಜನೆಗಳು ಸರ್ವರಿಗೂ ಅನುಕೂಲವಾಗುವಂತಿರಬೇಕು ಎಂಬ ದೃಷ್ಠಿಯಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾತಿ, ಧರ್ಮ, ಲಿಂಗಬೇಧಗಳಿಲ್ಲದೇ ಸರ್ವರಿಗೂ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ […]

ಮಂಗಳೂರು ನೆಹರು ಮೈದಾನದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Friday, January 26th, 2024
Republicday

ಮಂಗಳೂರು : ನೆಹರು ಮೈದಾನದಲ್ಲಿ ನಡೆದ 75ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧ್ವಜಾರೋಹಣ ಮಾಡಿದರು. ಪರೇಡ್ ವೀಕ್ಷಣೆ ಬಳಿಕ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ‘ದೇಶ ನಿರ್ಮಾಣಕ್ಕೆ ಬುನಾದಿ ಹಾಕಿದ ರಾಷ್ಟ್ರನಾಯಕರನ್ನು ತೆರೆಮರೆಗೆ ಸರಿಸಿ ಅವರ ಬಗ್ಗೆ ಯುವತಲೆಮಾರಿಗೆ ತಿಳಿಯದಂತೆ ಮಾಡುವ ಒಳಸಂಚು ರಾಷ್ಟ್ರದಲ್ಲಿ ನಡೆಯುತ್ತಿದೆ. ಇದು ಕಳವಳಕಾರಿ ಸಂಗತಿ‘ ಎಂದರು.  ಆದರ್ಶ ಪುರುಷ ಶ್ರೀರಾಮನಂತೆ ನಾಡಿನ ಜನರಿಗೆ ನೀಡಿದ ಮಾತನ್ನು ಉಳಿಸಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ರಾಮರಾಜ್ಯದ ಕನಸು […]

ಸಚಿವ ರಾಜಣ್ಣ ಶ್ರೀರಾಮ ಮಂದಿರ ವಿಷಯದಲ್ಲಿ ಹೇಳಿರುವುದು ಬಹುಸಂಖ್ಯಾತ ಹಿಂದುಗಳಿಗೆ ಮಾಡಿರುವ ಅವಮಾನ : ಸಂಸದ ನಳಿನ್‌

Saturday, January 20th, 2024
ಸಚಿವ ರಾಜಣ್ಣ ಶ್ರೀರಾಮ ಮಂದಿರ ವಿಷಯದಲ್ಲಿ ಹೇಳಿರುವುದು ಬಹುಸಂಖ್ಯಾತ ಹಿಂದುಗಳಿಗೆ ಮಾಡಿರುವ ಅವಮಾನ : ಸಂಸದ ನಳಿನ್‌

ಮಂಗಳೂರು : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ವಿಷಯದಲ್ಲಿ ಸಚಿವ ರಾಜಣ್ಣ ನೀಡಿರುವುದು ಮುರ್ಖತನದ ಹೇಳಿಕೆ. ಈ ಹೇಳಿಕೆ ಕಾಂಗ್ರೆಸ್‌ನ ಮಾನಸಿಕತೆಯನ್ನು ತೋರಿಸುತ್ತದೆ ಎಂದು ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ, ದ.ಕ. ಸಂಸದ ನಳಿನ್‌ ಕುಮಾರ್ ಕಟೀಲ್‌ ಹೇಳಿದ್ದಾರೆ. ಮಂಗಳೂರಿನಲ್ಲಿ ರಾಮ‌ ಮಂದಿರದ ಬಗ್ಗೆ ಸಚಿವ ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ನಳಿನ್ ಕುಮಾರ್‌ ಅವರು, ಅಯೋಧ್ಯೆಯ ಹೋರಾಟದ ಸಂದರ್ಭ ಕಾಂಗ್ರೆಸ್ ಟೀಕೆಗಳನ್ನು ಮಾಡಿತ್ತು. ರಾಮನ ಹುಟ್ಟಿನ‌ ಬಗ್ಗೆ ಪ್ರಶ್ನೆ ಮಾಡಿತ್ತು. ಕಾಂಗ್ರೆಸ್‌ಗೆ ಈ ದೇಶದ […]

ರಾಮಮಂದಿರ ಉದ್ಘಾಟನೆ ದಿನ ಶಾಲೆಗೆ ರಜೆ ಹಾಕಿದ್ರೆ ಮಕ್ಕಳಿಗೆ 1000 ರೂ ಸಾವಿರ ದಂಡ ಹಾಕ್ತೀವಿ ಎಂದ ಶಾಲೆ

Saturday, January 20th, 2024
Saint-Josephs-Convent

ಚಿಕ್ಕಮಗಳೂರು : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಭಜನೆ, ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮತ್ತೊಂದು ಕಡೆ ಸರ್ಕಾರಿ ಶಾಲೆ, ಖಾಸಗಿ ಶಾಲೆಗಳು, ಖಾಸಗಿ ಸಂಸ್ಥೆಗಳಿಗೆ ರಜೆ ನೀಡಬೇಕೆಂಬ ಬೇಡಿಕೆ ಹೆಚ್ಚಾಗುತ್ತಿದೆ. ಆದ್ರೆ ಇಲ್ಲೊಂದು ಕ್ರೈಸ್ತ ಶಾಲೆ ಜನವರಿ 22 ರಂದು ಮಕ್ಕಳು ರಜೆ ಹಾಕಿದ್ರೆ 1000 ಸಾವಿರ ದಂಡ ಹಾಕ್ತೀವಿ ಅಂತ ಎಚ್ಚರಿಕೆ ನೀಡಿದೆ. ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠೆ ದಿನವಾದ ಜನವರಿ 22 ರಂದು […]

ಲಕ್ಷಾಂತರ ರೂ.ಗಳಿಗೆ ಪ್ರಶ್ನೆಪತ್ರಿಕೆ ಮಾರಾಟ, ಮಂಗಳೂರು ವಿವಿ ಅಧಿಕಾರಿಗಳ ಇ.ಡಿ ವಿಚಾರಣೆ

Saturday, January 20th, 2024
mangalore-university

ಮಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೇಮಕಾತಿ ಪರೀಕ್ಷೆ ಹಗರಣದಲ್ಲಿ ಮಂಗಳೂರು ವಿವಿ ಅಧಿಕಾರಿಗಳು ನೇರವಾಗಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪರೀಕ್ಷಾ ಪೂರ್ವದಲ್ಲೇ ಕೋಚಿಮುಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮಾರಾಟವಾಗಿದೆ ಅನ್ನೋ ಬಗ್ಗೆ ಸಂಶಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ (ಜ.20) ಮಂಗಳೂರು ವಿವಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳ ತಂಡ ಭೇಟಿ ನೀಡಿ ತೀವ್ರ ವಿಚಾರಣೆ ನಡೆಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ತಾಲೂಕಿನ ಕೊಣಾಜೆಯಲ್ಲಿರುವ ಮಂಗಳೂರು ವಿವಿಗೆ ಇ.ಡಿ ಅಧಿಕಾರಿಗಳ […]

ಉದ್ಯಾವರ ಮಾಡ ಶ್ರೀ ಅರಸು ಮಂಜೀಷ್ಣಾರ್ ದೈವಗಳ ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರ ರಾಘವ ಪಟ್ನ ನಿಧನ

Saturday, January 20th, 2024
Raghava-patna

ಮಂಜೇಶ್ವರ: ಉದ್ಯಾವರ ಮಾಡ ಶ್ರೀ ಅರಸು ಮಂಜೀಷ್ಣಾರ್ ದೈವಗಳ ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರ, ಸಿ. ಪಿ.ಐ. ಪಕ್ಷದ ಹಿರಿಯ ನೇತಾರ, ಪ್ರಗತಿಪರ ಕೃಷಿಕರಾದ ಉದ್ಯಾವರ ಮಾಡ ಪಟ್ನ ನಿವಾಸಿ ರಾಘವ ಪಟ್ನ (86) ಇಂದು ಬೆಳಗ್ಗೆ ಸ್ವ – ಗೃಹದಲ್ಲಿ ನಿಧನರಾದರು. ಮೃತರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಉದ್ಯಾವರ ಮಾಡ ಸಾರ್ವಜನಿಕ ಹಿಂದೂ ರುದ್ರ ಭೂಮಿಯಲ್ಲಿ ನಡೆಯಿತು. ಮೃತರ ನಿಧನಕ್ಕೆ ಶ್ರೀ ಅರಸು ಮಂಜೀಷ್ಣಾರ್ ದೈವಗಳ ಕ್ಷೇತ್ರದ ಆಡಳಿತ ಸಮಿತಿ, ಕಟ್ಟೆ ಫ್ರೆಂಡ್ಸ್ […]

ಕದ್ರಿ ಪಾರ್ಕ್‌ಗೆ ಬಂದಿದ್ದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಥಳಿಸಿದ ಮೂವರ ತಂಡ

Friday, January 19th, 2024
ಕದ್ರಿ ಪಾರ್ಕ್‌ಗೆ ಬಂದಿದ್ದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಥಳಿಸಿದ ಮೂವರ ತಂಡ

ಮಂಗಳೂರು: ಕದ್ರಿ ಪಾರ್ಕ್‌ಗೆ ಬಂದಿದ್ದ ಯೆನೆಪೋಯ ಬಿ ಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಮತ್ತು ಜಿ ಏನ್ ಎಂ ನರ್ಸಿಂಗ್ ಕಾಲೇಜು ನಂತೂರು ಇದರ ವಿದ್ಯಾರ್ಥಿಯನ್ನು ಶುಕ್ರವಾರ ಬೆಳಗ್ಗೆ ಮೂವರು ಯುವಕರ ತಂಡವೊಂದು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿಗಳಾದ ನಿತಿನ್ (18), ಹರ್ಷಾ (18) ಮತ್ತು ತಂಡದಲ್ಲಿದ್ದ ಬಾಲಕನನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ಬೆಳಗ್ಗೆ ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿ ಮತ್ತು ದೇರಳಕಟ್ಟೆಯ ನರ್ಸಿಂಗ್ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ದೇರಳಕಟ್ಟೆಯಿಂದ […]