ಅಯೋಧ್ಯೆ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠೆ ಮತ್ತು ಮಹತ್ವ

Friday, January 19th, 2024
ಅಯೋಧ್ಯೆ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠೆ ಮತ್ತು ಮಹತ್ವ

ಅಯೋಧ್ಯೆ: ಅಯೋಧ್ಯೆ ಶ್ರೀ ರಾಮ ಮಂದಿರದ ಗರ್ಭಗೃಹದಲ್ಲಿ ಸೋಮವಾರ 12.20 ಕ್ಕೆ ಪ್ರತಿಷ್ಠೆ ಗೊಳ್ಳಲಿರುವ ರಾಮಲಲ್ಲಾ ನ ವಿಗ್ರಹವು 150 ಕೆಜಿಗಿಂತ ಹೆಚ್ಚು ತೂಕವಿದ್ದು, 51 ಇಂಚು ಎತ್ತರವಿದೆ ಇದನ್ನು ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ್ದಾರೆ. ಭಗವಾನ್ ರಾಮ ಮತ್ತು ಅವರ ಸಹೋದರರ ಮೂಲ ವಿಗ್ರಹಗಳನ್ನು ಗರ್ಭಗುಡಿಯೊಳಗಿನ ಹೊಸ ವಿಗ್ರಹ ಅಥವಾ ಜನವರಿ 22 ರ ಸಮಾರಂಭದ ಮೊದಲು ‘ಗರ್ಭಗೃಹ’ದ ಮುಂದೆ ಸ್ಥಾಪಿಸಲಾಗುವುದು. 1949 ರಿಂದ ಪೂಜಿಸಲ್ಪಡುತ್ತಿರುವ ಮೂಲ ವಿಗ್ರಹಗಳನ್ನು ಪ್ರಸ್ತುತ ಆವರಣದೊಳಗೆ ನಿರ್ಮಿಸಲಾದ […]

ಭಾಷೆ, ಮನಸ್ಸು ಮತ್ತು ಆಲೋಚನೆಯೇ ನಮ್ಮನ್ನು ಆಳುತ್ತದೆ ; ಲಕ್ಷ್ಮೀಶ ತೋಳ್ಪಾಡಿ

Friday, January 19th, 2024
Lit-fest

ಮಂಗಳೂರು : ಯಾವುದು ಘೋರವನ್ನು ಸೃಷ್ಟಿಸುತ್ತದೋ, ಅದೇ ಶಾಂತಿಯನ್ನು ಸೃಷ್ಟಿಸುತ್ತದೆ ಎನ್ನುವುದು ವೇದಗಳ ಮಾತು. ಈ ಮಾತು ಈವತ್ತಿಗೂ ಪ್ರಸ್ತುತ. ನಮ್ಮನ್ನು ಆಳುತ್ತಿರುವುದು ಬೇರೆ ಯಾವುದೂ ಅಲ್ಲ. ಭಾಷೆ, ಮನಸ್ಸು ಮತ್ತು ಆಲೋಚನೆಯೇ ನಮ್ಮನ್ನು ಆಳುತ್ತದೆ. ಇವುಗಳಿಂದಲೇ ಘೋರ ಮತ್ತು ಶಾಂತಿಯನ್ನು ಸೃಷ್ಟಿಸುತ್ತದೆ ಎಂದು ಹಿರಿಯ ಚಿಂತಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾದ ಲಕ್ಷ್ಮೀಶ ತೋಳ್ಪಾಡಿ ಅಭಿಪ್ರಾಯ ಪಟ್ಟಿದ್ದಾರೆ. ನಗರದ ಟಿಎಂಎ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಆರನೇ ವರ್ಷದ ಮಂಗಳೂರು ಲಿಟ್ ಫೆಸ್ಟ್ ಉದ್ಘಾಟಿಸಿ […]

ಕಂಕನಾಡಿ ನಗರ ಠಾಣೆಯ ಇನ್‌ಸ್ಪೆಕ್ಟರ್ ಎಸ್.ಎಚ್. ಭಜಂತ್ರಿ ಅಮಾನತು

Friday, January 19th, 2024
Bhajantri

ಮಂಗಳೂರು: ಕಂಕನಾಡಿ ನಗರ ಠಾಣೆಯ ಇನ್‌ಸ್ಪೆಕ್ಟರ್ ಎಸ್.ಎಚ್. ಭಜಂತ್ರಿ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶಿಸಿದ್ದಾರೆ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಮಾಡುವವರ ಜತೆ ಶಾಮೀಲು, ಮನೆ ಪರಿಸರದ ನಿವಾಸಿಗಳ ಜತೆ ಕಿರಿಕ್, ಹಿರಿಯ ಅಧಿಕಾರಿಗಳ ಜತೆ ಉಡಾೆಯಾಗಿ ವರ್ತಿಸಿದ್ದಾರೆಂಬ ಆರೋಪದಲ್ಲಿ ಅವರನ್ನು ಅಮಾನತು ಮಾಡಿದ್ದಾರೆ ಎನ್ನಲಾಗಿದೆ. ನಗರದ ಜಪ್ಪಿನಮೊಗರು ಕಡೆಕಾರಿನಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಸಹಾಯಕ ಪೊಲೀಸ್ ಆಯುಕ್ತರಾದ ಧನ್ಯಾ ನಾಯಕ್ ಅವರಿಗೆ ಮಾಹಿತಿ ಬಂದ ಹಿನ್ನಲೆಯಲ್ಲಿ […]

‘ದೇವಿ ನಗರ’ ಎಂಬ ಹೆಸರಿನ ನಾಮಫಲಕ ತೆರವು, ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರಿಗೆ ದುಬೈನಿಂದ ಬೆದರಿಕೆ

Thursday, January 18th, 2024
'ದೇವಿ ನಗರ' ಎಂಬ ಹೆಸರಿನ ನಾಮಫಲಕ ತೆರವು, ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರಿಗೆ ದುಬೈನಿಂದ ಬೆದರಿಕೆ

ಕಾರವಾರ : ಭಟ್ಕಳದ ಜಾಲಿ ಪಟ್ಟಣದಲ್ಲಿ ‘ದೇವಿ ನಗರ’ ಎಂಬ ಹೆಸರಿನಲ್ಲಿ ಹಾಕಲಾಗಿದ್ದ ನಾಮಫಲಕ ತೆರವುಗೊಳಿಸಿದ್ದಕ್ಕೆ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಾಮಫಲಕ ತೆರವು ಗೊಳಿಸಲು ಮದರಸಾದ ಗುರುಗಳು ಒತ್ತಡ ಹಾಕಿ ತೆರವುಗೊಳಿಸಿದ್ದರು ಎಂದು ಆರೋಪಿಸಲಾಗಿದೆ. ಹಿಂದೂಗಳು ಪ್ರತಿಭಟನೆ ನಡೆಸಿದ್ದಕ್ಕೆ ದುಬೈನಿಂದ ಕಾರ್ಯಕರ್ತರಿಗೆ ವಿಡಿಯೋ ಕಾಲ್ ಮಾಡಿ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಪ್ರತಿಭಟನೆಯಲ್ಲಿ ಭಾಗಿಯಾದ ಹರೀಶ, ದೇಯಾ ಹಾಗೂ ಮಹೇಶ ಎಂಬವರಿಗೆ ದುಬೈನಿಂದ ವಿಡಿಯೋ ಮೂಲಕ ಮುಕ್ತಾರ್ ಮಹ್ಮದ್ ಕೊಟ್ಟಿಕೋಡಿ ಎಂಬಾತ ಮನೆಗೆ ನುಗ್ಗಿ ಹೊಡೆಯುತ್ತೇನೆ ಎಂದು […]

ಕೊಲ್ಲೂರಿಗೆ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ

Thursday, January 18th, 2024
laxmi-hebbalkar

ಕೊಲ್ಲೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಇಂದು ಕುಟುಂಬ ಸಮೇತ ಪ್ರಸಿದ್ಧ ಯಾತ್ರಾಸ್ಥಳ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು. ಮಧ್ಯಾಹ್ನ 1.30ರ ವೇಳೆ ಆಗಮಿಸಿದ ಸಚಿವರನ್ನು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸ್ವಾಗತಿಸಲಾಯಿತು. ನಾಡಿನ ಒಳಿತಿಗಾಗಿ ಮೂಕಾಂಬಿಕಾ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದ ಆಡಳಿತ ಮಂಡಳಿ […]

ಸ್ನೇಹಿತರ ಜೊತೆ ಹೋಗಿದ್ದ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು

Thursday, January 18th, 2024
Prajwal Nayak

ಬಂಟ್ವಾಳ: ಸ್ನೇಹಿತರ ಜೊತೆ ಹೋಗಿದ್ದ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ವೇಳೆ ನಾವೂರ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತಪಟ್ಟ ಬಾಲಕ. ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳೀಯ ಮುಳುಗು ತಜ್ಞರು ಬಾಲಕನನ್ನು ಮೇಲಕ್ಕೆ ಎತ್ತಿದ್ದು, ಅದಾಗಲೇ ಬಾಲಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ […]

ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

Thursday, January 18th, 2024
kavya

ಬೆಳ್ತಂಗಡಿ: ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಗುರುವಾರ ಮಧ್ಯಾಹ್ನ ಅಳದಂಗಡಿ ಸಮೀಪ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಅಳದಂಗಡಿ ಸಮೀಪದ ಕುಬಲಾಜೆ ಮನೆ ನಿವಾಸಿ ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಎನ್ನಲಾಗಿದೆ. ಮೃತರಿಗೆ ಪತಿ, ಓರ್ವ ಪುತ್ರ, ಪುತ್ರಿ ಇದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ವೇಣೂರು ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಮಂಗಳೂರು : ಪಾಲಿಕೆಯ ವ್ಯಾಪ್ತಿಯಲ್ಲಿ ಅಳವಡಿಸಿದ ಅನಧಿಕೃತ ಬ್ಯಾನರ್ ತೆರೆವುಗೊಳಿಸದೆ ಇದ್ದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲು

Wednesday, January 17th, 2024
cl-anand

ಮಂಗಳೂರು : ಮಂಗಳೂರು ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿದ ಬ್ಯಾನರ್ ಗಳನ್ನು ಶೀಘ್ರವಾಗಿ ತೆರವುಗೊಳಿಸಬೇಕು ಎಂದು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಇಲ್ಲವಾದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲಾಗುವುದು ಎಂದು ಆಯುಕ್ತರು ಹೇಳಿದ್ದಾರೆ. ಕೆಲವು ಜಾಹೀರಾತು ಸಂಸ್ಥೆ ಹಾಗೂ ಖಾಸಗಿ ವ್ಯಕ್ತಿಗಳು ವಾಣಿಜ್ಯ ಉದ್ದೇಶಗಳಿಗಾಗಿ ಮತ್ತು ರಾಜಕೀಯ, ಧಾರ್ಮಿಕ, ಖಾಸಗಿ ಕಾರ್ಯಕ್ರಮಗಳ ಪ್ರಚಾರಕ್ಕಾಗಿ ಅನಧಿಕೃತ ಬ್ಯಾನರ್, ಕಟೌಟ್, ಬಂಟಿಂಗ್ಸ್, ಪ್ಲೆಕ್ಸ್ ಇತ್ಯಾದಿಗಳನ್ನು ಹಾಕಿದ್ದು ಅದನ್ನು ಶೀಘ್ರವಾಗಿ ತೆರವುಗೊಳಿಸಬೇಕು ಎಂದು ಹೇಳಿದ್ದಾರೆ. ಅನಧಿಕೃತ […]

ಕ್ರಿಕೆಟಿಗ ಕೆ.ಎಲ್. ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ

Wednesday, January 17th, 2024
KL-rahul

ಸುಬ್ರಹ್ಮಣ್ಯ: ಖ್ಯಾತ ಕ್ರಿಕೆಟಿಗ ಕೆ.ಎಲ್. ರಾಹುಲ್ ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು. ಕೆ.ಎಲ್.ರಾಹುಲ್ ಮಹಾ ಪೂಜೆಯಲ್ಲಿ ಭಾಗವಹಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಳದ ಅಧಿಕಾರಿಗಳು, ಸಿಬ್ಬಂದಿಗಳು ಅವರನ್ನು ಸ್ವಾಗತಿಸಿ, ಸನ್ಮಾನಿಸಿದರು. ಸ್ನೇಹಿತರ ಜೊತೆಗೆ ಕುಕ್ಕೆಗೆ ಆಗಮಿಸಿದ್ದ ಅವರು ಅಭಿಮಾನಿಗಳ ಜೊತೆ ಫೋಟೊ ಕ್ಲಿಕ್ಕಿಸಿಕೊಂಡರು.

ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ. ರಮಾನಾಥ ಹೆಗ್ಡೆ ನಿಧನ

Tuesday, January 16th, 2024
Ramanatha-Hegde

ಮಂಗಳೂರು: ನಗರದ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ. ರಮಾನಾಥ ಹೆಗ್ಡೆ (72) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾಗಿದ್ದಾರೆ. ಮಂಗಳಾದೇವಿ ದೇವಸ್ಥಾನದಲ್ಲಿ ಕಳೆದ 31ವರ್ಷಗಳಿಂದ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದರು. ನಗರದ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರ ಅಂತಿಮ ದರ್ಶನ ಜ.17ರಂದು ಮಂಗಳಾದೇವಿ ದೇವಸ್ಥಾನ ಸಮೀಪದ ಸ್ವಗೃಹದಲ್ಲಿ ಬೆಳಗ್ಗೆ 8.00 ರಿಂದ 11.00 ವರೆಗೆ ನಡೆಯಲಿದೆ. 11.30ಕ್ಕೆ ನಂದಿಗುಡ್ಡೆ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಮೃತರು ಪತ್ನಿ, ಪುತ್ರ […]