ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬೆಳ್ಳಿಯ ಪೂಜಾ ಸಾಮಗ್ರಿಗಳನ್ನು ಸಮರ್ಪಣೆ

Wednesday, January 10th, 2024
veerendra-heggade

ಧರ್ಮಸ್ಥಳ : ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬೆಳ್ಳಿಯ ಪೂಜಾ ಸಾಮಗ್ರಿಗಳನ್ನು ಸಮರ್ಪಿಸಿದ್ದೇವೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಶ್ರೀ ರಾಮ ಮಂದಿರ ನಿರ್ಮಾಣವಾಗುವ ಮೂಲಕ ಭಾರತೀಯರ ಅನೇಕ ವರ್ಷದ ಕನಸು, ನಿರೀಕ್ಷೆಗಳು ಸಾಕಾರಗೊಂಡಿದೆ ಎಂದು ಅವರು ಹೇಳಿದರು. ಶ್ರೀ ರಾಮ ಮಂದಿರ ನಿರ್ಮಾಣದ ಮಹತ್ ಕಾರ್ಯದ ನೇತೃತ್ವ ವಹಿಸಿದ ಪ್ರಧಾನಿ ಮೋದಿ ಹಾಗೂ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡ ಎಲ್ಲರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

ಮೋದಿ ವಿಶ್ವಶ್ರೇಷ್ಠ ನಾಯಕ ಎಂಬುದನ್ನು ಸಾಬೀತು ಪಡಿಸಿದ ಮಾಲ್ಡಿವ್ಸ್ : ಶಾಸಕ ಕಾಮತ್

Tuesday, January 9th, 2024
ಮೋದಿ ವಿಶ್ವಶ್ರೇಷ್ಠ ನಾಯಕ ಎಂಬುದನ್ನು ಸಾಬೀತು ಪಡಿಸಿದ ಮಾಲ್ಡಿವ್ಸ್ :  ಶಾಸಕ ಕಾಮತ್

ಮಂಗಳೂರು : ಪ್ರಧಾನಿ ಮೋದಿಯವರ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿ ಭಾರತೀಯರ ಆಕ್ರೋಶಕ್ಕೆ ಗುರಿಯಾದ ಮಾಲ್ಡಿವ್ಸ್ ತನ್ನ ಮೂರು ಸಚಿವರ ತಲೆದಂಡಗೊಳಿಸಿ, ಭಾರತದ ಕ್ಷಮೆಯಾಚಿಸಿರುವುದು, ಇಡೀ ಜಗತ್ತಿನಲ್ಲಿ ಭಾರತದ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಹೊಂದಿರುವ ವರ್ಚಸ್ಸಿಗೆ, ಜನಪ್ರಿಯತೆಗೆ ಸಾಕ್ಷಿ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದ ನಮ್ಮ ಪ್ರಧಾನಿಗಳನ್ನು ಸುಖಾಸುಮ್ಮನೆ ಟೀಕಿಸಿ ಭಾರತದಾದ್ಯಂತ ಆಕ್ರೋಶಕ್ಕೆ ಕಾರಣವಾಗಿ #ಬಾಯ್ಕಾಟ್_ಮಾಲ್ಡೀವ್ಸ್ ಅಭಿಯಾನ ಶುರುವಾದ ಬೆನ್ನಲೇ ಭಾರತದಲ್ಲಿ ಹತ್ತು ಸಾವಿರಕ್ಕಿಂತಲೂ ಹೆಚ್ಚು ಪ್ರವಾಸಿಗರು ಮಾಲ್ಡೀವ್ಸ್ […]

ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ಪೊಲೀಸ್ ಶೂಟೌಟ್

Tuesday, January 9th, 2024
Akashbhavan-Sharan

ಮಂಗಳೂರು: ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ನಗರದ ಜಪ್ಪು ಕುಡ್ಪಾಡಿ ಬಳಿ ಪೊಲೀಸರಿಂದ ಶೂಟೌಟ್ ನಡೆದಿರುವುದಾಗಿ ವರದಿಯಾಗಿದೆ. ಜ.2ರಂದು ನಗರದ ಮೇರಿಹಿಲ್ ಬಳಿ ಅಪರಾಧ ಪತ್ತೆದಳ (ಸಿಸಿಬಿ)ದ ಪೊಲೀಸರ ಮೇಲೆ ರೌಡಿಶೀಟರ್ ಆಕಾಶಭವನ ಶರಣ್ ಕಾರು ಹಾಯಿಸಿ ಕೊಲೆಗೆ ಯತ್ನಿಸಿದ್ದ ಆರೋಪವಿತ್ತು. ಕೃತ್ಯ ಎಸಗಿದ ಬಳಿಕ ಆತ ತಲೆಮರೆಸಿಕೊಂಡಿದ್ದ. ಇದೀಗ ಜಪ್ಪು ಕುಡ್ಪಾಡಿ ಬಳಿ ಪೊಲೀಸರಿಂದ ಶೂಟೌಟ್ ನಡೆದಿದೆ ಎಂದು ತಿಳಿದು ಬಂದಿದೆ. ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ರೇಣುಕಾಪ್ರಸಾದ್ […]

ಅಮೃತರು ಸಾಹಿತ್ಯ ಲೋಕದ ಮೇರು ಪರ್ವತ -ಸಾಹಿತಿ ಡಾ.ಪ್ರಭಾಕರ ನೀರುಮಾರ್ಗ

Tuesday, January 9th, 2024
Amrutha-Someshwara

ಮಂಗಳೂರು : ಕಾವ್ಯ,ಕಥೆ,ನಾಟಕ, ಯಕ್ಷಗಾನ ಸಹಿತ ಸಾರಸ್ವತ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಅಮೃತ ಸೋಮೇಶ್ವರ ಅವರು ಸಾಹಿತ್ಯ ಲೋಕದ ಮೇರು ಪರ್ವತ. ಸದಾ ಹೊಸತನವನ್ನು ನಿರೂಪಿಸಿದ ಅಮೃತರು ರಾಷ್ಟ್ರ ಕವಿಯಾಗುವ ಎಲ್ಲ ಅರ್ಹತೆ ಹೊಂದಿದ್ದರು ಎಂದು ಸಾಹಿತಿ ಡಾ.ಪ್ರಭಾಕರ ನೀರುಮಾರ್ಗ ಹೇಳಿದರು. ಅಗಲಿದ ಹಿರಿಯ ಜಾನಪದ ತಜ್ಞ ಅಮೃತ ಸೋಮೇಶ್ವರ ಅವರಿಗೆ ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ದ.ಕ.ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ನಗರದ ಚಿಲಿಂಬಿಯ ಶಾರದಾ ನಿಕೇತನದಲ್ಲಿ ಏರ್ಪಡಿಸಲಾದ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಅವರು ನುಡಿ […]

“ಮಿಸ್ಟರ್ ಮದಿಮಯೆ” ಜ.12ರಂದು ಕರಾವಳಿಯಾದ್ಯಂತ ತೆರೆಗೆ

Tuesday, January 9th, 2024
madimaye

ಮಂಗಳೂರು: “ಎಮ್ ಎಮ್ ಎಮ್ ಗ್ರೂಫ್ಸ್ ಬ್ಯಾನರ್ ನಡಿಯಲ್ಲಿ ನಿರ್ಮಾಣವಾದ “ಮಿಸ್ಟರ್ ಮದಿಮಯೆ’’ ತುಳು ಚಿತ್ರ ಜನವರಿ 12ರಂದು ತೆರೆ ಕಾಣಲಿದೆ” ಎಂದು ಸಾಯಿಕೃಷ್ಣ ಕುಡ್ಲ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ಮಿಸ್ಟರ್ ಮದಿಮಯೆ ಸಿನಿಮಾ ಮಂಗಳೂರಿನಲ್ಲಿ ಬಿಗ್ ಸಿನಿಮಾಸ್, ಸಿನಿಪೊಲಿಸ್, ಪಿವಿಆರ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರಿಯಲ್ಲಿ ಬಿಗ್ ಸಿನಿಮಾಸ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್, ಸುಳ್ಯದಲ್ಲಿ ಸಂತೋಷ್ ಚಿತ್ರಮಂದಿರದಲ್ಲಿ ಸಿನಿಮಾ ತೆರೆ ಕಾಣಲಿದೆ. ಉಡುಪಿಯ ಕಲ್ಪನಾ ಮತ್ತು ಮಂಗಳೂರಿನ ರೂಪವಾಣಿ ಥಿಯೇಟರ್ ನಲ್ಲಿ ಜ.19ರಂದು […]

ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶಿಷ್ಯ ಸುಶ್ರೀಂದ್ರ ತೀರ್ಥ ಶ್ರೀಪಾದರ ಅದ್ದೂರಿ ಪುರಪ್ರವೇಶ

Monday, January 8th, 2024
sugunendra

ಉಡುಪಿ: ನಗರದ ಪ್ರಮುಖ ರಸ್ತೆಯಲ್ಲಿ ಹಂಸವಾಹನದಲ್ಲಿ ಆಸೀನರಾಗಿ ಧಾರ್ಮಿಕ, ಸಾಂಸ್ಕೃತಿಕ ಸಂದೇಶ ಸಾರುವ ಕಲಾತಂಡಗಳ ಮೆರವಣಿಗೆಯಲ್ಲಿ ಭಾವೀ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶಿಷ್ಯ ಸುಶ್ರೀಂದ್ರ ತೀರ್ಥ ಶ್ರೀಪಾದರು ಸೋಮವಾರ ಪುರಪ್ರವೇಶಗೈದರು. ಪರ್ಯಾಯ ಪೀಠಾರೋಹಣಕ್ಕೆ ಮುನ್ನ ಕಳೆದ 1 ವರ್ಷಗಳಿಂದ ದೇಶದ ವಿವಿಧ ಧಾರ್ಮಿಕ ಹಾಗೂ ತೀರ್ಥ ಕ್ಷೇತ್ರಗಳ ಸಂಚಾರ ಮುಗಿಸಿ ಸೋಮವಾರ ಕನ್ನರ್ಪಾಡಿ ಜಯದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಶ್ರೀಗಳು, ಸಾಯಂಕಾಲ 4.30ಕ್ಕೆ ಜೋಡುಕಟ್ಟೆಗೆ ಆಗಮಿಸಿದರು. […]

ಮುಸ್ಲಿಂ ಲೀಗ್ ಪಕ್ಷ ದ ಸದಸ್ಯೆಯ ಮೃತದೇಹ ರಸ್ತೆ ಬದಿಯಲ್ಲಿ ಪತ್ತೆ

Monday, January 8th, 2024
Pushpa

ಕಾಸರಗೋಡು : ಮೊಗ್ರಾಲ್ ಪುತ್ತೂರು ಪಂಚಾಯತ್ ಮುಸ್ಲಿಂ ಲೀಗ್ ಪಕ್ಷ ದ ಮಹಿಳಾ ಸದಸ್ಯೆರೋರ್ವರು ರಸ್ತೆ ಬದಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೊಗ್ರಾಲ್ ಪುತ್ತೂರು ಸಮೀಪ ನಡೆದಿದೆ. ಮೊಗ್ರಾಲ್ ಪುತ್ತೂರು ಪಂಚಾಯತ್ ಮೂರನೇ ವಾರ್ಡ್ ಸದಸ್ಯೆ ಪುಷ್ಪಾ( 45) ಮೃತಪಟ್ಟವರು. ಮುಸ್ಲಿಂ ಲೀಗ್ ಪಕ್ಷ ದ ಸದಸ್ಯೆಯಾಗಿದ್ದರು. ಸೋಮವಾರ ಮಧ್ಯಾಹ್ನ ಪರಿಸರವಾಸಿ ರೋರ್ವರು ಗಮನಿಸಿದ್ದು, ಕೂಡಲೇ ಸ್ಥಳೀಯರ ನೆರವಿನಿಂದ ಆಟೋ ರಿಕ್ಷಾವೊಂದರಲ್ಲಿ ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ದರೂ ಆಗಲೇ ಮೃತಪಟ್ಟಿದ್ದರು. ಮೊಗ್ರಾಲ್ ಪುತ್ತೂರು ಕೋಟೆಗುಡ್ಡೆ ಕ್ವಾಟರ್ಸ್ ಸಮೀಪ […]

7 ಮಕ್ಕಳಿದ್ದರೂ, ಅನಾಥಾಶ್ರಮ ದಲ್ಲೇ ಪ್ರಾಣಕಳ್ಕೊಂಡ ವೃದ್ದೆ

Monday, January 8th, 2024
lakshmi-hegde

ಉಪ್ಪಿನಂಗಡಿ : ತನ್ನ ಇಳಿವಯಸ್ಸಿನಲ್ಲಿ ಮಕ್ಕಳಿಗೆ ಬೇಡವಾಗಿ ಅನಾಥಾಶ್ರಮ ಸೇರಿದ್ದ ವೃದ್ಧೆಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಭಾನುವಾರ ವರದಿಯಾಗಿದೆ. ಉಪ್ಪಿನಂಗಡಿ ಬಳಿಯ ಇಳಂತಿಲದ ಲಕ್ಷ್ಮೀ ಹೆಗ್ಡೆ (90) ನಿಧನ ಹೊಂದಿದ ವೃದ್ಧೆ. ಲಕ್ಷ್ಮೀ ಅವರಿಗೆ 7 ಮಕ್ಕಳಿದ್ದು, ಅವರ್‍ಯಾರೂ ಪಾರ್ಥಿವ ಶರೀರದ ಅಂತಿಮ ಕಾರ್ಯಕ್ಕೆ, ಅಂತಿಮ ದರ್ಶನಕ್ಕೆ ಆಗಮಿಸಿಲ್ಲ. ಆದ್ದರಿಂದ ಅನಾಥಾಶ್ರಮದವರೇ ಲಕ್ಷ್ಮೀ ಅವರ ಅಂತ್ಯಸಂಸ್ಕಾರ ಮಾಡಿರುವುದಾಗಿ ತಿಳಿದುಬಂದಿದೆ. ಲಕ್ಷ್ಮೀ ಅವರು ಉಪ್ಪಿನಂಗಡಿ ಬಳಿಯ ಇಳಂತಿಲದಲ್ಲಿ ಸ್ವಂತ ಮನೆ ಹೊಂದಿದ್ದರು. ವೃದ್ಧಾಪ್ಯದಲ್ಲಿ ಮಕ್ಕಳಿಗೆ ಬೇಡವಾಗಿ, ನ್ಯಾಯ ದೊರಕಿಸಿ […]

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರು ಅಲಿ ವಿರುದ್ಧ ಲೈಂಗಿಕ‌ ದೌರ್ಜನ್ಯ ಕೇಸ್

Sunday, January 7th, 2024
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರು ಅಲಿ ವಿರುದ್ಧ ಲೈಂಗಿಕ‌ ದೌರ್ಜನ್ಯ ಕೇಸ್

ಮಂಗಳೂರು : (ಮುಡಾ) ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರು ಅಲಿ ವಿರುದ್ಧ ಮಹಿಳಾ ಉದ್ಯೋಗಿ ಲೈಂಗಿಕ‌ ದೌರ್ಜನ್ಯ ಆರೋಪದ ದೂರು ದಾಖಲಿಸಿದ್ದಾರೆ. ಮುಡಾ ದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಬೆರಳಚ್ಚುಗಾರ್ತಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಮೂಡಾ ಆಯುಕ್ತ ಮನ್ಸೂರು ಅಲಿ ವಿರುದ್ಧ ಲೈಂಗಿಕ, ಮಾನಸಿಕ, ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ, ಜನವರಿ 6ರಂದು ಉರ್ವ ಪೊಲೀಸ್ ಠಾಣೆಯಲ್ಲಿ‌ ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್‌ 354, 354Aರಡಿ ಕೇಸ್ ದಾಖಲಿಸಿ ಪೊಲೀಸರಿಂದ ತನಿಖೆ ಮಾಡಲಾಗುತ್ತಿದೆ ಎಂದು […]

ಮನೆಯ ಫ್ಯಾನ್ ಗೆ ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Sunday, January 7th, 2024
deeksha

ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ. ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16) ಮೃತ ಯುವತಿ. ದೀಕ್ಷಾ ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ದೀಕ್ಷಾ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದು, ನಾಳೆ ಅವರಿಗೆ ಲ್ಯಾಬ್ ಪರೀಕ್ಷೆಯಿತ್ತು ಎಂದು ವರದಿಯಾಗಿದೆ. ಈಶ್ವರಮಂಗಲ ಹೊರಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.