ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮುಸ್ಲಿಂ ಮಹಿಳೆಯರಿಂದ ಪೊಲೀಸರಿಗೆ ದೂರು

Tuesday, December 26th, 2023
Kalladaka-Prabhakar-bhat

ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಉತ್ತರ ಕ್ಷೇತ್ರ ಸಮಿತಿಯ ವತಿಯಿಂದ ಸುರತ್ಕಲ್ ಪೊಲೀಸ್ ಠಾಣೆಗೆ ಆರ್‌ಎಸ್‌ ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ನೀಡಿದೆ. ಮಹಿಳೆಯರನ್ನು ಅವಮಾನಿಸಿ, ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಜೊತೆಗೆ ಅಸಭ್ಯ ಭಾಷೆಯಲ್ಲಿ ಮಾತನಾಡಿದ್ದಾರೆ ಎಂದು ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ದೂರಿನಲ್ಲಿ ಮಹಿಳೆಯರು ಹೇಳಿದ್ದಾರೆ. ಕೋಮುಗಲಭೆಗೆ ಪ್ರಭಾಕರ ಭಟ್‌ ಪ್ರಚೋದನೆ ನೀಡಿದ್ದಾರೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ನೀಡಿರುವ ದೂರಿನಲ್ಲಿ […]

ಕುಸಲ್ದರಸೆ ನವೀನ್ ಡಿ ಪಡೀಲ್ ಇವರಿಗೆ ಅತ್ಯುತ್ತಮ ನಟ ಪ್ರಶಸ್ತಿ

Tuesday, December 26th, 2023
Mugajja

ಮಂಗಳೂರು : ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರ ಅಕಾಡೆಮಿಯ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತುಳುನಾಡ ಅದ್ಭುತ ಕಲಾವಿದ ಕುಸಲ್ದರಸೆ ನವೀನ್ ಡಿ ಪಡೀಲ್ ಇವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರವಾದ “ಜೀಟಿಗೆ” ನಂತರ ಸಂತೋಷ್ ಮಾಡ ಇವರು ನಿರ್ದೇಶಿಸಿದ ಮೊದಲ ಅರೆಭಾಷೆ ಚಿತ್ರವಾದ ಮೂಗಜ್ಜನ ಕೋಳಿ, ಈ ಚಿತ್ರದಲ್ಲಿ ಮುಖ್ಯ ಭೂಮಿಕೆಯಾದ ಮೂಗಜ್ಜನ ಪಾತ್ರವನ್ನು ನವೀನ್ ಡಿ ಪಡೀಲ್ ಇವರು ನಿರ್ವಹಿಸಿದ್ದಾರೆ. ಇಡೀ ಸಿನಿಮಾದಲ್ಲಿ ಒಂದೇ ಒಂದು ಮಾತಿಲ್ಲದ, ಕೋಳಿಗಳನ್ನು […]

ಮಂಗಳೂರು – ಮಡಗಾಂವ್ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಓಡಾಟಕ್ಕೆ ಚಾಲನೆ

Tuesday, December 26th, 2023
ಮಂಗಳೂರು - ಮಡಗಾಂವ್ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಓಡಾಟಕ್ಕೆ ಚಾಲನೆ

ಮಂಗಳೂರು : ಮಂಗಳೂರು – ಮಡಗಾಂವ್ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಓಡಾಟಕ್ಕೆ ಮಂಗಳವಾರ ಬೆಳಿಗ್ಗೆ ಪ್ರಾಯೋಗಿಕ ಓಡಾಟಕ್ಕೆ ಚಾಲನೆ ನೀಡಲಾಯಿತು. ಮಂಗಳೂರು ಸೆಂಟ್ರಲ್ ನಿಂದ ಬೆಳಿಗ್ಗೆ 8.30 ಕ್ಕೆ ಹೊರಟ ಈ ರೈಲು ಮಧ್ಯಾಹ್ನ 1:05 ಕ್ಕೆ ಮಡಗಾಂವ್ ತಲುಪಲಿದೆ. ಉಡುಪಿ ಮತ್ತು ಕಾರವಾರದಲ್ಲಿ ಈ ರೈಲಿಗೆ ನಿಲುಗಡೆ ಇರುತ್ತದೆ. ಸಂಜೆ 6:10 ಕ್ಕೆ ಮಡಗಾಂವ್ ನಿಂದ ಹೊರಟು ರಾತ್ರಿ‌ 10.45 ಕ್ಕೆ ರೈಲು ಮಂಗಳೂರು‌ ಸೆಂಟ್ರಲ್ ತಲುಪಲಿದೆ. ಮಂಗಳವಾರ ಬೆಳಗ್ಗೆ 8:30 […]

ಕೆ.ಎಸ್.ಆರ್.ಟಿ.ಸಿ. ಬಸ್‌ ನಲ್ಲಿ ಪಿಕ್ ಪಾಕೆಟ್ ಮಾಡಿದ ಕಳ್ಳನನ್ನು ಹಿಡಿದ ಟಾಫಿಕ್ ಪೋಲೀಸ್

Friday, December 22nd, 2023
Nazir

ಬಂಟ್ವಾಳ : ಕೆ.ಎಸ್.ಆರ್.ಟಿ.ಸಿ. ಬಸ್‌ ನಲ್ಲಿ ಪಿಕ್ ಪಾಕೆಟ್ ಮಾಡಿ ಪರಾರಿಯಾಗಲು ಯತ್ನಿಸಿದ ಕಾಸರಗೋಡು ಮೂಲದ ವ್ಯಕ್ತಿಯೋರ್ವನನ್ನು ಕರ್ತವ್ಯ ನಿರತ ಟ್ರಾಫಿಕ್ ಪೋಲೀಸ್ ಸಿಬ್ಬಂದಿ ಹಿಡಿದು ಪೋಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಇಂದು ಬಿಸಿರೋಡಿನಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಉದುಮಾ ನಿವಾಸಿ ನಜೀರ್ ಎಂಬಾತ ಪಿಕ್‌ ಪಾಕೆಟ್‌ ಮಾಡಿರುವ ವ್ಯಕ್ತಿ . ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ ಪುತ್ತೂರು ನಿವಾಸಿ ಕರುಣಾಕರ ಎಂಬವರು ಬಿಸಿರೋಡಿನಿಂದ ಪುತ್ತೂರಿಗೆ ತೆರಳುವುದಕ್ಕೆ ಬಿಸಿರೋಡಿನಲ್ಲಿ ಖಾಸಗಿ ಬಸ್ ಹತ್ತಿದ್ದರು. ಈ ಸಂದರ್ಭದಲ್ಲಿ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

Wednesday, December 20th, 2023
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಉಡುಪಿ ಮೂಲದ 82 ವರ್ಷದ ವೃದ್ಧರೋರ್ವರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ನರ ಸಂಬಂಧಿ ಕಾಯಿಲೆಗೆ ಬಂದಿರುವ ಅವರನ್ನು ರಾಟ್ ಟೆಸ್ಟ್ ಮಾಡಿಸಿದಾಗ ಅದರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಕೊರೋನಾ ಟೆಸ್ಟಿಂಗ್ ಆರಂಭಿಸಿದ ಮೊದಲ ದಿನವೇ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು. ಅವರನ್ನು ಖಾಸಗಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ದಾಖಲಿಸಲಾಗಿದ್ದು ಅಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ಕುತ್ತಿಗೆಗೆ ಮರ ಕಡಿಯುವ ಯಂತ್ರ ತಗುಲಿ, ವ್ಯಕ್ತಿ ಸಾವು

Wednesday, December 20th, 2023
ಕುತ್ತಿಗೆಗೆ ಮರ ಕಡಿಯುವ ಯಂತ್ರ ತಗುಲಿ, ವ್ಯಕ್ತಿ ಸಾವು

ಬೆಳ್ತಂಗಡಿ : ಮರ ಕಡಿಯುವ ವೇಳೆ ಆಯತಪ್ಪಿ ಕಟ್ಟಿಂಗ್ ಮೆಷಿನ್ ಜೊತೆ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬೆಳ್ತಂಗಡಿಯ ಸಾವ್ಯದಲ್ಲಿ ನಡೆದಿದೆ. ಮೃತರನ್ನು ಸಾವ್ಯ ಗ್ರಾಮದ ಸಾವ್ಯ ಹೊಸಮನೆ ನಿವಾಸಿ ಪ್ರಶಾಂತ್ ಪೂಜಾರಿ (46) ಎಂದು ಗುರುತಿಸಲಾಗಿದೆ. ಈ ಘಟನೆ ಡಿಸೆಂಬರ್ 19 ರಂದು ನಡೆದಿದ್ದು, ಪ್ರಶಾಂತ್ ಅವರು ಕಟ್ಟಿಂಗ್ ಮೇಷಿನ್ ಹಿಡಿದು ಮರ ಕತ್ತರಿಸುತ್ತಿದ್ದರು, ಈ ವೇಳೆ ಆಯತಪ್ಪಿ ಅವರು ಮೆಷಿನ್ ಜೊತೆಗೆ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಕಟ್ಟಿಂಗ್ ಮೆಷಿನ್ ಚಾಲನಾ ಸ್ಥಿತಿಯಲ್ಲಿದ್ದ […]

ರವಿರಾಜ ಪನೆಯಾಲ ಗೆ “ಶ್ರೀ ಕದ್ರಿ” ಪ್ರಶಸ್ತಿ ಪ್ರದಾನ

Wednesday, December 20th, 2023
Raviraj-Paneyala

ಮಂಗಳೂರು : ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನ ಪ್ರಾಂಗಣದಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭ ವೇಷಧಾರಿ ರವಿರಾಜ ಪನೆಯಾಲ ಅವರಿಗೆ ಶ್ರೀ ಕದ್ರಿ” ಪ್ರಶಸ್ತಿ ಪ್ರದಾನ ಮಾಡಲಾಯಿತು. ಕುಂದೇಶ್ವರ ಪ್ರತಿಷ್ಠಾನ ಅಧ್ಯಕ್ಷ ಜಿತೇಂದ್ರ ಕುಂದೇಶ್ವರ ಅಭಿನಂದನಾ ಭಾಷಣ ಮಾಡಿ, ಪನೆಯಾಲರು ಕೀಚಕ, ಭೀಮ, ಸುಂದೋಪ ಸುಂದ ಮೊದಲಾದ ಪಾತ್ರಗಳಿಗೆ ಜೀವ ತುಂಬಿದವರು. ಸಮರ್ಥ ಅರ್ಥಧಾರಿ, ಕೃಷಿಕನಾಗಿ ಮತ್ತು ಯಕ್ಷಗಾನದಲ್ಲೂ ಕೃಷಿ ಮಾಡುತ್ತಿರುವ ಪನೆಯಾಲರು ಯುವ ಕಲಾವಿದರಿಗೆ ಆದರ್ಶ ಯಕ್ಷಗಾನ ಬಯಲಾಟ ತುಳುನಾಡಿನ ಜೀವನಾಡಿ, ಸಾವಿರಕ್ಕೂ ಮಿಕ್ಕಿ ವೃತ್ತಿಪರ […]

ಪತ್ನಿ ಯ ಕಣ್ಣು ಹಾಗೂ ಕೆನ್ನೆಗೆ ಕಚ್ಚಿ ಮಾಂಸ ತೆಗೆದ ಪತಿ, ಮಗಳಿಗೂ ದೊಣ್ಣೆಯಿಂದ ಹಲ್ಲೆ

Tuesday, December 19th, 2023
ಪತ್ನಿ ಯ ಕಣ್ಣು ಹಾಗೂ ಕೆನ್ನೆಗೆ ಕಚ್ಚಿ ಮಾಂಸ ತೆಗೆದ ಪತಿ, ಮಗಳಿಗೂ ದೊಣ್ಣೆಯಿಂದ ಹಲ್ಲೆ

ಮಂಗಳೂರು : ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಶಿಶಿಲ ಕೋಟೆಬಾಗಿಲು ನಿವಾಸಿ ಸುರೇಶ್ ಗೌಡ ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಸೋಮವಾರ ತಡರಾತ್ರಿ ಕಂಠಪೂರ್ತಿ ಕುಡಿದು ಬಂದಿರುವ ಸುರೇಶ್ ಗೌಡ, ಪತ್ನಿ ಜೊತೆ ಜಗಳ ತೆಗೆದಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಗಲಾಟೆ ತಾರಕಕ್ಕೇರಿ ಸುರೇಶ್ ಗೌಡನು ತನ್ನ ಪತ್ನಿಯ […]

ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುವ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಮಾದರಿಯಾಗಲಿ-ಯು.ಟಿ.ಖಾದರ್

Tuesday, December 19th, 2023
press cricket

ಮಂಗಳೂರು : ಸೌಹಾರ್ದತೆ ಗಾಗಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುವ ಪತ್ರ ಕರ್ತರ ‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್’ ಪಂದ್ಯಾವಳಿ’ಗೆ ಮಾದರಿಯಾಗಿ ನಡೆಯಲಿ ಎಂದು ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್ ಶುಭ ಹಾರೈಸಿದರು. ನಗರದ ಸರ್ಕ್ಯೂಟ್ ಹೌಸ್ ಗೆ ಆಗಮಿಸಿದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಕ್ರಿಕೆಟ್ ಪಂದ್ಯಾವಳಿಯ ಸಿದ್ಧತೆಯ ಬಗ್ಗೆ ಪದಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ […]

ಪಕ್ಕಳಪಾದೆಯಲ್ಲಿ ದಿ| ನಾಗೇಶ್ ಪಡು ರಂಗಮಂಟಪ ಉದ್ಘಾಟನೆ

Tuesday, December 19th, 2023
nagesh-padu

ಮಂಗಳೂರು : ಮೇರಮಜಲಿನ ಪಕ್ಕಳಪಾದೆ ಸರಸ್ವತಿ ನಗರದ ಶ್ರೀ ಸರಸ್ವತಿ ಭಜನಾ ಮಂದಿರದಲ್ಲಿ ಸಮಾಜ ಸೇವಕ, ಪತ್ರಕರ್ತ ದಿವಂಗತ ನಾಗೇಶ್ ಪಡು ಅವರ ಹೆಸರಿನಲ್ಲಿ ನೂತನ ರಂಗಮಂಟಪದ ಉದ್ಘಾಟನಾ ಸಮಾರಂಭ ನಡೆಯಿತು. ಬೆಳಿಗ್ಗೆ ವೈದಿಕ ಕಾರ್ಯಕ್ರಮಗಳು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಕಾರ್ಯಕ್ರಮ ನೆರವೇರಿದವು. ಸಂಜೆ ನೂತನ ರಂಗ ಮಂಟಪದಲ್ಲಿ ಪತ್ರಕರ್ತರ ಸಭಾಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ವಹಿಸಿ ಪತ್ರಕರ್ತರ ಜವಾಬ್ದಾರಿ ಸಾಮಾಜಿಕ ಪರಿವರ್ತನೆಯಲ್ಲಿ ಬಹಳ […]