ಗಾಂಜಾ ಮಾರಾಟದ ನಾಲ್ವರ ಬಂಧನ , 1.50 ಗ್ರಾಂ ಗಾಂಜಾ ವಶ

Monday, July 2nd, 2018
Ganja Seller

ಮಂಗಳೂರು : ನಗರದ ಉರ್ವ ಮಾರಿಗುಡಿ ಬಳಿ ಗಾಂಜಾ ಮಾರಾಟ ಯತ್ನಿಸುತ್ತಿದ್ದ ನಾಲ್ವರನ್ನು ಪೊಲೀಸರು ಕಾರ್ಯಾಚರಣೆ ನಡೆಸಿದ ಬಂಧಿಸಿದ ಘಟನೆ ಭಾನುವಾರ ನಡೆದಿದೆ. ಬಂಧಿತರನ್ನು ಉರ್ವದ ಮಾಡರ್ನ್ ರೈಸ್‌ಮಿಲ್ ಬಳಿ ಸಿಪಿಸಿ ಕಂಪೌಂಡ್ ನಿವಾಸಿ ಮಹೇಶ್ ಯಾನೆ ಮಾಚ (24), ಬೊಕ್ಕಪಟ್ಟಣ ರಸ್ತೆಯ ಮಠದಕಣಿಯ ರೀತೇಶ್ ಯಾನೆ ರೀತು (20), ಉರ್ವ ಲಾಂಗ್‌ಲೇನ್‌ ಬಳಿಯ ಸುದರ್ಶನ್ ಎಂ. ಯಾನೆ ಸುಧಾ (24), ಅಶೋಕ್‌ನಗರದ ಪಿ.ಕೆ. ಕಂಪೌಂಡ್ ಬಳಿಯ ರೀತೇಶ್ (21) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ […]

ಅಳಿವಿನ ಅಂಚಿನಲ್ಲಿರುವ ಸಿಹಿನೀರಿನ ಮೀನು ಮರಿಗಳ ಮೂಲ ಆವಾಸಕ್ಕೆ ಬಿಡುಗಡೆ

Saturday, June 30th, 2018
pilikula

ಮಂಗಳೂರು   : ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಸಂತಾನೋತ್ಪತ್ತಿ ಮಾಡಿ ಬೆಳೆಸಿದ ಪಶ್ಚಿಮ ಘಟ್ಟದ ಅಳಿವಿನ ಅಂಚಿನಲ್ಲಿರುವ ಸಿಹಿನೀರಿನ ಮತ್ಸ್ಯಪ್ರಬೇಧಗಳ ಮರಿಗಳನ್ನು ಅವುಗಳ ಮೂಲ ಆವಾಸಕ್ಕೆ ಬಿಡುವ ಕಾರ್ಯಕ್ರವಮವು ಕರ್ನಾಟಕ ಅರಣ್ಯ ಇಲಾಖೆ, ಮೀನುಗಾರಿಕಾ ಇಲಾಖೆ ಮತ್ತು ದ.ಕ. ಜಿಲ್ಲಾ ಪಂಚಾಯತ್‍ನ ಸಹಯೋಗದೊಂದಿಗೆ ಜೂನ್ 28 ರಂದು ನಾರಾವಿಯಲ್ಲಿರುವ ಅರಣ್ಯ ವಿಶ್ರಾಂತಿ ಗೃಹದಲ್ಲಿ ನಡೆಯಿತು. ಅಥಿತಿಗಳನ್ನು ಸ್ವಾಗತಿಸಿ ಮಾತನಾಡಿದ ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿದೇಶಕ ವಿ. ಪ್ರಸನ್ನ, ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಲೇಕ್‍ಗಾರ್ಡನ್‍ನಲ್ಲಿ […]

ಮಂಗಳೂರಲ್ಲಿ ಕೇಂದ್ರ ಸರಕಾರದ ಸಂಪರ್ಕ್ ಫಾರ್ ಸಮರ್ಥನ್ ಅಭಿಯಾನ

Saturday, June 30th, 2018
sampark for samarthan

ಮಂಗಳೂರು : ಕೇಂದ್ರ ಸರಕಾರದ ನಾಲ್ಕೂವರೆ ವರ್ಷ ಗಳ ಸಾಧನೆಯನ್ನು ಗಣ್ಯರೊಂದಿಗೆ ಹಂಚಿಕೊಳ್ಳುವ ಸಂಪರ್ಕ್ ಫಾರ್ ಸಮರ್ಥನ್ ಅಭಿಯಾನದ ಅಂಗವಾಗಿ ಶನಿವಾರ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಿ ವೇದವ್ಯಾಸ ಕಾಮತ್ ಖ್ಯಾತ ಕಲಾವಿದರಾದ ನವೀನ್ ಡಿ ಪಡೀಲ್ ಹಾಗೂ ದೇವದಾಸ್ ಕಾಪಿಕಾಡ್ ಅವರ ನಿವಾಸಗಳಿಗೆ ತೆರಳಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಯೋಜನೆಗಳ ಯಶಸ್ಸನ್ನು ಹಂಚಿಕೊಂಡರು. ತುಳುನಾಡಿನ ಖ್ಯಾತ ಕಲಾವಿದರಾದ ನವೀನ್ ಡಿ ಪಡೀಲ್ ಹಾಗೂ ದೇವದಾಸ್ ಕಾಪಿಕಾಡ್ ಅವರ ನಿವಾಸಗಳಿಗೆ […]

ನೆಟ್ಟ ಗಿಡಗಳ ರಕ್ಷಣೆಯೂ ನಮ್ಮ ಹೊಣೆ : ಸತ್ಯಾ ಕೆ

Saturday, June 30th, 2018
vanamahotsava

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ ಶನಿವಾರ ಪತ್ರಿಕಾಭವನ ಆವರಣದಲ್ಲಿ ನಡೆಯಿತು. ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹಿರಿಯ ಪತ್ರಕರ್ತೆ, ವಾರ್ತಾ ಭಾರತಿ ಪತ್ರಿಕೆಯ ವರದಿಗಾರ್ತಿ ಸತ್ಯಾ ಕೆ ಮಾತನಾಡಿ,  ಕೇವಲ ಪರಿಸದ ಬಗ್ಗೆ ಮಾತನಾಡಿದರೆ ಸಾಲದು, ಪರಿಸರ ರಕ್ಷಣೆಯಲ್ಲಿ ಪ್ರತಿಯೊಬ್ಬರ ಹೊಣೆಗಾರಿಯೂ ಇದೆ. ಮಕ್ಕಳಲ್ಲಿ ಪರಿಸರ ಪ್ರೇಮವನ್ನು ಬಿತ್ತುವ ಕಾರ್ಯ ಹೆಚ್ಚಾಗಿ ಆಗಬೇಕು. ಭವಿಷ್ಯದ ದೃಷ್ಟಿಯಿಂದ ಜನತೆಯನ್ನು ಎಚ್ಚರಿಸುವ ರೀತಿಯಲ್ಲಿ ಪ ರಿಸರ […]

ಸ್ಕಾರ್ಪ್ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ: ಯು.ಟಿ ಖಾದರ್

Saturday, June 30th, 2018
u-t-kader

ಮಂಗಳೂರು: ಸ್ಕಾರ್ಪ್ ವಿವಾದ ಬಗೆಹರಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇವೆ ಎಂದು ಸಚಿವ ಯು.ಟಿ ಖಾದರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್ ಅವರು ಸ್ಕಾರ್ಪ್ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಜಿಲ್ಲಾಧಿಕಾರಿ ಗೆ ಸೂಚನೆ ನೀಡಲಾಗಿದೆ ಎಂದರು. ಜಿಲ್ಲಾಧಿಕಾರಿ ಕಾನೂನಾತ್ಮಕ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ವಾಟ್ಸಪ್ ನಲ್ಲಿ ಬರುವ ಅಪಪ್ರಚಾರದ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಮೂಲರಪಟ್ಣ ಸೇತುವೆ ಸ್ಥಳಕ್ಕೆ ಯು.ಟಿ ಖಾದರ್ ಭೇಟಿ ನೀಡಿ ಪರಿಶೀಲನೆ..!

Saturday, June 30th, 2018
mullarpatna

ಮಂಗಳೂರು: ಇತ್ತೀಚೆಗೆ ಮಂಗಳೂರಿನ ಕುಪ್ಪೆಪದವಿನಿಂದ ಬಂಟ್ವಾಳ ಸಂಪರ್ಕಿಸುವ ಮೂಲರಪಟ್ಣ ಸೇತುವೆ ಕುಸಿತವಾಗಿರುವ ಹಿನ್ನೆಲೆಯಲ್ಲಿ ಸಚಿವ ಯು.ಟಿ ಖಾದರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸ್ಥಳೀಯರೊಂದಿಗೆ ಸಮಸ್ಯೆ ಆಲಿಸಿದ ಅವರು, ಶೀಘ್ರ ಪರ್ಯಾಯ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ಮೂಲರಪಟ್ಣದಿಂದ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ನದಿಯ ಎರಡೂ ಕಡೆಯವರ ಸಂಪರ್ಕಕ್ಕಾಗಿ ಬೋಟ್ ವ್ಯವಸ್ಥೆ ಮಾಡಲು ಪರಿಶೀಲನೆ ನಡೆಸುವಂತೆ ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗುವುದು ಎಂದರು. ಮಳೆಗಾಲ ಕಳೆದ ಬಳಿಕ ಹೊಸ […]

ಗುಂಡಿ ಮುಕ್ತ ರಸ್ತೆಗಳಿಗೆ ಕಾರಣರಾದ ಸಂಚಾರಿ ಪೊಲೀಸರು!

Saturday, June 30th, 2018
road-repair

ಮಂಗಳೂರು: ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವೆಡೆ ಕಾಣಿಸಿಕೊಂಡ ಗುಂಡಿಗಳನ್ನು ಮುಚ್ಚುವಂತೆ ಸೂಚಿಸಲಾಗಿದ್ದರೂ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರ ವಿರುದ್ಧ ಸಂಚಾರಿ ಪೊಲೀಸರ ತಂಡ ಪ್ರಕರಣ ದಾಖಲಿಸುವ ಪತ್ರವನ್ನು ಕಳುಹಿಸಿದೆ. ಈ ಬೆನ್ನಲ್ಲೇ ಗುತ್ತಿಗೆದಾರರು ರಸ್ತೆ ಗುಂಡಿ ಮುಚ್ಚಿದ್ದಾರೆ. ದೂರು ದಾಖಲು ಪತ್ರದ ವಿಚಾರ ತಿಳಿಯುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ರಾಷ್ಟ್ರೀಯ ಹೆದ್ದಾರಿ ನಿರ್ವಹಣೆಯ ಗುತ್ತಿಗೆದಾರರು, ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿ ಮುಚ್ಚುವ ಕೆಲಸ ಮಾಡುತ್ತಿದ್ದಾರೆ. ಬಂಟ್ವಾಳ ಟ್ರಾಫಿಕ್ ಪೊಲೀಸರು ಮೊದಲು‌ ಮೌಖಿಕವಾಗಿ ಸೂಚಿಸಿದ್ದರೂ ಇದರ ಬಗ್ಗೆ ಗುತ್ತಿಗೆದಾರರು ನಿರ್ಲಕ್ಷ್ಯ ತೋರಿದ್ದರು. ಈ […]

ಆಗುಂಬೆ ಘಾಟ್ ನಲ್ಲಿ ಬಸ್ ಸಂಚಾರಕ್ಕೆ ಅನುಮತಿ..!

Saturday, June 30th, 2018
agumbe-gatt

ಉಡುಪಿ: ಆಗುಂಬೆ ಘಾಟ್ ನಲ್ಲಿ ಭೂ ಕುಸಿತದಿಂದಾಗಿ ಕಳೆದೆರಡು ದಿನಗಳ ಹಿಂದೆ ಭಾರೀ ವಾಹನಗಳ ಸಂಚಾರ ನಿಷೇಧವಾಗಿತ್ತು. ಆದರೆ ಇಂದು ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆಗುಂಬೆ ಘಾಟ್ ನಲ್ಲಿ ತಾತ್ಕಾಲಿಕ ದುರಸ್ತಿ ಕಾರ್ಯ ನಡೆದಿದೆ. ಆದ್ದರಿಂದಾಗಿ ಬಸ್ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ. ಉಡುಪಿಯಿಂದ ಶಿವಮೊಗ್ಗ- ಚಿಕ್ಕಮಗಳೂರು ಮಾರ್ಗವಾಗಿ ಬಸ್ ಓಡಾಟ ಶುರುವಾಗಲಿದೆ.

ತಮ್ಮ ಸೋಲಿಗೆ ಇವಿಎಂ ಕಾರಣ…ದ.ಕ. ಜಿಲ್ಲೆಯ ನಾಲ್ವರು ಕಾಂಗ್ರೆಸ್ ಅಭ್ಯರ್ಥಿಗಳು ದೂರು!

Saturday, June 30th, 2018
jr-lobo

ಮಂಗಳೂರು: ವಿಧಾನ ಸಭಾ ಚುನಾವಣೆಯಲ್ಲಿ ಅನಿರೀಕ್ಷಿತ ಹಿನ್ನಡೆಗೆ ಇವಿಎಂ ದುರ್ಬಳಕೆಯೇ ಕಾರಣ ಎಂದು ಪರಾಜಿತರಾದ ದ.ಕ. ಜಿಲ್ಲೆಯ ನಾಲ್ವರು ಕಾಂಗ್ರೆಸ್ ಅಭ್ಯರ್ಥಿಗಳು ದೂರು ನೀಡಿದ್ದು, ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಜೆ ಆರ್ ಲೋಬೊ, ತಮ್ಮ ಸೋಲಿಗೆ ಇವಿಎಂ ಕಾರಣ ಎಂದು ಆರೋಪಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ನಂತರ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ ಕೆ ಸೋಮಶೇಖರ್, ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಸೋತ ವಾಸು […]

ಮಹಾನಗರ ಪಾಲಿಕೆಯ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ..!

Saturday, June 30th, 2018
mangaluru

ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆಯ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿವೆ. ಪಾಲಿಕೆ ಚುನಾವಣೆ ಸಮೀಪಿಸುತ್ತಿರುವಂತೆ ನಗರಾಭಿವೃದ್ಧಿ ಇಲಾಖೆಯು ವಾರ್ಡ್ ವಾರ್ ಕರಡು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದೆ. ಈ ಮೂಲಕ ಮುಂದಿನ ಮಾರ್ಚ್ನಲ್ಲಿ ನಡೆಯುವ ಪಾಲಿಕೆ ಚುನಾವಣೆಗೆ ರಾಜಕೀಯ ಲೆಕ್ಕಾಚಾರ ಆರಂಭಗೊಂಡಿದೆ. ಇದರ ನಡುವೆ ಕರಡು ಮೀಸಲಾತಿ ಪಟ್ಟಿ ಹಾಲಿ ಸದಸ್ಯರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಮಂಗಳೂರು ಮಹಾನಗರ ಪಾಲಿಕೆಯು ಒಟ್ಟು 60 ವಾರ್ಡ್ಗಳನ್ನು ಹೊಂದಿದ್ದು, ಪ್ರತಿ 5 ವರ್ಷಗಳಿಗೊಮ್ಮೆ ಚುನಾವಣೆಗೆ ಸಂಬಂಧಿಸಿದಂತೆ ಮೀಸಲಾತಿ ಪಟ್ಟಿ ಪ್ರಕಟಗೊಳ್ಳುತ್ತಿದೆ. ಅಂತೆಯೇ […]