ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ದಲ್ಲಿ ‘ಮಂಗಳೂರು ದಸರಾ’ ಶೋಭಾಯಾತ್ರೆ

Wednesday, October 25th, 2023
mangalore-Dasara

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ದಲ್ಲಿ ‘ಮಂಗಳೂರು ದಸರಾ’ ಶೋಭಾಯಾತ್ರೆ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ಜಲ ಸ್ತಂಭನದೊಂದಿಗೆ ಸಮಾಪನಗೊಂಡಿದೆ. ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ಧಾರ್ಮಿಕ ಪೂಜಾ ವಿಧಿ ವಿಧಾನಗಳೊಂದಿಗೆ ಮಹಾಗಣಪತಿ, ಶಾರದಾ ಮಾತೆಯೊಂದಿಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಿ, ಕೂಷ್ಮಾಂಡಿನಿ, ಸ್ಕಂದ ಮಾತಾ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿಯರ ಪೂಜೆ ಯೊಂದಿಗೆ ಮಂಗಳವಾರ ಸಂಜೆ ಶೋಭಾಯಾತ್ರೆ ಮೆರವಣಿಗೆ ಆರಂಭಗೊಂಡಿತ್ತು. ಸುಮಾರು 7 ಕಿ.ಮೀ. ನಗರ ಪ್ರದಕ್ಷಿಣೆಯ ಬಳಿಕ ಬುಧವಾರ ಮುಂಜಾನೆ ಮರಳಿ […]

ಹೆಡ್‌ಕಾನ್‌ಸ್ಟೇಬಲ್‌ ಮೃತದೇಹ ಬಾವಿಯಲ್ಲಿ ಪತ್ತೆ

Monday, October 23rd, 2023
ಹೆಡ್‌ಕಾನ್‌ಸ್ಟೇಬಲ್‌ ಮೃತದೇಹ ಬಾವಿಯಲ್ಲಿ ಪತ್ತೆ

ಕಾರ್ಕಳ : ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಅವರ ಮೃತದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಇಂದು ಪತ್ತೆಯಾಗಿದೆ. ಕಾರ್ಕಳ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶೃತಿನ್ ಶೆಟ್ಟಿ (35) ಅಕ್ಟೋಬರ್ 19ರಂದು ಕಾಣೆಯಾಗಿದ್ದರು. ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ ಅ.19ರಂದು ಕಾಣೆಯಾಗಿದ್ದು, ಅಂದು ರಾತ್ರಿ 7.30ಕ್ಕೆ ಪತ್ನಿಗೆ ಫೋನ್ ಮಾಡಿ ನಾನು ನಂದಿಕೂರಿನಲ್ಲಿದ್ದು ಮನೆಗೆ ಬರುತ್ತಿರುವುದಾಗಿ ಹೇಳಿದ್ದರು. ಅನಂತರ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಶುಕ್ರವಾರ ಪಡುಬಿದ್ರಿ ಪೊಲೀಸ್ […]

ಐಟಿ ಕಂಪನಿ ಯುವತಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ

Wednesday, October 18th, 2023
ಐಟಿ ಕಂಪನಿ ಯುವತಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಾರ್ಕಳ : ಬೆಂಗಳೂರಿನ ಸಾಫ್ಟ್‌ವೇರ್ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಲ್ಲೊಟ್ಟೆ ಎಂಬಲ್ಲಿ ನಡೆದಿದೆ. ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಆತ್ಮಹತ್ಯೆಗೆ ಶರಣಾದ ಯುವತಿ. ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಚಾರ್ವಿ ಮನೆಯಿಂದಲೇ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಸೋಮವಾರ ಮನೆಯಲ್ಲೇ ಇದ್ದ ಚಾರ್ವಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಬಸ್ ನಲ್ಲಿ ಕೋಳಿ ಮಾಂಸ ಹಿಡಿದುಕೊಂಡ ಪ್ರಯಾಣಿಕನನ್ನು ಪೊಲೀಸ್ ಠಾಣೆಗೆ ಕರೆದೊಯ್ದ ಚಾಲಕ

Monday, October 16th, 2023
ksrtc-chicken

ಬಂಟ್ವಾಳ : ಕೋಳಿ ಮಾಂಸ ಹಿಡಿದುಕೊಂಡು ಪ್ರಯಾಣಿಕನೋರ್ವ ಬಸ್ ಹತ್ತಿದ ಕಾರಣಕ್ಕಾಗಿ ನಿರ್ವಾಹಕ ಅವಾಚ್ಯ ಶಬ್ದದಿಂದ ಬೈದುದಲ್ಲದೆ, ಚಾಲಕ ಪ್ರಯಾಣಿಕರನ್ನು ಕೂರಿಸಿಕೊಂಡ ಬಸ್ಸನ್ನು ನೇರವಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ತಂದ ಘಟನೆ ನಡೆದಿದೆ. ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ – ಪುತ್ತೂರು ನಡುವೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ ನಲ್ಲಿ ಸುರೇಶ್ ಎಂಬವರು ಹತ್ತಿದ್ದಾರೆ. ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ಈತನ ಕೈಯಲ್ಲಿ ಚೀಲವೊಂದ್ದಿದ್ದು, ಇದರ ಬಗ್ಗೆ ವಿಚಾರಿಸಿದ್ದಾರೆ. ಪ್ರಯಾಣಿಕ ಕೋಳಿ ಮಾಂಸ ಎಂದು ತಿಳಿಸಿದಾಗ ಬಸ್ […]

ಮಂಗಳಾದೇವಿ ನವರಾತ್ರಿ ಉತ್ಸವದ ಉದ್ಘಾಟನೆ – ವಿಡಿಯೋ

Monday, October 16th, 2023
Mangaladevi

ಮಂಗಳೂರು : ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಅ. 15ರಿಂದ 25ರ ವರೆಗೆ ನವರಾತ್ರಿ ಮಹೋತ್ಸವದ ಉದ್ಘಾಟನೆಯನ್ನು ಅಕ್ಟೊಬರ್ 15ರಂದು ಬೆಳಗ್ಗೆ 9 ಗಂಟೆಗೆ ವಿದ್ವಾನ್ ಪಂಜ ಭಾಸ್ಕರ ಭಟ್ ಅವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಮಂಗಳಾದೇವಿ ದೇವಸ್ಥಾನದ ಮಹತ್ವವನ್ನು ವಿವರಿಸಿದರು. ಬೆಳಿಗ್ಗೆ ಭಜನಾ ಕಾರ್ಯಕ್ರಮದ ಉದ್ಘಾಟನೆ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಕಾರ್ಪೊರೇಟರ್ ಪ್ರೇಮಾನಂದ ಶೆಟ್ಟಿ ನೆರವೇರಿಸಿದರು. ನವರಾತ್ರಿ ಮಹೋತ್ಸವದ ವೈದಿಕ ವಿಧಿ ವಿಧಾನಗಳು ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿ ನೇತೃತ್ವದಲ್ಲಿ […]

ಕುಡ್ಲದ ಪಿಲಿಪರ್ಬ-2023ರ ಚಪ್ಪರ ಮುಹೂರ್ತ ಕಾರ್ಯಕ್ರಮ

Monday, October 16th, 2023
pili-parba

ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯಲಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಭಾನುವಾರ ಮುಂಜಾನೆ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, “ಕರಾವಳಿ ಭಾಗದಲ್ಲಿ ದಸರಾ ಎಂದರೆ ಅಲ್ಲಿ ಹುಲಿವೇಷ ಇದ್ದೇ ಇರುತ್ತದೆ. ಈಗ ಈ ಕಲೆ ಕರಾವಳಿ ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ […]

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಶಾರದೇ ಸಹಿತ ನವ ದುರ್ಗೆಯರ ಪ್ರತಿಷ್ಠಾಪನೆ

Monday, October 16th, 2023
Kudroli-Devasthana

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನವರಾತ್ರಿ ಮತ್ತು ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ಮಹಾಗಣಪತಿ, ಶಾರದೆ, ಆದಿಶಕ್ತಿಸ್ಕಂದ ಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ ದೇವಿ ಪ್ರತಿಷ್ಠಾಪನೆ ಪೂಜೆ ರವಿವಾರ ಜರುಗಿತು. ಗಣಪತಿ, ಆದಿಶಕ್ತಿ ಮತ್ತು ನವದುರ್ಗೆಯರನ್ನು ತಂದ ಬಳಿಕ ದೇವಸ್ಥಾನದಲ್ಲಿ ಗುರುಪ್ರಾರ್ಥನೆ, ಕಲಶ ಪ್ರತಿಷ್ಠೆ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿಸಲಾಯಿತು. ಬಳಿಕ ಸ್ಯಾಕ್ಸ್‌ಫೋನ್ ತಂಡ, ಬ್ಯಾಂಡ್, ಚೆಂಡೆ ತಂಡ, ಹುಲಿ ವೇಷದೊಂದಿಗೆ ಶಾರದೆ ಮೂರ್ತಿಯನ್ನು ದೇವಾಲಯಕ್ಕೆ ಪ್ರದಕ್ಷಿಣೆ ಹಾಕಿ […]

ಗುತ್ತಿಗೆದಾರರೊಬ್ಬರ ಮನೆಯಲ್ಲಿ ಸಿಕ್ಕಿದ 42 ಕೋಟಿ ರೂ. ಕಮಿಷನ್ ಹಣ ಎಂಬ ಮಾಹಿತಿ ಇದೆ : ನಳಿನ್ ಕುಮಾರ್ ಕಟೀಲ್

Friday, October 13th, 2023
Nalin Kumar

ಮಂಗಳೂರು : ‘ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ 42 ಕೋಟಿ ರೂ. ಕಮಿಷನ್ ಹಣ ಎಂಬ ಮಾಹಿತಿ ಇದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ‘ಬೆಂಗಳೂರಿನಲ್ಲಿ ಅಂಬಿಕಾಪತಿ ಎಂಬ ಗುತ್ತಿಗೆದಾರನ ಮನೆಗೆ ಐಟಿ ದಾಳಿ ಆಗಿದೆ. ಕೆಲ ದಿನಗಳ ಹಿಂದೆ 600 ಕೋಟಿ ರೂ.ಬಾಕಿ ಹಣ ಸರ್ಕಾರ ಬಿಡುಗಡೆ ಮಾಡಿತ್ತು. ಈಗ ಸಿಕ್ಕ ಹಣ ಕಮಿಷನ್ ಹಣ ಎಂಬ ಮಾಹಿತಿ ಸಿಕ್ಕಿದೆ. ರಾಜ್ಯದಲ್ಲಿ ಇವತ್ತು […]

ಪದವಿ ವಿದ್ಯಾರ್ಥಿಗಳಿಗೂ ದಸರಾ ರಜೆ ನೀಡಿ:- ಶಾಸಕ ಕಾಮತ್ ಸರ್ಕಾರಕ್ಕೆ ಆಗ್ರಹ

Friday, October 13th, 2023
vedavyas Kamath

ಮಂಗಳೂರು : ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದ್ದು ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮ ಸವಿಯಲು ಅಡ್ಡಿಯಾಗಿದೆ. ನಾಡಿನ ಪ್ರಮುಖ ಹಬ್ಬ ದಸರಾಗೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೂ ರಜೆ ನೀಡುವ ಬಗ್ಗೆ ಹಲವಾರು ಪೋಷಕರು ಈಗಾಗಲೇ ಮನವಿ ಮಾಡುತ್ತಿದ್ದು ಸರಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದರು. ದಸರಾವು ನಾಡಿನ ಅತ್ಯಂತ ಪ್ರಮುಖ ಹಬ್ಬವಾಗಿದ್ದು ಮಂಗಳೂರು ದಸರಾವು ಮೈಸೂರು ನಂತರ ಅತ್ಯಂತ ಜನಾಕರ್ಷಣೆ ಗಳಿಸಿರುವ […]

ಮಂಗಳೂರು ದಸರಾ ಮೆರವಣಿಗೆಯಲ್ಲಿ ದೈವಾರಾಧನೆ ಟ್ಯಾಬ್ಲೋ , ನಾಸಿಕ್ ಬ್ಯಾಂಡ್ ಗೆ ಅವಕಾಶ ಇಲ್ಲ

Friday, October 13th, 2023
Mangaluru-Dasara

ಮಂಗಳೂರು: ದಸರಾ ಮಹೋತ್ಸವದ ಮೆರವಣಿಗೆಯಲ್ಲಿ ದೈವಾರಾಧನೆ ಟ್ಯಾಬ್ಲೋ , ನಾಸಿಕ್ ಬ್ಯಾಂಡ್ ಗೆ ಅವಕಾಶ ನೀಡುವುದಿಲ್ಲ . ಈ ನೆಲದ ಸಂಸ್ಕೃತಿ, ಪರಂಪರೆ ಬಿಂಬಿಸುವ ಟ್ಯಾಬ್ಲೋಗಳಿಗೆಹೆಚ್ಚಿನ ಆದ್ಯತೆ ನೀಡಿ ದಸರಾ ವೈಭವ ಮತ್ತಷ್ಟು ಮೆರುಗುಗೊಳಿಸೋಣ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ ಹೇಳಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯಲಿರುವ ಮಂಗಳೂರು ದಸರಾ ಮಹೋತ್ಸವದ ಶೋಭಾಯಾತ್ರೆ ಹಿನ್ನಲೆಯಲ್ಲಿ ಗುರುವಾರ ಸಂಜೆ ಕ್ಷೇತ್ರದ ಸಭಾಂಗಣದಲ್ಲಿ ಟ್ಯಾಬ್ಲೋ ತಂಡಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಅವರು […]