ಉಡುಪಿಯ ಎಲೆಕ್ಟ್ರಿಕಲ್‌ ಬೈಕ್‌ ಶೋರೂಂನಲ್ಲಿ ಕೆಲಸಕ್ಕಿದ್ದ ಯುವತಿಯ ಮೃತದೇಹ ಪಾಪನಾಶಿನಿ ನದಿಯಲ್ಲಿ ಪತ್ತೆ

Friday, October 13th, 2023
vinitha

ಶಿರ್ವ : ಉಡುಪಿಯ ಎಲೆಕ್ಟ್ರಿಕಲ್‌ ಬೈಕ್‌ ಶೋರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದ ಯುವತಿಯ ಮೃತದೇಹ ಪಾಪನಾಶಿನಿ ನದಿಯ ಗುಂಡಿಯಲ್ಲಿ ಅಕ್ಟೊಬರ್ 13ರ ಶುಕ್ರವಾರ ಪತ್ತೆಯಾಗಿದೆ. ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22) ಮೃತ ಯುವತಿ. ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಸೇತುವೆಯ ಸಮೀಪದ ನದಿ ಗುಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಕ್ಟೊಬರ್ 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಮನೆಯಿಂದ ಹೋದವರು ಹಿಂತಿರುಗದ […]

ಬಸ್ ನಿಲ್ದಾಣದ ಬಳಿ ಇಬ್ಬರು ಯುವಕರೊಂದಿಗೆ ಹಿಂದೂ ಯುವತಿ ಪತ್ತೆ

Thursday, October 12th, 2023
ಬಸ್ ನಿಲ್ದಾಣದ ಬಳಿ ಇಬ್ಬರು ಯುವಕರೊಂದಿಗೆ ಹಿಂದೂ ಯುವತಿ ಪತ್ತೆ

ಬಂಟ್ವಾಳ : ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಪತ್ತೆಯಾದ ಘಟನೆ ವಿಟ್ಲ ಸಮೀಪದ ಪೆರುವಾಯಿಯಲ್ಲಿ ನಡೆದಿದೆ. ಇಬ್ಬರು ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿಯೋರ್ವಳು ಪತ್ತೆಯಾಗಿದ್ದು, ಮೂವರೂ ಕೇರಳ ಮೂಲದವರೆನ್ನಲಾಗಿದೆ. ಪೆರುವಾಯಿ ಬಸ್ ನಿಲ್ದಾಣದ ಬಳಿ ಮೂವರು ಅನುಚಿತವಾಗಿ ವರ್ತಿಸುತ್ತಿದ್ದರೆನ್ನಲಾಗುತ್ತಿದ್ದು, ಈ ಬಗ್ಗೆ ಗಮನಿಸಿದ ಸ್ಥಳೀಯರು ಅವರನ್ನು ವಿಚಾರಿಸಿದ್ದಾರೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರಿನಲ್ಲಿ 10 ಮಂದಿ ರೌಡಿಗಳ ಗಡೀಪಾರು ಮಾಡುವ ಸಿದ್ಧತೆ

Thursday, October 12th, 2023
Rowdy-sheeter-parade

ಮಂಗಳೂರು: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳೂರು ನಗರದ ಎಲ್ಲಾ ಪೊಲೀಸ್ ಠಾಣೆಗಳ ಸಕ್ರೀಯ ರೌಡಿಗಳ ಪರೇಡ್‌ನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್‌ ಅನುಪಮ್‌ ಅಗರ್ವಾಲ್ ಅವರ ನೇತೃತ್ವದಲ್ಲಿ ನಡೆಯಿತು. ಹಳೇ ರೌಡಿಶೀಟರ್‌ಗಳು, ಕ್ರಿಮಿನಲ್‌ ಹಿನ್ನೆಲೆಯುಳ್ಳವರು, ಹತ್ತು ಹಲವು ಪ್ರಕರಣಗಳನ್ನು ದಾಖಲಿಸಿಕೊಂಡವರನ್ನು ಕರೆಸಿ ಅವರ ಪೂರ್ವಾಪರಗಳನ್ನು ಪೊಲೀಸ್ ಕಮಿಷನರ್ ವಿಚಾರಿಸಿದರು. ಈ ಸಂದರ್ಭದಲ್ಲಿ ಕ್ರಿಮಿನಲ್‌ ಗಳಿಗೆ ಎಚ್ಚರಿಕೆ ನೀಡಿದ ಅವರು, ಇನ್ನು ಮುಂದೆ ಕಾನೂನು ಉಲ್ಲಂಘನೆ ಮಾಡಿದರೆ, ಅವರ ಬಾಂಡ್‌ ರದ್ದುಮಾಡಿ ಆಸ್ತಿ ಮತ್ತು ಹಣವನ್ನು ಮುಟ್ಟುಗೋಲು […]

ಜೆಡಿಯಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜಯಲಕ್ಷ್ಮಿ ಎಸ್. ಹೆಗ್ಡೆ ನಿಧನ

Thursday, October 12th, 2023
jayalakshmi-Hegde

ಮಂಗಳೂರು : ಜಾತ್ಯತೀತ ಜನತಾದಳ ಘಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ಮಹಿಳಾ ಘಟಕದ ಅಧ್ಯಕ್ಷೆ ಬೈದಾವು ಗುತ್ತು ಜಯಲಕ್ಷ್ಮಿ ಎಸ್. ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯ ಹೊಂದಿದ್ದು, ಗುರುವಾರ ಅ. 12ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅಡ್ಯಾರು ಮಹಿಳಾ ಮಂಡಲದ ಅಧ್ಯಕ್ಷರಾಗಿ 40 ವರ್ಷ ಸೇವೆ ಸಲ್ಲಿಸಿದ್ದರು. ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯಕಾರಿ ಸಮಿತಿಯ ಮುಖ್ಯ ಕಾರ್ಯಕರ್ತರಾಗಿಯೂ ಉಪಾಧ್ಯಕ್ಷರಾಗಿಯು ಕರ್ತವ್ಯ ನಿರ್ವಹಿಸಿದ್ದರು. ಅಡ್ಯಾರು ಗ್ರಾಮ ಪಂಚಾಯಿತಿನಲ್ಲಿ ಎರಡು ಅವಧಿಗೆ ಆಯ್ಕೆಯಾಗಿ ಒಂದು […]

ರೋಗಿಗಳಿಗೆ ಉಚಿತವಾಗಿ ಸೇವೆ ಮಾಡುತ್ತಿದ್ದ ಆಪದ್ಬಾಂಧವ ಸಂಘಟನೆಯ ಕಾರ್ಯಕರ್ತನನ್ನು ಬಂಧಿಸಿದ ಪೊಲೀಸರು

Thursday, October 12th, 2023
ರೋಗಿಗಳಿಗೆ ಉಚಿತವಾಗಿ ಸೇವೆ ಮಾಡುತ್ತಿದ್ದ ಆಪದ್ಬಾಂಧವ ಸಂಘಟನೆಯ ಕಾರ್ಯಕರ್ತನನ್ನು ಬಂಧಿಸಿದ ಪೊಲೀಸರು

ಮಂಗಳೂರು : ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಆಪದ್ಬಾಂಧವ ಸಂಘಟನೆಯ ಆಸೀಫ್‌ ಅನುಚಿತ ವರ್ತನೆ ತೋರಿದ್ದಾರೆಂದು ಹಲ್ಲೆ ದೂರು ದಾಖಲಾಗಿದ್ದು, ಪ್ರಕರಣದ ದಾಖಲಿಸಿದ ಪೊಲೀಸರು ಆಸಿಫ್ ಅವರನ್ನು ಬಂಧಿಸಿದ್ದಾರೆ. ಆಸಿಫ್ ಬುಧವಾರ ಸಂಜೆ ವೆನ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆತಂದಿದ್ದರು. ಹೊರಗಡೆ ಆಂಬುಲೆನ್ಸ್ ನಿಲ್ಲಿಸಿ ರೋಗಿಗಳನ್ನು ಒಳಗಡೆ ಕರೆದೊಯ್ದು ಅಡ್ಮಿಶನ್ ಮಾಡುತ್ತಿದ್ದಾಗ ಸೆಕ್ಯುರಿಟಿ ಗಾರ್ಡ್ ಸಿಬಂದಿ ವಾಹನವನ್ನು ಹೊರಗೆ ಒಯ್ಯುವಂತೆ ಸೂಚಿಸಿದ್ದಾರೆ. ಆದರೆ ರೋಗಿಗಳನ್ನು ಅಡ್ಮಿಶನ್ ಮಾಡುತ್ತಿದ್ದೇನೆ, ಸ್ವಲ್ಪ ಹೊತ್ತು ಕಾಯಿರಿ ಎಂದು […]

ವಿಶ್ವ ಬಂಟರ ಸಮ್ಮೇಳನ ದಿಂದ ಸಮಾಜಕ್ಕೆ ಪ್ರಯೋಜನವಾಗಲಿ: ನಳಿನ್ ಕುಮಾರ್ ಕಟೀಲು

Wednesday, October 11th, 2023
Vishwa-Buntara-Sammelana

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಅಕ್ಟೋಬರ್ 28 ಮತ್ತು 29ರಂದು ಉಡುಪಿಯಲ್ಲಿ ನಡೆಯಲಿರುವ ವಿಶ್ವ ಬಂಟರ ಸಮ್ಮೇಳನ -2023 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಬುಧವಾರ ಸಂಜೆ ನಗರದ ಗೋಲ್ಡ್ ಫಿಂಚ್ ಖಾಸಗಿ ಹೋಟೆಲ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, “ಐಕಳ ಹರೀಶ್ ಶೆಟ್ಟಿಯವರು ಬಂಟ ಸಮಾಜದ ಅತ್ಯಧ್ಭುತ ನಾಯಕ. ಅವರಲ್ಲಿನ […]

ಕಾಂಗ್ರೆಸ್ಸಿನ ಆಡಳಿತದಲ್ಲಿ ಕೇಳುವವರೇ ಇಲ್ಲ ರಾಜ್ಯದ ಜನತೆಯ ದುಸ್ಥಿತಿ:- ಶಾಸಕ ಕಾಮತ್

Wednesday, October 11th, 2023
Vedvyasa-Kamath

ಮಂಗಳೂರು : ರಾಜ್ಯ ಕಾಂಗ್ರೆಸ್ಸಿನ ಆಡಳಿತದಲ್ಲಿ ಜನರ ಪರಿಸ್ಥಿಯು ಹೇಳತೀರದಾಗಿದ್ದು, ಈ ಬಗ್ಗೆ ಸರ್ಕಾರ ಗಮನವೇ ಹರಿಸುತ್ತಿಲ್ಲ. ಇದರಿಂದ ಸಾರ್ವಜನಿಕರ ದುಸ್ಥಿತಿ ಹೇಳತೀರದಾಗಿದ್ದು, ಇದು ಕಾಂಗ್ರೆಸ್‌ ಸರ್ಕಾರದ ನೀತಿಯ ಫಲವಾಗಿದೆ ಎಂದು ಶಾಸಕ ವೇದವ್ಯಾಸ್‌ ಕಾಮತ್‌ ಅವರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಅಟಲ್‌ ಸೇವಾ ಕೇಂದ್ರದಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಅವರು ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದರು. ನಗರದ R.T.O, ಮಹಾನಗರ ಪಾಲಿಕೆ ಕಛೇರಿ, ಉಪ ನೋಂದಣಿ ಕಛೇರಿ, ರೇಷನ್ ಕಾರ್ಡ್ ತಿದ್ದುಪಡಿ ಹೀಗೆ ಅಗತ್ಯ ಕಾರ್ಯಗಳಿಗಾಗಿ ಸರ್ಕಾರಿ […]

ತಣ್ಣೀರು ಬಾವಿ ಬೀಚ್ ಗೆ ಬಂದಿದ್ದ ವ್ಯಕ್ತಿ, ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಆತ್ಮಹತ್ಯೆ

Wednesday, October 11th, 2023
Babbu-swami-temple

ಪಣಂಬೂರು : ತಣ್ಣೀರು ಬಾವಿ ಬೀಚ್ ಗೆ ಬಂದಿದ್ದ ಮಡಿಕೇರಿಯ ವ್ಯಕ್ತಿಯೊಬ್ಬರು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ. ಮೃತರನ್ನು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗೋಪಾಲ (64) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗೋಪಾಲ ಅವರು ಮಡಿಕೇರಿಯಿಂದ ಸೋಮವಾರ ತಣ್ಣೀರು ಬಾವಿ ಬೀಚ್ ಗೆ ಬಂದಿದ್ದು, ಬಳಿಕ ದೈವಸ್ಥಾನ ಪ್ರಾಂಗಣದಲ್ಲಿ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣಗಳು […]

ಭಜನೆ ಬಂದವರಿಗೆ ಚೂರಿ ತೋರಿಸಿ, ಜೀವ ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ

Wednesday, October 11th, 2023
Ananda-Acharya

ಬೆಳ್ತಂಗಡಿ : ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಭಜನೆ ಮಾಡಲು ಬಂದವರಿಗೆ ಚೂರಿ ತೋರಿಸಿ, ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿರುವ ವ್ಯಕ್ತಿಯೊಬ್ಬನನ್ನು ಪೋಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಂಡೂರಿನ ಆನಂದ ಆಚಾರ್ಯ (38) ಎಂದು ಗುರುತಿಸಲಾಗಿದೆ. ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಮಂಗಳವಾರ ರಾತ್ರಿ ವಲಯ ಮಟ್ಟದ ಜಿನ ಭಜನಾ ಸ್ಪರ್ದೆಗೆ ಮಹಿಳೆಯರು,ಮಕ್ಕಳು ಸೇರಿ ಸುಮಾರು 70 ಮಂದಿ ಅಭ್ಯಾಸ ನಡೆತ್ತಿದ್ದರು.ಈ ಸಂದರ್ಭ ಅಲ್ಲಿಗೆ ಬಂದ ಈತ ಚೂರಿ ತೋರಿಸಿ, ಬೊಬ್ಬೆ […]

ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ, ಅದರಲ್ಲಿ ತಪ್ಪೆನು ? : ಪ್ರಮೋದ್ ಮಧ್ವರಾಜ್

Tuesday, October 10th, 2023
ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ, ಅದರಲ್ಲಿ ತಪ್ಪೆನು ? : ಪ್ರಮೋದ್ ಮಧ್ವರಾಜ್

ಉಡುಪಿ : ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇತ್ತು, ಈ ಬಾರಿ ಬಿಜೆಪಿ – ಜೆಡಿಎಸ್ ಮೈತ್ರಿ ಇದೆ ಹೀಗಾಗಿ ನನಗೆ ಸಂತೋಷ ಇದೆ ಯಾಕೆಂದರೆ ನಾನು ಹೋದಲೆಲ್ಲಾ ಜೆಡಿಎಸ್ ನನ್ನ ಹಿಂದೇಯೇ ಬರುತ್ತಿದೆ . ನನಗೆ ಶಾಲು ಹಾಕಿ ಅಭ್ಯಾಸ ಇದೆ ಎಂದು ಮಾಜಿ ಸಚಿವ, ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಪತ್ರಿಕಾಭವನದಲ್ಲಿ ಪತ್ರಕರ್ತರೊಂದಿಗೆ ನಡೆದ ಸಂವಾದ ದಲ್ಲಿ ಮಾತನಾಡಿದ ಅವರು , […]