ಪೊಲೀಸರ ಎದುರು  ಒಂದೂವರೆ ವರ್ಷದ ಮಗುವನ್ನು ನೆಲಕ್ಕೆಸೆದು ಕೊಲೆ ಮಾಡಲು ಯತ್ನಿಸಿದ ತಂದೆ

Wednesday, September 27th, 2023
ಪೊಲೀಸರ ಎದುರು  ಒಂದೂವರೆ ವರ್ಷದ ಮಗುವನ್ನು ನೆಲಕ್ಕೆಸೆದು ಕೊಲೆ ಮಾಡಲು ಯತ್ನಿಸಿದ ತಂದೆ

ಮಂಗಳೂರು : ಕದ್ರಿ ಠಾಣೆಯಲ್ಲಿ ಪೊಲೀಸರ ಎದುರಿನಲ್ಲಿನಲ್ಲಿಯೇ ಒಂದೂವರೆ ವರ್ಷದ ಮಗುವನ್ನು ಕುತ್ತಿಗೆ ಹಿಡಿದು ಎತ್ತಿ ನೆಲಕ್ಕೆಸೆದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ವ್ಯಾಸನಗರದ ನಿವಾಸಿ ಮಹೇಶ್ ಆರೋಪಿಯಾಗಿದ್ದಾನೆ. ಈತ ಹಲವು ಸಮಯದಿಂದ ಪತ್ನಿ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ ಎಂದು ದೂರು ನೀಡಲಾಗಿದೆ. ಈತನ ಪತ್ನಿ ” ತನ್ನ ಇಬ್ಬರು ಮಕ್ಕಳನ್ನು ಮತ್ತು ತನ್ನನ್ನು ಕೊಲ್ಲುತ್ತೇನೆಂದು ಹಾಗೂ ಬೆಂಕಿ ಹಚ್ಚಿ ಸುಟ್ಟು ಹಾಕುತ್ತೇನೆಂದು ಬೆದರಿಸಿ ತನಗೆ ಹೊಡೆಯಲು ಬಂದಿದ್ದು ಆತನಿಂದ ತಪ್ಪಿಸಿಕೊಂಡು ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು […]

ಎಪಿಎಲ್‌ ಕಾರ್ಡ್‌ದಾರರಿಗೆ ಇಲ್ಲ ಅಕ್ಕಿ: ಇದು ಕಾಂಗ್ರೆಸ್ ಸರ್ಕಾರದ ಅರ್ಥವಿಲ್ಲದ ನೀತಿ: ಶಾಸಕ ಕಾಮತ್

Wednesday, September 27th, 2023
ಎಪಿಎಲ್‌ ಕಾರ್ಡ್‌ದಾರರಿಗೆ ಇಲ್ಲ ಅಕ್ಕಿ: ಇದು ಕಾಂಗ್ರೆಸ್ ಸರ್ಕಾರದ ಅರ್ಥವಿಲ್ಲದ ನೀತಿ: ಶಾಸಕ ಕಾಮತ್

ಮಂಗಳೂರು : ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಕಳೆದ ನಾಲ್ಕೈದು ತಿಂಗಳಿಂದ ಅವಿಭಜಿತ ಜಿಲ್ಲೆಗಳಲ್ಲಿ ಎಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಸಿಗುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದ್ದು ಈ ಅವ್ಯವಸ್ಥೆಗೆ ನೇರವಾಗಿ ರಾಜ್ಯ ಸರ್ಕಾರದ ಅರ್ಥವಿಲ್ಲದ ನೀತಿ ನಿರೂಪಣೆಯೇ ಕಾರಣ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಬಿಪಿಎಲ್‌ ಹಾಗೂ ಅಂತ್ಯೋದಯ ಕಾರ್ಡ್‌ ದಾರರಿಗೆ ಕೇಂದ್ರ ಸರ್ಕಾರದಿಂದ ಈಗಾಗಲೇ ಉಚಿತವಾಗಿ ಅಕ್ಕಿ ಪೂರೈಕೆಯಾಗುತ್ತಿದೆ. ಆದರೆ ಎಪಿಎಲ್‌ ಕಾರ್ಡ್‌ದಾರರಿಗೆ ಸಿಗಬೇಕಾಗಿದ್ದ ಅಕ್ಕಿಗೆ ರಾಜ್ಯ ಸರ್ಕಾರದ ಕ್ರಮ ಬದ್ಧವಲ್ಲದ […]

ಮಂಗಳೂರು ಮಹಾನಗರ ಪಾಲಿಕೆಯ ಪರಿಷತ್ತಿನ ಸಾಮಾನ್ಯ ಸಭೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್

Tuesday, September 26th, 2023
Vedavyas Kamath

ಮಂಗಳೂರು : ದೇಶ ಇತ್ತೀಚಿನ ಆಗುಹೋಗುಗಳ ಬಗ್ಗೆ ಚರ್ಚಿಸುವ ಸಂದರ್ಭದಲ್ಲಿ, ಚಂದ್ರಯಾನ-3 ಯಿಂದಾಗಿ ಇಡೀ ಜಗತ್ತು ಭಾರತದತ್ತ ತಿರುಗಿ ನೋಡುವಂತಾಗಿದ್ದು ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಯಾಗಿದೆ. ಭಾರತದ ಸಮರ್ಥ ನಾಯಕತ್ವದಡಿಯಲ್ಲಿ ನಡೆದ G20 ಶೃಂಗ ಸಭೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಸಾಮರ್ಥ್ಯ ಸಾಬೀತಾಗಿದ್ದು ಇದು ಸಮರ್ಥ ನಾಯಕತ್ವಕ್ಕೆ ಸಂದ ಗೌರವವಾಗಿದೆ. 33% ಮಹಿಳಾ ಮೀಸಲಾತಿ ಬಗ್ಗೆ ಮಾತನಾಡಿದ ಅವರು ಇದು ಕೆಲ ದಶಕಗಳಿಂದಲೂ ನೆನೆಗುದಿಗೆ ಬಿದ್ದಿದ್ದ ಮಹತ್ವದ ಕಾಯ್ದೆಯಾಗಿದ್ದು ಬಗೆಹರಿಸುವ ನಿಟ್ಟಿನಲ್ಲಿ ಸದ್ಯ ಕೇಂದ್ರ ಸರಕಾರ […]

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿಯ ಸೆರೆ

Tuesday, September 26th, 2023
Lukmanul

ಮಂಗಳೂರು : ಸಿಸಿಬಿ ಪೊಲೀಸರು ತನ್ನ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ MDMA ನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ದಸ್ತಗಿರಿ ಮಾಡಿದ್ದಾರೆ. ಆತನ ವಶದಿಂದ ಒಟ್ಟು 25 ಗ್ರಾಂ ತೂಕದ ರೂ. 1,25,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,60,000/-ಆಗಬಹುದು. ಆರೋಪಿಯ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈತನು ಮಂಗಳೂರು ನಗರದ […]

ನೆರೆಮನೆಗೆ ಕಲ್ಲೆಸೆದು ಅದೇ ಮನೆ ಮುಂದೆ ನಿಲ್ಲಿಸಿದ್ದ ಆಟೋಗೆ ಬೆಂಕಿ ಹಚ್ಚಿದ ಗಾಂಜಾ ವ್ಯಸನಿ

Tuesday, September 26th, 2023
Auto-fire

ಉಡುಪಿ : ನೆರೆಮನೆಗೆ ಕಲ್ಲೆಸೆದು ಅದೇ ಮನೆ ಮುಂದೆ ನಿಲ್ಲಿಸಿದ್ದ ಆಟೋಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ ಘಟನೆ ಉಡುಪಿಯ ನಿಟ್ಟೂರು ಹನುಮಂತ ನಗರದಲ್ಲಿ ನಡೆದಿದೆ. ಕೃತ್ಯವೆಸಗಿದೆ ವ್ಯಕ್ತಿಯನ್ನು ಖಲೀಮ್ ಎಂದು ಗುರುತಿಸಲಾಗಿದೆ. ದಿವಾಕರ ಬೆಲ್ಚಡ ಎಂಬವರಿಗೆ ಸೇರಿದ ಪ್ಯಾಸೆಂಜರ್ ರಿಕ್ಷಕ್ಕೆ ಖಲೀಮ್ ಬೆಂಕಿ ಹಚ್ಚಿದ್ದು, ಅವರ ಮನೆಯ ಮೇಲೆ ಕಲ್ಲು ಎಸೆದು ದಾಂಧಲೆ ಮಾಡಿದ್ದಾನೆಂದು ಆರೋಪಿಸಲಾಗಿದೆ. ಕಲ್ಲೆಸೆದ ಘಟನೆ ನಡೆದಾಗ ಸ್ಥಳಕ್ಕೆ ಉಡುಪಿ ಪೊಲೀಸ್ ರ ಬಂದು ವಾರ್ನಿಂಗ್ ನೀಡಿ ತೆರಳಿದ್ದರು. ಪೊಲೀಸರು ವಾಪಾಸ್ ತೆರಳಿದ ಬಳಿಕ […]

ಮಂಗಳೂರು ಮಹಾನಗರ ಪಾಲಿಕೆಯ ತ್ಯಾಜ್ಯ ನಿರ್ವಹಣೆಯ ಹೊಸ ಟೆಂಡರ್ ರದ್ದುಗೊಳಿಸಿದ ಮೇಯರ್

Tuesday, September 26th, 2023
ಮಂಗಳೂರು ಮಹಾನಗರ ಪಾಲಿಕೆಯ ತ್ಯಾಜ್ಯ ನಿರ್ವಹಣೆಯ ಹೊಸ ಟೆಂಡರ್ ರದ್ದುಗೊಳಿಸಿದ ಮೇಯರ್

ಮಂಗಳೂರು: ಆ್ಯಂಟನಿ ವೇಸ್ಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಗುತ್ತಿಗೆ ಅವಧಿ ಪೂರ್ಣಗೊಂಡಿದ್ದ ಬಳಿಕ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಹೊಸ ಟೆಂಡರ್ ರದ್ದುಗೊಳಿಸಲು ಮನಪಾ ಸಾಮಾನ್ಯ ಸಭೆ ನಿರ್ಣಯಿಸಿದೆ. ಮಾತ್ರವಲ್ಲದೆ, ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿ ಹೊಸ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ ವಿಶೇಷ ಸಭೆಯಲ್ಲಿ ಅದನ್ನು ಮಂಡಿಸಿ ಮಂಜೂ ರಾತಿ ಪಡೆಯಲು ನೂತನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ತಮ್ಮ ಪ್ರಥಮ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ನಡೆಸುತ್ತಿದ್ದ […]

ಹೊಟೇಲೊಂದರ ಉದ್ಯೋಗಿ ಲಿಫ್ಟ್‌ನಲ್ಲಿಯೇ ಕುಸಿದು ಬಿದ್ದು ಸಾವು

Tuesday, September 26th, 2023
lIFT

ಉಡುಪಿ : ಹೊಟೇಲೊಂದರ ಉದ್ಯೋಗಿ ಲಿಫ್ಟ್‌ನಲ್ಲಿಯೇ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತರನ್ನು ಹೋಟೆಲಿನ ಬಾರ್ ಕ್ಯಾಪ್ಟನ್ ರಾಜ್(51) ಎಂದು ಗುರುತಿಸಲಾಗಿದೆ. ಇವರು ಲೆಡ್ಜರ್ ಬುಕ್ ತರಲು 8ನೇ ಮಹಡಿಗೆ ಲಿಫ್ಟ್‌ನಲ್ಲಿ ಹೋಗುತ್ತಿದ್ದ ವೇಳೆ ಲಿಫ್ಟ್ ಒಳಗಯೇ ಕುಸಿದು ಬಿದ್ದರೆನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು, ಆದರೆ ಪರೀಕ್ಷಿಸಿದ ವೈದ್ಯರು ರಾಜ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Sunday, September 24th, 2023
ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬನ್ನೂರು ಸಮೀಪದ ಸನ್ನಿಧಿ ಲೇಔಟ್ ನಲ್ಲಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ತೃತೀಯ ಬಿಸಿಎ ಓದುತ್ತಿದ್ದ ಕೀರ್ತಿಕಾ (19) ಮೃತ ಯುವತಿ. ಕೀರ್ತಿಕಾ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ರೈತರ ಬೆಳೆಗೆ ಬೆಲೆ ಮೊದಲೇ ನಿಗದಿಯಾಗುವ ಕಾನೂನು ಬರಬೇಕು: ಬಸವರಾಜ ಬೊಮ್ಮಾಯಿ

Sunday, September 24th, 2023
ರೈತರ ಬೆಳೆಗೆ ಬೆಲೆ ಮೊದಲೇ ನಿಗದಿಯಾಗುವ ಕಾನೂನು ಬರಬೇಕು: ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ರೈತರ ಬೆಳೆಗೆ ಬೆಲೆಯು ಮೊದಲೇ ನಿಗದಿಯಾಗುವ ಕಾನೂನು ಜಾರಿಯಾಗಬೇಕು. ರೈತನನ್ನು ಗಟ್ಟಿ ಮಾಡಿದರೆ ಕೃಷಿ ಗಟ್ಟಿಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಸಿರಿಗೆರೆಯಲ್ಲಿ ಭಾನುವಾರ ಜರುಗಿದ ಲಿಂ.ಶಿವಕುಮಾರ ಸ್ವಾಮೀಜಿಯವರ 31ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜಕಾರಣಿಗಳಿಗೆ ಮುಂದಿನ ಚುನಾವಣೆ ಮೇಲೆ ಕಣ್ಣಿದ್ದರೆ, ಪ್ರಸ್ತುತ ನಮ್ಮ ಪೂಜ್ಯರಿಗೆ ಮುಂದಿನ ಜನಾಂಗದ ಮೇಲೆ ಕಣ್ಣಿರುತ್ತದೆ. ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳು ರೈತರ ನೀರಾವರಿ ಯೋಜನೆಗಳಿಗೆ ಒತ್ತು ನೀಡಿ ಯಶಸ್ವಿಯಾಗಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದ […]

ಸುಳ್ಯ: ಗಣೇಶ ಚತುರ್ಥಿ ಹೆಸರಿನಲ್ಲಿ ಮದ್ಯದ ಬಾಟಲಿಯ ಬಹುಮಾನದ ಲಕ್ಕಿಡಿಪ್, ಹಿಂದೂ ಸಂಘಟನೆಯ ಆಕ್ರೋಶ

Saturday, September 23rd, 2023
ಸುಳ್ಯ: ಗಣೇಶ ಚತುರ್ಥಿ ಹೆಸರಿನಲ್ಲಿ ಮದ್ಯದ ಬಾಟಲಿಯ ಬಹುಮಾನದ ಲಕ್ಕಿಡಿಪ್, ಹಿಂದೂ ಸಂಘಟನೆಯ ಆಕ್ರೋಶ

ಸುಳ್ಯ: ಹಳೆಗೇಟು ಗಣೇಶ ಚತುರ್ಥಿ ಹೆಸರಿನಲ್ಲಿ ಮದ್ಯದ ಬಾಟಲಿಯ ಲಕ್ಕಿ ಕೂಪನ್ ಆಯೋಜನೆ ಮಾಡಲಾಗಿದ್ದು, ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಳೆಗೇಟು ಗಣೇಶ ಚತುರ್ಥಿ ಸಂದರ್ಭ ಗಣೇಶ ಹಬ್ಬದ ಹೆಸರಿನಲ್ಲಿ ಲಕ್ಕಿ ಕೂಪನ್ ಆಯೋಜನೆ ಮಾಡಲಾಗಿತ್ತು. ಈ ಲಕ್ಕಿ ಕೂಪನ್ ಗೆ ಸುಳ್ಯ ಪರಿಸರದಲ್ಲಿ ವಿರೋಧ ವ್ಯಕ್ತವಾಗಿತ್ತು. ಹಿಂದೂ ಧರ್ಮದ ಹಬ್ಬದಲ್ಲಿ ಇಂತಹ ಲಕ್ಕಿ ಕೂಪನ್ ಮಾಡಿದವನ ವಿರುದ್ಧ ಸಾಮಾಜಿಕ ಜಾಲತಾಣದಲ್ಲೂ ವಿರೋಧ ವ್ಯಕ್ತವಾಗಿತ್ತು. ಇದೀಗ […]