ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ ನಡೆಸಿದ ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

Thursday, September 21st, 2023
ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ ನಡೆಸಿದ ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆಯಲ್ಲಿ ಒಟ್ಟು 88 ಲ.ರೂ. ಪಾವತಿಸುವಂತೆ ನ್ಯಾಯಾಲಯದ ತೀರ್ಪಿನಂತೆ ಹಣ ಮರುಪಾವತಿ ಮಾಡಲು ವಿಫಲನಾದ ಮಂಜುನಾಥ್ ಖಾರ್ವಿ ವಿರುದ್ಧ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸರು ಉಪ್ಪುಂದದ ಮನೆಯಲ್ಲಿ ಬಂಧಿಸಿ 5ನೇ ಜೆ ಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸೆಪ್ಟೆಂಬರ್ 20 ರಂದು ಹಾಜರು ಪಡಿಸಿದ […]

ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೃದಯಾಘಾತದಿಂದ ನಿಧನ

Thursday, September 21st, 2023
ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೃದಯಾಘಾತದಿಂದ ನಿಧನ

ಸಿದ್ದಾಪುರ : ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ (57) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಅದ್ಭುತ ಕಂಠಸಿರಿಯ ಯಕ್ಷಗಾನ ಭಾಗವತರೂ, ಕೃತಿ ರಚನಾಕಾರರೂ ಆಗಿದ್ದ ಅವರು ಹಲವು ಮೇಳಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಸಾಲಿಗ್ರಾಮ ಮೇಳ, ಸಿಗಂದೂರು ಮೇಳ ಹಾಗೂ ವಿವಿಧ ಬಯಲಾಟ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಅಪಾರ ಬಂಧುಗಳು, ಅಭಿಮಾನಿಗಳು ಇದ್ದಾರೆ.

“ಯಾನ್ ಸೂಪರ್ ಸ್ಟಾರ್” ತುಳು ಸಿನಿಮಾ ಸೆ.22ರಂದು ಕರಾವಳಿಯಾದ್ಯಂತ ತೆರೆಗೆ

Wednesday, September 20th, 2023
"ಯಾನ್ ಸೂಪರ್ ಸ್ಟಾರ್" ತುಳು ಸಿನಿಮಾ ಸೆ.22ರಂದು ಕರಾವಳಿಯಾದ್ಯಂತ ತೆರೆಗೆ

ಮಂಗಳೂರು: “ಆನಂದ ಫಿಲಂಸ್ ಮತ್ತು ದಿ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್ ಸೂಪರ್ ಸ್ಟಾರ್” ತುಳು ಚಿತ್ರವು ಸೆಪ್ಟಂಬರ್ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ” ಎಂದು ರಾಮ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬಳಿಕ ಮಾತಾಡಿದ ಸಿಐಡಿ ದಯಾ ಖ್ಯಾತಿಯ ದಯಾನಂದ ಶೆಟ್ಟಿ ಅವರು, “ಹಿಂದಿ ಸಿನಿಮಾ ಮತ್ತು ಧಾರವಾಹಿ ಕ್ಷೇತ್ರದಲ್ಲಿ ನಾನು ಕಳೆದ 25 ವರ್ಷಗಳಿಂದ ದುಡಿಯುತ್ತಿದ್ದೇನೆ. ನಾನೆಲ್ಲಿ ಹೋದರೂ […]

ಮಂಗಳೂರು ಕದ್ರಿ ಗಣೇಶೋತ್ಸವ: ಮಕ್ಕಿಮನೆ ಕಲಾವೃಂದ ಬಳಗದಿಂದ ನೃತ್ಯ ವೈವಿಧ್ಯ

Wednesday, September 20th, 2023
ಮಂಗಳೂರು ಕದ್ರಿ ಗಣೇಶೋತ್ಸವ: ಮಕ್ಕಿಮನೆ ಕಲಾವೃಂದ ಬಳಗದಿಂದ ನೃತ್ಯ ವೈವಿಧ್ಯ

ಮಂಗಳೂರು: ಕದರಿಕಾ ಚಾರಿಟೇಬಲ್ ಟ್ರಸ್ಟ್( ರಿ) ಹಾಗೂ ಕದ್ರಿ ಕ್ರಿಕೆಟರ್ಸ್( ರಿ) ಆಶ್ರಯದಲ್ಲಿ ಮಂಗಳೂರು ಕದ್ರಿ ಮೈದಾನ ದಲ್ಲಿ ನಡೆದ ಪ್ರಥಮ ವರ್ಷದ ಸಾರ್ವಜನಿಕ ಗಣೇಶೋತ್ಸವದಲ್ಲಿ ಮಂಗಳವಾರ ರಾತ್ರಿ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ನೃತ್ಯ ವೈವಿಧ್ಯ ಹಾಗೂ ಜಿಲ್ಲೆಯ ಸುಪ್ರಸಿದ್ಧ ಸಂಗೀತ ಕಲಾವಿದರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ಜರಗಿತು . ಈ ಸಂದರ್ಭದಲ್ಲಿ ಕದರಿಕಾ ಚಾರಿಟೇಬಲ್ ಟ್ರಸ್ಟ್ ಹಾಗೂ ಕದ್ರಿ ಕ್ರಿಕೆಟರ್ಸ್ ನಾ ಸರ್ವ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು […]

ಡಿವೈಡರ್ ನ ಮೇಲೆ ಕೂಲಿ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾರು ಹರಿದು ಗಂಭೀರ ಗಾಯ

Wednesday, September 20th, 2023
car bike-accident

ಬಂಟ್ವಾಳ : ಡಿವೈಡರ್ ನ ಮೇಲೆ ಕೂಲಿ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾರು ಹರಿದು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತುಂಬೆ ಎಂಬಲ್ಲಿ ನಡೆದಿದೆ. ಹಾವೇರಿ ಮೂಲದ ನಾಗರಾಜ್ ಲಮಾಣಿ ಗಾಯಗೊಂಡ ಕಾರ್ಮಿಕ. ಚಾಲಕನ ನಿಯಂತ್ರಣ ಕಳೆದುಕೊಂಡ ಡಿವೈಡರ್ ಮೇಲೆ ಹತ್ತಿದೆ. ಈ ಸಂದರ್ಭದಲ್ಲಿ ಡಿವೈಡರ್ ನಲ್ಲಿ ಹುಲ್ಲು ತೆಗೆಯುವ ಕೆಲಸ ಮಾಡುತ್ತಿದ್ದ ಕಾರ್ಮಿಕನಿಗೆ ಡಿಕ್ಕಿಯಾಗಿದೆ. ಮತ್ತೆ ಕಾರು ವಿರುದ್ದ ರಸ್ತೆಗೆ ಮುನ್ನುಗ್ಗಿದೆ. ಅದೇ ಸಮಯದಲ್ಲಿ ರಸ್ತೆಯಲ್ಲಿ ಬರುತ್ತಿದ್ದ ಕಾರು ಮತ್ತು […]

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸರಿಗೆ ಬಡ್ತಿ

Wednesday, September 20th, 2023
anupam-agarwal

ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಸಹಾಯಕ ಉಪನಿರೀಕ್ಷಕರಿಗೆ ಪೊಲೀಸ್ ಉಪನಿರೀಕ್ಷಕರಾಗಿ ಮುಂಭಡ್ತಿ ನೀಡಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ. ಪಿಎಸ್‌ಐ ಭಡ್ತಿಯಾಗಿರುವ ಕಂಕನಾಡಿ ನಗರ ಪೊಲೀಸ್ ಠಾಣೆಯ ನವೀನ್ ಮೂಡುಬಿದಿರೆಗೆ, ಕಂಕನಾಡಿ ನಗರ ಠಾಣೆಯ ಜನಾರ್ದನ ನಾಯ್ಕ ಸುರತ್ಕಲ್ ಪೊಲೀಸ್ ಠಾಣೆಗೆ , ಸಿಎಸ್ಪಿಯ ಆನಂದ ಬಿ. ಉತ್ತರ ಸಂಚಾರ ಠಾಣೆಗೆ, ಗ್ರಾಮಾಂತರ ಠಾಣೆಯ ವಿನೋದ್ ಕೊಣಾಜೆ ಠಾಣೆಗೆ, ಪಣಂಬೂರು ಠಾಣೆಯ ಈಶ್ವರ ಸ್ವಾಮಿ ಕದ್ರಿ […]

ಕರಾವಳಿಯಾದ್ಯಂತ ಸಮುದ್ರ ತೀರ ಸ್ವಚ್ಛತಾ ಅಭಿಯಾನ

Monday, September 18th, 2023
clean-beach

ಮಂಗಳೂರು : ಸ್ವಚ್ಚ ಸಾಗರ ಸುರಕ್ಷಿತ ಸಾಗರಅಭಿಯಾನ ದೇಶದಾದ್ಯಂತ ಈಬಾರಿಯೂ ಯಶಸ್ವಿಯಾಗಿ ನಡೆಸಲಾಗಿದೆ ಎಂದು ಪರ್ಯವರಣ ಸಂರಕ್ಷಣ ಮಂಗಳೂರು ಮಹಾನಗರ ಸಂಯೋಜಕ ,ನ್ಯಾಯವಾದಿ ಸತೀಶ ಮಹಿತಿ ನೀಡಿದ್ದಾರೆ.. ಪರ್ಯಾವರಣ ಸಂರಕ್ಷಣ ಗತಿ ವಿಧಿ ಮತ್ತು ಕರಾವಳಿ ಕಲ್ಯಾಣ ಪರಿಷತ್ತು ಸಂಯೋಜನೆಯಲ್ಲಿ ರೋಟರಿ/ಲಯನ್ಸ/ ಏನ್ ಸಿಸಿ ,ಎನ್ಎಸ್ಎಸ್ಜ್ಯ ಶಾಲಾ ಕಾಲೇಜುಗಳು ಒಟ್ಟಾಗಿ ಈ ಅಭಿಯಾನವನ್ನು ಯಶಸ್ವಿಗೊಳಿಸಿದ್ದಾರೆ. ಪರ್ಯಾವರಣ ಗತಿ ವಿಧಿಯ ರಾಜ್ಯ ಸಂಯೋಜಕ ಜಯರಾಮ್ ಬೊಳ್ಳಾಜೆ ಸಾಗರದ ಸುರಕ್ಷೆ ಕುರಿತು ಮನೆಗಳಿಂದ ಏನು ಉಪಕ್ರಮ ಕೈಗೊಳ್ಳಬೇಕು ಎಂಬ ಮಾಹಿತಿಯನ್ನು […]

ಕಾಳಿಕಾಂಬ ವಿನಾಯಕ ದೇವಸ್ಥಾನ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

Monday, September 18th, 2023
ಕಾಳಿಕಾಂಬ ವಿನಾಯಕ ದೇವಸ್ಥಾನ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ಮಂಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದ ಸಹಯೋಗದಲ್ಲಿ ಸೆ.17ರ ಭಾನುವಾರ ವಿಶ್ವಕರ್ಮ ಜಯಂತಿಯನ್ನು ನಗರದ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ಸಭಾಂಗಣದಲ್ಲಿ ಆಚರಿಸಲಾಯಿತು. ಕೇಂದ್ರದ ಮೀನುಗಾರಿಕೆ, ಪಶುಸಂಗೋಪನೆ ಹಾಗೂ ಹೈನುಗಾರಿಕೆ ಸಚಿವರಾದ ಪರ್ಷೋತ್ತಮ್ ರೂಪಾಲಾ ಜಯಂತಿಯನ್ನು ಉದ್ಘಾಟಿಸಿದರು. ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ, ಮಣ್ಣಾಗುಡ್ಡೆಯ ಕಾರ್ಪೂರೇಟರ್ ಸಂಧ್ಯಾ ಮೋಹನ್, ಶ್ರೀ ಕಾಳಿಕಾಂಬ ವಿನಾಯಕ […]

ಬೈಕ್ ಕಳ್ಳತನ ಮಾಡಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Monday, September 18th, 2023
subramani

ಸುಳ್ಯ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಗು ಸೋಮವಾರಪೇಟೆಯ ಬಸವನಹಳ್ಳಿಯ ಸುಬ್ರಮಣಿ (26) ಬಂಧಿತ ಆರೋಪಿ. ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ,ತನಿಖೆ ನಡೆಸಿದ ಸುಳ್ಯ ಪೊಲೀಸ್ ಉಪ ನಿರೀಕ್ಷಕರು ಮತ್ತು ಸಿಬ್ಬಂದಿ ತಂಡ ಕ್ಷೀಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ವರದಿಯಾದ ಕೆಲವೇ ಗಂಟೆಗಳಲ್ಲಿ ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಕುಂಜ ಎಂಬಲ್ಲಿ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿರುತ್ತಾರೆ. ಇದಲ್ಲದೆ ಆರೋಪಿ ಸುಬ್ರಮಣಿ ಕೆಲ ದಿನಗಳ ಹಿಂದೆ ಸುಳ್ಯ […]

ಯುವ ಜನರು ಬದುಕು ತ್ಯಜಿಸುವ ಮುನ್ನ ಒಂದು ಕ್ಷಣ ಯೋಚಿಸಿ : ಡಾ. ಸುದರ್ಶನ್

Saturday, September 16th, 2023
suicide

ಮಂಗಳೂರು : ಯುವ ಜನರು ವ್ಯಸನದಿಂದ ದೂರ ಉಳಿದು ಸದೃಢ ಮನಸ್ಸನ್ನು ಹೊಂದಿದರೆ ಮಾತ್ರ ಆತ್ಮಹತ್ಯೆಯಂತಹ ಹೇಯ ಕೃತ್ಯಗಳಿಂದ ದೂರ ಉಳಿಯಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುದರ್ಶನ್ ತಿಳಿಸಿದರು. ಅವರು ಸೆ.16ರ ಶನಿವಾರ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಾಲೂಕು ಆರೋಗ್ಯ ಅಧಿಕಾರಿ […]