ಉರ್ವ ಶ್ರೀ ಮಾರಿಯಮ್ಮ ದೇವರ ಪುನರ್ ಪ್ರತಿಷ್ಟೆ ಸಂಭ್ರಮ, ಸೊಬಗು – ವಿಡಿಯೋ

Tuesday, February 13th, 2024
Urwa-Mariyamma

ಮಂಗಳೂರು : ಸುಮಾರು 600 ವರ್ಷಗಳ ಇತಿಹಾಸವಿರುವ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶದ ಸಂಭ್ರಮ ಆರಂಭಗೊಂಡಿದೆ. ಫೆಬ್ರವರಿ 13ರ ಮಂಗಳವಾರ ಬಾಲಾಲಯದಲ್ಲಿದ್ದ ಶ್ರೀ ಮಾರಿಯಮ್ಮ ದೇವರನ್ನು ಗರ್ಭಗುಡಿಗೆ ವಾದ್ಯಘೋಷಗಳೊಂದಿಗೆ ತಂದು ವಿಜೃಂಭಣೆಯಿಂದ ಪುನರ್ ಪ್ರತಿಷ್ಠಾಪಿಸಲಾಯಿತು. ಈ ಸಂದರ್ಭ ಪ್ರತಿಷ್ಠಾಕಲಶ, ಪಂಚಬ್ರಹ್ಮ ಮಹಾಮಂತ್ರ ಹೋಮ ನಡೆಯಿತು. ಬ್ರಹ್ಮಕಲಶದ ವಿಧಿ ವಿಧಾನಗಳು ಫೆಬ್ರವರಿ 11 ರಿಂದ 15 ರ ವರೆಗೆ ನಡೆದು ಫೆಬ್ರವರಿ 15 ರಂದು ಬೆಳಗ್ಗೆ 8.12 ರ ಸುಮೂಹೂರ್ತದಲ್ಲಿ ಶ್ರೀ ಮಾರಿಯಮ್ಮ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. […]

ಶಿಕ್ಷಕನ ಅವಮಾನ ತಾಳಲಾರದೆ ಇಲಿ ಪಾಷಾಣ ಸೇವಿಸಿದ್ದ ವಿದ್ಯಾರ್ಥಿನಿ ಮೃತ್ಯು

Tuesday, February 13th, 2024
trisha

ಬೆಳ್ತಂಗಡಿ : ಶಿಕ್ಷಕ ಕಳುಹಿಸಿದ ಮೊಬೈಲ್ ಸಂದೇಶದಿಂದ ಅವಮಾನಗೊಂಡು ವಿಷ (ಇಲಿ ಪಾಷಾಣ) ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ. ಫೆ.7ರಂದು ವಿಷ ಸೇವಿಸಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ […]

ಪ್ರಭು ಶ್ರೀರಾಮನ ಅವಹೇಳನ : ಸಂತ ಜೆರೋಸಾ ಶಾಲೆಯ ಶಿಕ್ಷಕಿ ಅಮಾನತು

Monday, February 12th, 2024
st gerosa school

ಮಂಗಳೂರು : ಅಯೋಧ್ಯಾ ಹಾಗೂ ಶ್ರೀರಾಮನ ಅವಹೇಳನ ಮಾಡಿದ ಆರೋಪದಲ್ಲಿ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ. ಫೆಬ್ರವರಿ 8ರಂದು ‘Work is worship’ ಎಂಬ ವಿಷಯ ಬಗ್ಗೆ ಪಾಠ ಮಾಡಿದ್ದ ಶಿಕ್ಷಕಿ ಸಿಸ್ಟರ್ ಪ್ರಭಾ ಅಯೋಧ್ಯೆ ರಾಮಮಂದಿರ ಹಾಗೂ ಪ್ರಭು ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದರು. ನಂತರ ಪೋಷಕರು ಮತ್ತು ಹಿಂದೂ ಕಾರ್ಯಕರ್ತರು ಶಿಕ್ಷಕಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. […]

ಇಬ್ಬರು ಕಲಾವಿದರಿಗೆ ‘ಬಳ್ಕೂರು ಯಕ್ಷ ಕುಸುಮ’ ಪುರಸ್ಕಾರ

Monday, February 12th, 2024
yaksha-kusuma

ಮಂಗಳೂರು : ಯಕ್ಷರಂಗವು ನನ್ನ ಬದುಕಿಗೆ ಅಭಿಮಾನಗಳ ಪ್ರೀತಿ ಮತ್ತು ಹೊಸತನದ ಸ್ಪೂರ್ತಿಯನ್ನು ನೀಡಿದೆ ಅದು ಮರೆಯಲಾದ ಅವಿಸ್ಮರಣೀ ಕ್ಷಣಗಳು ಎಂದು ರಾಷ್ಟ್ರ ಪ್ರಶಸ್ತಿ ವಿಜೇತ ಯಕ್ಷಗಾನ ಕಲಾವಿದ 96 ವಯಸ್ಸಿನ ಸೂರಿಕುಮೇರು ಕೆ ಗೋವಿಂದ ಭಟ್ ಹೇಳಿದರು. ಅವರು ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ರಂಗಸ್ಥಳ ಮಂಗಳೂರು (ರಿ) ಇವರ ಆಶ್ರಯದಲ್ಲಿ ಶ್ರೀಕ್ಷೇತ್ರ ಕುದ್ರೋಳಿ ಭಗವತೀ ದೇವಸ್ಥಾನದ ‘ಕೂಟಕಳಮ್ ಆಡಿಟೋರಿಯಂ ನಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮದಲ್ಲಿ ‘ಬಳ್ಕೂರು ಯಕ್ಷ ಕುಸುಮ’ ಪುರಸ್ಕಾರವನ್ನು ಸ್ವೀಕರಿಸಿ ಮಾತನಾಡಿದರು. […]

ಪತ್ರಕರ್ತರ ಗ್ರಾಮ ವಾಸ್ತವ್ಯ‌ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ-ಸ್ಪೀಕರ್ ಯು.ಟಿ.ಖಾದರ್

Monday, February 12th, 2024
Journalist

ಕೊಲ್ಲಮೊಗ್ರ: ತಮ್ಮ ಒತ್ತಡದ ಕೆಲಸದ ಮಧ್ಯೆಯೂ ಗ್ರಾಮ ವಾಸ್ಯವ್ಯ ಮಾಡಿ ಆ ಊರಿನ ಸಮಸ್ಯೆಗಳನ್ನು ಅರಿತು ಪರಿಹಾರಕ್ಕಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪತ್ರಕರ್ತರು ಮಾಡಿದ ಗ್ರಾಮ ವಾಸ್ತವ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ದ.ಕ.ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಆಡಳಿತ, ಹರಿಹರ, ಕೊಲ್ಲಮೊಗರು […]

ಜಪ್ಪಿನಮೊಗರು ಜಯ ವಿಜಯ ಜೋಡುಕರೆ ಕಂಬಳದ ಫಲಿತಾಂಶ : ವಿಡಿಯೋ

Monday, February 12th, 2024
ಜಪ್ಪಿನಮೊಗರು ಜಯ ವಿಜಯ ಜೋಡುಕರೆ ಕಂಬಳದ ಫಲಿತಾಂಶ : ವಿಡಿಯೋ

ಮಂಗಳೂರು : ಜಪ್ಪಿನಮೊಗರು ನೇತ್ರಾವತಿ ನದಿ ತಟದಲ್ಲಿ ತು 14 ನೇ ವರ್ಷದ ಜಯ ವಿಜಯ ಜೋಡುಕರೆ ಕಂಬಳವು ಯಶಸ್ವಿಯಾಗಿ ಮುಕ್ತಾಯ ಗೊಂಡಿದ್ದು ಕಂಬಳ ಕೂಟದ ಫಲಿತಾoಶ ಇಲ್ಲಿದೆ. ಕಂಬಳ ಕೂಟದಲ್ಲಿ ಒಟ್ಟು 138 ಜೊತೆ ಕೋಣಗಳು ಭಾಗವಹಿಸಿದ್ದು ಅವುಗಳಲ್ಲಿ ಕನೆಹಲಗೆ: 06 ಜೊತೆ, ಅಡ್ಡಹಲಗೆ: 05 ಜೊತೆ, ಹಗ್ಗ ಹಿರಿಯ: 13 ಜೊತೆ, ನೇಗಿಲು ಹಿರಿಯ: 28 ಜೊತೆ, ಹಗ್ಗ ಕಿರಿಯ: 16 ಜೊತೆ, ನೇಗಿಲು ಕಿರಿಯ: 70 ಜೊತೆ. ಕನೆಹಲಗೆ ವಿಭಾಗದಲ್ಲಿ ಸಮಾನ ಬಹುಮಾನ […]

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶಿಫಾರಸ್ಸು: ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಸಿಐಡಿ ತನಿಖೆಗೆ : ಸಿಎಂ ಆದೇಶ

Thursday, February 8th, 2024
lakshmi-Hebbalkar

ಉಡುಪಿ: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಬಗ್ಗೆ ತನಿಖೆಗೆ ಮುಖ್ಯಮಂತ್ರಿಗಳು ಸಿಐಡಿಗೆ ಒಪ್ಪಿಸಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೀಗ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಇದೇ 2ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್.‌ […]

ಮಾದಕ ವಸ್ತು ಎಂಡಿಎಂಎ ಸಾಗಾಟ, ಇಬ್ಬರ ಬಂಧನ, ಓರ್ವ ಪರಾರಿ

Thursday, February 8th, 2024
mmda

ಬಂಟ್ವಾಳ : ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಓರ್ವ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಚಿ ಗ್ರಾಮ ನಿವಾಸಿಗಳಾದ ಅಬ್ದುಲ್ ರಹೀಝ್ ಹಾಗೂ ದಾವೂದುಲ್ ಅಮೀರ್ ಬಂಧಿತ ಆರೋಪಿಗಳಾಗಿದ್ದಾರೆ. ಇನ್ನೋರ್ವ ಆರೋಪಿ ಬಂಟ್ವಾಳ ನಿವಾಸಿ ನಝೀರ್ ಪರಾರಿಯಾಗಿದ್ದಾನೆ. ಬಂಧಿತರಿಂದ 4 ಸಾವಿರ ರೂ. ಮೌಲ್ಯದ 4 ಗ್ರಾಂ 04 ಮಿ.ಗ್ರಾಂ.ತೂಕದ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಬಂಟ್ವಾಳ ನಗರ ಠಾಣಾಧಿಕಾರಿ […]

ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ನಿಧನ

Wednesday, February 7th, 2024
Padmanabha naringana

ಮಂಗಳೂರು : ಪದ್ಮನಾಭ ನರಿಂಗಾನ (77)ಅವರು ಹೃದಯಾಘಾತದಿಂದ ನಗರದ ಖಾಸಗಿ‌ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಇವರು ಸಮಾಜಸೇವೆಯೊಂದಿಗೆ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಅಹಿಂದ ಜಿಲ್ಲಾಧ್ಯಕ್ಷ, ಕಾಂಗ್ರೆಸ್ ಮುಖಂಡ, ದಲಿತ ನಾಯಕ, ನರಿಂಗಾನ ಕಂಬಳ ಸಮಿತಿ ಗೌರವ ಸಲಹೆಗಾರ, ನರಿಂಗಾನ ಕಂಬಳ ಸಮಿತಿ ಗೌರವ ಸಲಹೆಗಾರ, ನರಿಂಗಾನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದರು. ಕಳೆದ‌‌ ಬಾರಿ‌ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದರು. ಮೃತರುಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ನಿಧನಕ್ಕೆ […]

ಮಂಗಳೂರು ಮತ್ತು ಕೇರಳಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ

Tuesday, February 6th, 2024
ಮಂಗಳೂರು ಮತ್ತು ಕೇರಳಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ

ಮಂಗಳೂರು : ಒರಿಸ್ಸಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ ಬೊಲೆರೋ ವಾಹನದಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾ ಸಾಗಾಟ ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 120 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದ ವಯನಾಡಿನ ಅನೂಪ್ ಎಂ.ಎಸ್(28), ಕೇರಳದ ಕಣ್ಣೂರಿನ ಲತೀಪ್ ಕೆ.ವಿ(36) ಬಂಧಿತರು. ಮಂಗಳವಾರ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ […]