ಮಂಗಳೂರಿನ ಶ್ರೀ ಗುರುಮಠ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ಏಪ್ರಿಲ್ 2 ರಿಂದ 11 ರ ವರೆಗೆ ಯುಗಾದಿ ಮಹೋತ್ಸವ

Tuesday, March 29th, 2022
Kalikamba

ಮಂಗಳೂರು : ಇಲ್ಲಿನ ರಥಬೀದಿಯ ವಿಶ್ವ ಬ್ರಾಹ್ಮಣ ಸಮಾಜದ ಪವಿತ್ರ  ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇನ್ದ್ರ ಸರಸ್ವತೀ ಮಹಾಸ್ವಾಮಿಜಿ ಗಳವರು ( ಶ್ರೀಮತ್ ಆನೆಗುಂದಿ ಜಗದ್ಗುರು ಮಹಾ ಸಂಸ್ಥಾನ0 ಸರಸ್ವತೀ ಪೀಠ, ಪಡುಕುತ್ಯಾರು) ಇವರ ದಿವ್ಯ ಉಪಸ್ಥಿತಿಯಲ್ಲಿ  ತಾ.02. 04.2022 ಶನಿವಾರ ದಿಂದ ದಿನಾಂಕ 11.04.2022ರ ಸೋಮವಾರದ ತನಕ ಹತ್ತು ದಿನಗಳ ಪರ್ಯಂತ ಕ್ಷೇತ್ರದ ಪ್ರಧಾನ ತಂತ್ರಿಗಳಾದ ಬ್ರಹ್ಮಶ್ರೀ ಲಕ್ಷ್ಮೀ ಕಾಂತ ಶರ್ಮಾರ ಆಚಾರ್ಯತ್ವದಲ್ಲಿ ಸಂಪನ್ನಗೊಳ್ಳಲಿದೆ. ಕಾರ್ಯಕ್ರಮ ವಿವರ : 02.4.2022 ಬೆಳಿಗ್ಗೆ […]

ವಂದನಾ ರಾಣಿ, ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಪ್ರದೇಶದ ಅಗ್ರಗಣ್ಯರ ಪಟ್ಟಿಯಲ್ಲಿ

Tuesday, March 29th, 2022
Vandana Rani

ಮಂಗಳೂರು  : ಭರತಾಂಜಲಿಯ ಹಿರಿಯ ಶಿಷ್ಯೆಯರಲ್ಲಿ ಒಬ್ಬಳಾದ  ವಂದನಾ ರಾಣಿ, ಇವರು ಕೆಎಸ್‌ಇಇಬಿ ನಡೆಸಿದ ವಿದ್ವತ್ ಅಂತಿಮ ಪರೀಕ್ಷೆಗಳನ್ನು ಪೂರ್ಣಗೊಳಿಸಿ, ದಕ್ಷಿಣ ಕನ್ನಡ ಪ್ರದೇಶದಲ್ಲಿ ಅಗ್ರಗಣ್ಯರಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ. ಆಕೆಯ ಭರತನಾಟ್ಯದ ಪಯಣದಲ್ಲಿ ಹದಿನಾಲ್ಕು ವರ್ಷಗಳ ಕಾಲ ನಿರಂತರ ಪರಿಶ್ರಮ, ಕೊನೆಯಿಲ್ಲದ ಉತ್ಸಾಹ ಮತ್ತು ಸಾಟಿಯಿಲ್ಲದ  ಅಭ್ಯಾಸಗಳು ಈ ಗಮನಾರ್ಹ ಸಾಧನೆಯನ್ನು ಸಾಧ್ಯವಾಗಿಸಿದೆ! ವಂದನಾ ರಾಣಿ, ಶ್ರೀ ಕೇದಿಗೆ ವಸಂತ ರಾವ್ ಮತ್ತು ಶ್ರೀಮತಿ ರೂಪಾ ರಾಣಿ ಅವರ ಪುತ್ರಿ. ಗುರು ಶ್ರೀಮತಿ ಪ್ರತಿಮಾ ಶ್ರೀಧರ್ ಮತ್ತು […]

ಎಸ್ಎಸ್ಎಲ್ಸಿ ಪರೀಕ್ಷೆ : ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಪೊಲೀಸ್ ಕಾವಲು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 350 ವಿದ್ಯಾರ್ಥಿಗಳು ಗೈರು

Monday, March 28th, 2022
sslc Exam

ಮಂಗಳೂರು : ವಿವಾದದ ಕೇಂದ್ರವಾಗಿರುವ ಹಿಜಾಬ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕೇಂದ್ರಗಳ ಆವರಣದವರೆಗೂ ಹಿಜಾಬ್ ಧರಿಸಿ ಆಗಮಿಸುತ್ತಿರುವ ವಿದ್ಯಾರ್ಥಿನಿಯರು ಬಳಿಕ ಹಿಜಾಬ್ ತೆಗೆದಿರಿಸಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾರೆ. ಇದೇ ವೇಳೆ ಖಾಸಗಿ ಶಾಲೆಗಳ, ಸಮವಸ್ತ್ರ ಜತೆಗೆ ಹಿಜಾಬ್ ಭಾಗವಾಗಿರುವ ಶಾಲೆಗಳ ವಿದ್ಯಾರ್ಥಿನಿಯರು ತಮ್ಮ ಶಾಲೆಯ ಮುಖ್ಯಸ್ಥರ ಅನುಮತಿ ಮೇರೆಗೆ ಹಿಜಾಬ್ ನೊಂದಿಗೆ ಪರೀಕ್ಷೆ ಬರೆದಿದ್ದಾರೆ ಎನ್ನಲಾಗಿದೆ. ಬೆಳಗ್ಗೆ 10 ಗಂಟೆಗೆ ಪರೀಕ್ಷೆ ಆರಂಭಆರಂಭ ಗೊಂಡಿದ್ದು ,ಇಂದು ಪ್ರಥಮ ಭಾಷಾ ಪರೀಕ್ಷೆ  ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 29,712 ವಿದ್ಯಾರ್ಥಿಗಳು […]

ಮುಸುಕುಹಾಕಿ ಕಾರಿನಲ್ಲಿ ಬಂದು ಗೋವುಗಳ ಕಳ್ಳತನಕ್ಕೆ ಯತ್ನಿಸಿದ ತಂಡ

Sunday, March 27th, 2022
Cow Thief

ಕಡಬ : ಮಲಗಿದ್ದ ಗೋವುಗಳನ್ನು ಮುಸುಕುಧಾರಿ ತಂಡವೊಂದು ಕಳ್ಳತನಕ್ಕೆ ಯತ್ನಿಸಿದ ಘಟನೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯದ ಆಂಜನೇಯ ಗುಡಿ ಬಳಿ ಈ ಘಟನೆ ನಡೆದಿದ್ದು, ಮಾ.25ರಂದು ಸಿಸಿ ಕೆಮರಾ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಲಗಿದ್ದ ಗೋವನ್ನು ಕಾರಿನಲ್ಲಿ ಬಂದ ತಂಡ ಹಿಡಿಯಲು ಯತ್ನಿಸಿದ್ದು, ಗೋವು ತಪ್ಪಿಸಿಕೊಂಡಿರುವುದು ಸಿಸಿ ಕೆಮರಾದಲ್ಲಿ ಸೆರೆಯಾಗಿರುವ ಕೆಲವು ದೃಶ್ಯ ವೈರಲ್‌ ಆಗಿದೆ.

ಸಾಂಸ್ಕೃತಿಕ ಲೋಕ ಬೆಳಗಿಸುವ ಹೊಣೆ ಯುವಜನತೆಯದು : ಕ್ಯಾ. ಕಾರ್ಣಿಕ್

Saturday, March 26th, 2022
Samskrutika-sourabha

ಮಂಗಳೂರು  : ಇಂಟರ್ ನ್ಯಾಷನಲ್ ಕಲ್ಚರಲ್ ಫೆಸ್ತ್ ಕೌನ್ಸಿಲ್ ಆಫ್ ಇಂಡಿಯಾ ವತಿಯಿಂದ ನಾವು ಸೌಹಾರ್ದ ಪ್ರಿಯರು ಎಂಬ ಧ್ಯೇಯ ವಾಕ್ಯದೊಂದಿಗೆ ಆದರ್ಶ ಸಂಗೀತ ಅಕಾಡೆಮಿ ಟ್ರಸ್ಟ್ ಬೆಂಗಳೂರು ಹಾಗು ಚಂದನ ಸಾಹಿತ್ಯ ವೇದಿಕೆ ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ 29 ನೇ ಅಂತಾರಾಷ್ಟ್ರೀಯ ವಿಹಾರ ನೌಕೆ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವು ಮಂಗಳೂರಿನ ಬೊಕ್ಕಪಟ್ಟಣದ ಅಬ್ಬಕ್ಕ ನೌಕೆಯ ವೇದಿಕೆಯಲ್ಲಿ ಅರ್ಥಪೂರ್ಣವಾಗಿ ಜರುಗಿತು . ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಅನಿವಾಸಿ ಕನ್ನಡಿಗರ ಕೋಶ ಇದರ ಮಾಜಿ ಉಪಾಧ್ಯಕ್ಷರಾದ ಕ್ಯಾ […]

ಬೈಕ್ ಹಾಗೂ ಜೀಪು ನಡುವೆ ಅಪಘಾತ, ವಿದ್ಯಾರ್ಥಿ ಸಾವು

Wednesday, March 23rd, 2022
dharshan

ಸುಳ್ಯ : ಬೈಕ್ ಹಾಗೂ ಜೀಪು ನಡುವೆ ಸಂಭವಿಸಿದ  ಅಪಘಾತದಲ್ಲಿ  ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಪೆರಾಜೆಯ ಕುಂಬಳಚೇರಿ ಎಂಬಲ್ಲಿ ಮಾ.23 ರಂದು ನಡೆದಿದೆ. ಘಟನೆಯಲ್ಲಿ  ಇನ್ನೋರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದಾನೆ. ಪೆರಾಜೆಯ ನಿವಾಸಿ ಆರ್.ಡಿ. ವೆಂಕಪ್ಪ ಎಂಬವರ ಪುತ್ರ ದರ್ಶನ್ ಹಾಗೂ ಪೆರಾಜೆಯ ನಿವಾಸಿ ಲೋಕನಾಥ ಕುಂದಲ್ಪಾಡಿ ಅವರ ಪುತ್ರ ವಿಶ್ವದೀಪ್ ಎಂಬ ಇಬ್ಬರು ಬಾಲಕರು ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದು ಪರೀಕ್ಷೆ ಬರೆದು ಹಿಂತಿರುಗುತ್ತಿದ್ದರು ಎನ್ನಲಾಗಿದೆ. ಇಬ್ಬರು ಬೈಕಿನಲ್ಲಿ ಮನೆಗೆ ಬರುತ್ತಿದ್ದ […]

ಅಣ್ಣ ತಮ್ಮಂದಿರ ಜಗಳ ಕೊಲೆಯಲ್ಲಿ ಅಂತ್ಯ

Tuesday, March 22nd, 2022
Thomas

ಕಾಸರಗೋಡು : ಅಣ್ಣ ತಮ್ಮಂದಿರ ಜಗಳ ಕೊಲೆಯಲ್ಲಿ ಅಂತ್ಯಗೊಂಡಗೊಂಡ ಘಟನೆ  ಪೆರ್ಲ ಸಮೀಪದ ಶೇಣಿ ಉಪ್ಪಳಿಗೆಯಲ್ಲಿ  ಮಾ.21ರ ಸೋಮವಾರ ರಾತ್ರಿ ನಡೆದಿದೆ. ಉಪ್ಪಳಿಗೆಯ ಥೋಮಸ್ ಡಿಸೋಜ ( 45) ಕೊಲೆಗೀಡಾದವರು. ಈತನ ಸಹೋದರ ರಾಜೇಶ್ ( 37) ಕೃತ್ಯ ನಡೆಸಿದ್ದಾನೆ. ರಾತ್ರಿ ಹತ್ತು ಗಂಟೆ ಸುಮಾರಿಗೆ ಇಬ್ಬರ ನಡುವಿನ ಜಗಳವನ್ನು ತಡೆಯಲು ಬಂದ ಥೋಮಸ್ ನ ಸಂಬಂಧಿಕ ವಿಲ್ಫ್ರೆಡ್ ಗೂ ಗಾಯಗಳಾಗಿವೆ. ಜಗಳ ವಿಕೋಪಕ್ಕೆ ತಿರುಗಿ ರಾಜೇಶ್ ನು ಥೋಮಸ್ ನನ್ನು ಇರಿದಿದ್ದು , ಬೊಬ್ಬೆ ಕೇಳಿ […]

ಹಿಜಾಬ್ ಇಲ್ಲದೆ ತರಗತಿಗಳಿಗೆ ತೆರಳಲು ಒಪ್ಪಿದ ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರು

Monday, March 21st, 2022
Hijab

ಪುತ್ತೂರು :  ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಇದೀಗ ಕಾಲೇಜಿನ ಸಮವಸ್ತ್ರ ನಿಯಮಾವಳಿಗಳನ್ನು ಪಾಲಿಸಿ ಸೋಮವಾರದಿಂದ  ತರಗತಿಗಳಿಗೆ ಹಾಜರಾಗಿದ್ದಾರೆ. ಕಾಲೇಜು ಆಡಳಿತದ ಆದೇಶ ವಿರೋಧಿಸಿ ವಿದ್ಯಾರ್ಥಿಗಳು ತರಗತಿ ಮತ್ತು ಪರೀಕ್ಷೆಗಳನ್ನು ಬಹಿಷ್ಕರಿಸಿದ್ದರು. ಇತ್ತ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಪರ ಮಾತುಕತೆ ನಡೆಸಿದ ಮುಖಂಡರಿಗೆ ಕಾಲೇಜಿನ ಆಡಳಿತ ಮಂಡಳಿಯು ನಾವು ನ್ಯಾಯಾಲಯದ ತೀರ್ಪನ್ನು ಉಲ್ಲಂಘಿಸುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು. ಹೈಕೋರ್ಟ್‌ನ ಆದೇಶಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳು ಹಿಜಾಬ್‌ ಧರಿಸಿ ತರಗತಿಗೆ ಹಾಜರಾಗಬಾರದೆಂದು ಹೇಳಿತ್ತು. ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಮುಖಂಡರು ಮಾತುಕತೆ ನಡೆಸಿ […]

ಮುಸ್ಲಿಂ ಮೂಲಭೂತವಾದಿ ಸಂಘಟನೆಗಳ ವಾದದಿಂದ ಮುಸ್ಲಿಂ ಹೆಣ್ಣುಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ : ಬೃಂದಾ ಕಾರಟ್

Monday, March 21st, 2022
brinda karat

ಮಂಗಳೂರು:  ಮುಸ್ಲಿಂ ಮೂಲಭೂತವಾದಿ ಸಂಘಟನೆಗಳಾದ ಪಿಎಫ್ಐ, ಎಸ್ ಡಿಪಿಐ ಮೊದಲಾವುಗಳು ಹಿಜಾಬ್ ಕುರಿತ ತೀರ್ಪಿನ ವಿಚಾರಗಳನ್ನು ವಿರೋಧಿಸುವುದರೊಂದಿಗೆ ಹೆತ್ತವರು, ವಿದ್ಯಾರ್ಥಿನಿಯರಿಗೆ ಒತ್ತಡ ಹೇರುವ ಕೆಲಸ ಮಾಡುತ್ತಿದೆ. ಆ ಮೂಲಕ ಮೂಲಭೂತವಾದಿಗಳ ಪ್ರಮುಖ ಆಶಯವಾಗಿರುವ ಹೆಣ್ಣುಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿಸುವ ಕೆಲಸವೂ ನಡೆಯುತ್ತಿದೆ. ಹೆಣ್ಣು ಮಕ್ಕಳು ಹಿಜಾಬ್ ಧರಿಸಬೇಕೇ ಬೇಡವೇ ಎಂದು ಹೆತ್ತವರು ತೀರ್ಮಾನಿಸಲಿ ಎಂದು ಪಾಲಿಟ್ ಬ್ಯೂರೋ ಸದಸ್ಯೆ ಬೃಂದಾ ಕಾರಟ್ ಆರೋಪಿಸಿದ್ದಾರೆ. ಸಿಪಿಐಎಂ ವತಿಯಿಂದ ಸೋಮವಾರ ಮಂಗಳೂರಿನ ಪುರಭವನದಲ್ಲಿ ಜರುಗಿದ ಸೌಹಾರ್ದ ಸಮಾವೇಶದಲ್ಲಿ ಅವರು ಮಾತನಾಡಿದರು. ದೇಶಗಳಲ್ಲಿ ಸೌಹಾರ್ದ‌ತೆ ಕದಡುವಲ್ಲಿ, ಬಾಹ್ಯ ಶಕ್ತಿಗಳಿಗಿಂತ ಆಂತರಿಕ‌‌ […]

ಗುಜರಿ ಗ್ಯಾಸ್ ಸಿಲಿಂಡರ್ ಸ್ಫೋಟ : ಇಬ್ಬರು ಸಜೀವ ದಹನ

Monday, March 21st, 2022
Gas Cylinder Blast

ಉಡುಪಿ : ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಘಟನೆ ಇಂದು ಬೆಳಗ್ಗೆ ಮಲ್ಲಾರು ಸಲಫಿ ಮಸೀದಿ ಸಮೀಪದಲ್ಲಿರುವ ಗುಜರಿ ಅಂಗಡಿಯಲ್ಲಿ ನಡೆದಿದೆ. ಚಂದ್ರನಗರದ ರಜಬ್ ಹಾಗೂ ಇನ್ನೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನೋರ್ವ ಪಾಲುದಾರ ಹಸನಬ್ಬ, ಬೆಳಪು ಗ್ರಾಪಂ ಸದಸ್ಯ ಫಹೀಮ್ ಬೆಳಪು ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದಾರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ, ಬೆಂಕಿ […]