ಬಸವರಾಜ ಬೊಮ್ಮಾಯಿ ಜನತಾ ಪರಿವಾರದಿಂದ ಬಂದವರು, ಬಿಜೆಪಿಯ ಕೆಲವು ನಾಯಕರಿಗೆ ಒಳಗೊಳಗೇ ಅಸಮಾಧಾನ !

Sunday, August 1st, 2021
Basavaraja Bommai

ಬೆಂಗಳೂರು : ಜನತಾ ಪರಿವಾರದಿಂದ ಬಂದವರೇ ಹೆಚ್ಚು ಜನ ಮುಖ್ಯಮಂತ್ರಿಗಳಾಗಿರುವುದು ಎಂದು ಮಾಜಿ ಸಚಿವ ಹೆಚ್‌ಡಿ.ರೇವಣ್ಣ ಹೇಳಿದ ಬಳಿಕ ಸಂಘ ಪರಿವಾರದ ಹಿನ್ನೆಲೆ ಇರುವ ಕೆಲವು ಬಿಜೆಪಿ ಮುಖಂಡರಿಗೆ ಮುಜುಗರ ಉಂಟುಮಾಡಿದೆ. ಅಷ್ಟರವರೆಗೆ ಬಸವರಾಜ ಬೊಮ್ಮಾಯಿ ಹೊರಗಿನವರು ಎಂಬ ಭಾವನೆ ಇರಲಿಲ್ಲ. ಜೆಡಿಯಸ್ ನವರು ಈ ರೀತಿ ಹೇಳುತ್ತಿರುವುದರಿಂದ ಸಂಘ ಪರಿವಾರದವರಿಗೆ ‘ನಮ್ಮ ಕೈಗೆ ಬಂದ ಅಧಿಕಾರ ಜನತಾ ಪರಿವಾರದ ಮೂಲದವನ ಬಾಯಿಗೆ ಬಿತ್ತಲ್ಲಾ ಎಂಬ ಭಾವನೆ ಕಾಡತೊಡಗಿದೆ. ಬಸವರಾಜ ಬೊಮ್ಮಾಯಿ ಸಿಎಂ ಆದ ಮೇಲೆ ಮೊದಲ […]

ಸೈಲೆನ್ಸ್‌ರ್‌ ವಿರೂಪಗೊಳಿಸಿ ಚಾಲನೆ ನಡೆಸುತ್ತಿದ್ದ ವಾಹನಗಳ ವಿರುದ್ದ ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ

Sunday, August 1st, 2021
sound-polution

ಬೆಂಗಳೂರು : ವಿರೂಪಗೊಳಿಸಿದ ಹಾಗೂ ಮಾರ್ಪಾಡಿತ ಸೈಲೆನ್ಸ್‌ರ್‌ ವಿರುದ್ದ ಸಾರಿಗೆ ಅಧಿಕಾರಿಗಳು ಇಂದು ಕಾರ್ಯಾಚರಣೆ ನಡೆಸಿ 300 ಹೈ ಎಂಡ್‌ ಬೈಕ್‌ ಹಾಗೂ 60 ಕ್ಕೂ ಹೆಚ್ಚು ಕಾರುಗಳ ಪರಿಶೀಲನೆ ನಡೆಸಿದರು. ಸಾರಿಗೆ ಇಲಾಖೆ ಅಪರ ಮುಖ್ಯ ಆಯುಕ್ತರಾದ ನರೇಂದ್ರ ಹೋಳ್ಕರ್‌ ಹಾಗೂ ಜಂಟಿ ಸಾರಿಗೆ ಆಯುಕ್ತರಾದ ಹಾಲಪ್ಪಸ್ವಾಮಿ ನೇತೃತ್ವದಲ್ಲಿ ರಚಿಸಲಾಗಿದ್ದ‌ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಎನ್‌ ರಾಜಣ್ಣ, ಮೋಟಾರ್‌ ವಾಹನ ನೀರೀಕ್ಷಕರುಗಳಾದ ರಂಜಿತ್‌ (ದೇವನಹಳ್ಳಿ ಭಾಗದಲ್ಲಿ) ಚೇತನ್‌, ಸುಧಾಕರ್‌, ಸುಂದರ್‌ ಮತ್ತು ರಂಜೀತ್‌ (ನೆಲಮಂಗಲ-ಹಾಸನ […]

ಹಣಕಾಸು ಸಚಿವೆ ಭೇಟಿ ಮಾಡಿದ ಮುಖ್ಯಮಂತ್ರಿ: ಜಿಎಸ್ ಟಿ ಪರಿಹಾರ ಬಿಡುಗಡೆಗೆ ಮನವಿ

Saturday, July 31st, 2021
Bommai-Meets-Nirmala-Seetharaman

ನವದೆಹಲಿ :  ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು. ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ ಮಾಡುವುದಾಗಿ ಕೇಂದ್ರ […]

ಕೆಂದ್ರದ ನಾಯಕರು ಮಠಾಧೀಶರಿಗೆ ಅಗೌರವ ತೋರಿದ್ದಾರೆ, ಸಂಕ್ರಾಂತಿ ಒಳಗೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಅವಘಡ ಆಗಲಿದೆ : ಕೋಡಿಮಠ

Friday, July 30th, 2021
Kodimatha-Swamiji

ಕೋಲಾರ: ನೂತನ‌ ಮುಖ್ಯಮಂತ್ರಿ ಕುರಿತು ಏನನ್ನೂ ಈಗಲೇ ಹೇಳುವುದಿಲ್ಲ. ಕಾರ್ತಿಕ ಮಾಸ ಕಳೆದ ನಂತರ ಹೇಳುತ್ತೇನೆ. ಆಶ್ವೀಜ ಮಾಸ ನಂತರ ಸಂಕ್ರಾಂತಿ ಒಳಗೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಅವಘಡ ಆಗಲಿದೆ ಎಂದು ಅರಸೀಕೆರೆ ಹಾರನಹಳ್ಳಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಅಶುಭ ನುಡಿಗಳು ಈಗ ಬೇಡ. ಕೆರೆ ಕಟ್ಟೆಗಳು ತುಂಬಿ ಜಲಗಂಡಾಂತರ ಇನ್ನೂ ಇದೆ ಎಂದಿದ್ದಾರೆ. ನಾವು‌ ಯಡಿಯೂರಪ್ಪ ‌ಅವರನ್ನು ಉಳಿಸಿ ಅಂತ ಹೇಳಲಿಲ್ಲ. ಬದಲಾಗಿ ಸ್ವಾಮೀಜಿಗಳು ಬೀದಿಗೆ ಬಂದಾಗ, ಕೆಂದ್ರದ […]

ಮಧು ಬಂಗಾರಪ್ಪ ಸೇರಿ ಜೆಡಿಎಸ್​ನ ಹಲವು ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆ

Friday, July 30th, 2021
Madhu Bangarappa

ಹುಬ್ಬಳ್ಳಿ:  ಹುಬ್ಬಳ್ಳಿಯ ಗೋಕುಲ ಗಾರ್ಡನ್ನಲ್ಲಿ ಶುಕ್ರವಾರ ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಮಧು ಬಂಗಾರಪ್ಪಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಪಕ್ಷದ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡಿರು. ಈ ವೇಳೆ ಮಾತನಾಡಿದ ಡಿಕೆಶಿ, ನಾನು ಬಂಗಾರಪ್ಪನವರ ಗರಡಿಯಲ್ಲೇ ಬೆಳೆದಿದ್ದು. ಸುಮಾರು ಹತ್ತು ವರ್ಷಗಳಿಂದ ಗಾಳ ಹಾಕಿದ್ದೆ. ಬಹಳ ದಿನದ ನಂತರ ಬಲೆಗೆ ಮಧು ಬಂಗಾರಪ್ಪ ಬಿದ್ದಿದ್ದಾರೆ. ಮೊದಲೇ ಬಂದಿದ್ರೆ ಈಗಾಗಲೇ ಮಧು ಮಾಜಿ ಸಚಿವರಾಗ್ತಿದ್ರು. ನನ್ನ ರಾಜಕೀಯ […]

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಇಲ್ಲಿದೆ ನೋಡಿ

Friday, July 30th, 2021
cbse-result

ಬೆಂಗಳೂರು  : ಸರಕಾರ  ಕೋವಿಡ್-19 ಎರಡನೇ ಅಲೆ ತೀವ್ರವಾದ ಹಿನ್ನೆಲೆಯಲ್ಲಿ ಈ ವರ್ಷ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಪರ್ಯಾಯ ಮೌಲ್ಯಮಾಪನ ನೀತಿಯಡಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿ ಇಂದು ಫಲಿತಾಂಶ ಪ್ರಕಟಿಸಿದೆ. ಜುಲೈ 30ರಂದು ಮಧ್ಯಾಹ್ನ ಪ್ರಕಟಗೊಂಡಿರುವ CBSE 12ನೇ ತರಗತಿ ಫಲಿತಾಂಶವನ್ನು ಬೋರ್ಡ್ ಅಧಿಕೃತ ಜಾಲತಾಣ cbse.nic.in ಇಲ್ಲವೇ cbseresults.nic.in ಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ನಮೂದಿಸಿ ನೋಡಬಹುದು. ಅಲ್ಲದೇ ಇದಲ್ಲದೇ ವಿದ್ಯಾರ್ಥಿಗಳು ಡಿಜಿಲಾಕರ್ ನಲ್ಲಿ ತಮ್ಮ ಫಲಿತಾಂಶ ಪಡೆಯಬಹುದು. 2021ರ […]

ಕರಾವಳಿಗೆ ಮೂರು ಮಂತ್ರಿ ಸ್ಥಾನ, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯತೆ

Friday, July 30th, 2021
Yedyurappa

ಬೆಂಗಳೂರು : ಮಾಜಿ ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಡಿಯೋ ಬಳಿಕ ಮೊದಲ ಬಾರಿ ಅಸಮಾಧಾನ ಹೊರಹಾಕಿದ್ದು. ಇದ್ದರಿಂದ ರಾಜ್ಯಾಧ್ಯಕ್ಷರ ಸ್ಥಾನ ಬದಲಾಗುವ ಮುನ್ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೆಲಸಮಾಡುತ್ತಿಲ್ಲ. ಪಕ್ಷ ಬಲವರ್ಧನೆಗೆ ನಾನೇ ವಾರಕ್ಕೊಂದು ಬಾರಿ ರಾಜ್ಯದ ಪ್ರತೀ ಜಿಲ್ಲೆಗಳಲ್ಲಿ ಸಂಚರಿಸಿ, ಮುಂದಿನ ಚುನಾವಣೆಯಲ್ಲಿ ಪಕ್ಷ ಗೆಲ್ಲಲು ಶ್ರಮವಹಿಸುವುದಾಗಿ ಹೇಳಿದ್ದಾರೆ. ರಾಜ್ಯಾಧ್ಯಕ್ಷರನ್ನಾಗಿ ಪ್ರಭಲ ಲಿಂಗಾಯತ ನಾಯಕನನ್ನು ನೇಮಿಸುವ ಚಿಂತನೆಯಲ್ಲಿ ಯಡಿಯೂರಪ್ಪ ಬಣ ಸಜ್ಜಾಗಿದೆ. ಆ ಮೂಲಕ […]

ಸಾರ್ಥಕ ಸಾಧನೆ : ಗೋವಿಂದ ಎಂ. ಕಾರಜೋಳ ಅವರಿಂದ ಕೃತಜ್ಞತೆ

Friday, July 30th, 2021
Govinda Karajola

ಬೆಂಗಳೂರು : ಜನಪ್ರಿಯ ಮುಖ್ಯಮಂತ್ರಿಗಳಾಗಿದ್ದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರದಲ್ಲಿ ತಾವು ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಿರ್ವಹಿಸಿದ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯು ಕೋವಿಡ್ 19, ಪ್ರವಾಹ, ಅತಿವೃಷ್ಠಿಯ ವಿಷಮ ಪರಿಸ್ಥಿತಿಯ ಸಂಕಷ್ಟದ ಸಂದರ್ಭದಲ್ಲೂ ಇಲಾಖೆಗೂ ಹಾಗೂ ತಮಗೂ ಶ್ರೇಯಸ್ಸು ದೊರಕುವಂತೆ ಅಲ್ಲದೇ, ಜನತೆಯ ಪ್ರಶಂಸೆಗೂ ಪಾತ್ರವಾಗುವಂತೆ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಿ, ರಾಜ್ಯದ ಬಲವರ್ಧನೆಗೆ ಪೂರಕವಾಗಿ ಸದೃಢ ರಸ್ತೆಗಳು, ಸೇತುವೆಗಳು, ಕಟ್ಟಡಗಳನ್ನು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದ ಇಲಾಖೆಯ […]

60ಕ್ಕೂ ಹೆಚ್ಚು ಮಂಗಗಳಿಗೆ ವಿಷಾಹಾರ ಹಾಕಿ ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಹಾಕಿ ರಸ್ತೆ ಬದಿ ಎಸೆದ ದುಷ್ಕರ್ಮಿಗಳು

Thursday, July 29th, 2021
monkeys

ಹಾಸನ: ವಿಷಾಹಾರ ಸೇವಿಸಿದ ಸುಮಾರು 60ಕ್ಕೂ ಹೆಚ್ಚು ಮಂಗಗಳನ್ನು ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಹಾಕಿ ರಸ್ತೆ ಬದಿ ಎಸೆದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಸಕಲೇಶಪುರದ ಬೇಗೂರು ಕ್ರಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸುಮಾರು 60ಕ್ಕೂ ಹೆಚ್ಚು ಚೀಲಗಳಲ್ಲಿ ಮಂಗಗಳನ್ನು ಹಾಕಿ ರಸ್ತೆ ಬದಿಗೆ ಎಸೆಯಲಾಗಿದೆ. ದಾರಿಹೋಕರು ಇದನ್ನು ನೋಡಿ ಚೀಲಗಳನ್ನು ಬಿಚ್ಚಿದ್ದು ಈ ವೇಳೆ ಮಂಗಗಳಿಗೆ ವಿಷಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ ಕಾರ್ಯಪ್ರವೃತ್ತರಾದ ಸ್ಥಳೀಯರು ಮಂಗಗಳನ್ನು ರಕ್ಷಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಆದರೆ 60 […]

ಅತಿವೃಷ್ಠಿ ಪೀಡಿತ ಸ್ಥಳಗಳಿಗೆ ಮುಖ್ಯಮಂತ್ರಿ ಭೇಟಿ

Thursday, July 29th, 2021
Bommai

ಯಲ್ಲಾಪುರ : ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಬಾಧಿತಗೊಳಗಾದ ಯಲ್ಲಾಪುರ ತಾಲೂಕಿನ ವಿವಿಧ ಪ್ರದೇಶಗಳಿಗೆ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಯಲ್ಲಾಪುರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಸ್ಪತ್ರೆಯ ವಿವಿಧ ವಿಭಾಗಗಳ ಜೊತೆಗೆ ಕೋವಿಡ್ -19 ಲಸಿಕೆ ನೀಡುವ ಕೇಂದ್ರನ್ನೂ ಪರಿಶೀಲನೆ ಮಾಡಿದರು. ನಂತರ ಒಳ ಹಾಗೂ ಹೊರ ರೋಗಿಗಳ ಆರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ಕ್ರಮವಹಿಸಲು ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಈ […]