ಪುನೀತ್ ರಾಜಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ : ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ

Friday, October 29th, 2021
PunnethRaj

ಬೆಂಗಳೂರು :  ವರನಟ ಡಾ.ರಾಜಕುಮಾರ್ ಸುಪುತ್ರ, ಖ್ಯಾತ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹೊಂದಿರುವುದು ಅತೀವ ಆಘಾತವನ್ನುಂಟು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಕಿರಿಯ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಜನಪ್ರಿಯ ಮೇರು ನಟ, ಯುವಜನತೆಯ ಕಣ್ಮಣಿ, ಯೂಥ್ ಐಕಾನ್ ಆಗಿದ್ದ ಪುನೀತ್ ನಿಧನ ಹೊಂದಿರುವುದು ಕಲಾರಂಗಕ್ಕೆ ಬಹಳ ದೊಡ್ಡ ನಷ್ಟ, ವಿಧಿಯ ಕ್ರೂರ ಆಟ” ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. “ವೈಯಕ್ತಿಕವಾಗಿ ಅತ್ಯಂತ ಆತ್ಮೀಯ ಸಹೃದಯ ಬಂಧುವನ್ನು ಕಳೆದುಕೊಂಡಿದ್ದೇನೆ. […]

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನಿಲ್ಲ, ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನ

Friday, October 29th, 2021
Puneeth Rajkumar

ಬೆಂಗಳೂರು: ಕನ್ನಡದ ಖ್ಯಾತ ಪ್ರತಿಭಾವಂತ ನಟ ಡಾ. ರಾಜ್ ಕುಮಾರ್ ಅವರ ಪುತ್ರ ಪುನೀತ್ ರಾಜ್ ಕುಮಾರ್ ಶುಕ್ರವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುನೀತ್ ರಾಜ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದಾರೆ. ಇಂದು ನಸುಕಿನ ಜಾವ ಎಂದಿನಂತೆ ಜಿಮ್ ನಲ್ಲಿ ದೇಹ ಕಸರತ್ತು ನಡೆಸುತ್ತಿದ್ದ ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ರಮಣಶ್ರೀ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತರಲಾಯಿತು. ಆಗ […]

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ತೀವ್ರ ಎದೆ ನೋವು, ಆಸ್ಪತ್ರೆಗೆ ದಾಖಲು

Friday, October 29th, 2021
Punneth-Rajkuamr

ಬೆಂಗಳೂರು: ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ. ಅವರನ್ನು ವಿಕ್ರಂ ಆಸ್ಪತ್ರೆಯ  ತುರ್ತು ನಿಗಾ ಘಟಕದಲ್ಲಿ ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಅವರಿಗೆ ಹೃದಯಾಘಾತ ಆಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಶಿವರಾಜ್ ಕುಮಾರ್ ಪುತ್ರಿ ಸೇರಿದಂತೆ ಹಲವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ನಾಲ್ಕು ಗಂಟೆಗಳ ಹಿಂದಷ್ಟೇ ಶಿವಣ್ಣ ಅಭಿಯನದ ಭಜರಂಗಿ-2 ಚಿತ್ರದ ಯಶಸ್ಸು […]

ಅಲ್ಪಸಂಖ್ಯಾತ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ಅನ್ಯಾಯ ಎಸಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Tuesday, October 26th, 2021
Hanagal Election

ಹಾನಗಲ್ : ಇಂದಿಗೂ ಕಾಂಗ್ರೆಸ್ ಪಕ್ಷ ಬ್ರಿಟಿಷರ ಒಡೆದಾಳುವ ನೀತಿಯನ್ನು ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಆರೋಪಿಸಿದರು.‌ ಹಾನಗಲ್ ವಿಧಾನಸಭಾ ಕ್ಷೇತ್ರದ ಆಡೂರು ಗ್ರಾಮದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರವಾಗಿ ಮತಯಾಚನೆ ಮಾಡಿದ ನಂತರ ಅವರು ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದು ಬ್ರಿಟಿಷ್ ವ್ಯಕ್ತಿ. ಒಡೆದಾಳುವುದು ಬ್ರಿಟಿಷರ ನೀತಿಯನ್ನು ಅವರು ಸದಾ ಅನುಸರಿಸಿಕೊಂಡು ಬಂದವರು. ಈಗ ಅದೇ ಸಂಸ್ಕೃತಿಯನ್ನು ಕಾಂಗ್ರೆಸ್ ಮುಂದುವರಿಸಿದೆ. ಹೀಗಾಗಿ ಕಾಂಗ್ರೆಸ್ಸನ್ನು ಪುಡಿ ಪುಡಿ ಮಾಡಿ ಎಂದು ಬೊಮ್ಮಾಯಿ ಕರೆ […]

ಆರ್ ಅಶೋಕ್ ರಣತಂತ್ರ, ದೊಡ್ಡಬಳ್ಳಾಪುರ ನಗರಸಭೆ ಬಿಜೆಪಿ ವಶಕ್ಕೆ

Tuesday, October 26th, 2021
Doddaballapura

ದೊಡ್ಡಬಳ್ಳಾಪುರ  :  ಪ್ರತಿಷ್ಠಿತ ದೊಡ್ಡಬಳ್ಳಾಪುರ ನಗರಸಭೆಯನ್ನು ಕಂದಾಯ ಸಚಿವ ಆರ್ ಅಶೋಕ್ ನೇತೃತ್ವದಲ್ಲಿ, ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿ ಬಿಜೆಪಿ ತೆಕ್ಕೆಗೆ ತೆಗೆದುಕೊಂಡಿದೆ. ಇಂದು ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯ ಸುಧಾರಾಣಿ ಅಧ್ಯಕ್ಷರಾಗಿ, ಪರ್ಹಾನ್ ತಾಜ್ ಉಪಾಧ್ಯಕ್ಷರಾಗಿ ಆಯ್ಕೆಯಾದರು. ನಂತರ ಮಾತನಾಡಿದ ಸಚಿವ ಆರ್ ಅಶೋಕ್ “ದೊಡ್ಡಬಳ್ಳಾಪುರ ಪುರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಇಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ನಾವು ಅಧಿಕಾರ ಹಿಡಿದಿದ್ದೇವೆ. ಮುಂದಿನ ದಿನಗಳಲ್ಲಿ ದೊಡ್ಡಬಳ್ಳಾಪುರ ಜಿಲ್ಲೆ ಬಿಜೆಪಿ ವಶವಾಗಲಿದೆ. ಸುಮಾರು ಒಂದು ತಿಂಗಳಿನಿಂದ ಹೊಂದಾಣಿಕೆಯ ಪ್ರಕ್ರಿಯೆಯನ್ನು […]

ಕಾಂಗ್ರೆಸ್ ನವರು ಭಯಭೀತರಾಗಿ ಹತಾಶರಾಗಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ ಆರೋಪ

Sunday, October 24th, 2021
Sindgi

ಕನ್ನೋಳಿ: ಸಿಂದಗಿ: ಕಾಂಗ್ರೆಸ್ ಪಕ್ಷದ ನಾಯಕರಿಗೆ ಪ್ರಾಚರಕ್ಕೆ ವಿಷಯಗಳೇ ಸಿಗುತ್ತಿಲ್ಲ. ಸೋತಮೇಲೆ ನೀಡುವಂತಹ ಹೇಳಿಕೆಗಳನ್ನು ಚುನಾವಣಾ ಆರಂಭದಲ್ಲೇ ನೀಡುತ್ತಿದೆ.‌ ಕಾಂಗ್ರೆಸ್ ಸಂಪೂರ್ಣವಾಗಿ ಹತಾಶವಾಗಿ ಇಂತಹ ಹೇಳಿಕೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಗೆ ಅದ್ಭುತವಾದ ಬೆಂಬಲವನ್ನು ನೋಡಿ ಕಾಂಗ್ರೆಸ್ ಪಕ್ಷ ಭಯ ಗೊಂಡಿದೆ. ಸೋಲಿನ ಅನುಭವ ಆರಂಭದಲ್ಲಿ ಆಗಿರುವುದರಿಂದ ಚುನಾವಣಾ ನಂತರದ ಹೇಳಿಕೆಗಳನ್ನು ಈಗಲೇ ಆ ಪಕ್ಷದ ನಾಯಕರು ನೀಡುತ್ತಿದ್ದಾರೆ ಎಂದರು. ಅವರು ಸಿಂದಗಿ ವಿಧಾನಸಭೆ ಕ್ಷೇತ್ರದ ಕನ್ನೊಳಿ ಗ್ರಾಮದ ಪ್ರಚಾರದ ಸಂದರ್ಭದಲ್ಲಿ […]

ಹಿಂದೂ ಯುವಕನ ಹತ್ಯೆ ಮಾಡಿದ ಮುಸ್ಲಿಂ ಯುವತಿಯ ಮನೆಯವರು

Sunday, October 24th, 2021
Ravi Nimbaragi

ವಿಜಯಪುರ : ಮುಸ್ಲಿಂ ಯುವತಿಯನ್ನು ಪ್ರೀತಿಸುತ್ತಿದ್ದ ಹಿಂದೂ ಯುವಕನ ಹತ್ಯೆ ನಡೆದಿದ್ದು,  ಯುವತಿಯ ಕುಟುಂಬದವರಾದ ಅಲ್ತಾಫ್ ಮತ್ತಿ ಇಸ್ಮೈಲ್ ಸೇರಿದಂತೆ ಎಂಟು ಜನರು ಕೊಲೆ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ. ಮೃತಪಟ್ಟ ಯುವಕನನ್ನು ಆಲಮೇಲ ತಾಲೂಕಿನ ಬಳಗಾನೂರ ಗ್ರಾಮದ ರವಿ ನಿಂಬರಗಿ (34) ಎಂದು ಗುರುತಿಸಲಾಗಿದೆ. ಅಕ್ಟೋಬರ್ 21ರಂದು ನಾಪತ್ತೆಯಾಗಿದ್ದ ರವಿ ಶವ ಹೊಲದ ಬಾವಿಯಲ್ಲಿ ಅಕ್ಟೋಬರ್ 23ರಂದು ಪತ್ತೆಯಾಗಿದೆ. ಅಕ್ಟೋಬರ್ 21ರಂದು ದಿನಸಿ ತರಲು ಮನೆಯಿಂದ ಹೊರ ಹೋಗಿದ್ದ ರವಿ ನಿಂಬರಗಿ ನಾಪತ್ತೆಯಾಗಿದ್ದ. ರವಿ ಪ್ರೀತಿಸುತ್ತಿದ್ದ ಯುವತಿ […]

ಪತ್ನಿಗೆ ಹೈಡೋಸ್ ಇಂಜೆಕ್ಷನ್ ಕೊಟ್ಟು ಕೊಲೆ ಮಾಡಿದ ವೈದ್ಯ

Sunday, October 24th, 2021
shilpa

ದಾವಣಗೆರೆ: ವೈದ್ಯನೋರ್ವ ತನ್ನ ಮಡದಿಗೆ ಹೈಡೋಸ್ ಇಂಜೆಕ್ಷನ್ ಕೊಟ್ಟು ಕೊಲೆಗೈದಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿ  ತಡವಾಗಿ ಬೆಳಕಿಗೆ ಬಂದಿದೆ. ಶಿಲ್ಪಾ(36) ಮೃತ ಮಹಿಳೆ. ಚನ್ನೇಶಪ್ಪ (45) ಶಿಲ್ಪಾಳನ್ನು ಕೊಲೆ ಮಾಡಿದ ಪತಿ. ಕಳೆದ ಹತ್ತು ತಿಂಗಳ ಹಿಂದೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಶಿಲ್ಪಾಳ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಡಾ. ಚನ್ನೇಶಪ್ಪ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಪತ್ನಿಗೆ ಹೆಕ್ಸಾಮೆಟಜೋನ್ ಸ್ಪಿರಾಯಡ್ ಹೈಡೋಸ್ ನೀಡಿ ಕೊಲೆಗೈದಿದ್ದಾನೆ. ಬಳಿಕ ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು […]

ಪಂಚಮಸಾಲಿಗಳ ಒತ್ತಡಕ್ಕೆ ಸರ್ಕಾರ ಮಣಿಯಬಾರದು: ಸಿ.ಎಸ್‌ ದ್ವಾರಕಾನಾಥ್‌

Saturday, October 23rd, 2021
Dwarakanath

ಬೆಂಗಳೂರು : ಹಿಂದುಳಿದ ವರ್ಗಗಳ ಪ್ರವರ್ಗ 2(ಎ)ಗೆ ಸೇರಿಸಬೇಕೆಂಬ ಬಲಿಷ್ಠ ವೀರಶೈವ ಪಂಚಮಸಾಲಿ ಸಮುದಾಯದ ಒತ್ತಡಕ್ಕೆ ಸರ್ಕಾರ ಮಣಿಯಬಾರದೆಂದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ ಎಸ್ ದ್ವಾರಕನಾಥ್ ಎಚ್ಚರಿಸಿದ್ದಾರೆ. ಇಂದು ಕುಮಾರ ಕೃಪ ಅತಿಥಿ ಗೃಹ ದಲ್ಲಿ ರಾಜ್ಯದ ಅತಿ ಹಿಂದುಳಿದ ಜನಾಂಗದ ಮಠಾಧೀಶರನ್ನ ಒಳಗೊಂಡ ಸಭೆಯಲ್ಲಿ ಮಾತನಾಡಿದರು. ‘ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ’, ಪಂಚಮಸಾಲಿಗಳ ಮೀಸಲು ಹೋರಾಟವನ್ನು ವಿರೋಧಿಸಿ ಅತಿ ಹಿಂದುಳಿದ ವರ್ಗಗಳ ಎಲ್ಲ ಸ್ವಾಮೀಜಿಗಳು ಪ್ರತಿ ಹೋರಾಟಕ್ಕೆ […]

ಕೆಪಿಟಿಸಿಎಲ್ ನ 1899 ಹುದ್ದೆಗಳ ಭರ್ತಿಗೆ ಚಾಲನೆ- ಸಚಿವ ಸುನಿಲ್ ಕುಮಾರ್

Tuesday, October 12th, 2021
Power Minister

ಬೆಂಗಳೂರು  : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ ,ಇಂದು ಅದರ ಮೊದಲ ಹಂತವಾಗಿ, ಸಾಂಕೇತಿಕವಾಗಿ 21 ಜನರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗುತ್ತಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ದ ಸಭಾಂಗಣದಲ್ಲಿ ಈ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು […]