ದಸರಾ ಉದ್ಘಾಟನೆಗೆ ಎಸ್. ಎಂ. ಕೃಷ್ಣ ಅವರಿಗೆ ಆಹ್ವಾನ

Tuesday, September 28th, 2021
SM Krishana

ಬೆಂಗಳೂರು  : ಈ ಬಾರಿ ಮೈಸೂರು ದಸರಾ ಉದ್ಘಾಟಕರನ್ನಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಾಧ್ಯಮದವರಿಗೆ ಈ ವಿಷಯ ತಿಳಿಸಿದ ಮುಖ್ಯಮಂತ್ರಿಯವರು, ದಸರಾ ದಿನದಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ದಸರಾ ಉದ್ಘಾಟನೆ ಮಾಡಲು ಹಿರಿಯ ಮುತ್ಸದ್ದಿ ಎಸ್.ಎಂ. ಕೃಷ್ಣ ಅವರನ್ನು ಆಹ್ವಾನಿಸಲಾಗುವುದು. ಅವರು ಮುಖ್ಯಮಂತ್ರಿಯಾಗಿ ಹಾಗೂ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ನಾಡಿನ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಆಹ್ವಾನಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು […]

ರಾಜ್ಯೋತ್ಸವ ಪ್ರಶಸ್ತಿಗೆ ಆನ್ ಲೈನ್ ಮೂಲಕ ಸಾರ್ವಜನಿಕರೇ ಸಾಧಕರನ್ನು ಶಿಫಾರಸು ಮಾಡಬಹುದು- ಸುನಿಲ್ ಕುಮಾರ್

Saturday, September 25th, 2021
Sunil Kumar V

ಬೆಂಗಳೂರು :  ನವೆಂಬರ್ ಒಂದರಂದು 66ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ರಾಜ್ಯ ಸರ್ಕಾರದಿಂದ ಆಚರಿಸಲಾಗುತ್ತಿದ್ದು, ಪ್ರತಿವರ್ಷದಂತೆ ಈ ವರ್ಷವೂ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು, ಈ ಬಾರಿಯ ವಿಶೇಷವೆಂದರೆ ,ಈ ವರ್ಷ ರಾಜ್ಯೋತ್ಸವ ಪ್ರಶಸ್ತಿ ಗೆ ಅರ್ಹರನ್ನು ಗುರುತಿಸಿ ಆನ್ಲೈನ್ ಮೂಲಕ ಅವರ ಹೆಸರು ಶಿಫಾರಸು ಮಾಡಲು ಸಾರ್ವಜನಿಕರಿಗೇ ಅವಕಾಶ ಕಲ್ಪಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಈ ವರ್ಷ 66 ಅರ್ಹ ಸಾಧಕರನ್ನು ಗುರುತಿಸಿ […]

“ಅನಿಶ್ಚಿತತೆ” ಚಿತ್ರಕಲಾ ಪ್ರದರ್ಶನ ಕುರಿತಂತೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಅವರ ಅನಿಸಿಕೆ

Thursday, September 23rd, 2021
Anishchitate

ಬೆಂಗಳೂರು  : ಚಿತ್ರಕಲಾ ಪರಿಷತ್ತಿನಲ್ಲಿ ನಡೆಯುತ್ತಿರುವ ನಡೆಯುತ್ತಿರುವ “ಅನಿಶ್ಚಿತತೆ” ಕಲಾಪ್ರದರ್ಶನವನ್ನು ಇಂದು ಮುಂಜಾನೆ ಉದ್ಘಾಟಿಸಿ ಕಲಾವಿದರೊಂದಿಗೆ ಅವರ ಕಲಾಕೃತಿಗಳನ್ನು ನೋಡಿದ್ದು, ಕೆಲಸಮಯ ಬೇರೆಯದೇ ಲೋಕದಲ್ಲಿ ಸಂಚರಿಸಿದ ಅನುಭವ ನೀಡಿತು. ಕೊರೋನಾ ಸಂದರ್ಭದಲ್ಲಿ ಸಮಾಜದ ಪ್ರತಿಯೊಬ್ಬರಲ್ಲೂ ಉಂಟಾದ ಅನಿಶ್ಚಿತತೆ ಭಾವವನ್ನು, ಗ್ರಾಫಿಕ್ ಮುದ್ರಣ ಕಲೆಯ ಮೂಲಕ ಕರ್ನಾಟಕದ ವಿವಿಧ ಭಾಗಗಳ 75 ಕಲಾವಿದರುಗಳು ಅತಿ ಸುಂದರ ಹಾಗೂ ಮನಸ್ಸಿನ ಆಳದಲ್ಲಿ ನಮ್ಮನ್ನು ಚಿಂತನೆಗೆ ಒಳಪಡಿಸುವಂತಹ ಕಲಾಕೃತಿಗಳನ್ನು ರಚಿಸಿದ್ದರು. ದೇಶದಲ್ಲೇ ದೊಡ್ಡಮಟ್ಟದ ಗ್ರಾಫಿಕ್ ಮುದ್ರಣ ಕಲಾ ಪ್ರದರ್ಶನ ನಮ್ಮ ಕರ್ನಾಟಕದ […]

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು: ಕೇಂದ್ರದ ಅನುಮತಿ ಪಡೆಯಲು ಮುಖ್ಯಮಂತ್ರಿಗಳ ಸೂಚನೆ

Thursday, September 23rd, 2021
Sharavathi

ಬೆಂಗಳೂರು : ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡುವ ಸಂಬಂಧ 1978ರ ಅರಣ್ಯ ಸಂರಕ್ಷಣೆ ಕಾಯ್ದೆ ಅನ್ವಯ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಲು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅವರು ಇಂದು ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಶರಾವತಿ ಮುಳುಗಡೆಗೆ ಒಳಗಾದ ರೈತರ ಸಮಸ್ಯೆಗಳು, ಶರಾವತಿ ಆಭಯಾರಣ್ಯ, ಅರಣ್ಯ ಕಾಯ್ದೆ ಹಾಗೂ ಸಿ& ಡಿ ಭೂಮಿಯ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಸಂಬಂಧ ಉಚ್ಛನ್ಯಾಯಾಲಯ ತಡೆಯಾಜ್ಞೆ ನೀಡಿ […]

ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ವಿತರಣೆ

Thursday, September 23rd, 2021
Covid Kin

ಬೆಂಗಳೂರು  : ಕೋವಿಡ್ ನಿಂದ ಕುಟುಂಬದ ದುಡಿಯುವ ಸದಸ್ಯನನ್ನೇ ಕಳೆದುಕೊಂಡ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಆಸರೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು 1 ಲಕ್ಷ ರೂಪಾಯಿಗಳ ಪರಿಹಾರ ಘೋಷಣೆ ಮಾಡಿತ್ತು. ಅದರಂತೆ ಇಂದು ವಿಧಾನಸೌಧದಲ್ಲಿ 18 ಜನರಿಗೆ ಪರಿಹಾರ ನೀಡುವ ಮೂಲಕ ಕಂದಾಯ ಸಚಿವ ಆರ್ ಅಶೋಕ್ ರಾಜ್ಯಾದ್ಯಂತ ಪರಿಹಾರ ನೀಡುವ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು “ಕೋವಿಡ್ ಸಮಯದಲ್ಲಿ ಅನೇಕ ಕುಟುಂಬಗಳು ತಂದೆ, ತಾಯಿಗಳನ್ನು ಕಳೆದುಕೊಂಡಿವೆ. ಇನ್ನು ಕೆಲವರು ಮಕ್ಕಳನ್ನು […]

ಕಾಲೇಜು ವಿದ್ಯಾರ್ಥಿಯೋರ್ವ ಪ್ರೇಮ ವೈಫಲ್ಯದಿಂದ ರೈಲ್ವೇ ಹಳಿಗೆ ಬಿದ್ದು ಆತ್ಮಹತ್ಯೆ

Sunday, September 19th, 2021
Basayya Vastrada

ಹುಬ್ಬಳ್ಳಿ:  ಕಾಲೇಜು ವಿದ್ಯಾರ್ಥಿಯೋರ್ವ ಪ್ರೇಮ ವೈಫಲ್ಯದಿಂದ ರೈಲ್ವೇ ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಅಮರಗೋಳದ ಬಸಯ್ಯ ವಸ್ತ್ರದ ಎಂಬ ಯುವಕ ರೈಲು ಹಳಿಗೆ ತೆಲೆ ಕೊಟ್ಟ ಸಾವನಪ್ಪಿದ ಪ್ರೇಮಿಯಾಗಿದ್ದಾನೆ. ಪಿಯುಸಿ ವ್ಯಾಸಂಗ ಮಾಡಿರುವ ಬಸಯ್ಯ, ಅಮರಗೋಳ ಪ್ರದೇಶದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಯುವತಿ ಬಸಯ್ಯನ ಪ್ರೀತಿಯನ್ನು ನಿರಾಕರಣೆ ಮಾಡಿದ್ದರಿಂದಲೇ ರೈಲು ಹಳಿಗೆ ತೆಲೆ ಕೊಟ್ಟು ಸಾವನಪ್ಪಿದ್ದಾನೆ ಎಂದು ಶಂಕಿಸಲಾಗಿದೆ. ಈತನ ತಂದೆ ಸಿಎಂ ಬಸವರಾಜ ಬೊಮ್ಮಾಯಿಯವರ ತಂದೆ-ತಾಯಿಯವರನ್ನು ಅಂತ್ಯಕ್ರಿಯೆ ಮಾಡಿದ ಪುತ್ಥಳಿ ಕಾವಲು […]

ಕ್ರೀಡಾ ಪಟುಗಳಿಗೆ ಪ್ರೋತ್ಸಾಹ ಸಿಕ್ಕರೆ ಮತ್ತಷ್ಟು ಸಾಧನೆ ಸಾಧ್ಯ: ಸಚಿವ ಆರ್ ಅಶೋಕ

Sunday, September 19th, 2021
Davanagere-tennis-court

ದಾವಣಗೆರೆ : ದಾವಣಗೆರೆಯಲ್ಲಿ ಸಿದ್ಧಗೊಂಡಿರುವ ಟೆನಿಸ್ ಕೋರ್ಟ್ ಗಳನ್ನು ಕಂದಾಯ ಸಚಿವ ಆರ್ ಅಶೋಕ್ ಪರಿಶೀಲನೆ ನಡೆಸಿದರು. ಡಿಸ್ಟ್ರಿಕ್ಟ್ ಟೆನಿಸ್ ಅಸೋಸಿಯೇಷನ್ ದಾವಣಗೆರೆ ಜಿಲ್ಲೆ ಇವರ ವತಿಯಿಂದ ಜನವರಿ 2022 ರಲ್ಲಿ ನಡೆಯಲಿರುವ ITTF ಪಂದ್ಯಾವಳಿಯನ್ನು ಆಯೋಜಿಸುವ ಕುರಿತು ಮನವಿ ಸ್ವೀಕರಿಸಿ, ಸಚಿವರು ಮಾತನಾಡಿದರು. “ನಮ್ಮ ದೇಶ ಎಲ್ಲಾ ಕ್ರೀಡೆಗಳಲ್ಲೂ ಸಾಧನೆ ಮಾಡಬೇಕು. ಅಂತಹ ಕ್ರೀಡಾ ಪಟುಗಳು ನಮ್ಮಲ್ಲಿ ಸಿದ್ಧರಾಗಬೇಕು. ಆ ನಿಟ್ಟಿನಲ್ಲಿ ಕ್ರೀಡೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಬೇಕಾಗುತ್ತದೆ. ಈ ಉದ್ದೇಶಕ್ಕೆ ಮಕ್ಕಳು, ಯುವಕರು ಹಾಗೂ […]

ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಪ್ರೋತ್ಸಾಹ : ಬಸವರಾಜ ಬೊಮ್ಮಾಯಿ

Sunday, September 19th, 2021
Dhavanagere

ದಾವಣಗೆರೆ : ಉದ್ಯೋಗ ಸೃಷ್ಟಿ ಮಾಡುವ ಉದ್ಯಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಾವಣಗೆರೆಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಕಾಮಗಾರಿಗಳಿಗೆ ಇಂದು ಶಿಲ್ಯಾನ್ಯಾಸ ನೆರವೇರಿಸಿ ಮುಖ್ಯಮಂತ್ರಿಗಳು ಮಾಧ್ಯಮದವರೊಂದಿಗೆ ಮಾತನಾಡಿದರು. ಪಿಎಲ್ ಐ ಯೋಜನೆಯಡಿ ಕೇಂದ್ರ ಸರ್ಕಾರ ಜವಳಿ ಹಾಗೂ ಆಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡಲು ಉದ್ದೇಶಿಸಿದೆ. ಉದ್ಯೋಗ ಸೃಷ್ಟಿಸುವ ಶ್ರೇಷ್ಟ ಯೋಜನೆ ಇದಾಗಿದೆ. ಈ ನಿಟ್ಟಿನಲ್ಲಿ ಮೆಗಾ ಟೆಕ್ಸ್ಟೈಲ್ ಪಾರ್ಕ್ ಮತ್ತು ಆಟೋಮೊಬೈಲ್ ಸೆಕ್ಟರ್ ಗಳ ಕ್ಲಸ್ಟರ್ […]

ಶಾಸಕ ಪತ್ರಿಕೆಯ ಸಂಪಾದಕನ ಕುಟುಂಬದ ಐವರು ಆತ್ಮಹತ್ಯೆಗೆ ಶರಣು, ಬದುಕುಳಿದ ಮೂರು ವರ್ಷದ ಹೆಣ್ಣು ಮಗು

Friday, September 17th, 2021
shankar

ಬೆಂಗಳೂರು: ಶಾಸಕ ಪತ್ರಿಕೆಯ ಸಂಪಾದಕ ಹಲ್ಲೆಗೆರೆ ಶಂಕರ್ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು ಶಂಕರ್ ಪತ್ನಿ ಭಾರತಿ(50), ಮಗಳು ಸಿಂಚನ(33), 2ನೇ ಮಗಳು ಸಿಂಧುರಾಣಿ (30), ಮಗ ಮಧುಸಾಗರ್(27), ಹಾಗೂ 9 ತಿಂಗಳ ಮಗು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಸಿಂಚನ ಮಗಳು ಬದುಕುಳಿದಿದ್ದಾಳೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿ ಪ್ರತಿದಿನ ಗಲಾಟೆ ಆಗುತ್ತಿತ್ತು. ಹೀಗೆ ಪತ್ನಿಯೊಂದಿಗೆ ಜಗಳ ಮಾಡಿಕೊಂಡು ಶಂಕರ್ ನಾಲ್ಕು ದಿನಗಳ ಹಿಂದೆ ಮನೆ […]

ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ “ಪವರ್” ತುಂಬಿದ ಸಚಿವ ಸುನಿಲ್ ಕುಮಾರ್

Friday, September 17th, 2021
Kannada Pradhikara

ಬೆಂಗಳೂರು : ಪವರ್ ಇಲಾಖೆಯಲ್ಲಿ ಸಂಸ್ಕೃತಿ ತರುವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪವರ್ ತುಂಬುವ ಕೆಲಸ ಮಾಡುತ್ತೇನೆ ಎಂದು ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ದಿನ ಆಶ್ವಾಸನೆ ನೀಡಿದ್ದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಆ ನಿಟ್ಟಿನಲ್ಲಿ ಚಾರಿತ್ರಿಕ ಆದೇಶ ಹೊರಡಿಸು ಮೂಲಕ ದೃಢ ಅಡಿ ಇಟ್ಟಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಬಲಪಡಿಸಿ, ಅದರ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಅಧಿಕಾರ ವಿಕೇಂದ್ರೀಕರಣ […]