ಮಹಿಳಾ ಕಾರ್ಯಕರ್ತರಿಗೆ ಬಾಗಿನ ನೀಡಿ, ಪರಿಸರ ಸ್ನೇಹಿ ಗಣೇಶ ಮೂರ್ತಿ ವಿತರಿಸಿದ : ಕಂದಾಯ ಸಚಿವ ಆರ್ ಅಶೋಕ

Thursday, September 9th, 2021
R Ashoka Ganesha

ಬೆಂಗಳೂರು  : “ಜೀವ, ಜೀವನ ಬಹಳ ಮುಖ್ಯ. ನಾವು ಬದುಕಿದರೆ ಮಾತ್ರ ಮುಂದೆ ಏನಾದರು ಸಾಧನೆ ಮಾಡಬಹುದು” ಎಂದು ಆರ್ ಅಶೋಕ ಹೇಳಿದರು. ದೆಹಲಿಯಿಂದ ನಗರಕ್ಕೆ ಆಗಮಿಸಿದ ಸಚಿವರು ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ವಿತರಿಸಿದರು. ಪದ್ಮನಾಭನಗರ ಕ್ಷೇತ್ರದ ವಿವಿಧ ಸ್ಥಳಗಳಲ್ಲಿ ಗೌರಿ ಹಬ್ಬದ ಶುಭದಿನದಂದು ಮಹಿಳೆಯರಿಗೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ, “ನಾವು ಗಣೇಶ ಹಬ್ಬವನ್ನು ಆಯೋಜಿಸಲು ಅನುಮತಿ ನೀಡಿದ್ದೇವೆ. ಗೌರಿ ಮತ್ತು ಗಣೇಶ ಹಬ್ಬವು ಸಹೋದರತ್ವವನ್ನು ಸಂಕೇತಿಸುತ್ತದೆ. […]

ಗಣೇಶ ಚತುರ್ಥಿಯ ಪ್ರಯುಕ್ತ ಜೆಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ಮುಸುಕಿನ ಜೋಳ, ಸೊಪ್ಪು ಹಾಗೂ ಹೂವುಗಳನ್ನು ಬಳಸಿ ವಿಶೇಷ ಆಲಂಕಾರ

Thursday, September 9th, 2021
JpNagara Ganapathi

  ಬೆಂಗಳೂರು : ಗಣೇಶ ಚತುರ್ಥಿಯ ಪ್ರಯುಕ್ತ ಜೆಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ಮುಸುಕಿನ ಜೋಳ, ಸೊಪ್ಪುಗಳು ಹಾಗೂ ಹೂವುಗಳನ್ನು ಬಳಸಿಕೊಂಡು ವಿಶೇಷ ಆಲಂಕಾರವನ್ನು ಮಾಡಲಾಗಿದೆ ಎಂದು ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್‌ನ ಟ್ರಸ್ಟಿ ರಾಮ್ ಮೋಹನ ರಾಜ್ ತಿಳಿಸಿದ್ದಾರೆ. ಪ್ರತಿ ಬಾರಿಯೂ ವಿಶೇಷ ಆಲಂಕಾರ ಹಾಗೂ ವಿಶೇಷ ಸಾಮಗ್ರಿಗಳನ್ನು ಬಳಸಿಕೊಂಡು ಗಣೇಶ ಮೂರ್ತಿಯನ್ನು ತಯಾರಿಸುವ ಮೂಲಕ ದೇಶದ ಗಮನವನ್ನ ಈ ದೇವಸ್ಥಾನ ಸೆಳೆಯುತ್ತಿತ್ತು. ಕರೋನಾ ಸಾಂಕ್ರಾಮಿಕ ಕಾರಣ ಕಳೆದ ವರ್ಷವೂ […]

ಕಲಬುರಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಭರ್ಜರಿ ಜಯ, ಇಲ್ಲಿದೆ ನೋಡಿ ಫಲಿತಾಂಶ

Tuesday, September 7th, 2021
Belagavi

ಬೆಂಗಳೂರು :  ಕಲಬುರಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಕಲಬುರಗಿ ಮಹಾನಗರ ಪಾಲಿಕೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅತಂತ್ರವಾಗಿವೆ. ಬೆಳಗಾವಿ ಮಹಾನಗರ ಪಾಲಿಕೆ ಫಲಿತಾಂಶ (58 ವಾರ್ಡ್ ಗಳು) ಬಿಜೆಪಿ- 35, ಕಾಂಗ್ರೆಸ್-10, ಜೆಡಿಎಸ್-00, ಎಂಇಎಸ್-01, ಪಕ್ಷೇತರರು-12 ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ (55 ವಾರ್ಡ್ ಗಳು) ಬಿಜೆಪಿ-23, ಕಾಂಗ್ರೆಸ್-27, ಜೆಡಿಎಸ್-04, ಪಕ್ಷೇತರರು-01 ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ […]

ವಿಜಯನಗರ ಜಿಲ್ಲೆ: ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳ ಪ್ರಾರಂಭಕ್ಕೆ ತೀರ್ಮಾನ

Monday, September 6th, 2021
Vijayanagara

ಬೆಂಗಳೂರು :  ನೂತನ ವಿಜಯನಗರ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳನ್ನು ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಗೆ ಮೂಲಸೌಕರ್ಯ ಒದಗಿಸುವ ಬಗ್ಗೆ ಚರ್ಚಿಸಲು ಸಭೆ ನಡೆಸಲಾಯಿತು. ವಿಜಯನಗರ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳ ದುರಸ್ತಿ, ನವೀಕರಣ ಮತ್ತು ಕಛೇರಿ ಮೂಲಸೌಕರ್ಯಕ್ಕೆ 53 ಕೋಟಿ ರೂ. ಅನುದಾನ ಒದಗಿಸಲು ಮಂಜೂರಾತಿ ನೀಡಲಾಗಿದೆ. ಎರಡು ಹಂತಗಳಲ್ಲಿ ಹುದ್ದೆಗಳ ಸೃಜನೆ ಮಾಡಲಾಗುತ್ತಿದ್ದು, ಮೊದಲ ಹಂತದಲ್ಲಿ ಸಾರ್ವಜನಿಕರು […]

ಸಾಂದೀಪನಿ ವಿದ್ಯಾರ್ಥಿ ವೇತನ, ಬ್ರಾಹ್ಮಣ ರೈತರಿಗೆ ನೆರವು ನೀಡುವ ಪುರುಷೋತ್ತಮ ಯೋಜನೆಗೆ ಚಾಲನೆ

Monday, September 6th, 2021
Sandipani

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಜಾರಿಗೊಳಿಸುತ್ತಿರುವ ಸಾಂದೀಪನಿ ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ಬಿಡುಗಡೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು 9,206 ವಿದ್ಯಾರ್ಥಿಗಳಿಗೆ ಮಂಡಳಿಯು 13.77 ಕೋಟಿ ರೂ.ಗಳ ವಿದ್ಯಾರ್ಥಿ ವೇತನ ನೀಡಲಾಗಿದೆ. ಬ್ರಾಹ್ಮಣ ಬುದ್ಧಿವಂತಿಕೆಯೊಂದಿಗೆ ಸ್ಥಿತ ಪ್ರಜ್ಞತೆಯನ್ನು ಹೊಂದಿದ್ದಾರೆ. ಇದರಿಂದ ದೇಶ, ಸಮಾಜಕ್ಕೆ ಅನುಕೂಲವಾಗಿದೆ ಎಂದು ಅಭಿಪ್ರಾಯ ಪಟ್ಟರು. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಕಾರ್ಯಾರಂಭ ಮಾಡಿದ ಅಲ್ಪಾವಧಿಯಲ್ಲೇ ವ್ಯವಸ್ಥೆಯೊಳಗೇ ಯೋಜನೆಗಳನ್ನು ರೂಪಿಸಿ ಜಾರಿಗೆ […]

ನಿಗದಿತ ಅವಧಿಯ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಸಚಿವ ಸಿ.ಸಿ.ಪಾಟೀಲ್

Monday, September 6th, 2021
CC Pateela

ಬೆಂಗಳೂರು : ಶಿವಮೊಗ್ಗ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ತಿಳಿಸಿದರು. ಅವರು ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಶಿವಮೊಗ್ಗದಲ್ಲಿ 386 ಕೋಟಿ ರೂ. ವೆಚ್ಚದಲ್ಲಿ ಏರ್‌ ಬಸ್‌ ನಂತಹ ಬೃಹತ್ ವಿಮಾನಗಳು ಇಳಿಯಲು ಸಾಧ್ಯವಾಗುವಂತಹ ಸುಸಜ್ಜಿತ ವಿಮಾನ ನಿಲ್ದಾಣ ಕಾಮಗಾರಿ ನಿರೀಕ್ಷೆಯಂತೆ ನಡೆಯುತ್ತಿದೆ. ಮಳೆಯಿಂದಾಗಿ ಕಳೆದ ಎರಡು ತಿಂಗಳಲ್ಲಿ ಕಾಮಗಾರಿ ಸ್ವಲ್ಪ ನಿಧಾನವಾಗಿದ್ದರೂ, […]

ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ವಿಜಯ :  ಸಚಿವ ಡಾ.ಕೆ.ಸುಧಾಕರ್

Monday, September 6th, 2021
Sudhakar

ಬೆಂಗಳೂರು :  ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಅಭೂತಪೂರ್ವ ವಿಜಯ ಸಿಕ್ಕಿದೆ. ಸುಮಾರು 25 ವರ್ಷಗಳ ಬಳಿಕ ಸ್ವತಂತ್ರವಾಗಿ ಆಡಳಿತ ನಡೆಸುವಂತೆ ಮಾಡಿದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕ ಈ ಫಲಿತಾಂಶ ಬಂದಿದ್ದು, ಜನರು ಅವರ ನಾಯಕತ್ವ ಒಪ್ಪಿದ್ದಾರೆ. ಹಾಗೆಯೇ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉತ್ತಮ ಆಡಳಿತವನ್ನು ಜನತೆ ಮೆಚ್ಚಿದ್ದಾರೆ. ಹೀಗಾಗಿ ಈ ವಿಜಯ ಸುಲಭವಾಗಿ ದೊರೆತಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಹಾಗೂ ಕಲಬುರಗಿಯಲ್ಲೂ ಉತ್ತಮ ನಿರೀಕ್ಷೆ ಇದೆ. ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಐತಿಹಾಸಿಕ […]

ಷರತ್ತುಬದ್ಧ ಗಣೇಶೋತ್ಸವಕ್ಕೆ ಅನುಮತಿ: ಸಚಿವ ಆರ್ ಅಶೋಕ

Monday, September 6th, 2021
R Ashoka

ಬೆಂಗಳೂರು :  ಗಣೇಶ ವಿಸರ್ಜನೆಗೆ ಈ ಬಾರಿ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ. ವಿಸರ್ಜನೆಯ ಜಾಗದಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿರುತ್ತದೆ. ವಿಸರ್ಜನೆ ಮಾಡುವವರು ವಿಗ್ರಹವನ್ನ ನಿರ್ದಿಷ್ಟ ಸ್ಥಳದಲ್ಲಿ ಇರಿಸಬೇಕು. ಸಂಘಟಕರಿಗೆ ವಿಸರ್ಜನೆಗೆ ಅವಕಾಶ ಇರುವದಿಲ್ಲ. ನುರಿತ ಈಜುಗಾರರನ್ನ ಪಾಲಿಕೆ ವತಿಯಿಂದ ನೇಮಿಸಲಾಗಿದ್ದು, ಅವರೇ ಈ ಕಾರ್ಯವನ್ನು ಕೈಗೊಳ್ಳುತ್ತಾರೆ. ವಿಸರ್ಜನೆಯ ತಂಡದಲ್ಲಿ 20ಕ್ಕಿಂತ ಹೆಚ್ಚು ಜನ ಪಾಲ್ಗೊಳ್ಳ ಕೂಡದು. ಅದನ್ನ ಎಸಿಪಿ ದರ್ಜೆಯ ಅಧಿಕಾರಿ ಇದರ ನಿಗಾ ವಹಿಸಲಿದ್ದಾರೆ ಎಂದು  ಕಂದಾಯ ಸಚಿವ ಆರ್ ಅಶೋಕ ತಿಳಿಸಿದರು. “ಗಣೇಶನನ್ನ ಪ್ರತಿಷ್ಠಾಪಿಸಿರುವ […]

ಮಕ್ಕಳ ವ್ಯಕ್ತಿತ್ವ ವಿಕಸನ ಮಾಡುವ ಗುರುಗಳೇ ಶಿಕ್ಷಕರು: ಸಚಿವ ಡಾ.ಕೆ.ಸುಧಾಕರ್

Monday, September 6th, 2021
Teachers Day

  ಚಿಕ್ಕಬಳ್ಳಾಪುರ :  ಮಕ್ಕಳ ವ್ಯಕ್ತಿತ್ವ ವಿಕಸನ ಮಾಡುವ ಗುರುಗಳಾಗಿ ಶಿಕ್ಷಕರು ಕಾರ್ಯನಿರ್ವಹಿಸಬೇಕು. ಶಿಕ್ಷಕ ವೃತ್ತಿಯು ಕೇವಲ ವೇತನಕ್ಕೆ ಕೆಲಸ ಮಾಡುವ ಉದ್ಯೋಗವಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಜಿಲ್ಲಾಡಳಿತದಿಂದ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಸಚಿವರು, ಪೊಲೀಸರು, ವೈದ್ಯರ ಕೆಲಸ ವೇತನಕ್ಕಾಗಿ ಮಾಡುವುದಲ್ಲ. ಅದೇ ರೀತಿ ಶಿಕ್ಷಕ ವೃತ್ತಿ ಕೂಡ ಒಂದು ಸೇವೆ. ಶಿಕ್ಷಕರು ಸುಮಾರು 30-35 ವರ್ಷಗಳ ವೃತ್ತಿ ಬದುಕಿನಲ್ಲಿ ಸಾವಿರಾರು ವಿದ್ಯಾರ್ಥಿಗಳನ್ನು ನೋಡುತ್ತಾರೆ. ಆ ವಿದ್ಯಾರ್ಥಿಗಳಲ್ಲಿ ಅನೇಕರು […]

ರಾಜ್ಯದಲ್ಲಿ 5 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಅನುಮತಿ

Sunday, September 5th, 2021
Ganapathy

ಬೆಂಗಳೂರು: ರಾಜ್ಯದಲ್ಲಿ 5 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್‌ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪೊಲೀಸ್‌ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮೆರವಣಿಗೆ ಮತ್ತು ಸಾಂಸ್ಕೃತಿಕ […]