ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ: ಸಚಿವ ಹಾಲಪ್ಪ ಆಚಾರ್

Tuesday, August 24th, 2021
halappa

ಬೆಂಗಳೂರು : ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳಿಗೆ ಸರಕಾರ ಸೂಕ್ತವಾಗಿ ಸ್ಪಂದಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಶ್ರೀ ಹಾಲಪ್ಪ ಆಚಾರ್ ಹೇಳಿದ್ದಾರೆ. ಇಂದು ಖನಿಜ ಭವನದಲ್ಲಿ ಅಂಗನವಾಡಿ ಕಾರ್ಯಕರ್ತೆ ಯರ ಪ್ರತಿನಿಧಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಯರಿಗೆ ಈ ಭರವಸೆಯನ್ನು ನೀಡಲಾಯಿತು. ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಯರು ಬಹಳಷ್ಟು ಒಳ್ಳೆಯ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಲವಾರು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹಲವಾರು ಬಾರಿ ಪ್ರತಿಭಟನೆ ಹಾಗೂ […]

ಹು-ಧಾ ಪಾಲಿಕೆ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳನ್ನು ಬೆಂಬಲಿಸಿ : ದೀಪಕ ಶಿರೋಲಿಕರ

Tuesday, August 24th, 2021
deepaka

ಹುಬ್ಬಳ್ಳಿ : ಸದ್ಯ ನಡೆಯುತ್ತಿರುವ ಹು-ಧಾ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಎಲ್ಲ 82 ವಾರ್ಡ್‌ ನ ಅಭ್ಯರ್ಥಿಗಳನ್ನು ಆಯಾ ವಾರ್ಡ್‌ ಗಳಲ್ಲಿರುವ ನನ್ನ ಬೆಂಬಲಿಗರೊಂದಿಗೆ ಪ್ರಚಾರಕ್ಕಿಳಿದು ಗೆಲ್ಲಿಸಲು ಪ್ರಯತ್ನಿಸುತ್ತೇನೆ ಎಂದು ಮಹಾನಗರ ಜಿಲ್ಲಾ ಕಾಂಗ್ರೆಸ್‌ ಜಂಟಿ ಕಾರ್ಯದರ್ಶಿ, ಆರ್ಟಿಐ ಕಾರ್ಯಕರ್ತ, ಹಿರಿಯ ಸಮಾಜ ಸೇವಕ ದೀಪಕ ಶಿರೋಲಿಕರ ಹೇಳಿದ್ದಾರೆ. ಈ ಹಿಂದೆ‌, ಈಗಿನ ಮಹಾನಗರ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅನಿಲಕುಮಾರ್‌ ಪಾಟೀಲ ಅವರು ಕಾಂಗ್ರೆಸ್‌ ಪಕ್ಷದಿಂದ ಹು-ಧಾ ಮೇಯರ್‌ ಆಗಿದ್ದ ಸಂದರ್ಭದಲ್ಲಿ ಅವಳಿ ನಗರಗಳಲ್ಲಿ ಸಾಕಷ್ಟು […]

ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿಗಳಿಂದ ಚಾಲನೆ

Tuesday, August 24th, 2021
Vaccination

ಬೆಂಗಳೂರು : ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಕೇಂದ್ರ ಹಾಗೂ ಗಿವ್ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ್ದ ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ರಾಜಭವನದಲ್ಲಿ ಚಾಲನೆ ನೀಡಿದರು. ಸಾಂಕೇತಿಕವಾಗಿ ಇಬ್ಬರು ಮಹಿಳೆಯರಿಗೆ ವ್ಯಾಕ್ಸಿನ್ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಪರಾಷ್ಟ್ರಪತಿಗಳು, ಸಾರ್ವಜನಿಕರು ಮೈ ಮರೆಯಬಾರದು, ಕಡ್ಡಾಯವಾಗಿ ಆರು ಅಡಿ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸುವುದು, ಕೈ ತೊಳೆಯುಯುವುದನ್ನು ಕಡ್ಡಾಯವಾಗಿ ಪಾಲಿಸಬೇಕೆಂದರು. ವ್ಯಾಕ್ಸಿನ್ ಹಾಕಿಸಿಕೊಳ್ಳುವುದು […]

ಗ್ಲಾಮರ್ ಲೋಕವನ್ನು ಕಣ್ಣಮುಂದೆ ತಂದ ಮಿಸ್ಟರ್ & ಮಿಸ್ ಇಂಡಿಯಾ ಸೂಪರ್ ಮಾಡೆಲ್ 2021

Tuesday, August 24th, 2021
super model

ಬೆಂಗಳೂರು :  ನಗರದ ಖಾಸಗಿ ಹೋಟೆಲ್‌ನಲ್ಲಿ ಹೊಸ ಗ್ಲಾಮರ್ ಲೋಕವೇ ಸೃಷ್ಠಿಯಾಗಿತ್ತು. ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಸಂಕ್ಷಿಪ್ತ ವಿರಾಮದ ನಂತರ, ಇಂಡಿಯನ್ ಫಿಲಂ ಮೇಕರ್ಸ್ ನಟನೆ ಮತ್ತು ಮಾಡೆಲಿಂಗ್ ಇನ್ಸ್ಟಿಟ್ಯೂಟ್ ಆಯೋಜಿಸಿದ ಮಿಸ್ಟರ್ & ಮಿಸ್ ಇಂಡಿಯಾ ಸೂಪರ್ ಮಾಡೆಲ್ 2021 ರಲ್ಲಿ ಮುಂದಿನ ಭಾವಲೋಕದ ತಾರೆಯರು ಅತ್ಯಂತ ಉತ್ಸಾಹದಿಂದ ರಾಂಪ್ ಮೇಲೆ ನಡೆದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷ ಉಮೇಶ್ ಬಣಕಾರ, ಖ್ಯಾತ ಚಲನಚಿತ್ರ ನಿರ್ದೇಶಕ ಅನಂತರಾಜ್, ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆ ವಿಜೇತ […]

ಕ್ಯಾನ್ಸರ್ ಗೆ ರಿಯಾಯಿತಿ ದರದಲ್ಲಿ ಔಷಧ ದೊರಕಲು ಸೊಸೈಟಿ ಸ್ಥಾಪನೆಗೆ ಚಿಂತನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Monday, August 23rd, 2021
Blood Bank

ಬೆಂಗಳೂರು  : ಕ್ಯಾನ್ಸರ್ ಪೀಡಿತರಿಗೆ ಔಷಧಿಯ ವೆಚ್ಛ ಭರಿಸಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರದ ಸಹಯೋಗದಲ್ಲಿ ಕನಿಷ್ಠ ದರದಲ್ಲಿ ಚಿಕಿತ್ಸೆ ಕೊಡುವ ವ್ಯವಸ್ಥೆ ಕಲ್ಪಿಸಲು ಸೊಸೈಟಿಯನ್ನು ಸ್ಥಾಪನೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಕ್ಯಾನ್ಸರ್ ಸಮಶೊಧನಾ ಮತ್ತು ತರಬೇತಿ ಕೇಂದ್ರದಲ್ಲಿ ಇನ್ಫೋಸಿಸ್ ಪ್ರತಿಷ್ಠಾನ ನಿರ್ಮಿಸಿರುವ ಒ.ಪಿ.ಡಿ ಬ್ಲಾಕ್ ಹಾಗೂ ಇತರೆ ಸೌಲಭ್ಯಗಳ ಲೋಕಾರ್ಪಣೆ ಮಾಡಿ ಮಾತನಾಡುತ್ತಿದ್ದರು. ಸಿ.ಎಸ್.ಆರ್ ಹಾಗೂ ಸರ್ಕಾರದ ನಿಧಿಯನ್ನು ಬಳಸಿ […]

ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ ತೆರಿಗೆ ಪಾವತಿಸದೇ / ಮಾಲಿಕತ್ವ ಬದಲಾಯಿಸದೇ ಸಂಚರಿಸುತ್ತಿದ್ದ ಐಷಾರಾಮಿ ಕಾರುಗಳು ವಶ

Sunday, August 22nd, 2021
Car Seize

ಬೆಂಗಳೂರು : ಸಾರಿಗೆ ಅಧಿಕಾರಿಗಳು ಇಂದು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹಲವಾರು ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಐಷಾರಾಮಿ ಕಾರುಗಳನ್ನು ತೆರಿಗೆ ಕಟ್ಟದೆ – ಮಾಲಿಕತ್ವ ಬದಲಾಯಿಸಿಕೊಳ್ಳದೇ ಸಂಚರಿಸುತ್ತಿದ್ದ ಕಾರುಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಈ ಕಾರ್ಯಾಚರಣೆ ನಡೆಸಲಾಗಿದೆ. ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್‌ ನೇತೃತ್ವದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ರಾಜಣ್ಣ, ಮೋಟಾರ್‌ ವಾಹನ ನಿರೀಕ್ಷಕರಾದ ಸುಧಾಕರ್‌, ತಿಪ್ಪೇಸ್ವಾಮಿ, ವಿಶ್ವನಾಥ ಶೆಟ್ಟರ್‌, ರಂಜಿತ್‌, ರಾಜೇಶ್‌ ಮತ್ತು ರಾಜ್‌ ಕುಮಾರ್‌ ಅವರನ್ನ ಒಳಗೊಂಡ ತಂಡ ಇಂದು […]

ಮಂಗಳಮುಖಿಯರೊಂದಿಗೆ ರಕ್ಷಾ ಬಂಧನವನ್ನು ಆಚರಿಸಿದ ಶಿಕ್ಷಣ ತಜ್ಞ ಮತ್ತು ಸಮಾಜ ಸೇವಕ  ಡಾ ವಿನಯ್

Sunday, August 22nd, 2021
hubli

ಹುಬ್ಬಳ್ಳಿ : ಪ್ರಖ್ಯಾತ ಶಿಕ್ಷಣ ತಜ್ಞ ಮತ್ತು ಸಮಾಜ ಸುಧಾರಕ ಡಾ.ವಿನಯ್ ಅವರು ಮಂಗಳಮುಖಿಯರನ್ನು ತಮ್ಮ ನಿವಾಸಕ್ಕೆ ಆಹ್ವಾನಿಸುವ ಮೂಲಕ ರಕ್ಷಾ ಬಂಧನವನ್ನು ವಿಶೇಷವಾಗಿ ಆಚರಿಸಿಕೊಂಡರು. ಡಾ ವಿನಯ್ ಗೆ ರಾಖಿ ಕಟ್ಟಿದ ಮಂಗಳಮುಖಿಯರು ಅವರ ಈ ವಿಶಿಷ್ಟ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ ಪಡಿಸುವದರ ಜೊತೆಗೆ ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದರು. ನಂತರ ಮಾತನಾಡಿದ ಡಾ. ವಿನಯ್, “ರಕ್ಷಾ ಬಂಧನವು ಸಹೋದರ ಮತ್ತು ಸಹೋದರಿಯ ನಡುವಿನ ಸುಂದರ ಸಂಬಂಧವಾಗಿದೆ. ಸಮಾಜದಲ್ಲಿ ಆಗಾಗ್ಗೆ ತಪ್ಪಾಗಿ ಗ್ರಹಿಸಲ್ಪಟ್ಟ ಮಂಗಳಮುಖಿಗಳೊಂದಿಗೆ […]

ಕಂದಾಯ ಸಚಿವರಿಂದ ರಕ್ಷಾಬಂಧನ‌ ಆಚರಣೆ

Sunday, August 22nd, 2021
Rakshabandhan

ಬೆಂಗಳೂರು : ಭಾತೃತ್ವದ ಸಂಕೇತವಾಗಿರುವ‌ ರಕ್ಷಾಬಂಧನದ ನಿಮಿತ್ತ ಕಂದಾಯ ಸಚಿವ ಆರ್‌ ಅಶೋಕ‌ ಅವರು ಹೊಸಕೆರೆಹಳ್ಳಿಯಲ್ಲಿ‌ ಮಹಿಳಾ ಕಾರ್ಯಕರ್ತರಿಂದ ರಾಖಿ ಕಟ್ಟಿಸಿಕೊಂಡು ಶುಭ ಕೋರಿದರು. ಈ ವೇಳೆ ಮಾತನಾಡಿದ ಸಚಿವರು,”ಹಿಂದೂ ಸಂಪ್ರದಾಯದಲ್ಲಿ ರಕ್ಷಾ ಬಂಧನಕ್ಕೆ ಪೌರಾಣಿಕ ಹಿನ್ನೆಲೆಯಿದೆ. ಸಹೋದರಿಯ ರಕ್ಷಣೆಯ ಸೂಚಕವಾಗಿ ರಾಖಿ ಕಟ್ಟಿಸಿಕೊಳ್ಳುವ ಸಹೋದರ ಆ‌ ಮೂಲಕ ಆಕೆಗೆ ನಿರಂತರ ರಕ್ಷಣೆ ನೀಡುವ ಅಭಯ ಈ ಆಚರಣೆಯಲ್ಲಿ ಅಡಗಿದೆ”, ಎಂದು ಹೇಳಿದರು.

ಮಕ್ಕಳು ಆತಂಕಕ್ಕೆ ಒಳಗಾಗದೇ ಶಾಲೆಗಳಿಗೆ ಹಾಜರಾಗಲು ಮುಖ್ಯಮಂತ್ರಿಗಳ ಕರೆ

Sunday, August 22nd, 2021
Basavaraja Bommai

ಬೆಂಗಳೂರು : ಆಗಸ್ಟ್ 23 ರಿಂದ ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳು ಆತಂಕಕ್ಕೆ ಒಳಗಾಗದೇ ಶಾಲೆಗಳಿಗೆ ಹಾಜರಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ಇಂದು ಮುಖ್ಯಮಂತ್ರಿಗಳು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಿದ್ದರು. ಶಾಲೆ ಆರಂಭಕ್ಕೆ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗೆ ಸೂಕ್ತ ನಿರ್ದೇಶನ ನೀಡಲಾಗಿದೆ. ಮಕ್ಕಳನ್ನು ಶಾಲೆಗೆ ಕಳಿಸಲು ಪಾಲಕರ ಅನುಮತಿ, ಕೋವಿಡ್ ಸುರಕ್ಷತೆಯೊಂದಿಗೆ ಶಾಲೆಗಳಲ್ಲಿ ಕಲಿಕೆ, ಶಾಲೆಗಳನ್ನು ಸ್ಯಾನಿಟೈಸ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಪರ್ಯಾಯ […]

ಶಾಲೆಗಳನ್ನು ತೆರೆಯಲು ಎಲ್ಲಾ ಸುರಕ್ಷತೆಗಳನ್ನ ತೆಗೆದುಕೊಳ್ಳಲಾಗಿದೆ: ಆರ್ ಅಶೋಕ

Saturday, August 21st, 2021
R Ashoka

ಬೆಂಗಳೂರು  : ಸರ್ಕಾರ ಆಗಸ್ಟ್ 23ರಿಂದ ಭೌತಿಕವಾಗಿ ಒಂಬತ್ತು ಮತ್ತು ಹತ್ತನೇ ತರಗತಿಗಳನ್ನ ಆರಂಭಿಸಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಈಗಾಗಲೇ ಕೈಗೊಂಡಿರುವ ತಯಾರಿಗಳ ಕುರಿತು ಕಂದಾಯ ಸಚಿವ ಆರ್ ಅಶೋಕ ಮಾಹಿತಿ ನೀಡಿದರು. ಈ ವೇಳೆ ಮಾತನಾಡಿದ ಸಚಿವರು,”ಬೆಂಗಳೂರಿನಲ್ಲಿ ಬಿಬಿಎಂಪಿ ಶಾಲೆಗಳನ್ನು ತೆರೆಯುತ್ತದೆ. ಶಾಲೆಗಳಿಂದ ಕೋವಿಡ್ ಹರಡದಂತೆ ತಡೆಯಲು ಅಗತ್ಯವಿರುವ ಎಲ್ಲ ತಯಾರಿಗಳನ್ನ ಈಗಾಗಲೇ ಮಾಡಿಕೊಳ್ಳಲಾಗಿದೆ. ಶಾಲಾ ತರಗತಿಗಳಲ್ಲಿ ಮತ್ತು ಆವರಣಗಳಲ್ಲಿ ಕೋವಿಡ್ ನಿಯಮಾವಳಿಗಳನ್ನ ಕಡ್ಡಾಯವಾಗಿ ಪಾಲಿಸಲು ಅಗತ್ಯ ಕ್ರಮಗಳನ್ನ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ತುಂಬ ಯೋಚಿಸಿ ಈ […]