ಪ್ರಾಧಿಕಾರ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಕ್ರಮ – ಸಚಿವ ಸುನಿಲ್ ಕುಮಾರ್

Saturday, August 21st, 2021
SunilKumar

ಬೆಂಗಳೂರು :  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಬಲವರ್ಧನೆಗೆ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ,ಜೊತೆಗೆ ಅವು ಹೊಸ ದೃಷ್ಟಿಕೋನದಿಂದ ಕಾರ್ಯಕ್ರಮ ರೂಪಿಸಿ ಜಾರಿಗೆ ತರುವ ಮೂಲಕ ಸಂಸ್ಕೃತಿ ಕಟ್ಟುವ ಕೆಲಸಕ್ಕೆ ತೊಡಗಲು ಬೇಕಾದ ಎಲ್ಲಾ ಸಹಕಾರ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ […]

ಕ್ಷಯರೋಗ ಪರೀಕ್ಷೆಗೆ ಸ್ವಯಂಪ್ರೇರಿತರಾಗಿ ಮುಂದೆ ಬನ್ನಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Tuesday, August 17th, 2021
Sudhakar

  ಬೆಂಗಳೂರು :  ಕೋವಿಡ್ ನಿಂದ ಗುಣಮುಖರಾದವರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಕ್ಷಯರೋಗ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೋರಿದರು. ಆಗಸ್ಟ್ 31 ರವರೆಗೆ ನಡೆಯಲಿರುವ ಕ್ಷಯರೋಗ ಪತ್ತೆ ಆಂದೋಲನಕ್ಕೆ ವಿಧಾನಸೌಧದಲ್ಲಿ ಚಾಲನೆ ನೀಡಿ ಸಚಿವರು ಮಾತನಾಡಿದರು. ಕೋವಿಡ್ ಸೋಂಕಿನಿಂದ ಗುಣಮುಖರಾದವರಿಗೆ ಕ್ಷಯರೋಗ ಪತ್ತೆ ಮಾಡುವ ವಿನೂತನ ಕಾರ್ಯಕ್ರಮ ಮಾಡಲಾಗಿದೆ. ರಾಜ್ಯದಲ್ಲಿ 28 ಲಕ್ಷಕ್ಕೂ ಹೆಚ್ಚು ಜನರು ಕೋವಿಡ್ ನಿಂದ ಗುಣಮುಖರಾಗಿದ್ದು, ಅವರಲ್ಲಿ ಫಾಲೋ ಅಪ್ ಮಾಡಲಾಗುವುದು. ಕೋವಿಡ್ ಶ್ವಾಸಕೋಶಕ್ಕೆ ಹೆಚ್ಚು […]

ಪರಮಹಂಸದಂತೆ ಎತ್ತರಕ್ಕೆ ಏರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ

Tuesday, August 17th, 2021
Dr Raj

ಬೆಂಗಳೂರು : ಡಾ: ರಾಜ್ ಕುಮಾರ್ ಲರ್ನಿಂಗ್ ಆ್ಯಪ್ ಮೂಲಕ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಸರಸ್ವತಿಯ ಪಾವಿತ್ರ್ಯತೆಯನ್ನು ಹೊಂದಿ ಪರಮಹಂಸದಂತೆ ಬಹಳ ಎತ್ತರಕ್ಕೆ ಏರಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ರೂಪಿಸಲಾಗಿರುವ ಡಾ. ರಾಜ್ ಕುಮಾರ್ ಶೈಕ್ಷಣಿಕ ಆ್ಯಪ್ ನ್ನು ಇಂದು ಅವರು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. 21 ನೇ ಶತಮಾನ ಜ್ಞಾನವಂತರಿಗೆ ಸೇರಿದ್ದು. ಜ್ಞಾನಕ್ಕೆ ಬೆಲೆ ಹಾಗೂ ಬಲ ಬಂದಿದೆ. ಜ್ಞಾನದ ಕ್ಷೇತ್ರಕ್ಕೆ ಡಾ:ರಾಜ್ ಕುಮಾರ್ ಅವರ ಆಪ್ ದೊಡ್ಡ ಕೊಡುಗೆ ನೀಡಿದೆ ಎಂದ […]

ಡಿಸೆಂಬರ್ ವೇಳೆಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗವುದು: ಆರ್ ಅಶೋಕ

Tuesday, August 17th, 2021
R Ashoka

ಬೆಂಗಳೂರು : ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಕಂದಾಯ ಸಚಿವ ಆರ್ ಅಶೋಕ ಅವರು ಕಿಟ್ ವಿತರಣೆ ಹಾಗೂ ನಾನಾ ಅಭಿವೃದ್ಧಿ ಕಾರ್ಯಗಳಿಗೆ ಸೋಮವಾರ ಚಾಲನೆ ನೀಡಿದರು. ಈ ವೇಳೆ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯ ಆವರಣದಲ್ಲಿ ಸಾವಿರಕ್ಕೂ ಹೆಚ್ಚು ಶಾಲಾ ಸಿಬ್ಬಂದಿಗಳಿಗೆ ಸಚಿವರು ದಿನಸಿ ಕಿಟ್ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಅಶೋಕ,”ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ನಾನಾ ಕಠಿಣ ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ ಎಂಬ […]

ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Monday, August 16th, 2021
Kannada Books

ಬೆಂಗಳೂರು  : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 2021ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಕಡ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ […]

ಫಲಿತಾಂಶ ಮತ್ತು ಕಾರ್ಯಾನುಷ್ಠಾನ ಕೇಂದ್ರಿತ ಸರ್ಕಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Sunday, August 15th, 2021
Manik Sha

ಬೆಂಗಳೂರು : ನನ್ನ ಸರ್ಕಾರ ಫಲಿತಾಂಶ ಮತ್ತು ಕಾರ್ಯಾನುಷ್ಠಾನ ಕೇಂದ್ರಿತವಾಗಿರಲಿದೆ. ಸಮಾಜದ ಕೊನೆಯ ಹಂತದವರೆಗೆ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸಲು ಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೇಳಿದರು. 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದಿನಾಂಕ 15-8-2021ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿ ನಾಡಿನ ಜನತೆಗೆ ನೀಡಿದ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು. “ಅಭಿವೃದ್ಧಿ ಅಂದರೆ ಅಂಕಿ-ಅಂಶಗಳಲ್ಲ. ನಾಡಿನ ಪ್ರತಿಯೊಂದು ಕುಟುಂಬ, ಪ್ರತಿಯೊಬ್ಬ ವ್ಯಕ್ತಿಯ ಬದುಕು ಹಸನಾಗಬೇಕು. ಬದುಕಿನಲ್ಲಿ ಸುಖ, ಶಾಂತಿ, ನೆಮ್ಮದಿಯೊಂದಿಗೆ ಆರೋಗ್ಯ, […]

ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 , ಪಿಯುಸಿ ತರಗತಿ ಪ್ರಾರಂಭ

Sunday, August 15th, 2021
Basavaraja Bommai

ಬೆಂಗಳೂರು :  ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 , ಪಿಯುಸಿ ತರಗತಿ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲ್ಲೂಕಿನಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಶಾಲೆಗಳಲ್ಲಿ ಶೇ. 2ಕ್ಕಿಂತ ಹೆಚ್ಚು ಪ್ರಕರಣ ವರದಿಯಾದರೆ, […]

ರಾಜ್ಯದ ಮುನ್ನಡೆಯ ಬಗ್ಗೆ ಸರ್ಕಾರದ ಚಿಂತನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Sunday, August 15th, 2021
basavaraja Bommai

ಬೆಂಗಳೂರು :  “75ನೇ ಸ್ವಾತಂತ್ರ್ಯೋತ್ಸವ ಆಚರಿಸುವ ಸೌಭಾಗ್ಯ ಒದಗಿಬಂದಿದೆ. ಕನ್ನಡ ನಾಡು, ನುಡಿ, ಸಾಹಿತ್ಯ, ಆಡಳಿತ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ದೇಶದಲ್ಲೇ ಮಾದರಿಯಾಗಿದೆ. 75 ವರ್ಷ ನಡೆದು ಬಂದ ದಾರಿ, ಇನ್ನೂ ನಡೆಯಬೇಕಾದ ದಾರಿಯ ಬಗ್ಗೆ ಚಿಂತನೆ ಮಾಡಬೇಕಿದೆ. ನಮ್ಮ ಸರ್ಕಾರ ಕೂಡ ಅದೇ ದಿಕ್ಕಿನಲ್ಲಿ ಚಿಂತನೆ ಮಾಡುತ್ತಿದೆ”- ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು “ಕೋವಿಡ್ ಮಾರ್ಗಸೂಚಿ ಪ್ರಕಾರ, ಅಂತರ ಕಾಪಾಡಿಕೊಂಡು ಸ್ವಾತಂತ್ರ್ಯ ದಿನ […]

ಪುಷ್ಪ ಬೆಳೆಗಾರರ ಆದಾಯ ಕಿತ್ತುಕೊಂಡ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ನಿಷೇಧವನ್ನು ಕೂಡಲೇ ಹಿಂಪಡೆಯಿರಿ

Thursday, August 12th, 2021
Flower Marchant

ಬೆಂಗಳೂರು :  ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ಬಳಸಬಾರದು ಎಂದಿರುವುದು ಮೊದಲೇ ಲಾಕ್ ಡೌನ್ ಮತ್ತು ಯಾವುದೇ ಸಮಾರಂಭಗಳಿಲ್ಲದೆ ಆರ್ಥಿಕ ಸಂಕಷ್ಟಕ್ಕೊಳಗಾದ ರಾಜ್ಯದ ಪುಷ್ಪ ಬೆಳೆಗಾರ ರೈತರ ಮೇಲೆ ಮಾಡಿದ ಗಧಾಪ್ರಹಾರ ಎಂದು  ಪುಷ್ಪ ಬೆಳೆಗಾರರು ಹಾಗೂ ಮಾರಾಟಗಾರರ ಸಂಘಟನೆಗಳು ಪ್ರತಿಭಟನೆಗೆ ಇಳಿದಿದೆ. ಕೆಲ ದಿನಗಳ ಹಿಂದೆ ವಿ.ಸುನಿಲ್ ಕುಮಾರ್ ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯ ನೂತನ ಸಚಿವರು ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ವೆಸ್ಟ್, ಅದರ ಬದಲು […]

ದೇಸಿ ಕ್ರೀಡೆಗಳ ಮೂಲಕ ಕಳೆ ಕಟ್ಟಿದ ಮಿಸೆಸ್ ಇಂಡಿಯಾ ಕರ್ನಾಟಕ ಸ್ಪರ್ಧೆ

Wednesday, August 11th, 2021
Miss India

ಬೆಂಗಳೂರು : ಹೆಂಗಳೆಯರಲ್ಲಿನ ಪ್ರತಿಭೆಗೆ ಅತ್ಯುತ್ತಮ ವೇದಿಕೆ ಕಲ್ಪಿಸಿ ಕೊಡುವ ಮಿಸೆಸ್ ಇಂಡಿಯಾ ಕರ್ನಾಟಕ ಸ್ಪರ್ಧೆಯ ಫೈನಲ್ ಹಣಾಹಣಿ ಶುರುವಾಗಿದ್ದು, ಎರಡನೇ ದಿನದಲ್ಲಿ ದೇಸಿ ಕ್ರೀಡೆಗಳು ಸ್ಪರ್ಧಿಗಳಲ್ಲಿನ ಕ್ರೀಡಾ ಕವಶಲ್ಯಗಳನ್ನ ಒರಗೆ ಹಚ್ಚುವಲ್ಲಿ ನೆರವಾದವು. ಕ್ರೀಡೆಯನ್ನ ಆಡಿಸುವ ಮೂಲಕ ತೀರ್ಪುಗಾರರು ಸ್ಪರ್ಧಿಗಳಲ್ಲಿನ ಚಾತುರ್ಯತೆ, ಸಂಘಟನಾ ಶಕ್ತಿ, ಸಮಯೋಚಿತ ನಿರ್ಧಾರಗಳನ್ನ ತೆಗೆದುಕೊಳ್ಳುವ ಕೌಶಲ್ಯಗಳನ್ನೆಲ್ಲಾ ವಿಶ್ಲೇಷಿಸಿದರು. ಸ್ಪೋಟ್ರ್ಸ್ ಥೀಮ್ ಫೊಟೋ ಶೂಟ್ನಲ್ಲಿ ಸ್ಪರ್ಧಿಗಳು ದೇಸಿ ಕ್ರೀಡೆಗಳಾದ ಲಗೋರಿ, ಖೋ..ಖೋ.., ಗಿಲ್ಲಿ ದಾಂಡು ಸೇರಿದಂತೆ ಫುಟ್ಬಾಲ್, ಕ್ರಿಕೇಟ್, ಲಾನ್ ಟೆನ್ನಿಸ್, ಬಾಸ್ಕೆಟ್ […]