ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮಕ್ಕಳ ಆಸ್ಪತ್ರೆ: ಆರ್ ಅಶೋಕ್

Tuesday, August 10th, 2021
RAshoka

ಬೆಂಗಳೂರು  : ಎಲ್ಲಾ ವಿಧಾನಸಭಾ ಕ್ಷೇತ್ರ ಗಳಲ್ಲಿ ಮಕ್ಕಳ ಆಸ್ಪತ್ರೆಗಳನ್ನು ಪ್ರಾರಂಭಿಲಾಗುವುದು ಎಂದು ಕಂದಾಯ ಸಚಿವ ಅಶೋಕ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯ ಸರ್ಕಾರವು ಸಂಭವನೀಯ ಮೂರನೇ ಅಲೆಯನ್ನು ತಡೆಗಟ್ಟಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಕರ್ನಾಟಕ ವಿಪತ್ತು ನಿರ್ವಹಣಾ ಕಾಯ್ದೆಯಡಿ, ಕಂದಾಯ ಇಲಾಖೆಯು ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರ ಗಳಲ್ಲಿ ಮಕ್ಕಳ ಆಸ್ಪತ್ರೆಗಳನ್ನು ಸ್ಥಾಪಿಸಲು ಹಣವನ್ನು ಬಿಡುಗಡೆ ಮಾಡಲಿದೆ. ಮಕ್ಕಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ತರಬೇತಿ ನೀಡಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ಎಲ್ಲಾ […]

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ : ಸಿಎಂ ಆದೇಶ

Tuesday, August 10th, 2021
bouquet

ಬೆಂಗಳೂರು : ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ, ಶೀಘ್ರವೇ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಅವರು ತಿಳಿಸಿದರು. ಆದೇಶ ಪ್ರಕಟ ಸಿಎಂ ಈ ಆದೇಶವನ್ನು ಮೌಖಿಕವಾಗಿ ಹೇಳಿದ ತಕ್ಷಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ […]

ಎಸ್ಸೆಸ್ಸೆಲ್ಸಿ ಫಲಿತಾಂಶ : ಎಲ್ಲರೂ ಪಾಸ್, ಓರ್ವ ವಿದ್ಯಾರ್ಥಿ ಫೇಲ್

Monday, August 9th, 2021
Nagesh

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು  2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶವನ್ನು ಇಂದು ಪ್ರಕಟಿಸಿದ್ದು, ಓರ್ವ ವಿದ್ಯಾರ್ಥಿ ಹೊರತಾಗಿ ಎಲ್ಲ ವಿದ್ಯಾರ್ಥಿಗಳೂ ಪಾಸ್ ಆಗಿದ್ದಾರೆ ಎಂದು ಹೇಳಿದರು. ಫಲಿತಾಂಶ ಕುರಿತು ಸೋಮವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶೇ. 99.9 ಮಕ್ಕಳು ಪಾಸ್ ಆಗಿದ್ದಾರೆ. ಕರೊನಾ ಹಿನ್ನೆಲೆ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡುವುದಾಗಿ ನಿರ್ಧರಿಸಿದ್ದೆವು. ಆದರೆ, ಪರೀಕ್ಷೆಯಲ್ಲಿ ಒಬ್ಬ ವಿದ್ಯಾರ್ಥಿನಿ ಬದಲಿ ಪರೀಕ್ಷೆ ಬರೆದು ಡಿಬಾರ್ ಆಗಿದ್ದ […]

ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಸಿಎಂ

Monday, August 9th, 2021
CM Mysuru

ಮೈಸೂರು : ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ, ಶಾಸಕರಾದ ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ರೇಣುಕಾಚಾರ್ಯ, ಮತ್ತಿತರ ಗಣ್ಯರು  ಉಪಸ್ಥಿತರಿದ್ದರು.

ಕೋವಿಡ್ ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಭೇಟಿ

Monday, August 9th, 2021
Basavaraja Bommai

ಬೆಂಗಳೂರು: ಸೋಂಕು ಹೆಚ್ಚಾಗಿರುವ ರಾಜ್ಯದ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದ ಬಳಿ ಮೈಸೂರಿಗೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು. ನಾನು ಇಂದು ಮೈಸೂರಿಗೆ ಭೇಟಿ ನೀಡುತ್ತಿದ್ದೇನೆ. ಮೈಸೂರು ಜಿಲ್ಲೆಯಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ. ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲನೆ ನಡೆಸುತ್ತೇನೆ. ಕೋವಿಡ್ ಸೋಂಕು ಹೆಚ್ಚಾಗಿರುವ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು […]

ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸಿದ ನೆಹರು- ಬಸವರಾಜ ಬೊಮ್ಮಾಯಿ

Sunday, August 8th, 2021
Bommai

ಬೆಂಗಳೂರು :  ಸ್ವತಂತ್ರ ಭಾರತ ದೇಶದ ಮೊದಲ ಪ್ರಧಾನಮಂತ್ರಿಯಾಗಿ ಜವಾಹರಲಾಲ್ ನೆಹರೂ ಅವರು ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ತಿಳಿಸಿದರು. ಇಂದು ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆಗೊಂಡ ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರೂ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರಿಗೆ ಅವರು ಪ್ರತಿಕ್ರಿಯೆ ನೀಡಿ ಮಾತನಾಡುತ್ತಿದ್ದರು. ರಾಷ್ಟ್ರದ ಆಡಳಿತದ ಚುಕ್ಕಾಣಿಯನ್ನು ಬ್ರಿಟಿಷರಿಂದ ಭಾರತಕ್ಕೆ ತೆಗೆದುಕೊಂಡು ಮುಂದಿನ ಆಡಳಿತವನ್ನು ನಡೆಸುವಲ್ಲಿ ಮಹತ್ವದ ಪಾತ್ರ […]

ಚಿತ್ರಕಲಾ ಪರಿಷತ್ತಿನಲ್ಲಿ ಬೆಂಗಳೂರು ಉತ್ಸವಕ್ಕೆ ಚಾಲನೆ

Sunday, August 8th, 2021
Chitrakala-Utsava

ಬೆಂಗಳೂರು : ಕರೋನಾ ಲಾಕ್‌ಡೌನ್‌ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವವರಲ್ಲಿ ಕರಕುಶಲ ಕರ್ಮಿಗಳೂ ಒಬ್ಬರು. ಸರಿಯಾದ ಮಾರುಕಟ್ಟೆ ಇಲ್ಲದೆ ತೊಂದರೆಗೆ ಸಿಲುಕಿರುವ ಕುಶಲಕರ್ಮಿಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಇಂದಿನಿಂದ 10 ದಿನಗಳ ಕಾಲ ಆಯೋಜಿಸಲಾಗಿರುವ ಬೆಂಗಳೂರು ಉತ್ಸವಕ್ಕೆ ಚಾಲನೆ ನೀಡಲಾಯಿತು. ಬೆಂಗಳೂರು ಉತ್ಸವಕ್ಕೆ ಚಾಲನೆ ನೀಡಿದ ನಟಿ ಭೂಮಿ ಶೆಟ್ಟಿ ಮಾತನಾಡಿ, ಕರೋನಾ ಕಾಲದಲ್ಲಿ ಎಲ್ಲರಿಗೂ ಸಂಕಷ್ಟ ಅನುಭವಿಸಿದ್ದಾರೆ. ಅದರಲ್ಲೂ ಕರಕುಶಲಕರ್ಮಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ತೊಂದರೆಗೀಡಾಗಿದ್ದರು. ಅವರಿಗೆ […]

ಗೃಹಿಣಿಯರ ಪ್ರತಿಭೆಗೆ ಅವಕಾಶ ಕಲ್ಪಿಸುವ ಮಿಸೆಸ್ ಇಂಡಿಯಾ ಕರ್ನಾಟಕ ಫಿನಾಲೆ

Sunday, August 8th, 2021
mrs India

ಬೆಂಗಳೂರು : ಸದಾ ಸಂಸಾರದ ರಥ ಸಾಗಿಸುವಲ್ಲಿಯೇ ಕಳೆದುಹೋದ ಹೆಂಗಳೆಯರ ಆತ್ಮಸ್ಥೈರ್ಯವನ್ನು ಹೆಚ್ಚಿಸಿ ಅವರಲ್ಲಿನ ಪ್ರತಿಭೆಗೊಂದು ವೇದಿಕೆ ಕಲ್ಪಿಸಿ ಕೊಡುವ ಮಿಸೆಸ್ ಇಂಡಿಯಾ ಕರ್ನಾಟಕ ಅಂತಿಮ ಹಣಾಹಣಿಗೆ ಕ್ಷಣಗಣನೆ ಆರಂಭವಾಗಿದೆ. ಮಿಸೆಸ್ ಇಂಡಿಯಾ ಕರ್ನಾಟಕದ ನಿರ್ದೇಶಕಿ ಪ್ರತಿಭಾ ಸಂಶಿಮಠ ಅವರ ನೇತೃತ್ವದಲ್ಲಿ ಪ್ರತಿ ವರ್ಷವೂ ಅದ್ಧೂರಿಯಾಗಿ ನೆರವೇರುವ ಮಿಸೆಸ್ ಇಂಡಿಯಾ ಕರ್ನಾಟಕ ಫೈನಲ್ ಸ್ಪರ್ಧೆಯು ಈ ಬಾರಿ ಮೂರು ದಿನಗಳ ಕಾಲ ಅಂದರೆ ಆಗಸ್ಟ್ 9, 10 ಮತ್ತು 11ರಂದು ಆಯೋಜನೆಗೊಂಡಿದ್ದು, ನಗರದ ಯಲಹಂಕದಲ್ಲಿನ ರಮಡಾ ಹೋಟೆಲ್ […]

ನಿಗದಿತ ಅವಧಿಯೊಳಗೆ ಜಲಜೀವನ್ ಮಿಷನ್ ಅಭಿಯಾನ ಮುಗಿಸುವಂತೆ ಅಧಿಕಾರಿಗಳಿಗೆ ಬಿಸಿಪಿ ಸೂಚನೆ

Sunday, August 8th, 2021
bc pateel

ಹಾವೇರಿ : ಕೇಂದ್ರ ಸರಕಾರದ  ಮಹತ್ವಾಕಾಂಕ್ಷಿ ಯೋಜನೆಯಾದ “ಜಲಜೀವನ್ ಮಿಷನ್” ಅನ್ನು ನಿಗದಿತ ಅವಧಿಯೊಳಗೆ ಮುಗಿಸುವಂತೆ ಹಾವೇರಿ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನಲ್ಲಿ ರಾಜ್ಯದ ಗ್ರಾಮೀಣ ಭಾಗದ ಪ್ರತಿಮನೆಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ “ಜಲಜೀವನ್ ಮಿಷನ್ ಯೋಜನೆ”ಗೆ ಕೃಷಿ ಸಚಿವರೂ ಆಗಿರುವ ಹಾವೇರಿ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲರಿಂದು ಹಿರೇಕೆರೂರು ಮತಕ್ಷೇತ್ರದ ರಟ್ಟಿಹಳ್ಳಿ,ಇಂಗಳಗೊಂದಿ ,ಸತ್ತಗಿಹಳದಳಿ, ಶಿರಗಂಬಿ ಗ್ರಾಮಗಳಲ್ಲಿ ಭೂಮಿಪೂಜೆ ನೆರವೇರಿಸಿದರು. ಭೂಮಿ ಪೂಜೆ ನೆರವೇರಿಸಿ ಈ ಸಂದರ್ಭದಲ್ಲಿ ಮಾತನಾಡಿದ […]

ನಿಜಲಿಂಗಪ್ಪನವರ ಉತ್ತಮ ಆಡಳಿತ ಆದರ್ಶಪ್ರಾಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Sunday, August 8th, 2021
Nijalingappa

ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ನಿಜಲಿಂಗಪ್ಪ ಅವರು ನೀಡಿದ ಉತ್ತಮ ಆಡಳಿತ ನಮಗೆ ಆದರ್ಶಪ್ರಾಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ. ಎಸ್.ಬೊಮ್ಮಾಯಿ ತಿಳಿಸಿದರು. ಮಾಜಿ ಮುಖ್ಯಮಂತ್ರಿ ದಿ.ಎಸ್.ನಿಜಲಿಂಗಪ್ಪನವರ ಪುಣ್ಯಾತಿಥಿಯಂದು ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡುತ್ತಿದ್ದರು. ರಾಜ್ಯ ಕಂಡಂತ ಧೀಮಂತ ನಾಯಕ ನಿಜಲಿಂಗಪ್ಪ ಅವರು ಕರ್ನಾಟಕದ ಏಕೀಕರಣದಲ್ಲಿ ಬಹಳ ದೊಡ್ಡ ಪಾತ್ರವನ್ನು ವಹಿಸಿದ್ದರು. ಉತ್ತರ ಮತ್ತು ದಕ್ಷಿಣ ಕರ್ನಾಟಕದ ಸೇತುವೆಯಾಗಿ ರಾಜ್ಯದ ಮುಖ್ಯಮಂತ್ರಿಯಾಗಿ ಕಾವೇರಿ, ಕೃಷ್ಣಾ ಮುಂತಾದ ಪ್ರಮುಖ ನೀರಾವರಿ ಯೋಜನೆಗಳ ಚಿಂತಕ ಹಾಗೂ […]