ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ನೀಡುವಂತೆ ಗೋವಿಂದ ಕಾರಜೋಳ ಸೂಚನೆ

Sunday, August 8th, 2021
Karajola

ಮುಧೋಳ್ : ಪ್ರವಾಹದಿಂದ ಬಾದಿತವಾದ ಪ್ರದೇಶಗಳಲ್ಲಿ ತೀವ್ರ ನಿಗಾವಹಿಸಿ, ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಲಸಂಪನ್ಮೂಲ ಸಚಿವರಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮುಧೋಳ್ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿಂದು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೈಗೊಂಡ ಕ್ರಮಗಳು ಮತ್ತು ಕೋವಿಡ್ 19 ಸೋಂಕು ನಿಯಂತ್ರಣ ಕುರಿತ ಸಭೆಯಲ್ಲಿ ನಡೆಸಿ ಮಾತನಾಡಿದ ಅವರು, ಪ್ರವಾಹ ಪೀಡಿತ ಪ್ರದೇಶಗಳ ಎಲ್ಲಾ ಅರ್ಹ ಸಂತ್ರಸ್ತರಿಗೆ ಪರಿಹಾರ ಧನವನ್ನು ನೀಡಬೇಕು. ಮಾರ್ಗಸೂಚಿಯನ್ವಯ ಪರಿಹಾರ ದನ ನೀಡಬೇಕು. ರಸ್ತೆ, ಸೇತುವೆ ಸಂಪರ್ಕ […]

ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆ ಅಗತ್ಯ: ಕಂದಾಯ ಸಚಿವ

Sunday, August 8th, 2021
R Ashoka

ಮಂಗಳೂರು  : ನಮ್ಮನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗಿಡಲು ಕ್ರೀಡೆಗಳು ಅತ್ಯಗತ್ಯ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಭಾನುವಾರ ಕುಮಾರಸ್ವಾಮಿ ಲೇಔಟ್‌ನ ಕಾರ್ಮೆಲ್ ಶಾಲಾ ಮೈದಾನದಲ್ಲಿ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ಯುವಕರು ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಆಟಗಳಿಗೆ ಆದ್ಯತೆ ನೀಡಬೇಕು ಮತ್ತು ಸೋಲು ಗೆಲುವನ್ನು ಕ್ರೀಡಾ ಮನೋಭಾವದಿಂದ ತೆಗೆದುಕೊಳ್ಳಬೇಕು” ಎಂದು ಸಲಹೆ ನೀಡಿದರು. ಬಿಎಚ್‌ಸಿಎಸ್ ಲೇಔಟ್‌ನಲ್ಲಿ ಅಳವಡಿಸಿದ ಸಿಸಿಟಿವಿಗಳನ್ನು ಉದ್ಘಾಟಿಸಿದ ಆರ್ ಅಶೋಕ್ ಕಂದಾಯ ಸಚಿವ ಆರ್ ಅಶೋಕ ಭಾನುವಾರ […]

ನವದೆಹಲಿಯ ಕರ್ನಾಟಕ ಭವನದಲ್ಲಿ ಖಾಲಿಯಿರುವ ವಿವಿಧ ವೃಂದದ ಹುದ್ದೆಗಳಿಗೆ ಆಯ್ಕೆ ಪಟ್ಟಿ ಪ್ರಕಟ

Saturday, August 7th, 2021
Karnataka Bhavan

ಬೆಂಗಳೂರು : ನವದೆಹಲಿಯ ಕರ್ನಾಟಕ ಭವನದಲ್ಲಿ ದಿನಾಂಕ:20-02-2021ರ ಅಧಿಸೂಚನೆಯಲ್ಲಿ ನವದೆಹಲಿಯ ಕರ್ನಾಟಕ ಭವನದಲ್ಲಿ ಖಾಲಿ ಇರುವ ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳನ್ನು (ಉಳಿಕೆ ವೃಂದದ 25 ಹಾಗೂ ಹೈದ್ರಾಬಾದ್ ಕರ್ನಾಟಕ ವೃಂದದ 7 ಹುದ್ದೆ ಒಟ್ಟು 32 ಹುದ್ದೆಗಳು) ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗಾಗಿ ಹಾಗೂ ಪ್ರಾವೀಣ್ಯತೆ ಪರೀಕ್ಷೆಗಳಿಗಾಗಿ (ಅನ್ವಯಿಸುವ ಹುದ್ದೆಗಳಿಗೆ ಮಾತ್ರ) 1:5 ಅನುಪಾತದಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು www.karnatakabhavan.karnataka.gov.in ರಲ್ಲಿ ದಿನಾಂಕ: 14-07-2021 […]

ಪ್ರಗತಿ ಪಿ. ಮೂಕಯ್ಯನಮಠ ಸಿಬಿಎಸ್ಸಿಯಲ್ಲಿ ಉತ್ತಮ ಸಾಧನೆ

Saturday, August 7th, 2021
Pragathi

ಹುಬ್ಬಳ್ಳಿ  : ಸ್ಥಳೀಯ ಗೋಕುಲ ರಸ್ತೆಯ ಮಂಜುನಾಥ ನಗರದ ಕೆಎಲ್‌ಇ ಆಂಗ್ಲ ಮಾಧ್ಯಮ ಶಾಲೆಯ ಸಿಬಿಎಸ್ಸಿ 10 ನೇ ತರಗತಿಯಲ್ಲಿ ವಿದ್ಯಾರ್ಥಿನಿ ಪ್ರಗತಿ ಪಿ. ಮೂಕಯ್ಯನಮಠ ಶೇ.91.4 ರಷ್ಟು ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ. ಇವಳ ಸಾಧನೆಗೆ ಶಾಲೆಯ ಪ್ರಾಚಾರ್ಯರು, ಶಿಕ್ಷಕರು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ. ವರದಿ: ಶಂಭು. ಮೆಗಾಮೀಡಿಯ ನ್ಯೂಸ್‌ ಬ್ಯುರೋ.

ಬಸವರಾಜ ಬೊಮ್ಮಾಯಿ ಸರ್ಕಾರದ ಸಚಿವ ಸಂಪುಟದ ಖಾತೆಗಳ ವಿವರ ಇಲ್ಲಿದೆ ನೋಡಿ

Saturday, August 7th, 2021
Basavaraja Bommai

ಬೆಂಗಳೂರು :   ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರದ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಯಡಿಯೂರಪ್ಪ ಅವರ ಅವಧಿಯಲ್ಲಿ ಸಚಿವರಾಗಿದ್ದ ಅನೇಕರಿಗೆ ಬೊಮ್ಮಾಯಿ ಸರಕಾರದಲ್ಲಿಯೂ ಅದೇ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ ಮೊದಲ ಬಾರಿಗೆ ರಾಜ್ಯ ಸಂಪುಟದಲ್ಲಿ ಸ್ಥಾನ ಪಡೆದಿರುವ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ನೀಡಲಾಗಿದೆ. ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರಿಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ನೀಡಲಾಗಿದೆ. ಸಚಿವ ಸಂಪುಟ […]

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಮಹಾರಾಷ್ಟ್ರ ನೀರಾವರಿ ಸಚಿವ

Friday, August 6th, 2021
Maharastra

ಬೆಂಗಳೂರು : ಮಹಾರಾಷ್ಟ್ರ ರಾಜ್ಯದ ನೀರಾವರಿ ಸಚಿವ ಜಯಂತ್ ಪಾಟೀಲ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಸಭೆಯ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಎರಡೂ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣ, ನಿರ್ವಹಣೆ ಮತ್ತು ಮೇಲ್ವಿಚಾರಣೆ ಮಾಡುವ ಕುರಿತು ಚರ್ಚಿಸಲಾಯಿತು. ಉಭಯ ರಾಜ್ಯಗಳ ಜಂಟಿ ಯೋಜನೆಯಾದ ದೂದ್ ಗಂಗಾ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆಯ ೩ ನೇ ಹಂತದ ಬಗ್ಗೆಯೂ ವಿಷದವಾಗಿ ಚರ್ಚಿಸಲಾಗಿತು. ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ […]

ಕೋವಿಡ್ ನಿಯಂತ್ರಣಕ್ಕೆ ಎಂಟು ಜಿಲ್ಲೆಗಳಲ್ಲಿ `ವೀಕೆಂಡ್ ಕರ್ಫ್ಯೂ’ವನ್ನು ಜಾರಿ

Friday, August 6th, 2021
Basavaraja Bommai

ಬೆಂಗಳೂರು : ಕರ್ನಾಟಕ ರಾಜ್ಯದ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿಯಿಂದಲೇ `ವೀಕೆಂಡ್ ಕರ್ಫ್ಯೂ’ವನ್ನು ಜಾರಿಗೊಳಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಎಂಟು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ 9ಗಂಟೆಯಿಂದಲೇ ಸೋಮವಾರ ಬೆಳಗ್ಗೆ 5ಗಂಟೆಯ ವರೆಗೆ ವಾರಂತ್ಯದ ಕರ್ಪ್ಯೂ ಜಾರಿಯಲ್ಲಿರಲಿದೆ. ಮಾರ್ಗಸೂಚಿ ಪಾಲಿಸಿ ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಸೇರಿದಂತೆ ಇತರೆ ಧಾರ್ಮಿಕ ಸ್ಥಳಗಳಲ್ಲಿ ಪೂಜೆ, […]

ಕೋವಿಡ್ ನಿಂದ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ₹1 ಲಕ್ಷ ಪರಿಹಾರ ವಿತರಿಸಿದ ಸಚಿವ ಡಾ.ಕೆ.ಸುಧಾಕರ್

Thursday, August 5th, 2021
Sudhakar

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಪ್ರಮಾಣ ನಿಯಂತ್ರಣದಲ್ಲಿದ್ದು, ಮೂರನೇ ಅಲೆಯ ಆತಂಕವಿಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್ ನಿಂದ ತಮ್ಮವರನ್ನು ಕಳೆದುಕೊಂಡ ಕುಟುಂಬಕ್ಕೆ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ನಿಂದ ‘ಆಸರೆ’ ಕಾರ್ಯಕ್ರಮದಡಿ 1 ಲಕ್ಷ ರೂ. ಸಹಾಯಧನ ವಿತರಣೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು. ನೊಂದ ಕುಟುಂಬಗಳ‌ ಮನೆಗೆ ಭೇಟಿ ಕೊಟ್ಟ ಸಚಿವರು ಪರಿಹಾರದ ಮೊತ್ತವನ್ನು ವಿತರಿಸಿ ಸಾಂತ್ವನ ನೀಡಿದರು. ಚಿಕ್ಕಬಳ್ಳಾಪುರ ಜನತೆಯ ಆಶೀರ್ವಾದದಿಂದ ಎರಡನೇ […]

ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಮುಖ್ಯಮಂತ್ರಿಗಳ ಭೇಟಿ

Thursday, August 5th, 2021
Bjp office

ಬೆಂಗಳೂರು :  ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದರು. ಬಿಜೆಪಿ ಕಚೇರಿಯಲ್ಲಿನ ಭಾರತ ಮಾತೆಯ ಭಾವಚಿತ್ರ ಹಾಗೂ ಶ್ರೀ ಜಗನ್ನಾಥರಾವ್ ಜೋಶಿ ಅವರ ಪುತ್ಥಳಿಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಸಿಹಿ ತಿನ್ನಿಸಿ ಶುಭ ಕೋರಿದರು.

ಮುಖ್ಯಮಂತ್ರಿ ಭೇಟಿ ಮಾಡಿದ ಬ್ರಿಟಿಷ್ ಹೈ ಕಮಿಷನರ್- ವಿವಿಧ ಕ್ಷೇತ್ರಗಳಲ್ಲಿ ಸಹಕಾರ ಕುರಿತು ಚರ್ಚೆ

Thursday, August 5th, 2021
British

ಬೆಂಗಳೂರು :  ಭಾರತದ ಬ್ರಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಬಲಪಡಿಸುವ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದ ಹೂಡಿಕೆದಾರ ಸ್ನೇಹಿ ವಾತಾವರಣದ ಸದುಪಯೋಗ ಪಡೆಯುವಂತೆ ಮುಖ್ಯಮಂತ್ರಿಗಳು ಬ್ರಿಟಿಷ್ ಹೈ ಕಮಿಷನರ್ ಅವರಿಗೆ ಸಲಹೆ ಮಾಡಿದರು. ಕರ್ನಾಟಕ ಅತ್ಯಂತ ಪ್ರಗತಿ ಪರ ರಾಜ್ಯವಾಗಿದ್ದು, ಹೂಡಿಕೆಗೆ ಅತ್ಯುತ್ತಮ ಪೂರಕ ವಾತಾವರಣ ಹೊಂದಿದೆ. ಕೈಗಾರಿಕೋದ್ಯಮಗಳ ಸ್ಥಾಪನೆಗೆ ತ್ವರಿತ ಅನುಮೋದನೆ ನೀಡುವ ವ್ಯವಸ್ಥೆ ಜಾರಿಯಲ್ಲಿದೆ.ತಂತ್ರಜ್ಞಾನ, ಶಿಕ್ಷಣದಲ್ಲಿ […]