ಕೂಲಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

Tuesday, July 24th, 2018
protest

ಧಾರವಾಡ: ರೈತರು, ಕೂಲಿ ಕಾರ್ಮಿಕರ ಬೇಡಿಕೆ ಹಾಗೂ ಬೆಳೆವಿಮೆ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು. ಬ್ಯಾಂಕ್ ಅಧಿಕಾರಿಗಳು ಬೆಳೆವಿಮೆ ಹಣವನ್ನು ರೈತರ ಸಾಲಕ್ಕೆ ಜಮಾ ಮಾಡುತ್ತಿದ್ದಾರೆ. ಅದನ್ನು ನೇರವಾಗಿ ರೈತರಿಗೆ ನೀಡಬೇಕು. ಸಣ್ಣ ,ಅತಿ ಸಣ್ಣ ರೈತ ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಸರ್ಕಾರಿ ಉದ್ಯೋಗ ಮೀಸಲಾತಿ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ರೈತರ ಬೆಳೆಸಾಲ […]

ಬುದ್ಧಿಮಾಂದ್ಯ ಯುವಕನನ್ನು ತಾಯಿ ಮಡಿಲಿಗೆ ಸೇರಿಸಲು ಯುವಕರ ಹರಸಾಹಸ

Tuesday, July 24th, 2018
disordered

ಶಿವಮೊಗ್ಗ: ತೀರಾ ಹೀನಾಯ ಸ್ಥಿತಿಯಲ್ಲಿದ್ದ ಬುದ್ಧಿಮಾಂದ್ಯ ಯುವಕನೋರ್ವನನ್ನು ಸಾಗರದ ನಗರಸಭೆ ಸದಸ್ಯ ತೌಸ್ರಿಫ್ ಹಾಗೂ ಮತ್ತವರ ಗೆಳೆಯರು ಎಂಬುವರು ಶುಶ್ರೂಷೆ ಮಾಡಿ, ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಎಲ್ಲಿಂದಲೋ ಸಾಗರ ನಗರಕ್ಕೆ ಬಂದಿದ್ದ ಈತ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಓಡಾಡುತ್ತಿದ್ದ. ಆತನ ಮೈಯಿಂದ ದುರ್ವಾಸನೆ ಬರುತ್ತಿತ್ತು. ಮೈಮೇಲೆ ಗಾಯಗಳಾಗಿ ಹುಳುಗಳು ಹತ್ತಿದ್ದವು. ಇದೇ ಕಾರಣಕ್ಕೆ ಆತ ಎಲ್ಲರಿಂದಲೂ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ. ಊಟವಿಲ್ಲದೆ ನಿತ್ರಾಣಗೊಂಡಿದ್ದ ಇವನಿಗೆ ಊಟ ನೀಡಿ, ಸ್ವಚ್ಛಗೊಳಿಸಿ, ಚಿಕಿತ್ಸೆ ಕೊಡಿಸಿದ್ದರಿಂದ ಇದೀಗ ಚೇತರಿಸಿಕೊಂಡಿದ್ದಾನೆ. ಸೂಕ್ತ […]

ಗ್ರಹಣದ ಮುನ್ನಾದಿನ ತಿರುಪತಿಗೆ ತೆರಳಲಿದೆ ದೇವೇಗೌಡರ ಕುಟುಂಬ..!

Tuesday, July 24th, 2018
revanna

ಬೆಂಗಳೂರು: ಜುಲೈ 27 ರಂದು ಸಂಭವಿಸಲಿರುವ ಚಂದ್ರಗ್ರಹಣದ ಹಿನ್ನೆಲೆಯಲ್ಲಿ, ಗ್ರಹಣದ ಮುನ್ನಾದಿನ (ಜುಲೈ 26) ರಂದು ಗುರುವಾರ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ ಎನ್ನಲಾಗ್ತಿದೆ. ಈಗಾಗಲೇ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ಹೆಚ್. ಡಿ. ಕುಮಾರಸ್ವಾಮಿ ಅವರು ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದ್ದರು. ಅದೇ ರೀತಿ ಸಿಎಂ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅವರೊಂದಿಗೆ ತಿರುಪತಿ ತೆರಳಿ, ತಿಮ್ಮಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ […]

ಓಟ್ ಹಾಕುವಾಗ ಕುಮಾರಸ್ವಾಮಿ ಯಾಕೆ ನೆನಪಿಗೆ ಬರಲಿಲ್ಲ: ಎಚ್‌ಡಿ ಕುಮಾರಸ್ವಾಮಿ

Tuesday, July 24th, 2018
kumarswamy

ರಾಮನಗರ: ಸಂಪೂರ್ಣ ಸಾಲಮನ್ನಾ ವಿಚಾರವಾಗಿ ಪ್ರತ್ಯೇಕ ರಾಜ್ಯಕ್ಕೆ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರ ವಿರುದ್ಧ ಸಿಎಂ ಎಚ್‌ಡಿ ಕುಮಾರಸ್ವಾಮಿ ಚಾಟಿ ಬೀಸಿದ್ದು, ಸಂಪೂರ್ಣ ಸಾಲ ಮನ್ನಾಗೆ ಬೇಡಿಕೆಯಿಡುವವರಿಗೆ ಓಟ್ ಹಾಕುವಾಗ ಕುಮಾರಸ್ವಾಮಿ ಯಾಕೆ ನೆನಪಿಗೆ ಬರಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಜೆಡಿಎಸ್ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡ ವೇಳೆ ಮಾತನಾಡಿದ ಅವರು ಸಾಲ ಮನ್ನಾ ಮಾಡಿ ಅಂತ ರಸ್ತೆಯಲ್ಲಿ ಕೂರುವವರು ಅಂದು ಜಾತಿಭ್ರಮೆ ಬಿಟ್ಟು, ಹಣದ ವ್ಯಾಮೋಹ ಬಿಟ್ಟು, ಓಟು ಹಾಕಿದ್ರೆ ಇಂದು […]

ಗೌರಿ ಲಂಕೇಶ್ ಹತ್ಯೆ ಪ್ರಕರಣ..ಮತ್ತಿಬ್ಬರ ಆರೋಪಿಗಳ ಬಂಧನ!

Monday, July 23rd, 2018
gouri-lankesh

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹುಬ್ಬಳ್ಳಿ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಹುಬ್ಬಳ್ಳಿ ನಿವಾಸಿಗಳಾದ ಅಮಿತ್ ರಾಮಚಂದ್ರ ಮತ್ತು ಗಣೇಶ್ ಮಿಸ್ಕಿ ಬಂಧಿತ ಆರೋಪಿಗಳು. ಇಬ್ಬರನ್ನೂ ಎಸ್ಐಟಿ ಕಚೇರಿಯಲ್ಲಿ ಅಧಿಕಾರಿಗಳು ವಿಚಾರಣೆಗಾಗಿ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದರು. ವಿಚಾರಣೆ ವೇಳೆ ಗೌರಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳು ಭಾಗಿಯಾಗಿರುವ ಬಗ್ಗೆ ಎಸ್ಐಟಿ ಅಧಿಕಾರಿಗಳಿಗೆ ಖಚಿತಪಟ್ಟ ಹಿನ್ನೆಲೆಯಲ್ಲಿ ಇಬ್ಬರನ್ನೂ ಬಂಧನಕ್ಕೊಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. […]

ಚನ್ನಪಟ್ಟಣ ಮತ್ತು ರಾಮನಗರ ಕ್ಷೇತ್ರ ನನಗೆ ಎರಡು ಕಣ್ಣುಗಳು ಇದ್ದ ಹಾಗೆ: ಹೆಚ್.ಡಿ.ಕುಮಾರಸ್ವಾಮಿ

Monday, July 23rd, 2018
ramnagara

ರಾಮನಗರ: ಚನ್ನಪಟ್ಟಣ ಮತ್ತು ರಾಮನಗರ ಈ ಎರಡೂ ಕ್ಷೇತ್ರ ನನಗೆ ಎರಡು ಕಣ್ಣುಗಳು ಇದ್ದ ಹಾಗೆ. ಚನ್ನಪಟ್ಟಣ ಕ್ಷೇತ್ರದ ಜನತೆ ಋಣ ನನ್ನ ಮೇಲೆ ಇದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಜವಾಬ್ದಾರಿ ನನ್ನ ಮೇಲಿದೆ. ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರಕ್ಕೆ 24 ಗಂಟೆ ಕುಡಿಯುವ ನೀರು ಒದಗಿಸಲಾಗುವುದು. ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಹಾಗಾಗಿ ಮುಂದಿನ ಸೆಪ್ಟೆಂಬರ್‌ ತಿಂಗಳವರೆಗೆ ಬಿಡಬೇಕಿದ್ದ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲಾಗಿದೆ. ಇದರಿಂದಾಗಿ ಸದ್ಯಕ್ಕೆ ಕಾವೇರಿ ನೀರಿನ ಹಂಚಿಕೆ […]

ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಉಚಿತ ಬಸ್‌ಪಾಸ್‌: ಎಚ್‌.ಡಿ. ಕುಮಾರಸ್ವಾಮಿ

Monday, July 23rd, 2018
kumarswamy

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಉಚಿತ ಬಸ್‌ಪಾಸ್‌ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ಸೋಮವಾರ ನಡೆದ ಜೆಡಿಎಸ್‌ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಉಚಿತ ಬಸ್‌ಪಾಸ್‌ ನೀಡಲಾಗುತ್ತದೆ, ಖಾಸಗಿ ಶಾಲೆ ಮಕ್ಕಳು 50 ರಿಂದ 1 ಲಕ್ಷ ರೂ. ನೀಡಿ ಶಾಲೆಗೆ ಹೋಗುತ್ತಾರೆ ಅವರಿಗೆ ಬಸ್‌ಚಾರ್ಜ್‌ ನೀಡುವುದು ಕಷ್ಟವಾಗುವುದಿಲ್ಲ ಎಂದು ಸ್ವಲ್ಪ ಖಾರವಾಗಿಯೇ ನುಡಿದಿದ್ದಾರೆ. ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್‌ ನೀಡುವಂತೆ ಹಲವು ದಿನಗಳಿಂದ […]

ದೇಶದಲ್ಲಿ ಉತ್ತಮ ಆಡಳಿತ ನೀಡುವ ರಾಜ್ಯಗಳಲ್ಲಿ ಕರ್ನಾಟಕ ನಾಲ್ಕನೇ ಸ್ಥಾನ..!

Monday, July 23rd, 2018
vidhana-souda

ಬೆಂಗಳೂರು: ದೇಶದಲ್ಲಿ ಉತ್ತಮ ಆಡಳಿತ ನೀಡುವ ರಾಜ್ಯಗಳಲ್ಲಿ ಕರ್ನಾಟಕ ನಾಲ್ಕನೇ ಸ್ಥಾನ ಪಡೆದಿದೆ. ಪಕ್ಕದ ಕೇರಳ ಪ್ರಥಮ ಸ್ಥಾನ ಪಡೆದರೆ, ಬಿಹಾರ ಕೊನೆ ಸ್ಥಾನದಲ್ಲಿದೆ. ಬೆಂಗಳೂರು ಮೂಲದ ಪಬ್ಲಿಕ್ ಅಫೇರ್ಸ್ ಸೆಂಟರ್ (ಪಿಎಸಿ) ಉತ್ತಮ ಆಡಳಿತದ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2016ರಿಂದಲೂ ಪಿಎಸಿ ಅತ್ಯುತ್ತಮ ಆಡಳಿತ ನಡೆಸುವ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದೆ. ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಯನ್ನು ಆಧರಿಸಿ, ಲಭ್ಯವಾದ ದತ್ತಾಂಶಗಳ ಚೌಕಟ್ಟಿನಲ್ಲಿ ರಾಜ್ಯಗಳ ಆಡಳಿತವನ್ನು ಈ ಸಂಸ್ಥೆ ಪಟ್ಟಿ ಮಾಡುತ್ತಿದೆ. ಕಳೆದ ಮೂರು […]

ಜನ‌ ನಮ್ಮ ವಿರುದ್ಧ ತಿರುಗಿ ಬಿದ್ದಿಲ್ಲ, ನಮ್ಮನ್ನು ‌ಒಪ್ಪಿಕೊಂಡಿದ್ದಾರೆ: ದಿನೇಶ್ ಗುಂಡೂರಾವ್

Saturday, July 21st, 2018
dinesh-gundu-rao

ಬೆಂಗಳೂರು: ಜನ‌ ನಮ್ಮ ವಿರುದ್ಧ ತಿರುಗಿ ಬಿದ್ದಿಲ್ಲ. ನಮ್ಮನ್ನು ‌ಒಪ್ಪಿಕೊಂಡಿದ್ದಾರೆ. ಆದರೂ ಪ್ರಜಾಪ್ರಭುತ್ವದಲ್ಲಿ ಸಂಖ್ಯೆ ಮುಖ್ಯ. ಅನಿವಾರ್ಯವಾಗಿ ಸಮ್ಮಿಶ್ರ ಸರ್ಕಾರ ರಚಿಸಿದ್ದೇವೆ. ಲೋಕಸಭೆಯಲ್ಲಿಯೂ ಉತ್ತಮ ಕೆಲಸ ಮಾಡಿ ಹೆಚ್ಚು ಸ್ಥಾನ ಗೆಲ್ಲಿಸಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪದಾಧಿಕಾರಿಗಳಿಗೆ ಕರೆ ನೀಡಿದ್ದಾರೆ. ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಕಾಂಗ್ರೆಸ್ಗೆ ಸವಾಲಾಗಿದೆ. ಡಿಸೆಂಬರ್ನಲ್ಲಿ ಲೋಕಸಭೆಗೆ ಚುನಾವಣೆ ಬರಬಹುದು‌. ಬಹುತೇಕ ಅಕ್ಟೋಬರ್ ಮೊದಲ ವಾರದಲ್ಲಿ ಅಧಿಸೂಚನೆಯಾಗಲಿದೆ ಎಂದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷೆಯಷ್ಟು ಸ್ಥಾನ […]

ಡಿ.ಕೆ.ಶಿವಕುಮಾರ್ ಅತ್ಯಾಪ್ತ ಬೆಂಬಲಿಗರ ಜೊತೆಗೆ ಶಬರಿ ಮಲೆಗೆ ಪಯಣ..!

Saturday, July 21st, 2018
shivkumar

ರಾಮನಗರ: ಸಚಿವ ಡಿ.ಕೆ.ಶಿವಕುಮಾರ್ ತಮ್ಮ ಹುಟ್ಟೂರಿನ ಅತ್ಯಾಪ್ತ ಬೆಂಬಲಿಗರ ಜೊತೆಗೆ ಶಬರಿ ಮಲೆಗೆ ಪಯಣ ಬೆಳೆಸಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ಗ್ರಾಮದಿಂದ ಸಚಿವರು ಪ್ರಯಾಣ ಆರಂಭಿಸಿದ್ದಾರೆ. ನಿನ್ನೆ ಸಿಎಂ ಕುಮಾರಸ್ವಾಮಿ ಜೊತೆ ಕೆಆರ್ಎಸ್ಗೆ ಬಾಗಿನ ಅರ್ಪಿಸಿದ ನಂತರ ಮೈಸೂರಿನಲ್ಲಿ ಅಯ್ಯಪ್ಪನ ಮಾಲೆ ಧರಿಸಿ ಶಬರಿ ಮಲೆಗೆ ತಡರಾತ್ರಿ ಡಿಕೆಶಿ ಹೊರಟಿದ್ದಾರೆ. ಐಟಿ ಅಧಿಕಾರಿಗಳಿಂದ ಮುಕ್ತಗೊಂಡರೆ ಶಬರಿ ಮಲೆಗೆ ಬರೋದಾಗಿ ಹರಕೆ ಹೊತ್ತಿದ್ದ ಡಿಕೆಶಿ, ಈಗ ಹರಕೆ ತೀರಿಸಲು ಬೆಂಬಲಿಗರೊಂದಿಗೆ ಹೊರಟಿದ್ದಾರೆ. ಡಿಕೆಶಿ ಜೊತೆಗೆ ಅವರ […]