ನಾಲ್ಕು ಜನ ದರೋಡೆ ಕೋರರ ತಂಡದಿಂದ ರಾತ್ರಿ ವೇಳೆ ಹೈವೇ ದರೋಡೆ

Friday, July 2nd, 2021
Highway Loot

ಗದಗ : ನಾಲ್ಕು ಜನ ದರೋಡೆ ಕೋರರ ತಂಡವೊಂದು ಹೈವೇ ಪೆಟ್ರೋಲ್ ಬಂಕ್ ಬಳಿ ರಾತ್ರಿ ನಿಲ್ಲಿಸಿದ ವಾಹನಗಳ ಮೇಲೆ ದಾಳಿಮಾಡುತ್ತಿರುವ ಘಟನೆ ಜಿಲ್ಲೆಯ ಮುಂಡರಗಿ ಹೊರವಲಯದಲ್ಲಿ ನಡೆದಿದೆ. ತಡರಾತ್ರಿ ನಿದ್ರೆ ಬರುತ್ತಿದ್ದಂತೆ ಬಂಕ್ ಹಾಗೂ ಡಾಬಾ ಬಳಿ ವಾಹನಗಳನ್ನು ನಿಲ್ಲಿಸಿ ರೆಸ್ಟ್ ಮಡುವ ವೇಳೆ ದಾಳಿ ಮಾಡುತ್ತಿರುವ ದೃಶ್ಯ ಅರಭಾವಿ-ಚಳ್ಳಕೆರೆ ರಾಜ್ಯ ಹೆದ್ದಾರಿಯ ಮುಂಡರಗಿ ಹೊರವಲಯದ ವಿರೇಶ್ ಎಂಟರ್ ಪ್ರೈಸಸ್ ಪೆಟ್ರೋಲ್ ಬಂಕ್ ಬಳಿ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜರ್ಕಿನ್ ಹಾಕಿಕೊಂಡು ಮುಖಕ್ಕೆ ಮಂಕಿ ಕ್ಯಾಪ್, ಅಥವಾ ಕರವಸ್ತ್ರ ಕಟ್ಟಿಕೊಂಡು […]

ಕಾಳಿ ನದಿಯಿಂದ ಆಹಾರ ಅರಸಿ ಗ್ರಾಮಕ್ಕೆ ಬಂದ ಬೃಹತ್ ಮೊಸಳೆ

Friday, July 2nd, 2021
Crocodile

ಕಾರವಾರ: ದಾಂಡೇಲಿಯ ಕಾಳಿ ನದಿ ಪಕ್ಕದಲ್ಲೇ ಇರುವ ಕೊಗಿಲಬನ ಗ್ರಾಮಕ್ಕೆ ಆಹಾರ ಅರಸಿ ಮೊಸಳೆಯೊಂದು ನುಗ್ಗಿದ ಘಟನೆ ಗುರುವಾರ ನಡೆದಿದೆ. ಕಾಳಿ ನದಿಯಿಂದ ಆಹಾರ ಅರಸಿ ನದಿ ದಡಕ್ಕೆ ಬಂದ ಬೃಹದಾಕಾರದ ಮೊಸಳೆಯು ದಾಂಡೇಲಿಯ ರಸ್ತೆಯಲ್ಲಿ ಸಂಚರಿಸಿದೆ. ಮೊಸಳೆಯನ್ನು ನೋಡಿದ ಗ್ರಾಮದ ಜನರು ಬೆಚ್ಚಿ ಬಿದ್ದಿದ್ದು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ ಗ್ರಾಮದ ರಸ್ತೆಯಲ್ಲಿ ವಾಕ್ ಮಾಡಿದ ಮೊಸಳೆ ಅರಣ್ಯಾಧಿಕಾರಿಗಳು ಬರುವುದರೊಳಗೆ ಗ್ರಾಮವನ್ನು ದಾಟಿ ಕಾಡಿನ ಹಾದಿ ಮೂಲಕ ಮತ್ತೆ ನದಿಗೆ ಸೇರಿಕೊಂಡಿದೆ. ದಾಂಡೇಲಿಯ ಕಾಳಿ ನದಿಯಲ್ಲಿ […]

ಶಿಕ್ಷಕರ ವರ್ಗಾವಣೆಗೆ ಚಾಲನೆ : ಸುರೇಶ್ ಕುಮಾರ್

Friday, July 2nd, 2021
Suresh-Kumar

ಬೆಂಗಳೂರು: ರಾಜ್ಯದ ಶಿಕ್ಷಕ ಸಮೂಹದ ಬಹುದಿನಗಳ ನಿರೀಕ್ಷೆಯಾಗಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಬುಧವಾರ ಅಧಿಸೂಚನೆ ಹೊರಡಿಸಲಾಗಿದ್ದು, ಶಿಕ್ಷಕರು ಕೌನ್ಸೆಲಿಂಗ್ ಮೂಲಕ ತಮಗೆ ಅನುಕೂಲವಾದ ಸ್ಥಳ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. 2019-20ನೇ ಸಾಲಿನ ಸಾಮಾನ್ಯ ವರ್ಗಾವಣೆಗಳಲ್ಲಿನ ಕಡ್ಡಾಯ ವರ್ಗಾವಣೆ, ವಲಯ ವರ್ಗಾವಣೆಯ ಮೇಲೆ ಅಥವಾ ಸಮರ್ಪಕ ಮರು ಹಂಚಿಕೆಯ ಮೇರೆಗೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಂಬಂಧಿಸಿದಂತೆ ತಾಲೂಕಿನ ಹೊರಗೆ ಅಥವಾ ಪ್ರೌಢಶಾಲಾ ಶಿಕ್ಷಕರಿಗೆ ಸಂಬಂಧಿಸಿದಂತೆ ಜಿಲ್ಲೆಯ […]

ಜಿ ಎಸ್ ಟಿ ಯಶಸ್ಸಿಗೆ ತೆರಿಗೆ ಸಲಹೆಗಾರರ ಕೊಡುಗೆ ಅಪಾರ

Friday, July 2nd, 2021
GST Pay

ಹುಬ್ಬಳ್ಳಿ: ಸರಕು ಮತ್ತು ಸೇವಾ ತೆರಿಗೆ ( GST )ವ್ಯವಸ್ಥೆ ದೇಶದಲ್ಲಿ ಯಶಸ್ವಿಯಾಗಲು ತೆರಿಗೆ ಸಲಹೆಗಾರರ ಕೊಡುಗೆ ಅಪಾರವಾಗಿದೆ ಎಂದು ಜಿಎಸ್ಟಿ ಮಂಡಳಿಯ ಕರ್ನಾಟಕದ ಪ್ರತಿನಿಧಿ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಗುರುವಾರ ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘ ಆಯೋಜಿಸಿದ್ದ ನಾಲ್ಕನೇ ವರ್ಷದ ಜಿಎಸ್ಟಿ ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ವರ್ಚುವಲ್ ಮೂಲಕ ಅವರು ಮಾತನಾಡಿದರು. ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆ ಬಗ್ಗೆ […]

ಆರೋಗ್ಯ ಸೌಧದಲ್ಲಿ ಹುತಾತ್ಮ ವೈದ್ಯರ ಸ್ಮಾರಕ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಘೋಷಣೆ

Friday, July 2nd, 2021
Arogya Soudha

ಬೆಂಗಳೂರು :  ಕೋವಿಡ್ ವಿರುದ್ಧದ ಹೋರಾಟದಲ್ಲಿ ಮಡಿದ ವೈದ್ಯರನ್ನು ಪ್ರತಿ ವರ್ಷ ಸ್ಮರಿಸಲು ಆರೋಗ್ಯ ಸೌಧದ ಆವರಣದಲ್ಲಿ ವೈದ್ಯರ ಸ್ಮಾರಕ ನಿರ್ಮಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಆರೋಗ್ಯ ಸೌಧದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಯುದ್ಧದಲ್ಲಿ ಮಡಿದ ಸೈನಿಕರನ್ನು ಮಾತ್ರ ಹುತಾತ್ಮರು ಎಂದು ಕರೆಯಲಾಗುತ್ತದೆ. ದೇಶದಲ್ಲಿ 700 ಕ್ಕೂ ಅಧಿಕ ವೈದ್ಯರು ಕೋವಿಡ್ ಕರ್ತವ್ಯದಲ್ಲಿ ಸಾವನ್ನಪ್ಪಿದ್ದಾರೆ. ವೈದ್ಯರು, ಆರೋಗ್ಯ ಸಿಬ್ಬಂದಿ ಕೋವಿಡ್ ವಿರುದ್ಧದ ಯುದ್ಧದಲ್ಲಿರುವುದರಿಂದ ಅವರನ್ನು ಯೋಧರು ಎಂದು […]

ಲಿಥಿಯನ್‌ -ಅಯಾನ್‌ ಸೆಲ್‌ ಉತ್ಪಾದನಾ ಕ್ಷೇತ್ರದ ಪ್ರಮುಖ ಕಂಪನಿ ಸಿ4ವಿ ಯಿಂದ ರಾಜ್ಯದಲ್ಲಿ 4 ಸಾವಿರ ಕೋಟಿಗಳ ಹೂಡಿಕೆಗೆ ಒಪ್ಪಂದ

Thursday, July 1st, 2021
batteries

  ಬೆಂಗಳೂರು : ಲಿಥಿಯನ್‌ -ಅಯಾನ್‌ ಸೆಲ್‌ ಉತ್ಪಾದನಾ ಕ್ಷೇತ್ರದ ಪ್ರಮುಖ ಕಂಪನಿಯಾಗಿರುವ ಅಮೇರಿಕಾದ ಸಿ4ವಿ ಇಂದು ರಾಜ್ಯದಲ್ಲಿ 4 ಸಾವಿರ ಕೋಟಿ ರೂಪಾಯಿಗಳ ಹೂಡಿಕೆ ಮಾಡಲು ಮುಂದಾಗಿರುವುದು, ರಾಜ್ಯದ ಎಲೆಕ್ಟ್ರಿಕ್‌ ಸೆಲ್‌ ಉತ್ಪಾದನಾ ಕ್ಷೇತ್ರದಲ್ಲಿ ಪ್ರಮುಖ ಮೈಲಿಗಲ್ಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಶ್ರೀ ಜಗದೀಶ್‌ ಶೆಟ್ಟರ್‌ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ವಿಶ್ವದ ಪ್ರಮುಖ ಲಿಥಿಯನ್‌ -ಅಯಾನ್‌ ಸೆಲ್‌ (Li-Ion) ಸೆಲ್‌ ಉತ್ಪಾದನಾ ಕಂಪನಿಯ ಪ್ರತಿನಿಧಿಗಳೊಂದಿಗೆ ಒಡಂಬಡಿಕೆಯ ನಂತರ ಮಾತನಾಡಿದ ಅವರು, ಸಿ4ವಿ […]

ಸುದ್ದಿ ಬಿತ್ತರಿಸುವ ಭರದಲ್ಲಿ ಸಾರ ಮರೆಯದಿರಿ: ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

Thursday, July 1st, 2021
Press Day

ಬೆಂಗಳೂರು :  ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದು ಎಂಬ ಎಚ್ಚರವೂ ಇಂದು ಅಗತ್ಯ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿಮಾತನಾಡಿದರು. ಸುಮಾರು ಎರಡು ಶತಮಾನಗಳ ಹಿಂದೆ ಹರ್ಮನ್ ಮೊಗ್ಲಿಂಗ್ ಪ್ರಾರಂಭ ಮಾಡಿದ ಮಂಗಳೂರು ಸಮಾಚಾರ ಕನ್ನಡದ ಮೊತ್ತ ಮೊದಲ ಪತ್ರಿಕೆ. […]

ಮುಖ್ಯಮಂತ್ರಿಗಳಿಗೆ 40 ಐ.ಸಿ.ಯು ಹಾಸಿಗೆಗಳು ಹಾಗೂ ವೈದ್ಯಕೀಯ ಉಪಕರಣಗಳ ಹಸ್ತಾಂತರ

Thursday, July 1st, 2021
medical equipment

ಬೆಂಗಳೂರು : ವಿವಿಧ ಕಂಪನಿಗಳ ವತಿಯಿಂದ 40 ಐಸಿಯು ಹಾಸಿಗೆಗಳನ್ನು ಹಾಗೂ ವೈದ್ಯಕೀಯ ಉಪಕರಣಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಹಸ್ತಾಂತರ ಮಾಡಲಾಯಿತು. ಸಿ.ಐ.ಐ, ಎಂಬೆಸ್ಸಿ, 3 ಎಂ, ಸ್ವಿಸ್ ರೇ, ಕ್ಯಾಪಿಟಲ್ ಲ್ಯಾಂಡ್ ಹೋಪ್ ಪೌಂಡೇಷನ್ ಆಕ್ಸಾ, ಐಕೆಮಾ ಸಂಸ್ಥೆಗಳು ತಮ್ಮ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ 40 ಐಸಿಯು ಹಾಸಿಗೆಗಳು ಹಗೂ ವೈದ್ಯಕೀಯ ಉಪಕರಣಗಳನ್ನು ಒದಗಿಸಿರುವುದು ಶ್ಲಾಘನೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕೋವಿಡ್ ವಿರುದ್ಧದ ಹೋರಾಟದಲ್ಲಿ ವಿವಿಧ ಸಂಘ ಸಂಸ್ಥೆಗಳು ಮತ್ತು ಕಂಪನಿಗಳು ಸರ್ಕಾರದೊಂದಿಗೆ […]

ಕಾರ್ಕಳದ ಜಾಗೃತಿ ಫೌಂಡೇಶನ್ ವತಿಯಿಂದ ರಾಜ್ಯಾದ್ಯಂತ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ

Thursday, July 1st, 2021
jagruti-foundation

ಬೆಂಗಳೂರು  :  ಕಾರ್ಕಳದ ಜಾಗೃತಿ ಫೌಂಡೇಶನ್ ಮತ್ತು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ರವರ ಸಹಯೋಗದಲ್ಲಿ ಕರ್ನಾಟಕ ರಾಜ್ಯದ ಎಲ್ಲ 6090 ಗ್ರಾಮ ಪಂಚಾಯತ್ ಗಳಲ್ಲಿ ವನಮೋಹತ್ಸವ ಆಚರಣೆ ಮಾಡಿ ಪರಿಸರದ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಮಾನ್ಯ ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿರಾದ ಕೆ.ಎಸ್.ಈಶ್ವರಪ್ಪರವರು ವಿಧಾನಸೌಧದ ಮೂರನೇ ಮಹಡಿಯ 314ರಲ್ಲಿ ಗುರುವಾರ ಅಧಿಕೃತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರು ಮಾತನಾಡಿ ಜಾಗೃತಿ ಫೌಂಡೇಶನ್ ಕಾರ್ಕಳ ಮತ್ತು ಕ್ಷೇಮಾಭೀವೃದ್ಧಿ ಸಂಘದವರು ಹಮ್ಮಿಕೊಂಡಿರುವ ಕೆಲಸ […]

ನೀತಿ ಆಯೋಗದ ಎಸ್.ಜಿ.ಡಿ ಸೂಚ್ಯಂಕದಲ್ಲಿ ಸುಧಾರಿಸಿದ ಕರ್ನಾಟಕದ ಸ್ಥಾನ

Tuesday, June 29th, 2021
SDG

ಬೆಂಗಳೂರು : ವಿಶ್ವ ಸಂಸ್ಥೆಯು ನಿಗದಿಪಡಿಸಿರುವ ಸುಸ್ಥಿರ ಅಭಿವೃದ್ಧಿ ಗುರಿಗಳು- 2030 ರ ಸಾಧನೆ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ನೀತಿ ಆಯೋಗದ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು. ನೀತಿ ಆಯೋಗದ ಸುಸ್ಥಿರ ಅಭಿವೃದ್ಧಿ ಗುರಿ ಸೂಚ್ಯಂಕದಲ್ಲಿ ರಾಜ್ಯದ ಅಂಕ ಹಾಗೂ ಸ್ಥಾನದಲ್ಲಿ ಗಣನೀಯ ಸುಧಾರಣೆ ಆಗಿರುವ ಬಗ್ಗೆ ನೀತಿ ಆಯೋಗದ ಅಧಿಕಾರಿಗಳು ತೃಪ್ತಿ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ರಾಜ್ಯವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ಬಗ್ಗೆ ಆದ್ಯತೆ ನೀಡಬೇಕಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಗರ್ಭಿಣಿಯರು ಹಾಗೂ ಮಕ್ಕಳ […]