ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಎತ್ತಿನಹೊಳೆ ಯೋಜನೆ ಪ್ರಗತಿ ಪರಿಶೀಲನೆ

Tuesday, June 29th, 2021
Badre Meldande

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಎತ್ತಿನಹೊಳೆ ಯೋಜನೆಯಲ್ಲಿ ಈ ವರೆಗೆ 9003.86 ಕೋಟಿ ರೂ. ವೆಚ್ಚವಾಗಿದ್ದು, ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ವ್ಯಾಲಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಎತ್ತಿನಹೊಳೆ ಯೋಜನೆಯು ಏಳು ಜಿಲ್ಲೆಯ 29 ತಾಲ್ಲೂಕುಗಳ 6557 ಗ್ರಾಮಗಳ 68 ಲಕ್ಷಕ್ಕೂ ಹೆಚ್ಚು ಜನರಿಗೆ ಕುಡಿಯುವ […]

ಹೆಚ್ಚಿನ ಕೋವಿಡ್ ಲಸಿಕೆ ಪೂರೈಕೆಗೆ ಕೇಂದ್ರಕ್ಕೆ ಮನವಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Tuesday, June 29th, 2021
Dr.Sudhakar

ಬೆಂಗಳೂರು/ಮೈಸೂರು : ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ರಾಜ್ಯಕ್ಕೆ ಹೆಚ್ಚು ಕೋವಿಡ್ ಲಸಿಕೆ ಪೂರೈಸುವಂತೆ ಮನವಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸೋಮವಾರ ಅಥವಾ ಮಂಗಳವಾರ ದೆಹಲಿಗೆ ಪ್ರವಾಸ ಹೋಗಲಿದ್ದು, ಆ ವೇಳೆ ಕೋವಿಡ್ ಲಸಿಕೆ ಪೂರೈಕೆ ಬಗ್ಗೆ ಚರ್ಚಿಸಲಾಗುವುದು. ಕೇಂದ್ರ ಆರೋಗ್ಯ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ, ರಾಜ್ಯಕ್ಕೆ ಹೆಚ್ಚು ಲಸಿಕೆ ಪೂರೈಸಲು ಮನವಿ ಮಾಡಲಾಗುವುದು. ಆದರೆ ರಾಜ್ಯದಲ್ಲಿ ಲಸಿಕೆಯೇ ಇಲ್ಲ ಎಂದು ಎಲ್ಲೂ […]

ಮಾವು ಹೊತ್ತ ಕಿಸಾನ್ ರೈಲಿಗೆ ಹಸಿರು ನಿಶಾನೆ

Tuesday, June 29th, 2021
Mango-Train

ಬೆಂಗಳೂರು  : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಕಂದಾಯ ಸಚಿವ ಆರ್ ಅಶೋಕ ಅವರು ಚಿಂತಾಮಣಿಯಿಂದ ನವದೆಹಲಿಗೆ 250 ಟನ್ ಮಾವು ಸಾಗಿಸುವ ಕಿಸಾನ್ ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಯಲಹಂಕ ರೈಲ್ವೆ ನಿಲ್ದಾಣದಿಂದ ನವದೆಹಲಿಗೆ ಕಿಸಾನ್ ರೈಲು ಪಯಣ ಶುರು ಮಾಡಿತು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, “ರೈತರು ದೂರದ ಸ್ಥಳಗಳಲ್ಲಿರುವ ಮಾರುಕಟ್ಟೆಗಳಿಗೆ ಪ್ರವೇಶವನ್ನು ಪಡೆಯಲು ಇದರಿಂದ ಸಾಧ್ಯವಾಗುತ್ತದೆ ಮತ್ತು ಅವರ ಉತ್ಪನ್ನಗಳಿಗೆ ಹೆಚ್ಚಿನ ಬೆಲೆ ಒದಗಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು. ಕಿಸಾನ್ […]

“ಕಾಂಗ್ರೆಸ್ ನಾಲ್ಕು ಗುಂಪುಗಳನ್ನು ಹೊಂದಿರುವ ಒಂದೇ ಪಕ್ಷ” ಕಂದಾಯ ಸಚಿವ ಆರ್ ಅಶೋಕ್

Monday, June 28th, 2021
Kempe gowda

ಬೆಂಗಳೂರು  :  ನಮ್ಮಲ್ಲಿ ಒಂದೇ ಬಾಗಿಲು ಒಬ್ಬರೇ ನಾಯಕರು, ಕಾಂಗ್ರೆಸ್‍ನಲ್ಲಿ ಒಂದೇ ಮನೆ ನಾಲ್ಕು ಬಾಗಿಲು” ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ, “ಕಾಂಗ್ರೆಸ್ ತಟ್ಟೆಯಲ್ಲಿ ಕತ್ತೆ ಸತ್ತು ಬಿದ್ದಿದೆ, ನಮ್ಮಲ್ಲಿ ಬಿದ್ದಿರುವ ನೊಣದ ಬಗ್ಗೆ ಕಾಂಗ್ರೆಸ್‍ನವರು ಮಾತನಾಡುತ್ತಾರೆ. ಮೊದಲು ನಿಮ್ಮ ತಟ್ಟೆಯನ್ನು ಗಂಜಲ ಹಾಕಿ ಶುದ್ದಿ ಮಾಡಿ. ಆಮೇಲೆ ಬೇರೆಯವರನ್ನು ಟೀಕೆ ಮಾಡಬಹುದು” ಎಂದರು. ದಲಿತರು ಸಿಎಂ ಆಗಬೇಕು ಅಂತ ಒಂದು ಬಾಗಿಲು, ಒಕ್ಕಲಿಗರು ಆಗಬೇಕು ಅಂತ ಒಂದು […]

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಅರವಿಂದ ಲಿಂಬಾವಳಿ ಚಾಲನೆ

Monday, June 28th, 2021
Mahadevapura

ಬೆಂಗಳೂರು  : ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಬೆಳ್ಳಂದೂರು ಟ್ರಿನಿಟಿ ಮೆಡೋಸ್ ಹತ್ತಿರ 11 ಕೆ.ವಿ ಭೂಮಿಯೊಳಗೆ ಕೇಬಲ್ ಅಳವಡಿಸುವ ಕಾಮಗಾರಿಗೆ ಚಾಲನೆ ಅವರು ನಂತರ ಎ. ಇ. ಸಿ. ಎಸ್ ಬಡಾವಣೆ ಯಲ್ಲಿ 11 ಕೆ.ವಿ ಭೂಮಿಯೊಳಗೆ ಕೇಬಲ್ ಅಳವಡಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ನಂತರ ಮಹದೇವಪುರ ಕ್ಷೇತ್ರದ ಬೆಳತ್ತೂರು ಅಯ್ಯಪ್ಪಸ್ವಾಮಿ ದೇವಸ್ಥಾನದ […]

ಐತಿಹಾಸಿಕವಾಗಿ ನಾಲ್ಕು ಸಾವಿರದಷ್ಟು ವೈದ್ಯರ ನೇಮಕ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Monday, June 28th, 2021
Dr Sudhakar

ಬೆಂಗಳೂರು :  ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ ಸೇವೆ ಸಲ್ಲಿಕೆ ಕ್ರಮ ಅನುಷ್ಠಾನಗೊಂಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ವಿವಿಧ ಹುದ್ದೆಗಳಿಗೆ 2,053 ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಲಾಗಿದೆ. ಇತ್ತೀಚೆಗೆ ಪೂರ್ಣಗೊಂಡ 1,750 ವೈದ್ಯರ ಐತಿಹಾಸಿಕ ನೇರ ನೇಮಕಾತಿ ಸೇರಿದಂತೆ ಕೊರೊನಾ ಸಂದರ್ಭದಲ್ಲಿ ರಾಜ್ಯ ಸರ್ಕಾರ ಒಟ್ಟು 4,000 ವೈದ್ಯರನ್ನ ನೇಮಿಸಿಕೊಂಡಿದೆ, ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಎಂಬಿಬಿಎಸ್ ಪದವೀಧರರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ […]

ಅಧಿಕ ಪೌಷ್ಠಿಕಾಂಶವುಳ್ಳ ಸಿದ್ದು ಹಲಸು ಮನೆಯಂಗಳ ಮತ್ತು ವಾಣಿಜ್ಯ ಕೃಷಿಗೆ ಸೂಕ್ತ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Monday, June 28th, 2021
Siddu Jack fruit

ಬೆಂಗಳೂರು : ಅಧಿಕ ಪೌಷ್ಟಿಕಾಂಶವುಳ್ಳ ಸಿದ್ದು ಹಲಸು ಮನೆಯಂಗಳ ಮತ್ತು ವಾಣಿಜ್ಯ ಕೃಷಿಗೆ ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು. ಸಹಭಾಗಿ ಸಸ್ಯ ಅಭಿವೃದ್ದಿ ಕಾರ್ಯಕ್ರಮದ ಅಡಿ ಸಿದ್ದು ಹಲಸು ತಳಿಯ ಸಸ್ಯಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವದೆಹಲಿಯ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯು ಹಲಸಿನ ತಳಿಗಳ ಬಗ್ಗೆ ಸಂಶೋಧನೆ ನಡೆಸುತ್ತಿದ್ದು, ತುಮಕೂರು ಜಿಲ್ಲೆಯ ಚೇಳೂರು ಗ್ರಾಮ ಎಸ್.ಎಸ್.ಪರಮೇಶ್ ಎಂಬುವರ ತೋಟದಲ್ಲಿ ಈ […]

ಅಟ್ಲಂಟಾ ಸಂಸ್ಥೆಯಿಂದ 15 ಸಾವಿರ ಪುಸ್ತಕಗಳ ಕೊಡುಗೆ: ಸುರೇಶ್ ಕುಮಾರ್

Monday, June 28th, 2021
Suresh Kumar

ಬೆಂಗಳೂರು: ಅಮೇರಿಕಾದ ಅಟ್ಲಾಂಟಾ ವಿ-ಸ‌ರ್ವ್ ಇಂಟರ್ ನ್ಯಾಷನಲ್ ಫೌಂಡೇಷನ್ ಸಂಸ್ಥೆ ಬೆಂಗಳೂರು ನಗರದ ನಗರ ಕೇಂದ್ರ ಗ್ರಂಥಾಲಯಕ್ಕೆ ರೂಪಾಯಿ ಒಂದೂವರೆ ಕೋಟಿ ಮೌಲ್ಯದ‌ 15 ಸಾವಿರ ಅತ್ಯತ್ಕೃಷ್ಟ ಪುಸ್ತಕಗಳನ್ನು ನೀಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಪುಸ್ತಕಗಳನ್ನು ಇಲಾಖೆ ಪರವಾಗಿ ಸ್ವೀಕರಿಸಿ ಮಾತನಾಡಿದ ಅವರು, ವಿ-ಸರ್ವ್ ಇಂಟರ್ ನ್ಯಾಷನಲ್ ಫೌಂಡೇಷನ್ ಸಂಸ್ಥೆ ಅಧ್ಯಕ್ಷ ಡಾ. ವಿಜಯರಾಘವನ್ ಅವರು ತಮ್ಮ ಸಂಸ್ಥೆಯಿಂದ ನೀಡಿದ ಮೌಲ್ಯಯುತ ಪುಸ್ತಕಗಳನ್ನು ಬೆಂಗಳೂರು ನಗರ […]

ಜುಲೈ 19, 22ರಂದು ಎಸ್ಸೆಸ್ಸಲ್ಸಿ ಪರೀಕ್ಷೆ: ಸುರೇಶ್ ಕುಮಾರ್

Monday, June 28th, 2021
Suresh-Kumar

ಬೆಂಗಳೂರು: ರಾಜ್ಯದ 10ನೇ ತರಗತಿ ವಿದ್ಯಾರ್ಥಿಗಳ ಹಾಗೂ ಪೋಷಕರ ಬಹುದಿನಗಳ ನಿರೀಕ್ಷೆಯಾಗಿದ್ದ 2020-21ನೇ ಸಾಲಿನ ಎಸ್ ಎಸ್ ಎಲ್ ಸಿ. ಪರೀಕ್ಷೆಗಳಿಗೆ ದಿನಾಂಕ ನಿಗದಿಪಡಿಸಲಾಗಿದ್ದು, ಜುಲೈ 19 ಮತ್ತು 22ರಂದು ಎರಡು ದಿನಗಳ ಕಾಲ ಈ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಸೋಮವಾರ ಪರೀಕ್ಷೆ ಸಿದ್ಧತೆ ಕುರಿತು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್‍ಪಿ, ಡಿಎಚ್‍ಒ, ಖಜಾನಾಧಿಕಾರಿಗಳು ಹಾಗೂ ಶಿಕ್ಷಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್‍ನಲ್ಲಿ ಮಾರ್ಗದರ್ಶನ ನೀಡಿದ ನಂತರ ಸುದ್ದಿಗೋಷ್ಠಿಯಲ್ಲಿ […]

ಕಾಸರಗೋಡು ಮತ್ತು ಮಂಜೇಶ್ವರದಲ್ಲಿ ಗ್ರಾಮಗಳ ಹೆಸರುಗಳ ಬದಲಾವಣೆ : ಪ್ರಕ್ರಿಯೆ ಸ್ಥಗಿತಗೊಳಿಸಲು ಕೇರಳ ಸರ್ಕಾರಕ್ಕೆ ಮುಖ್ಯಮಂತ್ರಿ ಪತ್ರ  

Monday, June 28th, 2021
Kerala Names

ಬೆಂಗಳೂರು : ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ ರವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳನ್ನು ಹೊಂದಿದ ಕೆಲವು ಗ್ರಾಮಗಳ ಹೆಸರುಗಳನ್ನು ಮಲಯಾಳೀ ಭಾಷೆಯ ಆಧಾರದ ಹೆಸರುಗಳನ್ನಾಗಿ ಬದಲಾಯಿಸಲು ಹೊರಟಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ವಿಷಯವು ತಮ್ಮ ಗಮನಕ್ಕೆ ಈಗಾಗಲೇ ಬಂದಿದ್ದು, ಕೂಡಲೇ ಕೇರಳ ಸರ್ಕಾರದ ಮುಖ್ಯಮಂತ್ರಿಗಳ ಗಮನಕ್ಕೆ […]