ಕನ್ನಡ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾವಣೆ ಬೇಡ, ಮುಖ್ಯಮಂತ್ರಿ ಗಳಿಗೆ ಸಚಿವ ಅರವಿಂದ ಲಿಂಬಾವಳಿ ಪತ್ರ

Monday, June 28th, 2021
Aravinda-Limbavali

ಬೆಂಗಳೂರು  :  ಕೇರಳ ಗಡಿ ಗ್ರಾಮಗಳ ಕನ್ನಡ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾವಣೆ ಮಾಡುವ ಕೇರಳ ಸರ್ಕಾರದ ಕ್ರಮವನ್ನು ಕುರಿತಂತೆ ಮಾನ್ಯ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸನ್ಮಾನ್ಯ ಮುಖ್ಯಮಂತ್ರಿ ಗಳಿಗೆ ಬರೆದ ಪತ್ರ. ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ವಂದನೆಗಳು, ಈ ಮೂಲಕ ತಮ್ಮ ಆದ್ಯ ಗಮನಕ್ಕೆ ತರಲು ಬಯಸುವುದೇನೆಂದರೆ ಕರ್ನಾಟಕದ ಗಡಿ ಪ್ರದೇಶಗಳಾದ ಕಾಸರಗೋಡು ಮತ್ತು ಮಂಜೇಶ್ವರ ಸೇರಿದಂತೆ ಕೆಲವು ತಾಲ್ಲೂಕುಗಳ ಕನ್ನಡ ಗ್ರಾಮಗಳ ಹೆಸರುಗಳನ್ನು ಮಲೆಯಾಳಿ ಭಾಷೆಗೆ ಬದಲಾವಣೆ ಮಾಡಲು ಕೇರಳ […]

ಜೂನ್ 28 ರಿಂದ ವಿಶ್ವ ಪ್ರಸಿದ್ಧ ಜೋಗ ಜಲಪಾತ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Sunday, June 27th, 2021
Jog falls

ಶಿವಮೊಗ್ಗ: ಕಳೆದ ಎರಡು ತಿಂಗಳಿನಿಂದ ಮುಚ್ಚಲಾಗಿದ್ದ ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ಪ್ರಸಿದ್ಧ ಜೋಗ ಜಲಪಾತ ಸೋಮವಾರದಿಂದ ಮತ್ತೆ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿದೆ. ಕಳೆದ ಒಂದು ವಾರದಿಂದ ಮಲೆನಾಡು ಪ್ರದೇಶಗಳಲ್ಲಿ ಸುರಿಯುತ್ತಿರುವ ಮುಂಗಾರು ಮಳೆಯು ಜೋಗ ಜಲಪಾತದ ಸೊಬಗು ಹೆಚ್ಚಿಸಿದೆ. ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರವಾಸಿಗರು ಮಾಸ್ಕ್‌ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್‌ ಬಳಸುವುದು ಕಡ್ಡಾಯವಾಗಿದೆ. ಲಾಕ್‌ಡೌನ್‌ ಕಾರಣದಿಂದಾಗಿ ಪ್ರವಾಸಿಗರಿಲ್ಲದೇ ಸ್ಥಳೀಯ ವ್ಯಾಪಾರ, ವಹಿವಾಟು ಕುಂಠಿತಗೊಂಡಿತ್ತು. ಇದೀಗ […]

ಕೆಂಪೇಗೌಡರ ಕನಸಿನ ಬೆಂಗಳೂರನ್ನ ಸಾಕಾರಗೊಳಿಸಲು ಸರ್ಕಾರ ಬದ್ಧ: ಸಚಿವ ಆರ್ ಅಶೋಕ

Sunday, June 27th, 2021
Kempe Gowda

ಬೆಂಗಳೂರು  : ನಾಡಪ್ರಭು ಕೆಂಪೇಗೌಡ ಅವರ ಬೆಂಗಳೂರಿನ ಕುರಿತು ಹೊಂದಿದ್ದ ಕನಸುಗಳನ್ನು ಸಾಕಾರಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿದ್ದು, ನಗರಕ್ಕೆ ಸೂಕ್ತ ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸಲು ಅಗತ್ಯ ಯೋಜನೆಗಳನ್ನು ಜಾರಿ ತರಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ಬಾನುವಾರ ಕೆ.ಆರ್‌.ಪುರಂನಲ್ಲಿ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು ನಗರ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡ ಅವರ 512ನೇ ಜನ್ಮ ಶತಮಾನೋತ್ಸವದಲ್ಲಿ ಪಾಲ್ಗೊಂಡು, ಕೆಂಪೇಗೌಡ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾಡಪ್ರಭು ಕೇಂಪೇಗೌಡರು ಓರ್ವ ದೂರದೃಷ್ಟಿಯ […]

ಹೊಸ ವೈರಾಣು ಪತ್ತೆಗೆ ಜೀನೋಮ್ ಸೀಕ್ವೆನ್ಸ್ : ಸಚಿವ ಡಾ.ಕೆ.ಸುಧಾಕರ್

Sunday, June 27th, 2021
K Sudhakar

  ಬೆಂಗಳೂರು/ಚಿಕ್ಕಬಳ್ಳಾಪುರ :  ಕೋವಿಡ್ ಹೊಸ ವೈರಾಣು ನಿಯಂತ್ರಣಕ್ಕೆ ಜೀನೋಮ್ ಸೀಕ್ವೆನ್ಸ್ ಮಾಡುತ್ತಿದ್ದು, 600 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡೆಲ್ಟಾ ಪ್ಲಸ್ ವೈರಾಣು ಸೋಂಕಿನ ಇಬ್ಬರು ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನೂ 600 ಮಾದರಿಗಳನ್ನು ಜಿನೋಮ್ ಸೀಕ್ವೆನ್ಸ್ ಗೆ ಕಳುಹಿಸಲಾಗಿದೆ. ಈ ವರದಿ ಇಂದು ಬರಲಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ ರಾಜ್ಯಗಳಲ್ಲಿ ಇರುವಂತಹ ಕೊರೊನಾ ಆತಂಕ ನಮ್ಮಲ್ಲಿ ಇನ್ನೂ ಬಂದಿಲ್ಲ. ಆದರೆ ಮಹಾರಾಷ್ಟ್ರ ಮತ್ತು […]

ಕೇಂದ್ರ ಹಾಗೂ ರಾಜ್ಯಗಳು ಎಂಎಸ್‌ಎಂಇ ಗೆ ನೀಡಿರುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

Sunday, June 27th, 2021
jagadish-Shetter

ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಕೈಗಾರಿಕಾ ನೀತಿ 2020-2025 ರಲ್ಲಿ ಎಂಎಸ್‌ಎಂಇ ಗಳಿಗೆ ಹೆಚ್ಚಿನ ಸೌಲಭ್ಯ ಹಾಗೂ ಆದ್ಯತೆ ನೀಡಲಾಗಿದೆ. ಅಲ್ಲದೆ, ಸಾರ್ಥಕ್‌ ಯೋಜನೆಯ ಮೂಲಕ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಈ ಬಗ್ಗೆ ಉದ್ಯಮಿಗಳಲ್ಲಿ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ ಎಂದು ಲೆಕ್ಕಪರಿಶೋಧಕರ ಸಂಘದ ಪದಾಧಿಕಾರಿಗಳಿಗೆ ಕರೆ ನೀಡಿದರು. ಇಂದು ವಿಶ್ವ ಎಂಎಸ್‌ಎಂಇ ದಿನದ ಅಂಗವಾಗಿ ಬೆಂಗಳೂರು ಬ್ರಾಂಚ್‌ ಆಫ್‌ ಎಸ್‌ಐಆರ್‌ಸಿ – ದ ಇನ್ಸಿಟ್ಯೂಟ್‌ ಆಫ್‌ ಚಾರ್ಟೆಡ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾ – […]

ಕೆಂಪೇಗೌಡರ 512 ನೇ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಅಂಚೆ ಚೀಟಿಯನ್ನು ಲೋಕಾರ್ಪಣೆ

Sunday, June 27th, 2021
Kempe Gowda

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 512 ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾನುವಾರ  ನಡೆದ ನಾಡಪ್ರಭುಗಳ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಅಂಚೆ ಚೀಟಿಯನ್ನು ಲೋಕಾರ್ಪಣೆಗೊಳಿಸಿದರು. ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಹಿನ್ನೆಲೆ, ನೂರಾರು ಕೆರೆಗಳನ್ನು ನಿರ್ಮಾಣ ಮಾಡಿ. ವ್ಯಾಪಾರ ವಹಿವಾಟಿಗೆ ಅನೇಕ ಪೇಟೆಗಳನ್ನು ಕಟ್ಟಿ. ಅತ್ಯಂತ ಯೋಜನಾಬದ್ಧವಾಗಿ ಬೆಂಗಳೂರನ್ನು ನಿರ್ಮಿಸಿದ ಕೆಂಪೇಗೌಡರ ಸಂಸ್ಮರಣೆಗಳ ಜೊತೆಗೆ ಆ ಧೀಮಂತ […]

ಕೋಳಿ ಇನ್ನಿತರ ವಸ್ತು ಇಟ್ಟು ರಸ್ತೆ ಮಧ್ಯೆಯೇ ವಾಮಾಚಾರ – ಭಯಭೀತರಾದ ಜನ

Saturday, June 26th, 2021
black magic

ಚಿಕ್ಕಮಗಳೂರು: ಕೋಳಿ, ನಿಂಬೆಹಣ್ಣು, ಮೊಟ್ಟೆ, ಹೊಸ ಬಟ್ಟೆ, ಅನ್ನ, ತೆಂಗಿನಕಾಯಿ, ಅರಿಶಿನ-ಕುಂಕುಮ, ಮೂರು ತರದ ದಾರ, ಬಳೆ, ತಲೆಗೂದಲು ಇಟ್ಟು ರಸ್ತೆ ಮಧ್ಯೆಯೇ ವಾಮಾಚಾರ ಮಾಡಿರುವ ಘಟನೆ  ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ರಂಗನೇಹಳ್ಳಿ ಗ್ರಾಮದಲ್ಲಿ ನಡೆದಿದೆ. ರಂಗೇನಹಳ್ಳಿ ಗ್ರಾಮದಿಂದ ಬರಗೇನಹಳ್ಳಿಗೆ ಹೋಗುವ ಮಾರ್ಗ ಮಧ್ಯೆ ಈ ವಾಮಾಚಾರ ನಡೆಸಿದ್ದಾರೆ. ಬೆಳ್ಳಂ ಬೆಳಗ್ಗೆಯೇ ಕೃಷಿ ಕೆಲಸಕ್ಕೆ ಜಮೀನಿಗೆ ಹೋಗುವ ರೈತರು ಇದನ್ನ ಕಂಡು ಕಂಗಾಲಾಗಿದ್ದಾರೆ. ವಾಮಾಚಾರ ನಡೆಸಿದ ದುಷ್ಕರ್ಮಿಗಳು ವಾಮಾಚಾರದ ಬಳಿಕ ವಿವಿಧ ವಸ್ತುಗಳು ಸ್ಥಳದಲ್ಲಿ ಬಿಟ್ಟು ಹೋಗಿದ್ದಾರೆ. ನೇರ […]

ಮಾದಕ ವಸ್ತುಗಳನ್ನು ನಿಯಂತ್ರಿಸುವಲ್ಲಿ ಬೆಂಗಳೂರು ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ : ಗೃಹ ಸಚಿವ

Saturday, June 26th, 2021
bommai

ಬೆಂಗಳೂರು : ಮಾದಕ ವಸ್ತುಗಳ ಸಾಗಾಟ, ಮಾರಾಟ ನಿಯಂತ್ರಿಸುವಲ್ಲಿ ಬೆಂಗಳೂರು ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅಂತಾರಾಷ್ಟ್ರೀಯ ಮಾದಕ ವಿರೋಧಿ ದಿನಾಚರಣೆ ಪ್ರಯುಕ್ತ ಮಾತನಾಡಿದ ಅವರು, ಪೊಲೀಸರು ವಶಪಡಿಸಿಕೊಂಡಿದ್ದ ಶೇ.60ರಷ್ಟು ಮಾದಕ ವಸ್ತುವನ್ನು ನಾಶಪಡಿಸಿದ್ದೇವೆ. ಇನ್ನು, 40ರಷ್ಟು ಎಫ್‌ಎಸ್ಎಸ್ ಪರೀಕ್ಷಾ ಹಂತದಲ್ಲಿದೆ ಎಂದರು. ಅಂತಾರಾಷ್ಟ್ರೀಯ ಮಾದಕ ವಿರೋಧಿ ದಿನಾಚರಣೆ ಹಿನ್ನೆಲೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಈ ವರ್ಷ ಜಪ್ತಿಯಾದ ಮಾದಕ ವಸ್ತುಗಳ ವಿಲೇವಾರಿ ನಡೆಯಿತು. ಈ ಕಾರ್ಯಕ್ರಮದಲ್ಲಿ […]

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಮಕ್ಕಳ ಆಸ್ಪತ್ರೆ ನಿರ್ಮಾಣ : ಆರ್ ಅಶೋಕ

Friday, June 25th, 2021
sub-registrar's-office

ಬೆಂಗಳೂರು  : ರಾಜ್ಯದ ಎಲ್ಲಾ ಜಿಲ್ಲೆಗಳು ಕೋವಿಡ್ 3 ನೇ ಅಲೆಯನ್ನು ಎದುರಿಸಲು ಸನ್ನದ್ಧರಾಗಬೇಕು. ತಕ್ಷಣವೇ ಮಕ್ಕಳ ಆಸ್ಪತ್ರೆಗಳನ್ನು ಸಿದ್ಧಪಡಿಸಬೇಕೆಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದೇನೆ. ಮುಖ್ಯವಾಗಿ ಮಕ್ಕಳಿಗೆ ಚಿಕಿತ್ಸೆ ನೀಡುವ ವೇಳೆ ಪಾಲಕರು ಜೊತೆಗಿರಬೇಕಾಗುತ್ತದೆ. ಹೀಗಾಗಿ ಅವರಿಗೂ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದ್ದೇನೆ”, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಇಂದು ಕೊರಟಗೆರೆಯಲ್ಲಿ ನೂತನ ಉಪನೋಂದಣಾಧಿಕಾರಿಗಳ ಕಚೇರಿ ಉದ್ಘಾಟಿಸಿ ಮಾತನಾಡಿದ ಸಚಿವರು, “ಪ್ರತಿ ಜಿಲ್ಲೆಯಲ್ಲಿ ಎಲ್ಲಾ ವೈದ್ಯರಿಗೂ ಮಕ್ಕಳಿಗೆ ಚಿಕಿತ್ಸೆ ನೀಡಲು 10 […]

ಫ್ರಿಡಂ ಪಾರ್ಕ್‍ನಲ್ಲಿ ತುರ್ತುಪರಿಸ್ಥಿತಿ ಹೇರಿಕೆ ವಿರೋಧಿಸಿ ಕರಾಳ ದಿನ ಆಚರಣೆ

Friday, June 25th, 2021
freedom Park

ಬೆಂಗಳೂರು  : ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ದೇಶದ ಮೇಲೆ ಹೇರಿದ್ದ ತುರ್ತುಪರಿಸ್ಥಿತಿಯನ್ನ ವಿರೋಧಿಸಿ ಶುಕ್ರವಾರ ಜೂನ್ 25 ರಂದು  ಫ್ರಿಡಂ ಪಾರ್ಕ್‍ನಲ್ಲಿ ಕಂದಾಯ ಸಚಿವ ಆರ್ ಅಶೋಕ ಅವರು ಕರಾಳ ದಿನ ಆಚರಣೆ ಮಾಡಿದರು. ಈ ವೇಳೆ ಅಂದಿನ ದಿನಗಳನ್ನ ನೆನಪಿಸಿಕೊಂಡು ಸಚಿವರು,” ಜಯಪ್ರಕಾಶ್ ನಾರಾಯಣ್ ಅವರ ಕರೆಯ ಮೇರೆಗೆ ನಾನು ಮತ್ತು ನಮ್ಮ ಕಾಲೇಜಿನ ವಿದ್ಯಾರ್ಥಿ ನಾಯಕರುಗಳು ಯಶವಂತಪುರ ವೃತ್ತದ ಬಳಿ ತುರ್ತುಪರಿಸ್ಥಿತಿಯನ್ನ ವಿರೋಧಿಸಿ ಹೋರಾಟ ಮಾಡಿದ್ದೇವು. ಆ ವೇಳೆ ನಮ್ಮನ್ನ ಬಂಧಿಸಿ ಕೇಂದ್ರ […]