ದುಷ್ಕರ್ಮಿಗಳ ತಂಡದಿಂದ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಹತ್ಯೆ

Thursday, June 24th, 2021
Rekha--Kadiresh

ಬೆಂಗಳೂರು  : ದುಷ್ಕರ್ಮಿಗಳ ತಂಡವೊಂದು ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಒಬ್ಬರನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಡಾ ಘಟನೆ    ಗುರುವಾರ ನಡೆದಿದೆ. ಛಲವಾದಿಪಾಳ್ಯದ 138ನೇ ವಾರ್ಡ್ನ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆಯಾದ ದುರ್ದೈವಿ. ಪತಿ ಕದಿರೇಶ್ ಅವರನ್ನು ಮನೆ ಸಮೀಪದ ಮುನೇಶ್ವರ ದೇವಸ್ಥಾನದ ಬಳಿ 2018ರ ಫೆಬ್ರವರಿ 8ರಂದು ಆಟೋದಲ್ಲಿ ಬಂದ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದರು. ಕದಿರೇಶ್ರ ಸಹೋದರರು ಮತ್ತು ಸಾರ್ವಜನಿಕರ ಕಣ್ಣೆದುರಲ್ಲೇ ಈ ಹತ್ಯೆ ನಡೆದಿತ್ತು. ಬೆಳಗ್ಗೆ ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ನ ಮನೆಯಲ್ಲಿದ್ದ ರೇಖಾ ಕದಿರೇಶ್ ಅವರನ್ನು ಹೊರ […]

ಕಲಿಕಾ ನಿರ್ವಹಣಾ ವ್ಯವಸ್ಥೆಯಡಿ ಸ್ಮಾರ್ಟ್ ತರಗತಿಗಳ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿ.ಸಿ. ವಿತರಣೆ

Wednesday, June 23rd, 2021
CM Tablet

ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಂದು ಉನ್ನತ ಶಿಕ್ಷಣ ಇಲಾಖೆ ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಿಜಿಟಲ್ ಕಲಿಕಾ ಯೋಜನೆಯಡಿ 2500 ಸ್ಮಾರ್ಟ್ ತರಗತಿಗಳನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿ.ಸಿ.ಗಳನ್ನು ಸಾಂಕೇತಿಕವಾಗಿ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಸರ್ಕಾರಿ ಕಾಲೇಜುಗಳಲ್ಲಿ 2,500 ತರಗತಿಗಳನ್ನು ಸ್ಮಾರ್ಟ್ ತರಗತಿ ಕೊಠಡಿಗಳಾಗಿ ಉನ್ನತೀಕರಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 6,500 ತರಗತಿ ಕೊಠಡಿಗಳನ್ನು ಸ್ಮಾರ್ಟ್ ತರಗತಿಗಳಾಗಿ ಪರಿವರ್ತಿಸಲಾಗುವುದು ಎಂದರು. 2021-22ನೇ ಸಾಲಿನಲ್ಲಿ ಸರ್ಕಾರಿ ಉನ್ನತ […]

ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಸಚಿವ ಅರವಿಂದ ಲಿಂಬಾವಳಿ ಪಿ ಸಿ ಟ್ಯಾಬ್ಲೆಟ್ ವಿತರಣೆ

Wednesday, June 23rd, 2021
Aravinda Limbavali

ಬೆಂಗಳೂರು : ಸರ್ಕಾರಿ ಉನ್ನತ ಶಿಕ್ಷಣ ಸರ್ಕಾರಿ ಉನ್ನತ ಶಿಕ್ಷಣ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಟ್ಯಾಬ್ಲೆಟ್ ನೀಡುವ ಯೋಜನೆಯಡಿ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಇಂದು ಮಹದೇವಪುರ ಕ್ಷೇತ್ರದ ಇಮ್ಮಡಿಹಳ್ಳಿಯ ವರ್ತೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಕಾಡುಗೋಡಿ ಪ್ರಥಮ ದರ್ಜೆ ಕಾಲೇಜು, ಚನ್ನಸಂದ್ರ ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಇಮ್ಮಡಿಹಳ್ಳಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಟ್ಯಾಬ್ಲೆಟ್ ಪಿಸಿ ವಿತರಣೆ ಮಾಡಿ ಐಸಿಟಿ ಯುಕ್ತ ಸ್ಮಾರ್ಟ್ ತರಗತಿ ಗಳಿಗೆ ಚಾಲನೆ […]

ತುಂಗಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಸಚಿವ ಕೆ.ಎಸ್.ಈಶ್ವರಪ್ಪ

Wednesday, June 23rd, 2021
Tunga Dam

ಶಿವಮೊಗ್ಗ: ತುಂಗಾ ನದಿಯು ಶಾಂತ ರೀತಿಯಲ್ಲಿ ಹರಿಯಲು ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಗಾಜನೂರಿನ ತುಂಗಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ್ದಾರೆ. ಈ ಬಾರಿ ಉತ್ತಮ ಮಳೆಯಾದ್ದರಿಂದ ತುಂಗಾ ಜಲಾಶಯ ಕಳೆದ ತಿಂಗಳೇ ಭರ್ತಿಯಾಗಿತ್ತು. ಈ ಜಲಾಶಯ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಗೆ ಆಧಾರವಾಗಿದೆ. ಜಲಾಶಯ ಭರ್ತಿಯಾದ ಹಿನ್ನೆಲೆ ಸಚಿವ ಈಶ್ವರಪ್ಪ ಬಾಗಿನ ಸಮರ್ಪಿಸಿ, ಜಲಾಶಯದ ಬಳಿ ತುಂಗೆಗೆ ಪೂಜೆ ಸಲ್ಲಿಸಿದರು. ಈ ವೇಳೆ ಸಚಿವರಿಗೆ ಮೇಯರ್ ಸುನೀತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ […]

ಹಂತ ಹಂತವಾಗಿ ನೀರು ಬಿಡುಗಡೆ ಮಹಾರಾಷ್ಟ್ರ ಸಮ್ಮತಿ : ಕಾರಜೋಳ

Wednesday, June 23rd, 2021
Karajola

ಚಿಕ್ಕೋಡಿ : ಜಲಾಶಯ ಸಂಪೂರ್ಣ ಭರ್ತಿಯಾದಾಗ ಒಮ್ಮೆಲೆ ನೀರು ಬಿಡುಗಡೆ ಮಾಡಿದರೆ ತೊಂದರೆಯಾಗುತ್ತದೆ. ಆದ್ದರಿಂದ ಹಂತ ಹಂತವಾಗಿ ನೀರು ಬಿಡುಗಡೆ ಮಾಡಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಇದಕ್ಕೆ ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ‌  ಗೋವಿಂದ ಕಾರಜೋಳ ತಿಳಿಸಿದರು. ಹಂತ ಹಂತವಾಗಿ ನೀರು‌ ಬಿಡುಗಡೆಗೆ ಮಹಾರಾಷ್ಟ್ರ ಸರಕಾರ ಕೂಡ ಸಹಮತ ವ್ಯಕ್ತಪಡಿಸಿದೆ. ಪ್ರವಾಹ ಪರಿಸ್ಥಿತಿ ಉದ್ಭವಿಸಿದರೆ ನದಿತೀರದ ಜನರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹ ಬಂದಾಗ ಸಂಪೂರ್ಣ ಜಲಾವೃತವಾಗುವ […]

ರೈತರಿಗೆ ಮತ್ತೊಂದು ಅವಕಾಶ ನೀಡಲು ಇನಾಂ ಜಮೀನು ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ: ಆರ್ ಅಶೋಕ

Wednesday, June 23rd, 2021
R Ashok

ಬೆಂಗಳೂರು  : ಕರ್ನಾಟಕ ಸರ್ಕಾರವು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಇನಾಂ ಜಮೀನು ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ ನಡೆಸಿದೆ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವರು,”ರಾಜ್ಯದಲ್ಲಿ 70 ಸಾವಿರ ಏಕರೆಗಿಂತ ಹೆಚ್ಚಿನ ಭೂಮಿ ಇನಾಮ್ತಿ ಕಾಯ್ದೆಯ ವ್ಯಾಪ್ತಿಯಲ್ಲಿದೆ. ರಾಜ ಮಹಾರಾಜರು, ಬ್ರಿಟಿಷರ ಕಾಲದಲ್ಲಿ 500, 1000 ಏಕರೆ ಇನಾಮ್ತಿ ಜಮೀನುಗಳನ್ನ ನೀಡಲಾಗಿತ್ತು. ರೈತರು ಅಲ್ಲಿ ಉಳುಮೆ ಮಾಡಿಕೊಂಡಿದ್ದರು. ಇನಾಂ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದ ರೈತರಿಗೆ ಪಹಣಿ ಕೊಡುವ […]

ಬಿಡಿಎ ಅಧ್ಯಕ್ಷರೊಂದಿಗೆ ಸಚಿವ ಅರವಿಂದ ಲಿಂಬಾವಳಿ ಮಹದೇವಪುರ ಕ್ಷೇತ್ರ ಪರಿವೀಕ್ಷಣೆ

Tuesday, June 22nd, 2021
bda

ಬೆಂಗಳೂರು : ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಪಟ್ಟ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ ಗಾಗಿ ಇಂದು ಮಹದೇವಪುರ ಕ್ಷೇತ್ರದ ವಿವಿಧ ಭಾಗಗಳಿಗೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಬಿಡಿಎ ಅಧ್ಯಕ್ಷ ಎಸ್ಆರ್ ವಿಶ್ವನಾಥ ಮತ್ತು ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಮೊದಲು ಮಹದೇವಪುರ ಕ್ಷೇತ್ರದ ಕೋನದಾಸಪುರದಲ್ಲಿ ಭೂಸ್ವಾಧೀನಗೊಂಡ ಕೋನದಾಸಪುರ ಗ್ರಾಮದ ಜಮೀನಲ್ಲಿ ಚತುಷ್ಪಥ ರಸ್ತೆ ನಿರ್ಮಿಸುವ ಸ್ಥಳಕ್ಕೆ ಭೇಟಿ ನೀಡಿದ ಅವರು ಅಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮೆಟ್ರೋ […]

ಘಾಟಿ ಸುಬ್ರಹ್ಮಣ್ಯ : ಮಾಧವಸೃಷ್ಠಿ ಗೊಶಾಲೆಯ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ

Tuesday, June 22nd, 2021
ghati-Subrahmanya

ಬೆಂಗಳೂರು  :  ದೊಡ್ಜಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿರುವ ರಾಷ್ಟ್ರೊತ್ಥಾನದ ಮಾಧವಸೃಷ್ಠಿ ಗೊಶಾಲೆಯ ವಿವಿಧ ಕಾಮಗಾರಿಗಳಿಗೆ ಗೋಪೂಜೆ ಮಾಡುವುದರ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಕೆ.ಎಸ್.ಈಶ್ವರಪ್ಪರವರು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ರಾಷ್ಟೋತ್ತತ್ಥಾನ ಪ್ರಧಾನ ಕಾರ್ಯುದರ್ಶಿಗಳಾದ ನಾ ದಿನೇಶ್ ಹೆಗಡೆರವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂರನೇ ಅಲೆ ಸಂದರ್ಭದಲ್ಲಿ ಮಕ್ಕಳಿಗೆ ಹೆಚ್ಚಾಗಿ ಸೋಂಕು ತಗಲುವ ಸಾಧ್ಯತೆ ಇದೆ : ತಜ್ಞರ ಸಮಿತಿ ಸಲಹೆ

Tuesday, June 22nd, 2021
yedyurappa

ಬೆಂಗಳೂರು  :  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ  ಕೋವಿಡ್ 19 ಮೂರನೇ ಅಲೆ ತಡೆಗಟ್ಟಲು ರಚಿಸಿರುವ ಉನ್ನತ ಮಟ್ಟದ ತಜ್ಞರ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಸಭೆ ನಡೆಸಿದರು. ಇದೆ ಸಂದರ್ಭದಲ್ಲಿ ಸಮಿತಿಯು ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿತು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ತಜ್ಞರ ಸಮಿತಿ ಅಧ್ಯಕ್ಷ ಡಾ: ದೇವಿಶೆಟ್ಟಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಸಭೆಯ ಮುಖ್ಯಾಂಶಗಳು : ಮೂರನೇ ಅಲೆ ಸಂದರ್ಭದಲ್ಲಿ ಮಕ್ಕಳಿಗೆ ಹೆಚ್ಚಾಗಿ ಸೋಂಕು ತಗಲುವ ಸಾಧ್ಯತೆ ಇದೆ […]

ಶೀಲ ಶಂಕಿಸಿ ಪತ್ನಿಯನ್ನೇ ಕೊಲೆ ಮಾಡಿದ ಪತಿ

Tuesday, June 22nd, 2021
hulimavu

ಬೆಂಗಳೂರು : ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯಿಂದ ಪತಿ ತನ್ನ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ನಗರದ ಹುಳಿಮಾವು ಸಮೀಪದ ಅರಕೆರೆ ಬಿಟಿಎಸ್ ಲೇಔಟ್ ನಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಆಶಾ ಎಂದು ಗುರುತಿಸಲಾದೆ. ಮಣಿ ತನ್ನ ಪತ್ನಿಯನ್ನು ಕೊಂದ ಪತಿರಾಯ. ಆಶಾ ಹಾಗೂ ಮಣಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಅದೇ ರೀತಿ ಸೋಮವಾರ  ರಾತ್ರಿಯೂ ಪತಿ, ಪತ್ನಿ ನಡುವೆ ಗಲಾಟೆಯಾಗಿದೆ. ಮಣಿ ಇತ್ತೀಚೆಗೆ ವಿಪರೀತ ಮದ್ಯ ಕುಡಿಯಲು ಆರಂಭಿಸಿದ್ದ. ಹೀಗಾಗಿ ಪತ್ನಿಯ ಶೀಲದ […]