ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ 2 ಕೋಟಿ ದಂಡ ವಿಧಿಸಿದ ನ್ಯಾಯಾಲಯ

Tuesday, June 22nd, 2021
Devegowda

ಬೆಂಗಳೂರು  : ನಂದಿ ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್‌ ಎಂಟರ್‌ ಪ್ರೈಸಸ್‌ (ನೈಸ್‌) ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದು ಸಂಸ್ಥೆ ಹೂಡಿದ್ದ ಮಾನನಷ್ಟ ಪ್ರಕರಣದಲ್ಲಿ ದೇವೇಗೌಡರಿಗೆ ಹಿನ್ನಡೆಯಾಗಿದೆ. ದೇವೇಗೌಡರು ತಾವು ಮಾಡಿದ್ದ ಆರೋಪವನ್ನು ಸಮರ್ಥಿಸಿಕೊಳ್ಳುವಲ್ಲಿ ವಿಫಲರಾಗಿದ್ದು, ಮಾಜಿ ಪ್ರಧಾನಿಗೆ ಬೆಂಗಳೂರು ಸಿಟಿ ಸಿವಿಲ್‌ ನ್ಯಾಯಾಲಯವು 2 ಕೋಟಿ ರೂಪಾಯಿ ದಂಡ ವಿಧಿಸಿದೆ. ದೇವೇಗೌಡರು 2011ರಲ್ಲಿ ಖಾಸಗಿ ಸುದ್ದಿ ಮಾಧ್ಯಮಕ್ಕೆ ನೀಡಿದ್ದ ಸಂದರ್ಶನದಲ್ಲಿ ನೈಸ್‌ ಸಂಸ್ಥೆಯ ವಿರುದ್ದ ಆರೋಪ ಮಾಡಿದ್ದರು. ನೈಸ್‌ ಸಂಸ್ಥೆಯು […]

ಕೋವಿಡ್ 2ನೇ ಅಲೆ ಪ್ಯಾಕೇಜ್: 20,713 ಕಲಾವಿದರಿಗೆ 6.23 ಕೋಟಿ ರೂ. ನೆರವು ನೀಡಿಕೆಗೆ ಚಾಲನೆ

Tuesday, June 22nd, 2021
Artist help

ಬೆಂಗಳೂರು  : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ‘ಕೋವಿಡ್-19ರ 2ನೇ ಅಲೆಯಿಂದ ಸಂಕಷ್ಟದಲ್ಲಿರುವ ಕಲಾವಿದರುಗಳಿಗೆ ಸರ್ಕಾರದಿಂದ ಆರ್ಥಿಕ ನೆರವು ನೀಡಿಕೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕೋವಿಡ್ 2ನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ 3,000/- ರೂ.ಗಳ ಆರ್ಥಿಕ ನೆರವು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಇಪ್ಪತ್ತು ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ಡಿ.ಬಿ.ಟಿ. ಮೂಲಕ ಒಟ್ಟು 6.23 ಕೋಟಿ ರೂ. ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು. ಕೋವಿಡ್-19ರ 2ನೇ ಅಲೆಯಿಂದ ಸಂಕಷ್ಟಕ್ಕೀಡಾದ ದುರ್ಬಲ […]

ರೈತ ಸ್ಪಂದನ- 2021- 22 ನೇ ಸಾಲಿನ ವಿವಿಧ ಕೃಷಿ ಸಾಲ ವಿತರಣಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

Monday, June 21st, 2021
Raita-Spandana

ಬೆಂಗಳೂರು : ಸಹಕಾರ ಇಲಾಖೆ ಹಾಗೂ ಬೆಂಗಳೂರು ಜಿಲ್ಲಾಕೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ವತಿಯಿಂದ ಆಯೋಜಿಸಿದ್ದ ರೈತ ಸ್ಪಂದನ- 2021- 22 ನೇ ಸಾಲಿನ ವಿವಿಧ ಕೃಷಿ ಸಾಲ ವಿತರಣಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ  ಚಾಲನೆ ನೀಡಿದರು. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ , ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ರಾಜೇಂದ್ರ ಕುಮಾರ್ ಉಪಸ್ಥಿತರಿದ್ದರು.

ರಂಗಶಿಕ್ಷಣವೂ ಅಂಕಗಳಿಕೆಯ ಪದ್ದತಿಗೆ ಒಳಪಟ್ಟಾಗಲೇ ಅದರ ಪ್ರಾಮುಖ್ಯತೆ ಹೆಚ್ಚಾಗಲು ಸಾಧ್ಯ: ಟಿ ಎಸ್‌ ನಾಗಾಭರಣ

Monday, June 21st, 2021
Nagabharana

ಬೆಂಗಳೂರು : ಪದವಿ ತರಗತಿಗಳಲ್ಲಿ ರಂಗಶಿಕ್ಷಣದ ಶೈಕ್ಷಣಿಕ ಮಹತ್ವ ಬಹಳ ಹೆಚ್ಚಾಗಿದೆ. ಆದರೆ ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರೆಯಬೇಕಾದರೆ ಅದನ್ನು ಅಂಕಗಳಿಕೆಯ ಪದ್ದತಿಗೆ ಅಳವಡಿಸುವುದು ಅಗತ್ಯ ಎಂದು ಹಿರಿಯ ರಂಗಕರ್ಮಿ ಹಾಗೂ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್‌ ನಾಗಾಭರಣ ಅಭಿಪ್ರಾಯಪಟ್ಟರು. ಇಂದು ವೆಬಿನಾರ್‌ ಮೂಲಕ ಕಾಲೇಜು ಶಿಕ್ಷಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರ, ಸುರಾನಾ ಕಾಲೇಜು ಸಂಯುಕ್ತಾಶ್ರಯದಲ್ಲಿ ಹಾಗೂ ಎರಡೂ ಕಾಲೇಜುಗಳ ಐ.ಕ್ಯೂ.ಎ.ಸಿ ಸಮಿತಿಯ ಸಹಕಾರ ಮತ್ತು ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಪ್ರದರ್ಶನ […]

ಡೀಸೆಲ್ ಬೆಲೆ ಏರುತ್ತಿದ್ದಂತೆ ಯೆ ದ್ರವೀಕೃತ ಗ್ಯಾಸ್ ಬಳಸಿ ಬಸ್ ಸಂಚಾರ ಆರಂಭಿಸಿದ ಕೇರಳ

Monday, June 21st, 2021
gas Bus

ತಿರುವನಂತಪುರಂ: ಕೇರಳ ಸರ್ಕಾರ ಸೋಮವಾರ (ಜೂನ್ 21) ಪರಿಸರ ಸ್ನೇಹಿ ಎಂದೇ ಪರಿಗಣಿತವಾಗಿರುವ ದ್ರವೀಕೃತ ನೈಸರ್ಗಿಕ ಅನಿಲ(ಎಲ್ ಎನ್ ಜಿ) ಚಾಲಿತ ಮೊದಲ ಬಸ್ ಗೆ ಚಾಲನೆ ನೀಡಿದೆ. ಸಾರಿಗೆ ಸಚಿವ ಆ್ಯಂಟನಿ ರಾಜು ಅವರು ತಿರುವನಂತಪುರಂನ ಸೆಂಟ್ರಲ್ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದ್ದಾರೆ. ಕೇರಳ, ತಿರುವನಂತಪುರಂನಲ್ಲಿ ಐದು ವರ್ಷಗಳ ಹಿಂದೆಯೇ ಕೇರಳ ಸರ್ಕಾರ  ಎಲ್ ಎನ್ ಜಿ ಬಸ್ ಪ್ರಾಯೋಗಿಕ ಸಂಚಾರ ನಡೆಸಿತ್ತು. ಇದೀಗ ಪೂರ್ಣಪ್ರಮಾಣದಲ್ಲಿ […]

ಕೊರೊನಾದಂತಹ ಸಾಂಕ್ರಾಮಿಕ ರೋಗ ಎದುರಿಸಲು ಯೋಗ ಸಹಾಯಕ : ಸಚಿವ ಡಿ ವಿ ಸದಾನಂದ ಗೌಡ

Monday, June 21st, 2021
DVS-Yoga

ಬೆಂಗಳೂರು : ನಿಯಮಿತವಾಗಿ ಯೋಗಾಭ್ಯಾಸ ಮಾಡುವ ಮೂಲಕ ಕರೋನಾದಂತಹ ಸಾಂಕ್ರಾಮಿಕ ರೋಗವನ್ನು ಸಮರ್ಥವಾಗಿ ಎದುರಿಸಬಹುದಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ. ಸಚಿವರು ದೆಹಲಿಗೆ ಹೊರಡುವ ಮುನ್ನ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಹೆಬ್ಬಾಳ ಕ್ಷೇತ್ರದಲ್ಲಿ ಇಂದು ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಏಳನೇ ವಿಶ್ವ ಯೋಗದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಭಾಷಣವನ್ನು ಪ್ರಸ್ತಾಪಿಸಿದ ಸಚಿವರು ನಿಯಮಿತವಾಗಿ ಯೋಗ, ಪ್ರಾಣಾಯಾಮ ಮಾಡುವುದರಿಂದ ನಮ್ಮ […]

ಶಿವಗಂಗಾ ಯೋಗ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Monday, June 21st, 2021
shivaganga-math

ಶಿವಮೊಗ್ಗ : ಶಿವಮೊಗ್ಗದ ಶಿವಗಂಗಾ ಯೋಗ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ ಮತ್ತು ನೂತನವಾಗಿ ನಿರ್ಮಿಸಲಾದ ಮುಖ್ಯದ್ವಾರದ ಉದ್ಘಾಟನೆ ಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಕೆ.ಎಸ್.ಈಶ್ವರಪ್ಪರವರು ನೆರವೇರಿಸಿದರು. ಅವರೊಂದಿಗೆ ಶ್ರೀಶ್ರೀಶ್ರೀ ಡಾ.ಮಲ್ಲಿಕಾರ್ಜುನ ಮೃಗರಾಜೇಂದ್ರ ಮಹಾಸ್ವಾಮೀಗಳು ಮತ್ತು ಗೌರಿಗದ್ದೆ ವಿನಯ್ ಗುರೂಜಿ ಹಾಗೂ ಸ್ಥಳೀಯರು ಭಾಗವಹಿಸಿದ್ದರು.

ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ

Monday, June 21st, 2021
Yoga Day

ಬೆಂಗಳೂರು :  ಆಯುಷ್ ಇಲಾಖೆ ಹಮ್ಮಿಕೊಂಡಿರುವ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಚಾಲನೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಉಪಸ್ಥಿತರಿದ್ದರು. ಕೊರೋನಾ ಸಂಕಷ್ಟದ ಈ ಸಂದರ್ಭದಲ್ಲಿ ಯೋಗದ ಪಾತ್ರ ಮಹತ್ವವಾದದು. ಯೋಗಾಭ್ಯಾಸದಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಬಲಗೊಳ್ಳುತ್ತದೆ. ವ್ಯಕ್ತಿತ್ವ ವಿಕಸನ, ಏಕಾಗ್ರತೆಯ ಜೊತೆಗೆ ಸಮಾಜ ನಿರ್ಮಾಣದಲ್ಲಿಯೂ ಯೋಗ ಸಹಕಾರಿಯಾಗಿದೆ‌. ಯೋಗ, ವ್ಯಾಯಾಮಗಳು ನಮ್ಮ ಜೀವನಕ್ರಮವಾಗಿರಲಿ […]

ಕೃಷ್ಣಾ ಮತ್ತು ಭೀಮಾ ಪ್ರದೇಶದ ಕರ್ನಾಟಕ ಮತ್ತು ಮಹಾರಾಷ್ಟ್ರದ ಅಂತರರಾಜ್ಯ ಪ್ರವಾಹ ಪರಿಶೀಲನಾ ಸಮಿತಿಯ ಸಭೆ

Sunday, June 20th, 2021
Inter-state-flood

ಬೆಂಗಳೂರು  : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೃಷ್ಣಾ ಮತ್ತು ಭೀಮಾ ಪ್ರದೇಶದ ಕರ್ನಾಟಕ ಮತ್ತು ಮಹಾರಾಷ್ಟ್ರದ ಅಂತರರಾಜ್ಯ ಪ್ರವಾಹ ಪರಿಶೀಲನಾ ಸಮಿತಿಯ ಸಭೆ ನಡೆಸಿದರು. ಮಹಾರಾಷ್ಟ್ರ ರಾಜ್ಯದ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್, ಕರ್ನಾಟಕದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಜಲಸಂಪನ್ಮೂಲ ಇಲಾಖೆಯ ಅಪರಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕರ್ನಾಟಕ ಮತ್ತು ಮಹಾರಾಷ್ಟ್ರದ ರಾಜ್ಯ ಸರ್ಕಾರಗಳ […]

ಮುಖ್ಯಮಂತ್ರಿಗಳಿಂದ ರಾಜ್ಯದ 20 ಜಿಲ್ಲೆಗಳ ಪ್ರವಾಹ ಸನ್ನದ್ಧತೆ ಕುರಿತು ವಿಡಿಯೋ ಕಾನ್ಫರೆನ್ಸ್

Sunday, June 20th, 2021
Flood

ಬೆಂಗಳೂರು  : ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈ ಬಗ್ಗೆ ಇವತ್ತು ಪ್ರವಾಹಕ್ಕೆ ಒಳಗಾಗುವ ಸಾಧ್ಯತೆ ಇರುವ 20  ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ವಿಡಿಯೊ ಕಾನ್ಫರೆನ್ಸ್ ನಡೆಸಿದರು. ಉಪ ಮುಖ್ಯಮಂತ್ರಿ ಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್. ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಮುಖ್ಯ ಕಾರ್ಯದರ್ಶಿ […]