20 ದಿನಗಳಲ್ಲಿ ನಿರ್ಮಾಣವಾದ ಯಲಹಂಕ ಕೊವಿಡ್‌ ಆಸ್ಪತ್ರೆ ಲೋಕಾರ್ಪಣೆ

Sunday, June 20th, 2021
Covid care Hospital

ಬೆಂಗಳೂರು: ಕೊವಿಡ್‌ ಅಲೆಗಳನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಬೋಯಿಂಗ್‌ ಸಂಸ್ಥೆಯು, ‘ಸೆಲ್ಕೋ’, ‘ಡಾಕ್ಟರ್ಸ್‌ ಫಾರ್‌ ಯು’ ಸಹಯೋಗದೊಂದಿಗೆ ಯಲಹಂಕದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಅತ್ಯಾಧುನಿಕ ಕೊವಿಡ್‌-ಕೇರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಶನಿವಾರ ಉದ್ಘಾಟಿಸಿದರು. ಆಸ್ಪತ್ರೆ ನಿರ್ಮಾಣಕ್ಕೆ ಕರ್ನಾಟಕ ವಿದ್ಯುತ್‌ ನಿಗಮ ತನ್ನ ಕ್ಯಾಂಪಸ್‌ನಲ್ಲಿ ಜಾಗ ನೀಡಿದ್ದು, ಸುಮಾರು ಅರ್ಧ ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಇರುವ ಆಸ್ಪತ್ರೆಯನ್ನು ಕೇವಲ 20 ದಿನದೊಳಗೆ ಪೂರ್ಣಗೊಳಿಸಿರುವುದು ವಿಶೇಷ. […]

ರಾಜ್ಯದ 16 ಜಿಲ್ಲೆಗಳಲ್ಲಿ ಜೂನ್ 21 ರಿಂದ ಲಾಕ್ ಡೌನ್ ಸಡಿಲಿಕೆ, 13 ಜಿಲ್ಲೆಗಳಲ್ಲಿ ಮದ್ಯಾಹ್ನ 2 ರ ವರೆಗೆ ಸಡಿಲಿಕೆ

Saturday, June 19th, 2021
yedyurappa

ಬೆಂಗಳೂರು : ರಾಜ್ಯದ ಹದಿನಾರು ಜಿಲ್ಲೆಗಳಲ್ಲಿ ಕೋವಿಡ್-19 ಪಾಸಿಟಿವಿಟಿ ಪ್ರಮಾಣ ಶೇಕಡಾ 5ಕ್ಕಿಂತಲೂ ಕಡಿಮೆ ಇರುವುದರಿಂದ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು. ಉತ್ತರ ಕನ್ನಡ, ಬೆಳಗಾವಿ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ, ಬೀದರ್, ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ. ಇಲ್ಲಿಸೋಮವಾರದಿಂದ ಹೋಟೆಲ್ ಆರಂಭಿಸಲು, ಅಂಗಡಿ ಮುಂಗಟ್ಟುಗಳನ್ನು ಸಂಜೆ 5 ಗಂಟೆಯವರೆಗೂ […]

ಬಳ್ಳಾರಿಯಲ್ಲಿ ಶ್ರೀ ಮಲ್ಲೇಶ್ವರ ಹಾಗೂ ಚೌಡೇಶ್ವರಿ ದೇವಿಯ ದೇವಸ್ಥಾನದ ಶೀಲಾನ್ಯಾಸ

Saturday, June 19th, 2021
malleshwara

ಬಳ್ಳಾರಿ : ನಗರದ ಸಣ್ಣ ದುರ್ಗಮ್ಮ ಗುಡಿ ಬೀದಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಮಲ್ಲೇಶ್ವರ ಹಾಗೂ ಚೌಡೇಶ್ವರಿ ದೇವಿಯ ಶೀಲಾಮಯಾ ದೇವಸ್ಥಾನದ ಶೀಲಾನ್ಯಾಸ ಪೂಜೆ ಕಾರ್ಯಕ್ರಮದಲ್ಲಿ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಕೆ.ಎಸ್.ಈಶ್ವರಪ್ಪರವರು ಪತ್ನಿ ಸಮೇತ ಭಾಗವಹಿಸಿದ್ದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟೀಯ ಉಸ್ತುವಾರಿ ಅರುಣ್ ಸಿಂಗ್ ಮುಂದಾಳುತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದ್ದು ಮುಖ್ಯಮಂತ್ರಿಗಳ ಬದಲಾವಣೆ ಇಲ್ಲಾ ಅಂದಿದ್ದಾರೆ. ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ಬೇಕಾಗುವ ಕ್ರಮಕೈಗೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ […]

ತ್ಯಾಜ್ಯ ನಿರ್ವಹಣೆ ಯಲ್ಲಿ ಲೋಪವಾದರೆ ಕ್ರಮ ಸಚಿವ ಅರವಿಂದ ಲಿಂಬಾವಳಿ ಎಚ್ಚರಿಕೆ

Saturday, June 19th, 2021
Waste

ಬೆಂಗಳೂರು : ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಯಾವುದೇ ಲೋಪಗಳು ಕಂಡುಬಂದಲ್ಲಿ ಅದಕ್ಕೆ ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಕುರಿತಂತೆ ಬಿಬಿಎಂಪಿ ಅಧಿಕಾರಿಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ ಗುತ್ತಿಗೆದಾರರ ಜೊತೆ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಚಿವ ಅರವಿಂದ ಲಿಂಬಾವಳಿ ಸಮರ್ಪಕ ತ್ಯಾಜ್ಯ ನಿರ್ವಹಣೆ ಆದ್ಯತೆ ಆಗಬೇಕೆಂದರು. ಕಸ ನಿರ್ವಹಣೆಯ ಬಗ್ಗೆ […]

ಕರೊನಾ ಸಂದರ್ಭದಲ್ಲೇ ಅತಿಥಿಗಳ ಓಡಾಟಕ್ಕೆ 36 ಹೊಸ ವಾಹನಗಳನ್ನು ಖರೀದಿಸಿದ ರಾಜ್ಯ ಸರಕಾರ

Saturday, June 19th, 2021
innova-cresta

ಬೆಂಗಳೂರು:  ರಾಜ್ಯ ಸರಕಾರ ಅತಿಥಿಗಳ ಓಡಾಟಕ್ಕೆ 36 ಐಷಾರಾಮಿ ವಾಹನಗಳನ್ನು ಕೊಂಡಿದ್ದು ಇದಕ್ಕಾಗಿ 8.11 ಕೋಟಿ ರೂ. ವೆಚ್ಚ ಮಾಡಿದೆ. ಕರೊನಾದಂತಹ ಸಂದರ್ಭದಲ್ಲಿ ಕಳೆದೊಂದು ವರ್ಷದಿಂದೀಚೆಗೆ ಸಂಕಷ್ಟಮಯ ಸನ್ನಿವೇಶ ಇರುವಾಗಲೇ ಸರಕಾರ ಈ ನಿರ್ಧಾರ ಕೈಗೊಂಡಿರುವುದು ಆಚಾರಿ ಮೂಡಿಸಿದೆ . 36 ಹೊಸ ವಾಹನಗಳ ಪೈಕಿ 35 ಇನ್ನೋವಾ ಕ್ರಿಸ್ಟಾ ಆಗಿದ್ದು, ಒಂದು ವೋಲ್ವೋ ಸೇರಿದೆ. ರಾಜ್ಯಕ್ಕೆ ಬರುವ ಅತಿಥಿಗಳು, ಕೇಂದ್ರದಿಂದ ಬರುವ ಅಧಿಕಾರಿಗಳು, ರಾಜತಾಂತ್ರಿಕರು ಹಾಗೂ ವಿಶೇಷ ಸಂದರ್ಭಕ್ಕೆ ಈ ದುಬಾರಿ ವಾಹನಗಳನ್ನು  ಬಳಸಿಕೊಳ್ಳಲಾಗುತ್ತದೆಯಂತೆ. ಇನ್ನೊವಾ ಕ್ರಿಸ್ಟಾ ಬೆಂಗಳೂರಲ್ಲಿ […]

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಆರು ತಿಂಗಳ ನಂತರ : ಕೆ.ಎಸ್ ಈಶ್ವರಪ್ಪ

Saturday, June 19th, 2021
ks-Eswarappa

ದಾವಣಗೆರೆ : ಕರೊನಾ ಅಲೆ ಸಂಪೂರ್ಣವಾಗಿ ಮುಗಿದಿಲ್ಲ. ಡಿಸೆಂಬರ್‌ವರೆಗೆ ಯಾವುದೇ ಚುನಾವಣೆ ನಡೆಯಲ್ಲ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯನ್ನೂ ಮಾಡಲ್ಲ. ಚುನಾವಣೆ ಬೇಡ ಎಂದು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಕೆ.ಎಸ್ ಈಶ್ವರಪ್ಪ ಹೇಳಿದರು. ಕರೊನಾ ಉಲ್ಬಣಿಸದಿದ್ದಲ್ಲಿ ರಾಜ್ಯದಲ್ಲಿ ಇಷ್ಟೊತ್ತಿಗೆ ತಾಪಂ ಮತ್ತು ಜಿಪಂ ಚುನಾವಣೆ ರಂಗೇರುತ್ತಿತ್ತು. 2ನೇ ಅಲೆಯ ತೀವ್ರತೆ ಹೆಚ್ಚುತ್ತಿದ್ದಂತೆ ಇನ್ನೂ 6 ತಿಂಗಳ ಕಾಲ ರಾಜ್ಯದಲ್ಲಿ ಯಾವುದೇ ಚುನಾವಣೆ ನಡೆಯಲ್ಲ ಎಂದು ತಿಂಗಳ ಹಿಂದೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ ಎಂದರು. ಸದ್ಯ ಲಾಕ್ಡೌನ್ […]

ಕ್ಯಾಶ್‍ಬ್ಯಾಕ್ ಆಫರ್ : 1.08 ಲಕ್ಷ ರೂಪಾಯಿ ಕಳಕೊಂಡ ಮಹಿಳೆ

Saturday, June 19th, 2021
cash back

ಹುಬ್ಬಳ್ಳಿ : ಕ್ಯಾಶ್‍ಬ್ಯಾಕ್ ಹಣ ಜಮೆ ಮಾಡುತ್ತೇನೆ ಎಂದು ನಂಬಿಸಿ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯ ಒಟಿಪಿ  ಮಾಹಿತಿ ಪಡೆದು ಅಕ್ರಮವಾಗಿ 1.08 ಲಕ್ಷ ರೂಪಾಯಿ ಹಣ ವರ್ಗಾವಣೆ ಮಾಡಿಕೊಂಡ ಘಟನೆ ಧಾರವಾಡದಿಂದ ವರದಿಯಾಗಿದೆ ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಧಾರವಾಡ ಮೂಲದ ಸ್ಮೀತಾ ಅವರಿಗೆ ಬರ್ಕಾ ಶರ್ಮಾ ಎಂಬ ಹೆಸರಿನ ಅಪರಿಚಿತ ಮಹಿಳೆಯೊಬ್ಬರು ಕರೆ ಮಾಡಿ. ನಾನು ಮುಂಬೈ ಕ್ಯಾಶ್ ಪೇ ಬ್ಯಾಂಕ್ ವಿಭಾಗದಿಂದ ಕರೆ ಮಾಡುತ್ತಿದ್ದೇನೆ. ನಿಮ್ಮ ಕ್ರೇಡಿಟ್ ಕಾರ್ಡ್ ಕ್ಯಾಶ್ ಬ್ಯಾಕ್ ಪಾಯಿಂಟ್ಸ್ […]

ಮಗಳನ್ನು ತಂದೆಯೇ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ

Saturday, June 19th, 2021
gayatri

ಮೈಸೂರು: ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ತನ್ನ ತಂದೆಗೆ ಊಟ ಕೊಂಡುಹೋಗಿದ್ದ ಮಗಳನ್ನು ತಂದೆಯೇ  ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ನಡೆದಿದೆ. ಗಾಯತ್ರಿ (19) ಕೊಲೆಯಾದ ಯುವತಿ. ತಂದೆ ಜಯರಾಂನಿಂದಲೇ ಮರ್ಯಾದೆ ಹತ್ಯೆಯಾಗಿದೆ. ಮಗಳು ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದು, ಇದರಿಂದ ಸಮಾಜದಲ್ಲಿ ತಲೆತಗ್ಗಿಸಬೇಕಾಗುತ್ತದೆ ಎಂಬ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆನ್ನಲಾಗಿದೆ. ಈ ವಿಷಯವಾಗಿ ಒಂದು ತಿಂಗಳಿನಿಂದ ಮನೆಯಲ್ಲಿ ಪೋಷಕರು ಮತ್ತು ಯುವತಿಯ ನಡುವೆ ಗಲಾಟೆ ನಡೆಯುತ್ತಿತ್ತು. ಈಕೆ ಪಟ್ಟಣದ ಉಪ್ಪಾರಗೇರಿ ಬಡಾವಣೆಯ ಯುವಕನನ್ನು […]

ಬಹಿರಂಗ ಹೇಳಿಕೆ ಕೊಡವರ ವಿರುದ್ಧ ಕಠಿನ ಕ್ರಮ ನಾಯಕತ್ವ ಬದಲಾವಣೆ ಇಲ್ಲ

Friday, June 18th, 2021
R Ashoka

ಬೆಂಗಳೂರು : ಶುಕ್ರವಾರ  ಸಂಜೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸರ್ಕಾರದ ಇಮೇಜ್ ಹೆಚ್ಚಿಸಲು ಚರ್ಚೆ ನಡೆಸಲಾಗಿದೆ. ಎಂದು ಕಂದಾಯ ಸಚಿವರಾದ  ಆರ್ ಅಶೋಕ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ, ಜೂನ್ 25 ರಂದು ಕರಾಳ ದಿನ ಆಚರಣೆಗೆ ನಿರ್ಧರಿಸಲಾಗಿದೆ. ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿದ್ದನ್ನು ಖಂಡಿಸಿ ಕರಾಳದಿನ ಆಚರಿಸಲಾಗುವುದು ಎಂದು ಕಂದಾಯ ಸಚಿವರಾದ ಶ್ರೀ ಆರ್. ಅಶೋಕ್ ರವರು ತಿಳಿಸಿದ್ದಾರೆ. ಕೋರ್ ಕಮಿಟಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 21 ರಂದು ಕೊರೋನಾ ನಿಯಮ […]

ಪೋಲಿಸರ ಕೈಗೆ ಸಿಕ್ಕಿ ಬಿದ್ದ ಗಾಂಜಾ ವ್ಯಾಪಾರ ಮಾಡುತಿದ್ದ ಸಾಫ್ಟ್ ವೇರ್ ಉದ್ಯೋಗಿ ಯುವತಿ

Friday, June 18th, 2021
Renuka

ಬೆಂಗಳೂರು : ಚನ್ನೈನಲ್ಲೇ ಸಾಫ್ಟ್ ವೇರ್ ಉದ್ಯೋಗಿ ಯುವತಿಯೊಬ್ಬಳು ಪ್ರಿಯಕರನ ಮಾತು ಕೇಳಿ  ಗಾಂಜಾ ವ್ಯಾಪಾರಕ್ಕೆ ಕೈ ಹಾಕಿ ಬೆಂಗಳೂರಿನಲ್ಲಿ ಪೋ ಲಿಸರ ಕೈಗೆ ಸಿಕ್ಕಿ ಹಾಕಿ ಕೊಂಡಿದ್ದಾಳೆ. ಆಂಧ್ರಪ್ರದೇಶ ಶ್ರೀಕಾಕುಳಂನ ರೇಣುಕಾ(25) ಚೆನೈನಲ್ಲಿ ಎಂಜಿನಿಯರಿಂಗ್ ಮಾಡುವಾಗ ಕಡಪದ ಸಿದ್ದಾರ್ಥ್ ಜೊತೆಗೆ ಲವ್ ಆಗಿತ್ತು. ವಿದ್ಯಾಭ್ಯಾಸ ಮುಗಿದ ಬಳಿಕ ಸಿದ್ಧಾರ್ಥ್ ತವರು ರಾಜ್ಯಕ್ಕೆ ಹೋಗಿದ್ದ. ಯುವತಿ ರೇಣುಕಾ ಚನ್ನೈನಲ್ಲೇ ಸಾಫ್ಟ್ ವೇರ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದಳು. ಪ್ರೀತಿಗಾಗಿ ಪೋಷಕರನ್ನ ದೂರಮಾಡಿ ಪ್ರಿಯತಮನಿಗಾಗಿ ಯುವತಿ ಗಾಂಜಾ ಮಾರಾಟಕ್ಕಿಳಿದ್ದಳು. ಹಣದಾಸೆಗೆ ಪ್ರಿಯತಮೆಯನ್ನೂ ಗಾಂಜಾ ಮಾರಾಟಕ್ಕೆ ಇಳಿಸಿದ್ದ. […]