ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣ ವರದಿ: ನಾಳೆ ತಜ್ಞರೊಂದಿಗೆ ಸಭೆ; ಹೊಸ ಮಾರ್ಗಸೂಚಿ ಜಾರಿಗೆ ಕ್ರಮ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Thursday, December 2nd, 2021
omicron

ನವದೆಹಲಿ :  ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಾಳೆ ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಪರಿಣತರೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ನವದೆಹಲಿಯಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಯವರು, ರಾಜ್ಯದಿಂದ ಎನ್ ಸಿ ಬಿ ಎಸ್ ಗೆ ಕಳುಹಿಸಿದ್ದ ಮಾದರಿಯಲ್ಲಿ ಕೇಂದ್ರ ಸರ್ಕಾರವು ಇಂದು ಎರಡು ಒಮಿಕ್ರಾನ್ ಪ್ರಕರಣಗಳನ್ನು ದೃಢ ಪಡಿಸಿದೆ. ಆದರೆ ವಿವರವಾದ ಪರೀಕ್ಷಾ ವರದಿ ಬಂದಿಲ್ಲ. […]

ಕೋವಿಡ್ : ಎಲ್ಲ ಪ್ರಯಾಣಿಕರ ತಪಾಸಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Wednesday, December 1st, 2021
Basavaraja Bommai

ಹುಬ್ಬಳ್ಳಿ : ಕೋವಿಡ್ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ  ಅಂತರರಾಷ್ಟ್ರೀಯ ಪ್ರಯಾಣಿಕರ  ತಪಾಸಣೆ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತಮಾಡುತ್ತಿದ್ದರು.  ಸುಮಾರು 2500 ಅಂತರರಾಷ್ಟ್ರೀಯ ಪ್ರಯಾಣಿಕರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುತ್ತಾರೆ. ಕೆಲವರು ಮಂಗಳೂರು ವಿಮಾನ ನಿಲ್ದಾಣಕ್ಕೂ ಬರುತ್ತಾರೆ. ಕಳೆದ ಬಾರಿಯ ಅನುಭವದ ಮೇರೆಗೆ ಈಗಿನಿಂದಲೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು. ಕೋವಿಡ್ : ಅನಗತ್ಯ ಆತಂಕ ಬೇಡ  ಜನರು ಕೋವಿಡ್ ಹೊಸ ತಳಿಯ […]

ಭಾರತವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ : ಸಿಎಂ ಬಸವರಾಜ ಬೊಮ್ಮಾಯಿ

Friday, November 26th, 2021
Constitution Day

ದಾವಣಗೆರೆ : ಭಾರತವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂವಿಧಾನ ದಿನದ ಅಂಗವಾಗಿ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಓದಿದ ನಂತರ ಮಾತನಾಡಿದರು. ಈ ದಿನ ಸಂವಿಧಾನ ವನ್ನು ಅಂಗೀಕರಿಸಿದ ಮಹತ್ವದ ದಿನ. ಭಾರತದ ಸಂವಿಧಾನ ಇಶ್ವದ ಅತ್ಯಂತ ಶ್ರೇಷ್ಠ ಸಂವಿಧಾನ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ, ಸಾಮಾಜಿ, ಆರ್ಥಿಕ, ಧಾರ್ಮಿಕ ಚಟುವಟಿಕೆಗಳಿಗೆ ಸ್ವಾತಂತ್ರ್ಯ ಜೊತೆಗೆ ಸಮಾನತೆ, ಭ್ರಾತೃತ್ವ, ಪರಸ್ಪರ ಪ್ರೀತಿ ವಿಶ್ವಾಸ, […]

ಬೆಳೆ ಹಾನಿಗೆ ಶೀಘ್ರವಾಗಿ ಪರಿಹಾರ ವಿತರಣೆ: ಹಾಸನದಲ್ಲಿ ಕಂದಾಯ‌ ಸಚಿವ ಆರ್ ಅಶೋಕ್

Wednesday, November 24th, 2021
R Ashok

ಹಾಸನ : ಹಾಸನ ಜಿಲ್ಲೆಯಲ್ಲಿ ಒಟ್ಟು 47 ಸಾವಿರ ಹೆಕ್ಟೇರ್ ಕೃಷಿ ಹಾಗೂ  ತೋಟಗಾರಿಕೆ ಬೆಳೆ ಕೂಡ ಹಾನಿಯಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಸಂತೆಮರೂರು ಮತ್ತು ರಾಮನಾಥಪುರ ಹೋಬಳಿಯಲ್ಲಿ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಕಂದಾಯ ಸಚಿವರು ಮಳೆಯಿಂದ ಹಾನಿಗೊಳಗಾದ ರಾಗಿ ಸೇರಿದಂತೆ ದ್ವಿದಳಧಾನ್ಯ ಬೆಳೆದ ಪ್ರದೇಶಕ್ಕೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಈಗಾಗಲೇ ಐದು ಲಕ್ಷಕ್ಕೂ ಅಧಿಕ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಕಂದಾಯ […]

ಪೇಜಾವರ ಶ್ರೀಗಳ ವಿವಾದದ ಬಳಿಕ, ಅಭಿಮಾನಿಗಳಿಗೆ ಪತ್ರ ಬರೆದ ಹಂಸಲೇಖ

Wednesday, November 24th, 2021
Hamsalekha

ಬೆಂಗಳೂರು: ಪೇಜಾವರ ಶ್ರೀಗಳ ಕುರಿತು ನೀಡಿದ್ದ ಹೇಳಿಕೆ ಭಾರಿ ವಿವಾದಕ್ಕೆ ತಿರುಗಿದ ಬೆನ್ನಲ್ಲೇ  ವಿಚಾರಣೆಗೆ ಹಾಜರಾಗುವಂತೆ ಸಂಗೀತ ನಿರ್ದೇಶಕ ಹಂಸಲೇಖಾ ಅವರಿಗೆ ಪೊಲೀಸರು  ನೋಟೀಸ್ ನೀಡಿದ್ದರು. ಆದರೆ ಅನಾರೋಗ್ಯ ಹಿನ್ನೆಲೆಯಲ್ಲಿ ಹಂಸಲೇಖಾ ವಿಚಾರಣೆಗೆ ಹಾಜರಾಗಿರಲಿಲ್ಲ. ಇದರ ಬೆನ್ನಲ್ಲೇ ಅಭಿಮಾನಿಗಳಿಗೆ ಪತ್ರ ಬರೆದಿರುವ ಹಂಸಲೇಖಾ, ಕನ್ನಡಿಗರ ಪ್ರೀತಿಗೆ ಧನ್ಯವಾದ ತಿಳಿಸಿದ್ದಾರೆ. ನಾನು ಆರೋಗ್ಯದಿಂದ ಇದ್ದೇನೆ. ನಾನು ಅನಾರೋಗ್ಯಕ್ಕೀಡಾಗಿದ್ದೇನೆ ಎಂದು ಹಲವು ಕರೆಗಳು ಬರುತ್ತಿವೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ. ನನಗೆ ಗೊತ್ತು, ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು…. […]

ಸರ್ಕಾರಿ ಅಧಿಕಾರಿಗಳ ಮನೆಗೆ ಎಸಿಬಿ ಅಧಿಕಾರಿಗಳ ದಾಳಿ, ಬಾತ್‌ ರೂಮ್ ಪೈಪಿನಲ್ಲೂ ಹಣ

Wednesday, November 24th, 2021
Jewarshi

ಬೆಂಗಳೂರು : ಬುಧವಾರ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಒಟ್ಟು 68 ಸ್ಥಳಗಳಲ್ಲಿ 503 ಅಧಿಕಾರಿ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಸರ್ಕಾರಿ ನೌಕರರು ಹೊಂದಿರುವ ಆಸ್ತಿಗಳ ಮೌಲ್ಯ, ಅವರು ಹೊಂದಿರುವ ಚಿನ್ನಾಭರಣಗಳು, ಇತರೆ, ಬ್ಯಾಂಕ್ ಠೇವಣಿಗಳ ಕುರಿತ ವಿವರಗಳು ಇಲ್ಲಿದೆ. 1) ಎಂ. ಆರಾದರ್, ಕಿರಿಯ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಜೇವರ್ಗಿ ಕಲಬುರಗಿಯಲ್ಲಿ 2 ವಾಸದ ಮನೆಗಳು, ಬೆಂಗಳೂರು ನಗರದಲ್ಲಿ 1 ನಿವೇಶನ, 3 ವಿವಿಧ ಕಂಪನಿಯ ಕಾರುಗಳು, 1 ದ್ವಿಚಕ್ರ ವಾಹನ, 1 […]

ಮಳೆಯಿಂದ ಹಾನಿ, ಶೀಘ್ರ ಪರಿಹಾರಕ್ಕೆ ಸೂಚನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Tuesday, November 23rd, 2021
Bengaluru-Flood

ಬೆಂಗಳೂರು :  ಬೆಂಗಳೂರಿನ ಯಲಹಂಕ ಪ್ರದೇಶದಲ್ಲಿ ನೀರು ನುಗ್ಗಿರುವ  ಮನೆಗಳಿಗೆ 10 ಸಾವಿರ ರೂ.ಗಳು, ಸಂಪೂರ್ಣ ಹಾನಿಯಾಗಿರುವ ಮನೆಗಳಿಗೆ 5 ಲಕ್ಷ ರೂ.ಗಳು ಹಾಗೂ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿರುವ ಮನೆಗಳಿಗೆ  1  ಲಕ್ಷ ರೂ.ಗಳ  ತುರ್ತು ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಬೆಳಿಗ್ಗೆ ಜಲಾವೃತವಾಗಿರುವ ಯಲಹಂಕದ  ಕೇಂದ್ರೀಯ  ವಿಹಾರ್ ಅಪಾರ್ಟ್ಮೆಂಟ್ ಸಮುಚ್ಚಯಕ್ಕೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಪೈಕಿ ನೀರು ನುಗ್ಗಿರುವ ಮನೆಗಳಿಗೆ 10.ಸಾವಿರ ರೂ.ಗಳನ್ನು ಇಂದೇ […]

ಬೆಳೆಹಾನಿಯಾದ ರೈತರ ಖಾತೆಗೆ ಪರಿಹಾರಧನ: ಸಿಎಂ ಬಸವರಾಜ ಬೊಮ್ಮಾಯಿ

Monday, November 22nd, 2021
Kolara Crop loss

ಕೋಲಾರ :  ರಾಜ್ಯದಲ್ಲಿ ಅತಿವೃಷ್ಟಿಯಿಂದ ಅಪಾರ ಬೆಳೆ ನಷ್ಟವಾಗಿದ್ದು, ಜಿಪಿಎಸ್ ಆಧಾರಿತ ಸರ್ವೇ ಮಾಡಿ ವಿವರಗಳನ್ನು ಪರಿಹಾರದ ಆ್ಯಪ್ ಗೆ ಅಪಲೋಡ್ ಮಾಡಲು ಸೂಚನೆ ನೀಡಲಾಗಿದೆ.   ವಿವರಗಳು ಅಪಲೋಡ್ ಆದ ಕೂಡಲೇ ತ್ವರಿತವಾಗಿ  ರೈತರ ಖಾತೆಗೆ  ಪರಿಹಾರ ಹಣ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೋಲಾರ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕೋಲಾರ ಪ್ರದೇಶದಲ್ಲಿ  ಮಳೆಯಿಂದಾಗಿ 90% ರಷ್ಟು […]

ಮಂಗಳವಾರ ಹಾಳಕೆರೆಯಲ್ಲಿ ಡಾ. ಸಂಗನಬಸವ ಮಹಾಸ್ವಾಮಿಗಳ ಸಮಾಧಿ

Monday, November 22nd, 2021
Sanganabasava

ಬೆಂಗಳೂರು  : ಕನ್ನಡ ನಾಡು ಕಂಡ ಅಪ್ರತಿಮ ಸಂತ-ಮಹಾಂತರಾಗಿ 8 ದಶಕಗಳ ಕಾಲ ನಾಡು -ನುಡಿಯ ಉದ್ದಾರಕ್ಕಾಗಿ ಶ್ರಮಿಸಿದ  ಗದಗ ಜಿಲ್ಲೆ ಗಜೇಂದ್ರಗಡದ ಹಾಲಕೆರೆಯ ಶ್ರೀ  ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಎಂಬತ್ತೈದು ವಯಸ್ಸಿನ ಡಾ. ಸಂಗನಬಸವ ಮಹಾಸ್ವಾಮಿಗಳು ಈ ದಿನ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಬೆಳಗಿನ ಜಾವ 5 ಗಂಟೆಗೆ  ಅನಾರೋಗ್ಯದಿಂದ ಲಿಂಗೈಕ್ಯರಾಗಿದ್ದಾರೆ. ಪರಮ ಪೂಜ್ಯ ಶ್ರೀಮದ ವೀರಶೈವ ಶಿವಯೋಗಿ ಮಂದಿರ ಅಧ್ಯಕ್ಷರು, ತಮ್ಮ ಜೀವನದದುದ್ದಕ್ಕೂ ಬಸವ ತತ್ವಗಳನ್ನು ಅನುಷ್ಠಾನಕ್ಕೆ ತರಲು ಆಹರ್ನಿಶಿ ಶ್ರಮಿಸಿದರು. […]

ಬಿಡಿಎ ಭ್ರಷ್ಟಾಚಾರ: ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಸಿಎಂ

Sunday, November 21st, 2021
Basavaraja Bommai

ಬೆಂಗಳೂರು : ನಮ್ಮ ಸರ್ಕಾರ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು  ಮುಖ್ಯಮಂತ್ರಿ ಬಸವರಾಜ .  ಬೊಮ್ಮಾಯಿ ಅವರು ಇಂದು  ಸ್ಪಷ್ಟಪಡಿಸಿದರು. ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಮುಖ್ಯಮಂತ್ರಿಗಳು ಎ.ಸಿ. ಬಿ ವರದಿ ಸಲ್ಲಿಸಿದ  ನಂತರ ಶಿಫಾರಸ್ಸುಗಳನ್ನು ಚಾಚೂತಪ್ಪದೆ ಪಾಲಿಸಲಾಗುವುದು. ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ  ಎಂದರು. ‘ಸಾರ್ವಜನಿಕರಿಂದಲೂ ಬಿಡಿಎ ಅಕ್ರಮಗಳ ಬಗ್ಗೆ ದೂರುಗಳು ಬಂದಿದ್ದವು. ಎಸ್.ಆರ್.ವಿಶ್ವನಾಥ ಅವರೂ ಸಹ ಈ ಬಗ್ಗೆ ನನ್ನ ಗಮನ ಸೆಳೆದಿದ್ದರು. ಸಂಬಂಧಪಟ್ಟ ನಗರಾಭಿವೃದ್ಧಿ ಇಲಾಖೆ  ಅಧಿಕಾರಿಗಳಿಗೆ ಈ […]