ರಾಜ್ಯದ ಅಭಿವೃದ್ಧಿಗೆ ಪಕ್ಷ ಭೇದ ಮರೆತು ಕಾರ್ಯ ಮಾಡುತ್ತಿದ್ದ ವ್ಯಕ್ತಿ ಅನಂತಕುಮಾರ್: ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್

Sunday, September 24th, 2023
Ananth-KUmar

ಬೆಂಗಳೂರು : ರಾಜ್ಯದ ಅಭಿವೃದ್ಧಿಗೆ ಪಕ್ಷ ಭೇದ ಮರೆತು ಕಾರ್ಯ ನಿರ್ವಹಿಸುತ್ತಿದ್ದ ನಾಯಕ ಅನಂತಕುಮಾರ್. ರಾತ್ರಿ ಹಗಲೆನ್ನದೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಚಿಂತಿಸುತ್ತಿದ್ದ ವ್ಯಕ್ತಿಯನ್ನು ರಾಜ್ಯ ಕಳೆದುಕೊಂಡಂತೆ ಆಗಿದೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಇಂದು ನಗರದ ಧೊಂಡುಸಾ ಸಭಾಂಗಣದಲ್ಲಿ ಆಯೋಜಿಸಿದ್ದ ಅನಂತ ನಮನ 64 – ಅನಂತಕುಮಾರ್ ಅವರ 64 ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಹಸಿರು ಭಾನುವಾರ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಬಹಳ ಸಂತೋಷದಿಂದ ಭಾಗಿಯಾಗಿದ್ದನೆ. […]

ಸಮಾಜಕ್ಕಾಗಿ ಕೆಲಸ ಮಾಡಿದವರು ಇತಿಹಾಸದಲ್ಲಿ ಅಜರಾಮರರಾಗಿ ಉಳಿಯುತ್ತಾರೆ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Friday, September 15th, 2023
Laxmi-Hebbalkar

ಬೆಳಗಾವಿ: ಸ್ವಾರ್ಥಕ್ಕಾಗಿ, ಸ್ವಹಿತಕ್ಕಾಗಿ ಕೆಲಸ ಮಾಡಿದವರನ್ನು ಸಮಾಜ ಬಹುಬೇಗ ಮರೆಯುತ್ತದೆ. ಸಮಾಜಕ್ಕಾಗಿ, ಪ್ರಜೆಗಳ ಒಳಿತಿಗಾಗಿ ಕೆಲಸ ಮಾಡಿದವರು ಇತಿಹಾಸದಲ್ಲಿ ಅಜರಾಮರರಾಗಿ ಉಳಿಯುತ್ತಾರೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಶುಕ್ರವಾರ ಸಂಜೆ ಇನ್ ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಅಸೋಸಿಯೇಶನ್ ಆಯೋಜಿಸಿದ್ದ ಎಂಜಿನಿಯರ್ಸ್ ಡೇ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶ್ರಮ ಜೀವಿಗಳಿಗೆ ಸಾಧಿಸುವ ಛಲ ಇರುತ್ತದೆ. ಚಂದ್ರಯಾನ ಯಶಸ್ವಿ ಮಾಡುವಲ್ಲಿ ಶೇ.30ಕ್ಕಿಂತ ಹೆಚ್ಚು ಮಹಿಳೆಯರ, ಅದರಲ್ಲೂ ಗ್ರಾಮೀಣ […]

ಮಹಾಪ್ರಸಾದ ಸೇವೆಗೆ ಚಾಲನೆ ನೀಡಿ ಸ್ವತಃ ಉಣಬಡಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ

Monday, September 11th, 2023
laxmi Hebbalkar

ಬೆಳಗಾವಿ: ತಾಲೂಕಿನ ಬಾಳೇಕುಂದ್ರಿ ಬಿ ಕೆ ಗ್ರಾಮದ ಶ್ರೀ ರಾಮೇಶ್ವರ ಮಂದಿರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಭೇಟಿ ನೀಡಿ ದರ್ಶನ ಆಶೀರ್ವಾದ ಪಡೆದರು. ಶ್ರಾವಣದ ಕೊನೆಯ ಸೋಮವಾರದ ಪ್ರಯುಕ್ತ ಮಹಾಪ್ರಸಾದ ಸೇವೆಗೆ ಚಾಲನೆ ನೀಡಿದ ಅವರು, ಸ್ವತಃ ಭಕ್ತಾದಿಗಳಿಗೆ ಪ್ರಸಾದವನ್ನು ಉಣಬಡಿಸಿದರು. ಗ್ರಾಮದ ಹಿರಿಯರು, ಯುವರಾಜ ಕದಂ, ಶಂಕರಗೌಡ ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಕೋಲಕಾರ, ಉಮೇಶರಾವ್ ಜಾಧವ್, ಅಪ್ಸರ್ ಜಮಾದಾರ, […]

ದೇಶದ ಸಂವಿಧಾನ-ಸಾಮರಸ್ಯ ಸಂಸ್ಕೃತಿ ನಮ್ಮ ಶಕ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Sunday, September 10th, 2023
ssf

ಬೆಂಗಳೂರು : ದೇಶದ ಐಕ್ಯತೆ, ಸಂವಿಧಾನ ಮತ್ತು ಸಮಗ್ರತೆಯನ್ನು ಕಾಪಾಡಿಕೊಳ್ಳಲು ಎಸ್ ಎಸ್ ಎಫ್ ಕೆಲಸ ಮಾಡಬೇಕು. ಇದಕ್ಕಾಗಿ ತಮ್ಮ ಶಕ್ತಿ, ಸಂಘಟನೆಯನ್ನು ಮುಡಿಪಾಗಿ ಇಟ್ಟು ಅಭಿವೃದ್ಧಿ ದಿಕ್ಕಿನಲ್ಲಿ ದೇಶವನ್ನು ವೇಗವಾಗಿ ಮುನ್ನಡೆಸುವ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅರಮನೆ ಮೈದಾನದಲ್ಲಿ ನಡೆದ ಸುನ್ನಿ ಸ್ಟೂಡೆಂಟ್ ಫೆಡರೇಷನ್ (SSF) ಗೋಲ್ಡನ್ 50 ಸಮಾವೇಷದಲ್ಲಿ ಮಾತನಾಡಿದರು. ಸಾಮರಸ್ಯ ಭಾರತದ ಮಣ್ಣಿನ ಗುಣ. 50 ವರ್ಷಗಳಿಂದ ದೇಶದ ಸೌಹಾರ್ದ ಮತ್ತು ಸಾಮರಸ್ಯದ ಸಂಸ್ಕೃತಿ […]

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ

Monday, March 28th, 2022
Anushree

ಮೈಸೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮೈಸೂರಿನ ಟಿ. ನರಸಿಪುರ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ನಡೆಸಿದೆ. ಟಿ. ನರಸಿಪುರ ತಾಲೂಕಿನ ಅಕ್ಕೂರು ಗ್ರಾಮದ ಅನುಶ್ರೀ ಮೃತ ವಿದ್ಯಾರ್ಥಿನಿ. ಅನುಶ್ರೀ ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಅನುಶ್ರೀ ತಾಲೂಕಿನ ವಿದ್ಯೋದಯ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಪರೀಕ್ಷಾ ಕೇಂದ್ರದಲ್ಲಿದ್ದ ಸಿಬ್ಬಂದಿ ತಕ್ಷಣ ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಪಾವಗಡ ಖಾಸಗಿ ಬಸ್ಸ್ ದುರಂತದಲ್ಲಿ ಮೃತರ ಸಂಖ್ಯೆ ಏರಿಕೆ

Saturday, March 19th, 2022
Pavgad-Bus-Accident

ತುಮಕೂರು: ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದ ಬಳಿ  ಖಾಸಗಿ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಕನಿಷ್ಠ ಎಂಟು ಮೃತಪಟ್ಟು ಮೂವತ್ತೈದು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಬಸ್ಸಿನಲ್ಲಿ 100ಕ್ಕೂ ಹೆಚ್ಚು ಪ್ರಯಾಣಿಕರಿದ್ದರೆ 30ಕ್ಕೂ ಅಧಿಕ ಮಂದಿ ಬಸ್ಸಿನ ಮೇಲೆ ಕುಳಿತು ಸಾಗುತ್ತಿದ್ದರು. ಬೆಳಗ್ಗೆ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳು, ಆಫೀಸಿಗೆ ಜನರು ಹೋಗುವ ಹೊತ್ತು. ಈ ದಾರಿಯಲ್ಲಿ ಸಂಚಾರಕ್ಕೆ ಬೇರೆ ಸಾರಿಗೆ ಸೌಕರ್ಯಗಳಿಲ್ಲದ ಕಾರಣ ಸಿಕ್ಕಿದ್ದ ಎಸ್ ವಿಟಿ ಬಸ್ಸಿನಲ್ಲಿ ಸಾಧ್ಯವಾದಷ್ಟು ಜನ ಹತ್ತಿದ್ದರು, […]

ಮದುವೆಯಾದ ಮೇಲೂ ಪತಿಯ ರಾಸಲೀಲೆ, ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ

Saturday, March 19th, 2022
Vindya shree Rakesh

ಬೆಂಗಳೂರು :  ಪತಿ ಮದುವೆಯಾಗಿ ಚೆನ್ನಾಗಿ ನೋಡಿಕೊಳ್ತಿಲ್ಲ ಎಂದು ಆರೋಪಿಸಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಗಾಯಿತ್ರಿ ನಗರದಲ್ಲಿ ನಡೆದಿದೆ. ಶುಕ್ರವಾರ ಸಂಜೆ  ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 28 ವರ್ಷದ ವಿಂದ್ಯಾಶ್ರೀ ಆತ್ಮಹತ್ಯೆಗೆ ಶರಣಾದ ಮಹಿಳೆ. 9 ತಿಂಗಳ ಹಿಂದೆ ರಾಕೇಶ್ ಎಂಬಾತನನ್ನು ಪ್ರೀತಿಸಿ ವಿಂದ್ಯಾಶ್ರೀ ಮದುವೆ ಆಗಿದ್ದರು. ಮದುವೆ ಬಳಿಕವೂ ರಾಕೇಶ್ ಯುವತಿಯರ ಜೊತೆ ಲವ್ವಿ ಡವ್ವಿ ಶುರು ಮಾಡಿಕೊಡಿದ್ದನು  ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ಯು ಆರ್ […]

ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು ಸಿಎಂ ಬಸವರಾಜ ಬೊಮ್ಮಾಯಿ

Tuesday, March 15th, 2022
CM Hijab

ಬೆಂಗಳೂರು : ಉಚ್ಛ ನ್ಯಾಯಾಲಯವು ವಸ್ತ್ರಸಂಹಿತೆಯ ಕುರಿತ ಪ್ರಕರಣದಲ್ಲಿ ತನ್ನ ತೀರ್ಪನ್ನು ಪ್ರಕಟಿಸಿದೆ. ಸಮವಸ್ತ್ರವನ್ನು ಎತ್ತಿ ಹಿಡಿದಿದೆ ಮತ್ತು ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎನ್ನುವುದನ್ನು ಹೇಳಿದೆ. ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ಈ ವಿಷಯ ತಿಳಿಸಿದರು. “ಇದು ನಮ್ಮ ಮಕ್ಕಳ ಭವಿಷ್ಯ ಹಾಗೂ ಶಿಕ್ಷಣದ ಪ್ರಶ್ನೆ. ಮಕ್ಕಳಿಗೆ ವಿದ್ಯೆಗಿಂತ ಮುಖ್ಯವಾದುದ್ದು ಬೇರೊಂದಿಲ್ಲ. ಹೀಗಾಗಿ ಉಚ್ಚ ನ್ಯಾಯಾಲಯದ ತ್ರಿ […]

ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ, ಹಿಜಾಬ್ ಧರಿಸುವುದು ಧಾರ್ಮಿಕ ಆಚರಣೆಯಲ್ಲ – ಹೈಕೋರ್ಟ್

Tuesday, March 15th, 2022
Hijab Ban

ಬೆಂಗಳೂರು: ಉಡುಪಿಯ ಕಾಲೇಜೊಂದರ ಆರು ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿಗೆ ಪ್ರವೇಶ ನಿರಾಕರಿಸಿದ ಕಾಲೇಜು ಆಡಳಿತವನ್ನು ವಿರೋಧಿಸಿ ಕರಾವಳಿಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ವಿವಾದ ಆರಂಭಸಿತ್ತು. ಬಳಿಕ ನಡೆದ ಬೆಳವಣಿಗೆಗಳಲ್ಲಿ ವಿವಾದ ಕೋರ್ಟ್ ಮೆಟ್ಟಲೇರಿತ್ತು. ಈಗ ಹೊರಬಿದ್ದ ಕೋರ್ಟ್ ತೀರ್ಪಿನಂತೆ  ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ, ಸಮವಸ್ತ್ರವನ್ನು ಕಡ್ಡಾಯ ಮಾಡುವುದು ಸಂವಿಧಾನದ 19 (1) (ಎ) ಮತ್ತು 25 ರ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಲ್ಲ. ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ […]

ಬಡತನದ ನಿರ್ಮೂಲನೆಗೆ ನರೇಗಾ ಅಸ್ತ್ರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Monday, March 14th, 2022
narega festival

ಬೆಂಗಳೂರು : ಬಡತನದ ನಿರ್ಮೂಲನೆಯಲ್ಲಿ ನರೇಗಾ ಎನ್ನುವ ಅಸ್ತ್ರ ಬಹಳ ದೊಡ್ಡ ಪಾತ್ರವ್ನನು ನಿರ್ವಹಿಸಲಿದೆ. ನರೇಗಾದಡಿ ಹಲವಾರು ಯೋಜನೆಗಳನ್ನು ಸೇರ್ಪಡೆಗೊಳಿಸಬೇಕು. ಒಂದು ವರ್ಷದ ದುಡಿಮೆಯನ್ನು ಸಂಭ್ರಮಿಸಲು ಆಚರಿಸುವ ನರೇಗಾ ಹಬ್ಬ ರಾಜ್ಯದ ಹಬ್ಬ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿದ್ದ ನರೇಗಾ ಹಬ್ಬ 2022 ನ್ನು ಉದ್ಘಾಟಿಸಿ ಮಾತನಾಡಿದರು. ಅಧಿಕಾರ ವಿಕೇಂದ್ರೀಕರಣ ಜೇನುತುಪ್ಪದಂತಿರಬೇಕು: ಮಹಾತ್ಮಾ ಗಾಂಧಿಯವರಿಂದ ಗ್ರಾಮ ಸ್ವರಾಜ್ಯದ ಪರಿಕಲ್ಪನೆ […]