ಹನುಮ ಮಾಲಾಧಾರಿ ಗಳಿಗೆ ಎಲ್ಲಾ ಸೌಲಭ್ಯ ಕಲ್ಪಿಸಲು ಸಮಿತಿ ರಚಿಸಲು ಸೂಚನೆ
Wednesday, November 16th, 2022
ಕೊಪ್ಪಳ : ಐತಿಹಾಸಿಕ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಡಿಸೆಂಬರ್ 5 ರಂದು 2 ಲಕ್ಷದಷ್ಟು ಹನುಮ ಮಾಲಾಧಾರಿಗಳು ಆಗಮಿಸುವ ನಿರೀಕ್ಷೆಯಿದ್ದು, ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಚ್ಚುಕಟ್ಟಿನ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಮತ್ತು ಧಾರ್ಮಿಕ ದತ್ತಿ ಇಲಾಖೆ ಕಲ್ಪಿಸುವತ್ತ ಕ್ರಮ ವಹಿಸುವಂತೆ ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಸೂಚನೆ ನೀಡಿದರು. ಇಂದು ಕೊಪ್ಪಳದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲೆಯ ಪ್ರಮುಖ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ವಿಸ್ತ್ರುತ ಸಭೆಯನ್ನು […]