ಕಾಂಗ್ರೆಸ್ ನವರು ಭಯಭೀತರಾಗಿ ಹತಾಶರಾಗಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ ಆರೋಪ

Sunday, October 24th, 2021
Sindgi

ಕನ್ನೋಳಿ: ಸಿಂದಗಿ: ಕಾಂಗ್ರೆಸ್ ಪಕ್ಷದ ನಾಯಕರಿಗೆ ಪ್ರಾಚರಕ್ಕೆ ವಿಷಯಗಳೇ ಸಿಗುತ್ತಿಲ್ಲ. ಸೋತಮೇಲೆ ನೀಡುವಂತಹ ಹೇಳಿಕೆಗಳನ್ನು ಚುನಾವಣಾ ಆರಂಭದಲ್ಲೇ ನೀಡುತ್ತಿದೆ.‌ ಕಾಂಗ್ರೆಸ್ ಸಂಪೂರ್ಣವಾಗಿ ಹತಾಶವಾಗಿ ಇಂತಹ ಹೇಳಿಕೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಗೆ ಅದ್ಭುತವಾದ ಬೆಂಬಲವನ್ನು ನೋಡಿ ಕಾಂಗ್ರೆಸ್ ಪಕ್ಷ ಭಯ ಗೊಂಡಿದೆ. ಸೋಲಿನ ಅನುಭವ ಆರಂಭದಲ್ಲಿ ಆಗಿರುವುದರಿಂದ ಚುನಾವಣಾ ನಂತರದ ಹೇಳಿಕೆಗಳನ್ನು ಈಗಲೇ ಆ ಪಕ್ಷದ ನಾಯಕರು ನೀಡುತ್ತಿದ್ದಾರೆ ಎಂದರು. ಅವರು ಸಿಂದಗಿ ವಿಧಾನಸಭೆ ಕ್ಷೇತ್ರದ ಕನ್ನೊಳಿ ಗ್ರಾಮದ ಪ್ರಚಾರದ ಸಂದರ್ಭದಲ್ಲಿ […]

ಹಿಂದೂ ಯುವಕನ ಹತ್ಯೆ ಮಾಡಿದ ಮುಸ್ಲಿಂ ಯುವತಿಯ ಮನೆಯವರು

Sunday, October 24th, 2021
Ravi Nimbaragi

ವಿಜಯಪುರ : ಮುಸ್ಲಿಂ ಯುವತಿಯನ್ನು ಪ್ರೀತಿಸುತ್ತಿದ್ದ ಹಿಂದೂ ಯುವಕನ ಹತ್ಯೆ ನಡೆದಿದ್ದು,  ಯುವತಿಯ ಕುಟುಂಬದವರಾದ ಅಲ್ತಾಫ್ ಮತ್ತಿ ಇಸ್ಮೈಲ್ ಸೇರಿದಂತೆ ಎಂಟು ಜನರು ಕೊಲೆ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ. ಮೃತಪಟ್ಟ ಯುವಕನನ್ನು ಆಲಮೇಲ ತಾಲೂಕಿನ ಬಳಗಾನೂರ ಗ್ರಾಮದ ರವಿ ನಿಂಬರಗಿ (34) ಎಂದು ಗುರುತಿಸಲಾಗಿದೆ. ಅಕ್ಟೋಬರ್ 21ರಂದು ನಾಪತ್ತೆಯಾಗಿದ್ದ ರವಿ ಶವ ಹೊಲದ ಬಾವಿಯಲ್ಲಿ ಅಕ್ಟೋಬರ್ 23ರಂದು ಪತ್ತೆಯಾಗಿದೆ. ಅಕ್ಟೋಬರ್ 21ರಂದು ದಿನಸಿ ತರಲು ಮನೆಯಿಂದ ಹೊರ ಹೋಗಿದ್ದ ರವಿ ನಿಂಬರಗಿ ನಾಪತ್ತೆಯಾಗಿದ್ದ. ರವಿ ಪ್ರೀತಿಸುತ್ತಿದ್ದ ಯುವತಿ […]

ಪತ್ನಿಗೆ ಹೈಡೋಸ್ ಇಂಜೆಕ್ಷನ್ ಕೊಟ್ಟು ಕೊಲೆ ಮಾಡಿದ ವೈದ್ಯ

Sunday, October 24th, 2021
shilpa

ದಾವಣಗೆರೆ: ವೈದ್ಯನೋರ್ವ ತನ್ನ ಮಡದಿಗೆ ಹೈಡೋಸ್ ಇಂಜೆಕ್ಷನ್ ಕೊಟ್ಟು ಕೊಲೆಗೈದಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿ  ತಡವಾಗಿ ಬೆಳಕಿಗೆ ಬಂದಿದೆ. ಶಿಲ್ಪಾ(36) ಮೃತ ಮಹಿಳೆ. ಚನ್ನೇಶಪ್ಪ (45) ಶಿಲ್ಪಾಳನ್ನು ಕೊಲೆ ಮಾಡಿದ ಪತಿ. ಕಳೆದ ಹತ್ತು ತಿಂಗಳ ಹಿಂದೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಶಿಲ್ಪಾಳ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಡಾ. ಚನ್ನೇಶಪ್ಪ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಪತ್ನಿಗೆ ಹೆಕ್ಸಾಮೆಟಜೋನ್ ಸ್ಪಿರಾಯಡ್ ಹೈಡೋಸ್ ನೀಡಿ ಕೊಲೆಗೈದಿದ್ದಾನೆ. ಬಳಿಕ ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು […]

ಪಂಚಮಸಾಲಿಗಳ ಒತ್ತಡಕ್ಕೆ ಸರ್ಕಾರ ಮಣಿಯಬಾರದು: ಸಿ.ಎಸ್‌ ದ್ವಾರಕಾನಾಥ್‌

Saturday, October 23rd, 2021
Dwarakanath

ಬೆಂಗಳೂರು : ಹಿಂದುಳಿದ ವರ್ಗಗಳ ಪ್ರವರ್ಗ 2(ಎ)ಗೆ ಸೇರಿಸಬೇಕೆಂಬ ಬಲಿಷ್ಠ ವೀರಶೈವ ಪಂಚಮಸಾಲಿ ಸಮುದಾಯದ ಒತ್ತಡಕ್ಕೆ ಸರ್ಕಾರ ಮಣಿಯಬಾರದೆಂದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ ಎಸ್ ದ್ವಾರಕನಾಥ್ ಎಚ್ಚರಿಸಿದ್ದಾರೆ. ಇಂದು ಕುಮಾರ ಕೃಪ ಅತಿಥಿ ಗೃಹ ದಲ್ಲಿ ರಾಜ್ಯದ ಅತಿ ಹಿಂದುಳಿದ ಜನಾಂಗದ ಮಠಾಧೀಶರನ್ನ ಒಳಗೊಂಡ ಸಭೆಯಲ್ಲಿ ಮಾತನಾಡಿದರು. ‘ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ’, ಪಂಚಮಸಾಲಿಗಳ ಮೀಸಲು ಹೋರಾಟವನ್ನು ವಿರೋಧಿಸಿ ಅತಿ ಹಿಂದುಳಿದ ವರ್ಗಗಳ ಎಲ್ಲ ಸ್ವಾಮೀಜಿಗಳು ಪ್ರತಿ ಹೋರಾಟಕ್ಕೆ […]

ಕೆಪಿಟಿಸಿಎಲ್ ನ 1899 ಹುದ್ದೆಗಳ ಭರ್ತಿಗೆ ಚಾಲನೆ- ಸಚಿವ ಸುನಿಲ್ ಕುಮಾರ್

Tuesday, October 12th, 2021
Power Minister

ಬೆಂಗಳೂರು  : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ ,ಇಂದು ಅದರ ಮೊದಲ ಹಂತವಾಗಿ, ಸಾಂಕೇತಿಕವಾಗಿ 21 ಜನರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗುತ್ತಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ದ ಸಭಾಂಗಣದಲ್ಲಿ ಈ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು […]

ದೇಶದಲ್ಲಿಯೇ ಪ್ರಥಮ ಬಾರಿಗೆ ಉದ್ಯೋಗ ನೀತಿ ಜಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Monday, October 11th, 2021
Employment

ಬೆಂಗಳೂರು : ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಉದ್ಯೋಗ ನೀತಿಯನ್ನು ರೂಪಿಸಲಾಗುವುದು. ಈ ನೀತಿಯ ಅಡಿ ಉದ್ಯೋಗ ಸೃಜನೆ ಆಧಾರದ ಮೇಲೆ ಹೆಚ್ಚು ಪ್ರೋತ್ಸಾಹ ಸವಲತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರು ಅರಮನೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಿರುವ ” ಉದ್ಯಮಿಯಾಗು – ಉದ್ಯೋಗ ನೀಡು” ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಉದ್ಯೋಗ ನೀತಿಯ ರಚನೆ ಕುರಿತು ಚಿಂತನೆ ನಡೆಸಲಾಗುತ್ತಿದೆ. ಸದ್ಯದಲ್ಲಿಯೇ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು […]

ದೇಶಸೇವೆಯನ್ನೇ ಉಸಿರಾಗಿಸಿಕೊಂಡಿರುವ ಸಂಘಟನೆ ಆರ್ ಎಸ್‍ಎಸ್ : ಕಂದಾಯ ಸಚಿವ ಆರ್ ಅಶೋಕ

Wednesday, October 6th, 2021
R Ashoka

ಬೆಂಗಳೂರು  : “ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಆರ್ ಎಸ್ ಎಸ್ ಅನ್ನು ಟೀಕಿಸುವುದು ತಪ್ಪು. ಎಲ್ಲವನ್ನು ತಿಳಿದುಕೊಂಡು ಮಾತನಾಡಬೇಕು”, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ಆರೆಸ್ಸೆಸ್ ಒಂದು ದೇಶಭಕ್ತ ಸಂಘಟನೆ. ಸೇವೆಯೆ ಅದರ ಮೂಲಮಂತ್ರ. ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಬಂಧಿತರಾದವರು ಶೇಕಡ 80 ರಷ್ಟು ಜನ ಆರ್‍ಎಸ್‍ಎಸ್ ಗೆ ಸೇರಿದವರು. ತುರ್ತುಪರಿಸ್ಥಿತಿಯ ವಿರುದ್ಧ ಹೋರಾಡುವಲ್ಲಿ ಮತ್ತು ಪ್ರಜಾಪ್ರಭುತ್ವವನ್ನು […]

ರಾಷ್ಟ್ರಪತಿಗಳಿಗೆ ರಾಮಾಯಣ ದರ್ಶನಂ ಮತ್ತು ಪರ್ವ ಕಾದಂಬರಿ ಕೊಡುಗೆ ನೀಡಿದ ಸಚಿವ ಸುನಿಲ್ ಕುಮಾರ್

Wednesday, October 6th, 2021
Ramayana Darshana

ಬೆಂಗಳೂರು : ಘನತೆವೆತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಅವರು ಇಂದು ಬೆಂಗಳೂರಿನ ರಾಜಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ಈ ಸಂದರ್ಭದಲ್ಲಿ ಶ್ರೀ ಸುನಿಲ್ ಕುಮಾರ್ ಅವರು ಕುವೆಂಪು ಅವರ” ಶ್ರೀ ರಾಮಾಯಣ ದರ್ಶನಂ” ಕೃತಿಯ ಇಂಗ್ಲಿಷ್ ಅನುವಾದಿತ ಪುಸ್ತಕ ಹಾಗೂ ಡಾ.ಎಸ್ಎಲ್ ಭೈರಪ್ಪ ಅವರ ,”ಪರ್ವ” ಕಾದಂಬರಿಯ ಇಂಗ್ಲಿಷ್ ಅನುವಾದಿತ ಕೃತಿಯನ್ನು ರಾಷ್ಟ್ರಪತಿಯವರಿಗೆ ಕೊಡುಗೆಯಾಗಿ ನೀಡಿದರು.

ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು: ಮುಖ್ಯಮಂತ್ರಿ ವಿಶ್ವಾಸ

Sunday, October 3rd, 2021
Bommai

ಬಳ್ಳಾರಿ :  ಮುಂಬರುವ ವಿಧಾನಸಭಾ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಹಾನಗಲ್ ಹಾಗೂ ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ, ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಇಂದು ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಈ ಕ್ಷೇತ್ರದಿಂದ ತರಿಸಿಕೊಂಡ ವರದಿಯ ಕುರಿತು ಚರ್ಚಿಸಿ, ಪಕ್ಷದ ಸಂಸದೀಯ ಮಂಡಳಿಗೆ ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡಲಾಗುವುದು. ಶೀಘ್ರವೇ ಅಭ್ಯರ್ಥಿಯ ಹೆಸರು ಪ್ರಕಟವಾಗಲಿದೆ. ಪಕ್ಷವು ಬೂತ್ ಮಟ್ಟದಿಂದ ರಾಜ್ಯ […]

ಹಿರಿಯ ಮುತ್ಸದ್ಧಿ ಎಸ್ ಎಂ ಕೃಷ್ಣ ಅವರಿಗೆ ದಸರಾ ಉದ್ಘಾಟನೆಗೆ ಅಧಿಕೃತ ಆಹ್ವಾನ

Saturday, October 2nd, 2021
SM-Krishna

ಮೈಸೂರು : ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನು ಸರ್ಕಾರದ ಪರವಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್ ಅಶೋಕ ಅಧಿಕೃತ ಆಹ್ವಾನ ನೀಡಿದರು. ಈ ವೇಳೆ ಮಾತನಾಡಿದ ಸಚಿವ ಆರ್.ಅಶೋಕ್ “ಎಸ್ ಎಂ ಕೃಷ್ಣ ಅವರದ್ದು ಸರ್ವಸಮ್ಮತ ಆಯ್ಕೆ. ಅವರೊಬ್ಬ ಸುಸಂಸ್ಕøತ ಮುತ್ಸದ್ದಿ ರಾಜಕಾರಣಿ. ಅವರದ್ದು ಆಕರ್ಷಕ ವ್ಯಕ್ತಿತ್ವ. ರಾಜಕಾರಣದಲ್ಲಿ ಅತ್ಯಂತ ಶ್ರೇಷ್ಠ ಚಿಂತನೆ ಅಳವಡಿಸಿಕೊಂಡು, ಎಲ್ಲರಿಗೂ ಮಾದರಿಯಾದವರು. “ದಿ ಸ್ಟೇಟ್ಸ್ ಮನ್” ಅಂತ ಯಾರಿಗಾದರೂ ಹೇಳಬಹುದಾದರೆ […]