ವಿಶ್ವ ಕೊಂಕಣಿ ಕೇಂದ್ರದಲ್ಲಿ “ಕ್ಷಿತಿಜ” ಕೌಶಲ್ಯಾಭಿವೃದ್ದಿ ಶಿಬಿರ

Friday, October 18th, 2024
vishwa-konkani

ಮಂಗಳೂರು : ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆದು ಅಲ್ಲಿಯೇ ಉತ್ತಮ ಉದ್ಯೊಗಾವಕಾಶವಿದ್ದರೂ, ತನ್ನ ತಾಯ್ನಾಡಿನ ಬಳುವಳಿ – ಕೌಟುಂಬಿಕ ಉದ್ಯಮಕ್ಕೆ ಮರಳಿ, ಅನುಕರಣೀಯ ಮಾದರಿ ನಿರ್ಮಿಸಿದ ಕೀರ್ತಿ ಆನಂದ ಜಿ ಪೈಯವರದ್ದು ಎಂದು ವಿಶ್ವಕೊಂಕಣಿ ಕೇಂದ್ರದ ಅಧ್ಯಕ್ಷರಾದ ಸಿ ಎ ನಂದಗೋಪಾಲ ಶೆಣೈಯವರು ಅಭಿಪ್ರಾಯ ಪಟ್ಟರು. ವಿಶ್ವಕೊಂಕಣಿ ಕೇಂದ್ರದಲ್ಲಿ ನಡೆಯುತ್ತಿರುವ ವಿದ್ಯಾಕಲ್ಪಕ ವಿದ್ಯಾರ್ಥಿವೇತನ ಯೋಜನೆಯ ‘ಕ್ಷಿತಿಜ”- ಮೂರು ದಿನಗಳ ಉಚಿತ ಕೌಶಲ್ಯಾಭಿವೃದ್ದಿ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಕೆನರಾ ಚೇಂಬರ್ ಆಫ್ ಕಾಮರ್ಸ್‍ನ ಅಧ್ಯಕ್ಷರಾದ ಶ್ರೀ ಆನಂದ ಪೈಯವರು […]

ಅಕ್ಟೋಬರ್ 21ರಂದು ವಿಧಾನ ಪರಿಷತ್ ಚುನಾವಣೆ – 392 ಮತಗಟ್ಟೆ, 6, 032 ಮತದಾರರು

Friday, October 18th, 2024
Raju-Poojary-Kishor-BR

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಉಪ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಉಭಯ ಜಿಲ್ಲೆಗಳು ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹಾಗೂ ಶಾಸಕರು ಮತ್ತು ಸಂಸದರು ಈ ಕ್ಷೇತ್ರದ ಮತದಾರರಾಗಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 223 ಗ್ರಾಮ […]

ರಘು ಇಡ್ಕಿದು ಸಾಹಿತ್ಯದ ಮಕ್ಕಳ ತುಳು ಹಾಡುಗಳ ಬಿಡುಗಡೆ ಸಮಾರಂಭ

Friday, October 18th, 2024
Raghu-Idkidu

ಮಂಗಳೂರು : ರಘು ಇಡ್ಕಿದು ರವರು ಸಾಹಿತ್ಯ ರಚಿಸಿ, ಸಂಗೀತ ನಿರ್ದೇಶಕ ಎಲ್ಲೂರು ಶ್ರೀನಿವಾಸರಾವ್ ಸಂಗೀತ ನೀಡಿದ, ವಿದ್ಯಾ.ಯು ನಿರ್ಮಾಣ, ನಿರ್ದೇಶನ, ಸಂಕಲನ ಮಾಡಿದ ಮಕ್ಕಳ ತುಳು ಹಾಡುಗಳ ಬಿಡುಗಡೆ ಸಮಾರಂಭ ಮಂಗಳೂರಿನ ಕದ್ರಿ ಮಲ್ಲಿಕಟ್ಟೆಯ ಶ್ರೀ ಕೃಷ್ಣ ಸಭಾಭವನದಲ್ಲಿ ಅಕ್ಟೊಬರ್ 17 ರಂದು ನಡೆಯಿತು. ಥಂಡರ್ ಕಿಡ್ಸ್ ಮಂಗಳೂರು ಮತ್ತು ವಿದ್ಯಾ ಪ್ರಕಾಶನ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಮಕ್ಕಳಿಂದಲೇ ಹಾಡುಗಳನ್ನು ಹಾಡಿಸಿ, ದೃಶ್ಯೀಕರಿಸಿದ ಈ ಮಕ್ಕಳ ತುಳು ಹಾಡುಗಳನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ […]

ದೀಪಾವಳಿ ಹಬ್ಬಕ್ಕೆ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಮಂಜೂರು

Thursday, October 17th, 2024
Diwali-Train

ಮಂಗಳೂರು: ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಮನವಿಗೆ ತುರ್ತು ಸ್ಪಂದಿಸಿರುವ ರೈಲ್ವೆ ಸಚಿವರಾದ ಅಶ್ವಿನ್‌ ವೈಷ್ಣವ್‌ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಸ್ಪಂದಿಸಿದ್ದು, ಇದೀಗ ನೈರುತ್ಯ ರೈಲ್ವೆಯು ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ಅದರಂತೆ ಯಶವಂತಪುರ-ಮಂಗಳೂರು(06565) ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ತಲುಪಲಿದೆ. ಹಾಗೆಯೇ ಮಂಗಳೂರು-ಯಶವಂತಪುರ(ನಂ. 06566) ವಿಶೇಷ ರೈಲು […]

ಬಿಲ್ಲವ ಸಮಾಜದ 1ಲಕ್ಷ ಹುಡುಗಿಯರು ವೇಶ್ಯೆಯರು ಎಂದ ಅರಣ್ಯ ಅಧಿಕಾರಿ, ಹಿಂದೂ ಜಾಗರಣ ವೇದಿಕೆ ಗರಂ

Wednesday, October 16th, 2024
HJV sullia

ಪುತ್ತೂರು : ಭಜನೆ ಮಾಡಿದ ಹಿಂದು ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದು ಹುಡುಗರು ಅದರಿಂದ ಬಿಲ್ಲವ ಸಮಾಜದ 1ಲಕ್ಷ ಹುಡುಗಿಯರು ವೇಶ್ಯೆಯಾಗಲು ಹಿಂದೂ ಸಂಘಟನೆಯ ಯುವಕರು ಕಾರಣ ಮತ್ತು ಎಂದು ಹೇಳಿಕೆ ನೀಡಿರುವ ಕಾಣಿಯೂರಿನ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅರಣ್ಯಧಿಕಾರಿಯಾಗಿ ಪಂಜದಲ್ಲಿ ಸೇವೆ ಸಲ್ಲಿಸುತಿದ್ದ ಸಂಜೀವ ಪೂಜಾರಿ ಹಿಂದೂ ಸಮಾಜದ ಹೆಣ್ಣುಮಕ್ಕಳ ಬಗ್ಗೆ ತೀರ ಅವಹೇಳನ ಕಾರಿಯಾಗಿ ಮಾತನಾಡಿದ್ದು ಈ ಮಾತುಗಳು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ […]

ಈಜುಕೊಳದಲ್ಲಿ ಉಸಿರು ಬಿಗಿ ಹಿಡಿದು, ಪಲ್ಟಿ ಹೊಡೆದು ವಿಶ್ವ ದಾಖಲೆ

Wednesday, October 16th, 2024
Hadriyan

ಮಂಗಳೂರು: ಈಜುಕೊಳದ ಒಳಗೆ ಉಸಿರು ಬಿಗಿ ಹಿಡಿದು 37 ಸೆಕೆಂಡ್ಸ್‌ಗಳಲ್ಲಿ 26 ಸೋಮರ್‌ಸಾಲ್ಟ್ಸ್‌(ಪಲ್ಟಿ) ಮೂಲಕ ನೊಬೆಲ್‌ ವಿಶ್ವ ದಾಖಲೆ ನಿರ್ಮಿಸಿರುವ ಮಂಗಳೂರಿನ 13ರ ಹರೆಯದ ಬಾಲಕ ಹ್ಯಾಡ್ರಿಯನ್‌ ವೇಗಸ್‌ನನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸನ್ಮಾನಿಸಿ ಈ ಅಪರೂಪದ ಪ್ರತಿಭೆಯನ್ನು ಪ್ರೋತ್ಸಾಹಿಸಿದ್ದಾರೆ. ಮಂಗಳೂರಿನ ಕಾರ್ಮೆಲ್‌ ಸಿಬಿಎಸ್‌ಸಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಹ್ಯಾಡ್ರಿಯನ್‌ ವೇಗಸ್‌ ಮಂಗಳೂರಿನ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ ಈ ಸಾಧನೆಯನ್ನು ಮಾಡಿ ಗಮನಸೆಳೆದಿದ್ದಾನೆ. 15 ವರ್ಷದೊಳಗಿನ ವಯೋಮಾನದಲ್ಲಿ ನೀರೊಳಗಿನ ಪಲ್ಟಿ […]

ನೆಲ್ಲಿತೀರ್ಥ ಗುಹಾಲಯದಲ್ಲಿ ಅಕ್ಟೊಬರ್ 17 ರಂದು ಗುಹಾ ಪ್ರವೇಶ ಆರಂಭ

Wednesday, October 16th, 2024
Nellitirtha

ಮಂಗಳೂರು : ಕರ್ನಾಟಕದ ಅತಿದೊಡ್ಡ ಗುಹಾ ದೇವಾಲಯಗಳಲ್ಲಿ ಒಂದಾಗಿರುವ ಶ್ರೀ ಕ್ಷೇತ್ರ ನೆಲ್ಲಿತೀರ್ಥ ಸೋಮನಾಥೇಶ್ವರ ಗುಹಾಲಯದಲ್ಲಿ ಅಕ್ಟೊಬರ್ 17 ನಡೆಯುವ ಗುಹಾ ಪ್ರವೇಶದ ಬಗ್ಗೆ ಧರ್ಮದರ್ಶಿ ಹರಿಕೃಷ್ಣ ಪುನರೂರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರಣೆ ನೀಡಿದರು. ಪ್ರತಿ ವರ್ಷ ತುಲಾ ಸಂಕ್ರಮಣದ ಶುಭ ದಿನದಿಂದ ‘ಮೇಷ ಸಂಕ್ರಮಣ’ದವರೆಗೆ ನೆಲ್ಲಿತೀರ್ಥ ಗುಹೆಗೆ ಪ್ರವೇಶಿಸಲು ಮತ್ತು ‘ತೀರ್ಥ ಸ್ನಾನ’ ಮಾಡಲು ಜನರಿಗೆ ಅವಕಾಶವಿದೆ. ಈ ವರ್ಷದ, ಸಮಾರಂಭವು 2024 ರ ಅಕ್ಟೋಬರ್ 17 ರಿಂದ ಪ್ರಾರಂಭವಾಗುತ್ತದೆ ಎಂದು ಹರಿಕೃಷ್ಣ ಪುನರೂರು […]

ಮಂಗಳೂರು : ಖಾಸಗಿ ಬಸ್ ಕಂಡಕ್ಟರ್ ಮೇಲೆ ಕಲ್ಲು ಎತ್ತಿಹಾಕಿ ಕೊಲೆ, ದುಷ್ಕರ್ಮಿಗಳಿಗೆ ಶೋಧ

Tuesday, October 15th, 2024
Rajesh-conductor

ಮಂಗಳೂರು : ಖಾಸಗಿ ಬಸ್ ಕಂಡಕ್ಟರ್ ಒಬ್ಬರನ್ನು ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಸ್ಟೇಟ್‌ಬ್ಯಾಂಕ್ ಬಳಿ ಇರುವ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ನಡೆದಿದೆ. ಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ನಿರ್ವಾಹಕರಾಗಿದ್ದ ರಾಜೇಶ್ (30) ಮೃತಪಟ್ಟವರು. ಸ್ಟೇಟ್‌ಬ್ಯಾಂಕ್, ಲೇಡಿಗೊಶನ್ ಗಾಂಜಾ, ದರೋಡೆ, ಪಿಕ್ ಪಾಕೆಟ್ ಗೆ ಹೆಸರುವಾಸಿಯಾಗಿದ್ದು ಲೂಟಿ ಮಾಡುವ ಸಂದರ್ಭ ಪ್ರತಿರೋಧ ಒಡ್ಡಿರುವುದಕ್ಕೆ ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ರಾಜೇಶ್ ಸಂಬಂಧಿಕರು ಯಾರೆಂದು ಸಹೋದ್ಯೋಗಿಗಳಿಗೆ ತಿಳಿದಿಲ್ಲ. ಪ್ರತಿ […]

ಮಂಗಳೂರು ಶಾರದಾ ಮಹೋತ್ಸವ ಸಮಾಪನ

Tuesday, October 15th, 2024
Venkataramana-Sharadhe

ಮಂಗಳೂರು : ಮಂಗಳೂರು ಶ್ರೀ ವೆಂಕಟರಮಣ ದೇವಾಲಯ ಆಚಾರ್ಯ ಮಠ ವಠಾರದ 102ನೇ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ ಆರಂಭಗೊಂಡು 14 ರಂದು ಅತ್ಯಂತ ವೈಭವಯುತವಾಗಿ ನಡೆಯಿತು. 2 ವರ್ಷದ ಹಿಂದೆಯಷ್ಟೇ ನೂರನೇ ವರ್ಷದ ಶಾರದಾ ಮಹೋತ್ಸವವನ್ನು ಶ್ರೀ ಶಾರದಾ ಮಹೋತ್ಸವ ಸಮಿತಿ ಅತ್ಯಂತ ವೈಭವಪೂರ್ಣವಾಗಿ ನಡೆಸಿತ್ತು. ಅದೇ ರೀತಿ ಸಂಭ್ರಮದಿಂದ ಈ ಮಹೋತ್ಸವನ್ನು ಶ್ರಧ್ಧ ಭಕ್ತಿಯಿಂದ ನಡೆಸಿಕೊಂಡು ಬರಲಾಗುತ್ತಿದೆ. ಮಂಗಳೂರು ನಗರ ಹಾಗೂ ಪರವೂರಿನ ಭಕ್ತಾದಿಗಳು ತನುಮನ ಸಹಾಯ ನೀಡಿ ಕಾರ್ಯಕ್ರಮವನ್ನು ಅತ್ಯಂತ […]

ಒಕ್ಕೂಟ ರಚನೆಗೆ ನಿರ್ಧಾರ, ಜಿಲ್ಲಾ ಶಾಮಿಯಾನ ಮಾಲೀಕರ ಸಂಘ ಜಂಟಿ ಸಮಾಲೋಚನಾ ಸಭೆ

Tuesday, October 15th, 2024
District-shamiyana

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲೀಕರ ಸಂಘದ ನೇತೃತ್ವದಲ್ಲಿ ಜಿಲ್ಲಾ ಕ್ಯಾಟರಿಂಗ್, ಧ್ವನಿ, ಬೆಳಕು ಹಾಗೂ ಪ್ಲವರ್ ಡೆಕೋರೇಶನ್ ಮಾಲೀಕರ ಸಂಘಗಳ ಜಂಟಿ ಸಮಾಲೋಚನಾ ಸಭೆ ಶಾಮಿಯಾನ ಮಾಲೀಕರ ಸಂಘದ ಜಿಲ್ಲಾ ಅಧ್ಯಕ್ಷ ಬಾಬು ಕೆ. ವಿಟ್ಲ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದು, ಒಕ್ಕೂಟ ರಚನೆಗೆ ನಿರ್ಧರಿಸಲಾಯಿತು. ಏಕರೂಪಿ ದರ ಪಟ್ಟಿ ಪಾಲನೆ, ಬಿಲ್ ವಸೂಲಾತಿ ಮೊದಲಾದ ಸಮಸ್ಯೆಗಳನ್ನು ಸರಿಪಡಿಸಲು ಒಗ್ಗಟ್ಟಿನಲ್ಲಿ ಸಮನ್ವಯತೆಯಿಂದ ಗ್ರಾಹಕರಿಗೆ ನ್ಯಾಯಯುತ ಸೇವೆ ನೀಡಲು ಒಕ್ಕೂಟ ರಚನೆಯಿಂದ […]