ಕದ್ರಿ ಪಾರ್ಕ್ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವತಿಯೊಬ್ಬಳ ಶವ ಪತ್ತೆ

Wednesday, March 20th, 2013
Young girl hanging Kadri hills

ಮಂಗಳೂರು : ಕದ್ರಿ ಪಾರ್ಕ್ ಎದುರುಗಡೆ ಇರುವ ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಮರವೊಂದಕ್ಕೆ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು ಪುತ್ತೂರಿನ ಪ್ರಮೀಳಾ(18) ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ  ಈ ದಾರಿಯಲ್ಲಿ ವ್ಯಕ್ತಿಯೋರ್ವರು ನಡೆದುಕೊಂಡು ಹೋಗುತ್ತಿದ್ದಾಗ ಪಕ್ಕದ ಪೊದೆಯ ಮರದಲ್ಲಿ ಯುವತಿಯ ಶವ ನೇತಾಡುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಎರಡು ದಿನಗಳ ಹಿಂದೆಯೇ ಈ ಸಾವು ಸಂಭವಿಸಿರಬಹುದು ಎಂದು ಶಂಕಿಸಿದ್ದಾರೆ. […]

ಶ್ರೀ ಭೂತನಾಥೇಶ್ವರ ದೇವಸ್ಥಾನ ಇದರ ಆಶ್ರಯದಲ್ಲಿ ಮಾರ್ಚ್ 24ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

Wednesday, March 20th, 2013
Free health check up camp

ಮಂಗಳೂರು : ನಗರದ ಎ.ಜೆ. ಇನಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್ ಆಸ್ಪತ್ರೆಯಲ್ಲಿ ಮಾರ್ಚ್ 24ರಂದು  ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶ್ರೀ ಭೂತನಾಥೇಶ್ವರ ದೇವಸ್ಥಾನ, ಬಡಗ ಎಡಪದವು, ಮಿಜಾರು, ಮಂಗಳೂರು ಇದರ ನೇತೃತ್ವದಲ್ಲಿ ಆಯೋಜಿಸಲಾಗಿದ್ದು ಈ ಶಿಬಿರದ ಹೆಚ್ಚಿನ  ಪ್ರಯೋಜನವನ್ನು ಜನರು ಪಡೆದುಕೊಳ್ಳಬೇಕೆಂದು ಶ್ರೀ ಭೂತನಾಥೇಶ್ವರ ದೇವಸ್ಥಾನದ ಮುಖ್ಯ ಸಂಘಟಕ ವಿಜಯನಾಥ ವಿಠಲ ಶೆಟ್ಟಿ ತಿಳಿಸಿದರು. ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಮಾರ್ಚ್ 24ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ […]

ಕೆಜೆಪಿಯ ನೂತನ ದ.ಕ. ಜಿಲ್ಲಾ ಕಚೇರಿಯ ಉದ್ಘಾಟನೆ

Wednesday, March 20th, 2013
KJP Dhananjaya Kumar

ಮಂಗಳೂರು : ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷವು ಉತ್ತಮ ಸಾಧನೆ ತೋರಿದ್ದು ಮುಂಬರು ವಿಧಾನ ಸಭಾ ಚುನಾವಣೆಯಲ್ಲಿ ಎಲ್ಲ ಪಕ್ಷದ ಕ್ಷೇತ್ರಗಳಲ್ಲೂ ಸ್ಪರ್ಧಿಸಲ್ಲಿದ್ದೇವೆ ಎಂದು ಕೆಜೆಪಿಯ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವಿ. ಧನಂಜಯ ಕುಮಾರ್‌  ಹೇಳಿದರು. ಅವರು ಮಂಗಳೂರಿನ ನಂತೂರಿನಲ್ಲಿರುವ ಕೋಕನೆಟ್‌ ಗಾರ್ಡನ್‌ ಕಟ್ಟಡದಲ್ಲಿ ಕೆಜೆಪಿಯ ದ.ಕ. ಜಿಲ್ಲಾ ಕಚೇರಿಯನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು. ಸಚಿವರಾದ ಮುರುಗೇಶ್‌ ನಿರಾಣಿ ಮತ್ತು ರೇಣುಕಾಚಾರ್ಯ ಅವರು ಶೀಘ್ರದಲ್ಲೆ ಕೆಜೆಪಿಗೆ ಸೇರ್ಪಡೆಗೊಳ್ಳಲಿದ್ದು, ಬಿಜೆಪಿ ಸರಕಾರದಲ್ಲಿರುವ ಇನ್ನೂ ಕೆಲವು ಸಚಿವರು ಕೆಜೆಪಿಗೆ […]

ಮತದಾರರಿಗೆ ಪಕ್ಷ ಕೊಟ್ಟ ವಾಗ್ದಾನಗಳನ್ನು ಪೂರೈಸಲು ಕಾರ್ಯಪ್ರವೃತ್ತರಾಗಿ : ಜನಾರ್ಧನ ಪೂಜಾರಿ

Tuesday, March 19th, 2013
Congress publicity campaign

ಮಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದವರು ವಿಜಯೋತ್ಸವವನ್ನು ಆಚರಿಸುವುದಕ್ಕಿಂತ ಮಿಗಿಲಾಗಿ ಚುನಾವಣಾ ಅವಧಿಯಲ್ಲಿ  ಪಕ್ಷ ಮತದಾರರಿಗೆ ಕೊಟ್ಟ ವಾಗ್ದಾನಗಳನ್ನು ಈಡೇರಿಸಲು ಈಗಿನಿಂದಲೇ ಕಾರ್ಯ ಪ್ರವೃತ್ತರಾಗಬೇಕು ಎಂದು ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿಯವರು ಹೇಳಿದರು. ನಗರದ ನೆಹರೂ ಮೈದಾನದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡ ಮತದಾರರಿಗೆ ಕೃತಜ್ಞತೆ ಸಮರ್ಪಣೆ ಹಾಗೂ ವಿಧಾನ ಸಭೆ ಚುನಾವಣೆ ಪ್ರಚಾರ ಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಜೇತ ಅಭ್ಯರ್ಥಿಗಳಿಗೆ ಪ್ರಮಾಣವಚನ ಬೋಧಿಸಿ ಅವರು ಮಾತನಾಡಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆಲುವು […]

ಪದವಿನಂಗಡಿ : ಕಾರು ಅಪಘಾತ ಅಪಾಯದಿಂದ ಪಾರಾದ ತುಳು ಅಕಾಡೆಮಿ ಅಧ್ಯಕ್ಷ ಉಮಾನಾಥ ಕೋಟ್ಯಾನ್‌

Tuesday, March 19th, 2013
Umesh Kotian injured in car mishap

ಮಂಗಳೂರು : ಸೋಮವಾರ ಮಧ್ಯಾಹ್ನ ಪದವಿನಂಗಡಿ ಬಳಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮಾನಾಥ ಕೋಟ್ಯಾನ್‌  ರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಏರ್ ಕಾರ್ಗೋ ಸೇವೆಯ ಉದ್ಘಾಟನ ಸಮಾರಂಭಕ್ಕೆಅಕಾಡಮಿಯ ಕಾರಿನಲ್ಲಿ  ತೆರಳುತ್ತಿದ್ದ ವೇಳೆ ಪದವಿನಂಗಡಿಯಲ್ಲಿ ನಿಯಂತ್ರಣ ತಪ್ಪಿ ಕಾರು ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದಿದ ಪರಿಣಾಮ ಕಾರು  ಡಿವೈಡರ್‌ನ ಮೇಲೇರಿ, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು , ಕೋಟ್ಯಾನ್‌ ರು  ಸಣ್ಣಪುಟ್ಟ ಗಾಯಗಳೊಂದಿಗೆ […]

ಏರ್ ಕಾರ್ಗೊ ಕಾಂಪ್ಲೆಕ್ಸ್ ನ ಉದ್ಘಾಟನೆಯನ್ನು ನೆರವೇರಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಅಜಿತ್ ಸಿಂಗ್

Tuesday, March 19th, 2013
International Air Cargo Complex inua

ಮಂಗಳೂರು : ಮಂಗಳೂರು ಹಳೆ ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ಏರ್ ಕಾರ್ಗೊ ಕಾಂಪ್ಲೆಕ್ಸ್ ನ ಉದ್ಘಾಟನೆಯನ್ನು ಕೇಂದ್ರ ಸರ್ಕಾರದ ನಾಗರಿಕ ವಿಮಾನಯಾನ ಸಚಿವ ಅಜಿತ್ ಸಿಂಗ್ ಮಾರ್ಚ್ 18 ಸೋಮವಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪ್ರಸ್ತುತ  ಕಾರ್ಗೊ ಕಾಂಪ್ಲೆಕ್ಸ್ 1400 ಚದರ ಮೀಟರ್ ವ್ಯಾಪ್ತಿಯನ್ನು ಹೊಂದಿದ್ದು, 5000 ಮೆಟ್ರಿಕ್ ಟನ್ ಗಳಷ್ಟು ಅಂತಾರಾಷ್ಟ್ರೀಯ ಆಮದು ಕಾರ್ಗೊಗಳನ್ನು ಹಾಗೂ 13,000 ಮೆಟ್ರಿಕ್ ಟನ್ ಗಳಷ್ಟು ರಫ್ತು ಮಾಡುವ ಕಾರ್ಗೊಗಳನ್ನು ಸಂಗ್ರಹಿಸುವ ಸಾಮರ್ಥ್ಯವನ್ನು ಹೊಂದಿದೆ. ಮಂಗಳೂರು ಅಂ.ರಾ. ವಿ. […]

ಲೇಡಿಗೋಶನ್ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ವೀರಪ್ಪ ಮೊಲಿ, ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌

Tuesday, March 19th, 2013
Foundation stone for Lady Goschen Hospital

ಮಂಗಳೂರು : ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಡಾ| ಎಂ. ವೀರಪ್ಪ ಮೊಲಿ ಹಾಗು ಮಾನ್ಯ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ರವರು ಮಾರ್ಚ್18 ಸೋಮವಾರ ಸುದೀರ್ಘ ಇತಿಹಾಸವಿರುವ ಲೇಡಿಗೋಶನ್ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಡಾ| ಎಂ. ವೀರಪ್ಪ ಮೊಲಿ ಮಾತನಾಡಿ, 162 ವರ್ಷಗಳ ಸುಧೀರ್ಘ ಇತಿಹಾಸವಿರುವ ಲೇಡಿಗೋಶನ್ ಆಸ್ಪತ್ರೆ ಯ ನೂತನ ಕಟ್ಟಡ ನಿರ್ಮಾಣ ದಿಂದಾಗಿ ಮಹಿಳೆಯರು ಮತ್ತು […]

ರಾಜ್ಯದಲ್ಲಿನ ವಿದ್ಯುತ್ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸಲಾಗುವುದು : ಜಗದೀಶ್ ಶೆಟ್ಟರ್

Monday, March 18th, 2013
CM Jagadish Shettar vist Mangalore

ಮಂಗಳೂರು : ಮಾರ್ಚ್ 18, ಸೋಮವಾರ ಮಂಗಳೂರಿನಲ್ಲಿ  ವಿವಿಧ ಯೋಜನೆಗಳ ಉದ್ಘಾಟನೆಯನ್ನು ನೆರವೇರಿಸಲು ಇಂದು ಬೆಳಗ್ಗೆ ಮಂಗಳೂರು  ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ  ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರವರನ್ನು  ಬಿಜೆಪಿ   ನಾಯಕರಾದ ಎನ್.ಯೋಗಿಶ್ ಭಟ್, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ, ಶಾಸಕ ಕೃಷ್ಣ ಜೆ.ಪಾಲೆಮಾರ್, ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಸ್ವಾಗತಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಯಚೂರಿನಲ್ಲಿನ  ಜಲವಿದ್ಯುತ್ ಸ್ಥಾವರದಲ್ಲಿನ ಉತ್ಪಾದನಾ ಸಮಸ್ಯೆ ಹಾಗೂ ತಾಂತ್ರಿಕ ಸಮಸ್ಯೆಗಳಿಂದ ವಿದ್ಯುತ್ ಪೂರೈಕೆಯಲ್ಲಿ ಕೊರತೆ ಉಂಟಾಗಿದೆ ಇದನ್ನು […]

ಚುನಾವಣೆಯಲ್ಲಿ ಒಂದೇ ರೀತಿಯ ಫಲಿತಾಂಶವನ್ನು ನಿರೀಕ್ಷಿಸಲು ಸಾಧ್ಯವಿಲ್ಲ :ಸಿ.ಟಿ. ರವಿ

Monday, March 18th, 2013
CT Ravi

ಮಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಮುಂಬರುವ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಅಲ್ಲ, ಈ ಚುನಾವಣೆಯಲ್ಲಿ ಬಂದ ಫಲಿತಾಂಶವೇ ಮುಂದಿನ ಚುನಾವಣಾ ಫಲಿತಾಂಶ ವಾಗುವ ಸಾಧ್ಯತೆ ತೀರ ಕಡಿಮೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹೇಳಿದರು. ಅವರು ರವಿವಾರ ಸುದ್ದಿಗಾರರ ಜತೆಗೆ ಸ್ಥಳೀಯ ಚುನಾವಣಾ ಫಲಿತಾಂಶ ಕುರಿತಂತೆ ಮಾತನಾಡಿದ ಅವರು, ಉತ್ತರಪ್ರದೇಶ ಮತ್ತು ದಿಲ್ಲಿಯಲ್ಲಿ ನಡೆದ ಚುನಾವಣಾ ಫಲಿತಾಂಶವನ್ನು ಗಮನಿಸಿದಾಗ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಗೆಲುವು ಸಾಧಿಸಿದರೆ, ಅನಂತರದ […]

ಕೋಟೆಕಾರು, ಬಗಂಬಿಲದಲ್ಲಿನ ಬಹುಮಹಡಿ ವಸತಿ ಸಂಕೀರ್ಣಕ್ಕೆ ವಸತಿ ಸಚಿವ ವಿ. ಸೋಮಣ್ಣ ನವರಿಂದ ಶಿಲಾನ್ಯಾಸ

Monday, March 18th, 2013
V Somanna

ಮಂಗಳೂರು : ಕೋಟೆಕಾರು ಗ್ರಾಮದ ಬಗಂಬಿಲ ಸಮೀಪ ಕರ್ನಾಟಕ ಗೃಹ ಮಂಡಳಿ ವತಿಯಿಂದ ನಿರ್ಮಿಸಲಾಗುವ ಬಹು ಮಹಡಿ ವಸತಿ ಸಂಕೀರ್ಣಕ್ಕೆ ಭಾನುವಾರ ವಸತಿ ಸಚಿವ ವಿ. ಸೋಮಣ್ಣ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಮಂಗಳೂರಿನಲ್ಲಿ ಈಗಾಗಲೇ ಗುರುತಿಸಲಾದ 38 ಎಕರೆ ಸರಕಾರಿ ಜಾಗದಲ್ಲಿ ವಸತಿ ಬಡಾವಣೆ ಹಾಗೂ ಸಂಕೀರ್ಣ ನಿರ್ಮಿಸುವಂತೆ ಪ್ರಸ್ತಾವನೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸುಮಾರು 1500 ಕೋಟಿ ರೂಪಾಯಿ ಗಳ ಕ್ರಿಯಾ ಯೋಜನೆ ರೂಪಿಸಲು ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು. ಮುಂದುವರಿದು, ಕೋಟೆಕಾರಿನ […]