ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ : ಪ್ರತಿಪಕ್ಷ ನಾಯಕ ಆರ್‌.ಅಶೋಕ

Wednesday, September 18th, 2024
R-Ashok

ಬೆಂಗಳೂರು : ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ನರೇಂದ್ರ ಮೋದಿಯವರ ಭಯದಿಂದಾಗಿ ಕಾಂಗ್ರೆಸ್‌ ಈ ಕ್ರಮವನ್ನು ವಿರೋಧಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ಇದರಿಂದ ತೆರಿಗೆದಾರರ ಹಣ ಉಳಿತಾಯವಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ, ಲೋಕಸಭೆ ಹೀಗೆ ಒಂದೊಂದು ಚುನಾವಣೆ ಒಮ್ಮೊಮ್ಮೆ ನಡೆದಾಗ ನೀತಿ ಸಂಹಿತೆ […]

ಬೆಳ್ತಂಗಡಿಯ ರೆಖ್ಯಕ್ಕೆ ಭೇಟಿ ನೀಡಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಸಂಸದ ಕ್ಯಾ. ಚೌಟ

Wednesday, September 18th, 2024
rekhya

ಬೆಳ್ತಂಗಡಿ : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಬೆಳ್ತಂಗಡಿ ತಾಲೂಕಿನ ರೆಖ್ಯಕ್ಕೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಎಂಜಿರದಲ್ಲಿ ಸರ್ವೀಸ್‌ ರಸ್ತೆ ಕಾಮಗಾರಿಗಳ ವೀಕ್ಷಣೆ ಮಾಡಿ ಸದ್ಯದ ಪ್ರಗತಿ ಬಗ್ಗೆ ಮಾಹಿತಿ ಪಡೆದುಕೊಂಡ ಸಂಸದರು, ರಸ್ತೆ ಕಾಮಗಾರಿಗಳಿಂದಾಗಿ ಸಾರ್ವಜನಿಕರಿಗೆ ಯಾವುದೇ ರೀತಿಯಿಂದ ತೊಂದರೆಯಾಗಬಾರದು. ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿಯನ್ನು ತ್ವರಿತವಾಗಿ ಮುಂದುವರಿಸಬೇಕೆಂದು ಗುತ್ತಿಗೆದಾರರಿಗೆ ಸೂಚಿಸಿದ್ದಾರೆ. ಬೆಳ್ತಂಗಡಿ ಶಾಸಕ […]

“ಬೀದಿಬದಿ ವ್ಯಾಪಾರಿಗಳೇ ಜಾಗರೂಕರಾಗಿರಿ!” ಬಿ.ಕೆ.ಇಮ್ತಿಯಾಜ್ ಇವರನ್ನು ನಮ್ಮ ಶ್ರೇಯೋಭಿವೃದ್ಧಿ ಸಂಘದಿಂದ ವಜಾಗೊಳಿಸಿದ್ದೇವೆ

Tuesday, September 17th, 2024
street-vendors society

ಮಂಗಳೂರು: “ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘವು ಸಹಕಾರ ಇಲಾಖೆಯಿಂದ ಅಧಿಕೃತವಾಗಿ ನೋಂದಾಯಿಸಲ್ಪಟ್ಟ ಸಂಘವಾಗಿರುತ್ತದೆ. ಬೀದಿಬದಿ ವ್ಯಾಪಾರಕ್ಕೆ ಸಂಬಂಧಪಟ್ಟ ಯಾವುದೇ ಅನಧಿಕೃತವಾಗಿರುವಂತಹ ಕೇವಲ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ರಾಜಕೀಯ ಪಕ್ಷದ ಲಾಭಕ್ಕಾಗಿ ಬೀದಿ ಬದಿ ವ್ಯಾಪಾರಿಗಳನ್ನು ಸ್ವಂತ ಲಾಭಕ್ಕೆ ಉಪಯೋಗಿಸಿಕೊಳ್ಳುವ ಯಾವುದೇ ಸಂಘಟನೆಗಳಿಗೆ ಮಹತ್ವವನ್ನು ಕೊಡಬಾರದು“ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಪತ್ರಿಕಾಗೋಷ್ಟಿಯಲ್ಲಿ ಮನವಿ ಮಾಡಿದರು. ”ಬೀದಿ ಬದಿ ವ್ಯಾಪಾರಸ್ಥರ ಸಂಘಟನೆ ಎಂಬ ಹೆಸರಿನ ಯಾವುದೇ ರಾಜಕೀಯ ಪ್ರೇರಿತ […]

ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ “ಕಲ್ಜಿಗ” ಚಿತ್ರತಂಡ

Tuesday, September 17th, 2024
kaljiga tulu

ಮಂಗಳೂರು: “ದಕ್ಷಿಣ ಕನ್ನಡ ಉಡುಪಿಯಲ್ಲಿ ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಹೊರಗಿನಿಂದ ಒಂದಷ್ಟು ಭಿನ್ನ ಅಭಿಪ್ರಾಯ ಬರುತ್ತಿದೆ ಆದರೆ ನಮಗೆ ಜನರ ಅಭಿಪ್ರಾಯ ಮುಖ್ಯ. ನಮಗೆ ಒಂದು ಉತ್ತಮ ಸಿನಿಮಾ ಮಾಡುವ ಹಂಬಲ ಇತ್ತು ಅದು ನೆರವೇರಿದೆ ಇನ್ನೂ ಹಲವರು ಸಿನಿಮಾ ನೋಡಿಲ್ಲ ಅವರೆಲ್ಲರೂ ಸಿನಿಮಾ ನೋಡಬೇಕು“ ಎಂದು ಕಲ್ಜಿಗ ಸಿನಿಮಾ ನಿರ್ದೇಶಕ ಸುಮನ್ ಸುವರ್ಣ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. ”ಸಿನಿಮಾ ನೋಡಿದವರು ಇಂತಹ ಸಿನಿಮಾ ಇನ್ನಷ್ಟು ಬರಬೇಕು, ಇಂದಿನ ಯುವಜನತೆಗೆ […]

“ಬಿ.ಸಿ. ರೋಡ್‌ ನ ಬ್ರಹ್ಮರ್ಷಿ ನಾರಾಯಣ ಗುರು ವೃತ್ತ ಮಾದರಿ ವೃತ್ತವಾಗಿ ಮರು ನಿರ್ಮಾಣ ” – ಸಂಸದ ಕ್ಯಾ. ಚೌಟ ಭರವಸೆ

Monday, September 16th, 2024
Bantwal-circle

ಬಂಟ್ವಾಳ : ಬಿ. ಸಿ. ರೋಡ್ ಜಂಕ್ಷನ್‌ನಲ್ಲಿರುವ ಬ್ರಹ್ಮರ್ಷಿ ನಾರಾಯಣ ಗುರು ವೃತ್ತವನ್ನು ಮಾದರಿ ವೃತ್ತವನ್ನಾಗಿ ಪುನರ್‌ ನಿರ್ಮಾಣ ಮಾಡುವ ಕುರಿತಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಬಿಲ್ಲವ ಸಮುದಾಯದ ಮುಖಂಡರು ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮಾತನಾಡಿದ ಕ್ಯಾ. ಚೌಟ ಅವರು “ಬಿ.ಸಿ. ರೋಡ್ ನಲ್ಲಿ ಮರು ನಿರ್ಮಾಣವಾಗಲಿರುವ ಬ್ರಹ್ಮರ್ಷಿ ನಾರಾಯಣಗುರು ವೃತ್ತವನ್ನು […]

ಬಾವುಟಗುಡ್ಡೆಯಲ್ಲಿ ಅತೀ ಎತ್ತರದ ಧ್ವಜಸ್ಥಂಭ ನಿರ್ಮಾಣಕ್ಕೆ ಶಂಕುಸ್ಥಾಪನೆ

Monday, September 16th, 2024
Bavuta gudda Flag pole

ಮಂಗಳೂರು: ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಕ್ರಾಂತಿಕಾರಿ ಹೋರಾಟ ಮಾಡಿದ್ದ ಕೆದಂಬಾಡಿ ರಾಮಯ್ಯ ಗೌಡರ ಸ್ಮರಣೆಗಾಗಿ “ಸ್ಮಾರ್ಟ್ ಸಿಟಿ” ಯೋಜನೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತಿ ಎತ್ತರವಾದ ಧ್ವಜಸ್ಥಂಭ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ಬಾವುಟಗುಡ್ಡೆಯಲ್ಲಿ ಆದಿತ್ಯವಾರ ನೆರವೇರಿತು. 1837ರಲ್ಲಿ ಮಂಗಳೂರನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿ ಆಡಳಿತ ನಡೆಸುತ್ತಿದ್ದ ಬ್ರಿಟಿಷರನ್ನು ಕೆದಂಬಾಡಿ ರಾಮಯ್ಯ ಗೌಡರು ರೈತವೀರರನ್ನು ಸಂಘಟಿಸಿ ಹೋರಾಟ ಮಾಡಿ ಬಾವುಟಗುಡ್ಡೆಯಲ್ಲಿ ಬ್ರಿಟಿಷ್ ಧ್ವಜವನ್ನು ಇಳಿಸಿ ನಮ್ಮ ದೇಶವನ್ನು ಸ್ವತಂತ್ರವೆಂದು ಘೋಷಿಸಿ ಸುಮಾರು 13 ದಿವಸಗಳವರೆಗೆ ನಮ್ಮ ನೆಲದ […]

`ಬಿ‌.ಸಿ.ರೋಡ್ ಚಲೋ’ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಾವಿರಾರು ಕಾರ್ಯಕರ್ತರು

Monday, September 16th, 2024
bc-road-chalo

ಬಂಟ್ವಾಳ : ವಿ.ಎಚ್.ಪಿ ಮತ್ತು ಭಜರಂಗದಳದ ಸಾವಿರಾರು ಕಾರ್ಯಕರ್ತರು ಬಿಸಿರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಸೋಮವಾರ ಬೆಳಿಗ್ಗೆ `ಬಿ‌.ಸಿ.ರೋಡ್ ಚಲೋ’ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಕಾರ್ಯಕರ್ತರು ಘೋಷಣೆ ಕೂಗೂತ್ತಾ ಪೋಲೀಸರು ಹಾಕಿದ ಬ್ಯಾರಿಕೇಡ್ ಗಳನ್ನ ಲೆಕ್ಕಿಸದೆ ಮುಂದೆ ಸಾಗಿದರು. ಈ ವೇಳೆ ಪೋಲೀಸರು ಹಾಗೂ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆಯಿತು. ಪರಿಸ್ಥಿತಿ ಕೈ ಮೀರಿಹೋಗುವ ಹಂತಕ್ಕೆ ತಲುಪಿದಾಗ ಪೋಲೀಸರು ಬಸ್ ಗಳನ್ನು ರಸ್ತೆಗೆ ಅಡ್ಡಲಾಗಿ ಇಟ್ಟು ಕಾರ್ಯಕರ್ತರಿಗೆ ತಡೆಯೊಡ್ಡಿದರು. ಬಳಿಕ ಹೆದ್ದಾರಿಯಲ್ಲಿ […]

ಕೇಂದ್ರ ಸರ್ಕಾರದ ‘ಪಿಎಂ ಶ್ರೀ ‘ ಶಾಲೆಯಾಗಿ ಮುಡಿಪು ಜವಾಹರ್ ನವೋದಯ ವಿದ್ಯಾಲಯ – ಕ್ಯಾ. ಚೌಟ

Saturday, September 14th, 2024
PM-shree

ಮಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ ಮಹತ್ವಾಕಾಂಕ್ಷಿ ‘ಪಿಎಂ ಶ್ರೀ’ ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಆಯ್ಕೆಯಾಗಿರುವುದನ್ನು ಇಂದು ಅಧಿಕೃತವಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಘೋಷಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಸದರು, ಪ್ರಧಾನ ಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ( ಪಿಎಂಶ್ರೀ) ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಶಾಲೆ ಆಯ್ಕೆಯಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಈ ಯೋಜನೆಯಡಿ ಶಾಲೆಯಲ್ಲಿ ತಂತ್ರಜ್ಞಾನ ಆಧಾರಿತ ನಾವೀನ್ಯ ಬೋಧನಾ ವ್ಯವಸ್ಥೆ, ಕೌಶಲ್ಯ, ಆವಿಷ್ಕಾರ, ಉತ್ತಮ […]

ಕೇವಲ 100 ರೂಪಾಯಿಗೆ ಗೆಳೆಯನನ್ನೇ ಕೊಂದ ಸ್ನೇಹಿತರು

Saturday, September 14th, 2024
ಕೇವಲ 100 ರೂಪಾಯಿಗೆ ಗೆಳೆಯನನ್ನೇ ಕೊಂದ ಸ್ನೇಹಿತರು

ಹಾಸನ : ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ಗಣೇಶ್ (27) ಎಂಬವರನ್ನು ಸ್ನೇಹಿತರೇ ಕೊಲೆ ಮಾಡಿದ್ದಾರೆ. ಕೇವಲ 100 ರೂಪಾಯಿ ಕೊಟ್ಟಿಲ್ಲವೆಂಬ ಕಾರಣಕ್ಕೆ ಮದ್ಯಪಾನದ ಅಮಲಿನಲ್ಲಿ ಸ್ನೇಹಿತರೇ ಆತನನ್ನು ಹತ್ಯೆ ಮಾಡಿದ್ದಾರೆ. ಗಣೇಶ್ ಗ್ರಾಮ ಪಂಚಾಯ್ತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಾ ಮನೆಗೆ ಆಸರೆಯಾಗಿದ್ದ. ಹೇಳಿ ಕೇಳಿ ಬೆಳಿಗ್ಗೆಯೇ ಕೊಳಾಯಿಗೆ ನೀರು ಬಿಡುವ ಕೆಲಸ ಮುಗಿಯುತ್ತಿದ್ದರಿಂದ ಸಂಜೆಯಾಗುತ್ತಲೇ ಸ್ನೇಹಿತರ ಜೊತೆ ಸೇರುವ ಅಭ್ಯಾಸ ಇರಿಸಿಕೊಂಡಿದ್ದ. ಶುಕ್ರವಾರ ಕೂಡ ಸಂಜೆ ಬೇಗನೆ ಕೆಲಸ ಮುಗಿಸಿ ಗೆಳೆಯರ […]

ಯಕ್ಷಸಿರಿ ಪ್ರಶಸ್ತಿಗೆ ದಿವಾಕರ್ ದಾಸ್ ಕಾವಳಕಟ್ಟೆ ಆಯ್ಕೆ

Saturday, September 14th, 2024
Diwakar

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2023ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದೆ. ಪ್ರತಿಷ್ಠಿತ ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ತೆಂಕುತಿಟ್ಟಿನ ಪ್ರಸಾಧನ ಕಲಾವಿದರು ಮತ್ತು ವೇಷಧಾರಿಯಾದ ದಿವಾಕರ್ ದಾಸ್ ಕಾವಳಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು ಶನಿವಾರ(ಸೆ.14) ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು. ನವೆಂಬರ್ ತಿಂಗಳಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಯಕ್ಷಸಿರಿ ಪ್ರಶಸ್ತಿ ಪುರಸ್ಕೃತರಿಗೆ ನಗದು, ಪ್ರಶಸ್ತಿ ಫಲಕ, ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು […]