ಬಹುರೂಪಿ ಚಿಂತನೆಗಳನ್ನು ಕಟ್ಟಿಕೊಡುವ ಕೃತಿ ಅವಿಭಜಿತ ದಕ್ಷಿಣ ಕನ್ನಡದ ಮಹಿಳಾ ಚಿಂತನೆ: ಪ್ರೊಫೆಸರ್ ಸಬಿಹಾ ಭೂಮಿಗೌಡ

Sunday, January 19th, 2025
ಬಹುರೂಪಿ ಚಿಂತನೆಗಳನ್ನು ಕಟ್ಟಿಕೊಡುವ ಕೃತಿ ಅವಿಭಜಿತ ದಕ್ಷಿಣ ಕನ್ನಡದ ಮಹಿಳಾ ಚಿಂತನೆ: ಪ್ರೊಫೆಸರ್ ಸಬಿಹಾ ಭೂಮಿಗೌಡ

ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡದ ಬಹುರೂಪಿ ಚಿಂತನೆಗಳನ್ನು ಒಂದೆಡೆ ಕಟ್ಟಿಕೊಡುವ ಕೃತಿಯೇ ‘ಅವಿಭಜಿತ ದಕ್ಷಿಣ ಕನ್ನಡದ ಮಹಿಳಾ ಚಿಂತನೆ’ ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊಫೆಸರ್ ಸಬಿಹಾ ಭೂಮಿಗೌಡ ಹೇಳಿದರು. ಬಹು ಓದು ಬಳಗ ಹಾಗೂ ಆಕೃತಿ ಆಶಯ ಪಬ್ಲಿಕೇಶನ್ ನ ಸಹಯೋಗದೊಂದಿಗೆ ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್ ಸಿಕ್ವೇರಾ ಸಭಾಂಗಣದಲ್ಲಿ ರವಿವಾರ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು 1995 ರಿಂದ 2023ರವರೆಗಿನ ಮೂರು ದಶಕಗಳ ಕಾಲದ ಈ ಭಾಗದ ಲೇಖಕ ಲೇಖಕಿಯರು […]

ಪೆದಮಲೆ ವಾಜಿಲ್ಲಾಯ-ಧೂಮಾವತಿ ದೈವಸ್ಥಾನದ ಆಮಂತ್ರಣ ಪತ್ರ ಬಿಡುಗಡೆ

Sunday, January 19th, 2025
Pedamale

ಮಂಗಳೂರು : ಶ್ರೀ ಕ್ಷೇತ್ರ ಪೆದಮಲೆ ವಾಜಿಲ್ಲಾಯ ಧೂಮಾವತಿ ದೈವಸ್ಥಾನದಲ್ಲಿ 300 ವರ್ಷಗಳ ಬಳಿಕ ನಡೆಯಲಿರುವ ನೇಮೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ನೀರ್ ಮಾರ್ಗದ ಪೆದಮಲೆ ಕ್ಷೇತ್ರದಲ್ಲಿ ಆದಿತ್ಯವಾರ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು, “ದೈವದ ಕಾರ್ಯ ದೈವೇಚ್ಛೆಯಂತೆಯೇ ನೆರವೇರುತ್ತದೆ. ಆಮಂತ್ರಣ ಪತ್ರಿಕೆ ನಾವು ಮುದ್ರಿಸಿ ಮನೆಮನೆಗೆ ಹಂಚಬಹುದು ಆದರೆ ಅದಕ್ಕೆ ಬೇಕಾದುದನ್ನು ದೈವ ಸಂಕಲ್ಪದಂತೆಯೇ ಪಡೆದುಕೊಳ್ಳುತ್ತದೆ. ಹಾಗೆಯೇ ಗ್ರಾಮದ […]

ಟೋಲ್ ಸುಂಕ ವಸೂಲಿಗೆ ಲಾರಿ ಚಾಲಕನ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ : ವಿಡಿಯೋ ವೈರಲ್

Sunday, January 19th, 2025
ಟೋಲ್ ಸುಂಕ ವಸೂಲಿಗೆ ಲಾರಿ ಚಾಲಕನ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ : ವಿಡಿಯೋ ವೈರಲ್

ಬಂಟ್ವಾಳ : ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲುನಲ್ಲಿ ಟೋಲ್ ಸುಂಕ ಪಾವತಿಸಿಲ್ಲ ಎಂಬ ಕಾರಣಕ್ಕಾಗಿ ಲಾರಿ ಚಾಲಕನ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಸ್ಥಳೀಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಚಾಲಕ ಬ್ರಹ್ಮರಕೂಟ್ಲು ಟೋಲ್ ಗೇಟ್ ನಲ್ಲಿ ಹಣ ನೀಡಿಲ್ಲ ಎಂಬ ಕಾರಣಕ್ಕಾಗಿ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ್ದಲ್ಲದೆ, ಲಾರಿ ಬಾಗಿಲು ತೆರೆದು […]

ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಗೆ ಅಧಿಕೃತ ಚಾಲನೆ

Saturday, January 18th, 2025
street-food-25

ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ದ.ಕ ಜಿಲ್ಲಾಡಳಿತದ ಸಹಕಾರದೊಂದಿಗೆ ಆರಂಭಗೊಂಡ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಗೆ ನಗರದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ನಿರ್ಮಿಸಿದ್ದ ಅದ್ದೂರಿ ವೇದಿಕೆಯಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರ ಉಪಸ್ಥಿತಿಯೊಂದಿಗೆ ಅಧಿಕೃತ ಚಾಲನೆ ದೊರೆಯಿತು. ಭಾರೀ ನಿರೀಕ್ಷೆ ಮೂಡಿಸಿದ್ದ ಚಾಯ್ ವಾಲಾ ಡಾಲಿರವರು ಉದ್ಘಾಟನಾ ವೇದಿಕೆಯಲ್ಲೇ ತಮ್ಮ ಎಂದಿನ ಶೈಲಿಯಲ್ಲಿ ಚಹಾ ತಯಾರಿಸಿ ಗಣ್ಯರಿಗೆ ನೀಡುತ್ತಿದ್ದರೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಜನರು […]

ಮುಡಾ ಹಗರಣದಲ್ಲಿ ಕೊನೆಗೂ ಇಡಿಯಿಂದ ಕಳಚಿ ಬಿದ್ದ ಸಿದ್ದರಾಮಯ್ಯನವರ ಮುಖವಾಡ : ಸಂಸದ ಕ್ಯಾ. ಚೌಟ

Saturday, January 18th, 2025
Brijesh-Chowta

ಮಂಗಳೂರು: ಮೈಸೂರಿನ ಮುಡಾದಲ್ಲಿ ನಡೆದ ಅಕ್ರಮಗಳ ಆಳ-ಅಗಲ ಒಂದೊಂದಾಗಿಯೇ ಬಯಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲಿಗೆ ಹೋಗುವ ಮೊದಲು ಸಿಎಂ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಆ ಹುದ್ದೆಯ ಘನತೆ ಕಾಪಾಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಗ್ರಹಿಸಿದ್ದಾರೆ. ಈ ಪ್ರಕರಣದ ಬಗ್ಗೆ ಜಾರಿ ನಿರ್ದೇಶನಾಲಯ(ಇಡಿ) ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಸಂಸದರು, ಬಡವರಿಗೆ ಮಂಜೂರಾಗಬೇಕಿದ್ದ ನಿವೇಶನಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು, ದಲ್ಲಾಳಿಗಳಿಗೆ ನೀಡಿದ್ದು ಇಡಿ ತನಿಖೆಯಲ್ಲಿ ಸಾಬೀತಾಗಿದೆ. ಈ ಹಿನ್ನಲೆಯಲ್ಲಿ […]

ಒಎನ್ ಜಿಸಿ ಎಂಆರ್ ಪಿಎಲ್ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ

Saturday, January 18th, 2025
Galipata-utsava

ಮಂಗಳೂರು: ಕರಾವಳಿ ಉತ್ಸವ ಹಿನ್ನೆಲೆಯಲ್ಲಿ ಒಎನ್ ಜಿಸಿ-ಎಂಆರ್ ಪಿಎಲ್ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಸಂಜೆ ತಣ್ಣೀರುಬಾವಿ ಬೀಚ್ ನಲ್ಲಿ ಚಾಲನೆ ನೀಡಿದರು. ಬಳಿಕ ಮಾತಾಡಿದ ಅವರು, “ಜನರ ಮನಸುಗಳನ್ನು ಬೆಸೆಯುವ ಇಂತಹ ಕಾರ್ಯಕ್ರಮ ಮಂಗಳೂರಿನಲ್ಲಿ ಆಯೋಜನೆ ಮಾಡಿರುವುದು ಖುಷಿ ತಂದಿದೆ. ಟೀಮ್ ಮಂಗಳೂರು ನೇತೃತ್ವದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ರಾಜ್ಯ ಸರಕಾರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಈ […]

ವಿವಿಧ ಸರಕಾರಿ ಆಸ್ಪತ್ರೆಗಳಿಗೆ ವೈದ್ಯರ ನೇಮಕಾತಿಗೆ ಅರ್ಜಿ ಆಹ್ವಾನ

Saturday, January 18th, 2025
Doctor

ಮಂಗಳೂರು : ಎನ್.ಹೆಚ್.ಎಂ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. PM-ABHIM ಕಾರ್ಯಕ್ರಮದಡಿಯಲ್ಲಿ ಮಂಗಳೂರು ದ.ಕ ಜಿಲ್ಲೆಯ ನಮ್ಮ ಕ್ಲಿನಿಕ್, ಪೋರ್ಟ್ (ಹೊÊಗೆ ಬಜಾರ್)- ಇಲ್ಲಿಗೆ ವೈದ್ಯಾಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಇಲಾಖಾ ವೆಬ್‌ಸೈಟ್ www.dkhfw.in ನಲ್ಲಿ ಪಡೆದು ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಮತ್ತು ಅರ್ಜಿಯಲ್ಲಿ ತಿಳಿಸಿರುವ ಅಗತ್ಯ ದಾಖಲೆಗಳನ್ನು ದ.ಕ ಮಂಗಳೂರು […]

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ

Friday, January 17th, 2025
CM-Mangalore

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನು ಮುಂದುವರೆಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರಾಜೀವ್ ಗಾಂಧಿ ವಿವಿ, ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು ರೂಪಿಸುವುದರ […]

ಜಾತಿಗಣತಿ ವರದಿ: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ : ಸಿಎಂ ಸಿದ್ದರಾಮಯ್ಯ

Friday, January 17th, 2025
cm-mangalore

ಮಂಗಳೂರು : ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಜಾತಿ ಗಣತಿ ವರದಿ: ವಿರೋಧ ಏಕೆ? ಪ್ರತಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲದೇ ವಿರೋಧ ಏಕೆ ಮಾಡುತ್ತಾರೆ. ವರದಿ ಇನ್ನೂ ಬಹಿರಂಗಗೊಳ್ಳದಿರುವುದರಿಂದ ಈ ಬಗ್ಗೆ ನನಗೂ ತಿಳಿದಿಲ್ಲ ಎಂದರು ನಮ್ಮ ಪ್ರಣಾಳಿಕೆಯಲ್ಲಿ ಜಾತಿಗಣತಿಯನ್ನು ಮಂಡಿಸಲಾಗುವುದು ಎಂದು ಜನತೆಗೆ ಭರವಸೆ […]

ಅದ್ಧೂರಿ ಮತ್ತು ಸಂಭ್ರಮಕ್ಕೆ ಸಾಕ್ಷಿಯಾದ ಮಂಗಳೂರು ಕ್ರೀಡಾಂಗಣ

Friday, January 17th, 2025
Karnataka-Sports-meet

ಮಂಗಳೂರು : ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌ ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಕರ್ನಾಟಕ ಕ್ರೀಡಾಕೂಟ 2025 ನ್ನು ಉದ್ಘಾಟಿಸಿ ಮಾತನಾಡಿದರು. ಅಗತ್ಯ ವೇದಿಕೆ ಮತ್ತು ಉತ್ತಮ ಪ್ರೋತ್ಸಾಹ ಇಲ್ಲದಿದ್ದರೆ ಕ್ರೀಡಾ ಕ್ಷೇತ್ರ ಮತ್ತು ಕ್ರೀಡಾಪಟುಗಳು ಬೆಳವಣಿಗೆ ಆಗಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ […]