ಒಳ್ಳೆಯ ಪೌಷ್ಠಿಕ ಆಹಾರ ಸೇವನೆಯಿಂದ ನಮ್ಮ ಉತ್ತಮ ಜೀವನ ಶೈಲಿಗೆ ಪೂರಕ

Saturday, February 15th, 2020
shakti

ಮಂಗಳೂರು : ಒಳ್ಳೆಯ ಪೌಷ್ಠಿಕ ಆಹಾರ ಸೇವನೆಯು ನಮ್ಮ ಉತ್ತಮ ಜೀವನ ಶೈಲಿಗೆ ಪೂರಕವಾಗಿದೆ. ಒಳ್ಳೆಯ ಆಹಾರದಿಂದ ಉತ್ತಮ ಆರೋಗ್ಯ ವೃದ್ಧಿಯಾಗಿ ಅನಾರೋಗ್ಯದಿಂದ ಬಿಡುಗಡೆ ಸಿಗುತ್ತದೆ. ಈ ಮೂಲಕ ಒಬ್ಬ ವ್ಯಕ್ತಿ, ಒಂದು ಮನೆ, ಒಂದು ಸಮಾಜ ಹಾಗೂ ಇಡೀ ದೇಶ ಆರೋಗ್ಯವಂತ ದೇಶವಾಗಿ ಇರಬೇಕು ಎನ್ನುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರು ಫಿಟ್ ಇಂಡಿಯಾ ಎನ್ನುವುದನ್ನು ಪರಿಚಯಿಸಿದರು ಎಂದು ಶಕ್ತಿ ನಗರದ ಶಕ್ತಿ ವಸತಿಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಣಿಪಾಲ ವಿ.ವಿ.ಯ ನಿವೃತ್ತ ಪ್ರಾಧ್ಯಾಪಕರಾದ ಡಾ. […]

ವಿಶ್ವ ಚಾಂಪಿಯನ್‌ಶಿಪ್‌ ಬೆಳ್ಳಿ ಪದಕ ವಿಜೇತ ಅಮಿತ್‌ ಪಂಘಲ್‌ ವಿಶ್ವದ ನಂ.1 ಬಾಕ್ಸರ್‌

Friday, February 14th, 2020
amith

ಹೊಸದಿಲ್ಲಿ : ವಿಶ್ವ ಚಾಂಪಿಯನ್‌ಶಿಪ್‌ ಬೆಳ್ಳಿ ಪದಕ ವಿಜೇತ ಅಮಿತ್‌ ಪಂಘಲ್‌ (52 ಕೆಜಿ ವಿಭಾಗ) ನೂತನ “ಐಒಸಿ ಬಾಕ್ಸಿಂಗ್‌ ಟಾಸ್ಕ್ ಫೋರ್ಸ್‌’ ರ್‍ಯಾಂಕಿಂಗ್‌ನಲ್ಲಿ ವಿಶ್ವದ ನಂ.1 ಬಾಕ್ಸರ್‌ ಗೌರವಕ್ಕೆ ಪಾತ್ರರಾಗಿದ್ದಾರೆ. ಕಳೆದೊಂದು ದಶಕದ ಅವಧಿಯಲ್ಲಿ ಭಾರತದ ಬಾಕ್ಸರ್‌ ಓರ್ವ ಅಗ್ರಸ್ಥಾನಕ್ಕೆ ನೆಗೆದದ್ದು ಇದೇ ಮೊದಲು. 2009ರಲ್ಲಿ ಒಲಿಂಪಿಕ್‌ ಕಂಚಿನ ಪದಕ ವಿಜೇತ ವಿಜೇಂದರ್‌ ಸಿಂಗ್‌ ಈ ಹೆಗ್ಗಳಿಕೆಗೆ ಪಾತ್ರರಾಗಿದ್ದರು (72 ಕೆಜಿ ವಿಭಾಗ). 24ರ ಹರೆಯದ ಅಮಿತ್‌ ಪಂಘಲ್‌ ಒಟ್ಟು 420 ಅಂಕ ಹೊಂದಿದ್ದಾರೆ ಎಂದು […]

ಬಿಜೆಪಿ ಪಕ್ಷದಲ್ಲಿ ಉಮೇಶ್​ ಕತ್ತಿ ಬಹಳ ಹಿರಿಯರಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂಬುದೇ ನನ್ನ ಆಗ್ರಹ : ಸಚಿವ ರಮೇಶ್​ ಜಾರಕಿಹೊಳಿ

Friday, February 14th, 2020
ramesh-jarakiholi

ಬೆಂಗಳೂರು : ಬಿಜೆಪಿ ಪಕ್ಷದ ಹಿರಿಯ ನಾಯಕ ಉಮೇಶ್ ಕತ್ತಿಗೆ ಸಚಿವ ಸ್ಥಾನ ಸಿಗಬೇಕು ಎಂಬುದೇ ನನ್ನ ಆಗ್ರಹ ಎಂದು ಹೇಳುವ ಮೂಲಕ ಸಚಿವ ರಮೇಶ್ ಜಾರಕಿಹೊಳಿ ಅಚ್ಚರಿ ಮೂಡಿಸಿದ್ದಾರೆ. ಕಳೆದ 6 ತಿಂಗಳಿನಿಂದ ಸಿಎಂ ಬಿಎಸ್ವೈ ಕ್ಯಾಬಿನೆಟ್ನಲ್ಲಿ ಸಚಿವ ಸ್ಥಾನ ಪಡೆಯಲು ರಮೇಶ್ ಜಾರಕಿಹೊಳಿ ಸಾಕಷ್ಟು ಪ್ರಯತ್ನ ನಡೆಸಿದ್ದಾರೆ. ಆದರೆ, ಈ ಎಲ್ಲಾ ಪ್ರಯತ್ನಗಳೂ ವಿಫಲವಾಗಿವೆ. ಇದೀಗ ಕೊನೆಯ ಪ್ರಯತ್ನ ಎನ್ನುವಂತೆ ಉಮೇಶ್ ಕತ್ತಿ ದೆಹಲಿಗೆ ತೆರಳಿದ್ದು ಹೈಕಮಾಂಡ್ ನಾಯಕರ ಬಳಿ ಸಚಿವ ಸ್ಥಾನಕ್ಕಾಗಿ ಲಾಬಿ […]

ಸಚಿವ ಆನಂದ್ ಸಿಂಗ್‍ಗೆ ಅರಣ್ಯ ಇಲಾಖೆ ಖಾತೆ ನೀಡಿದ್ದು ಕಳ್ಳನ ಕೈಗೆ ಕೀಲಿ ಕೈ ಕೊಟ್ಟಂತೆ : ಮಾಜಿ ಸಚಿವ ಹೆಚ್.ಎಂ ರೇವಣ್ಣ

Friday, February 14th, 2020
revanna

ರಾಯಚೂರು : ಸಚಿವ ಆನಂದ್ ಸಿಂಗ್‍ಗೆ ಅರಣ್ಯ ಇಲಾಖೆ ಖಾತೆ ನೀಡಿದ್ದು ಕಳ್ಳನ ಕೈಗೆ ಕೀಲಿ ಕೈ ಕೊಟ್ಟಂತೆ ಆಗಿದೆ ಅಂತ ಮಾಜಿ ಸಚಿವ ಹೆಚ್.ಎಂ ರೇವಣ್ಣ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಗಣಿ ವ್ಯವಾಹಾರದಲ್ಲಿ ಸ್ವಲ್ಪ ಅರಣ್ಯ ಅಸ್ತವ್ಯಸ್ತವಾಗುವುದು ಸರಿ ಅಂತ ಹೇಳೋ ಸಚಿವನಿಂದ ಏನನ್ನು ನಿರೀಕ್ಷೆ ಮಾಡಬಹುದು ಅಂತ ಬೇಸರ ವ್ಯಕ್ತಪಡಿಸಿದ್ದಾರೆ. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ವಿಳಂಬ ಮಾಡಿದ್ದು ನೋಡಿದರೆ ಇಂಥ ಪರಿಸ್ಥಿತಿ ಯಾರಿಗೂ ಬರೋದು ಬೇಡ. ವಿಶ್ವನಾಥ್ ಸ್ಥಿತಿಯಂತೂ ಕೇಳೋದೇ […]

ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ : ಮಾಜಿ ಸಚಿವ ರಮಾನಾಥ ರೈ ಆಕ್ರೋಶ

Friday, February 14th, 2020
ramanath

ಮಂಗಳೂರು : ಏಕಾಏಕಿ ಅಡುಗೆ ಅನಿಲ ದರ ಇಷ್ಟು ದರ ಏರಿಕೆ ಮಾಡುವುದು ಸರಿಯಲ್ಲ. ಕಾಂಗ್ರೆಸ್ ಸರಕಾರ ಇದ್ದಾಗ ಸ್ವಲ್ಪ ಹೆಚ್ಚಳ ಮಾಡಿದರೂ ವಿರೋಧ ವ್ಯಕ್ತಪಡಿಸುತ್ತಿದ್ದರು. ಅಡುಗೆ ಅನಿಲ ದರ ಏರಿಕೆ ಸಾಮಾನ್ಯ ಜನರ ಮೇಲೆ ಬರೆ ಎಳೆದಂತೆ ಆಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಡುಗೆ ಅನಿಲ ದರ ಹೆಚ್ಚಳ ವಿಚಾರವಾಗಿ ಅವರು ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಕರ್ನಾಟಕದಲ್ಲಿ ಬಿಜೆಪಿ ಬಂದ ಬಳಿಕ ರಾಜ್ಯದ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ. […]

‘ಎನ್ನ’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ

Friday, February 14th, 2020
yenna

ಮಂಗಳೂರು : ಗ್ಲೋರಿಯಸ್ ಆಂಜೆಲೋರ್ ಪ್ರೋಡಕ್ಷನ್ ಲಾಂಛನದಲ್ಲಿ ಕ್ಯಾನೆಟ್ ಮಾತಾಯಸ್ ಪಿಲಾರ್ ನಿರ್ಮಾಣದ ಕೋಡಿಕಲ್ ವಿಶ್ವನಾಥ ನಿರ್ದೇಶನದ ‘ಎನ್ನ’ ತುಳು ಚಲನ ಚಿತ್ರದ ಬಿಡುಗಡೆ ಸಮಾರಂಭವು ನಗರದ ಜ್ಯೋತಿ ಚಿತ್ರ ಮಂದಿರದಲ್ಲಿ ನಡೆಯಿತು. ಚಲನ ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಸಿನಿಮಾವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ತುಳುವಿನಲ್ಲಿ ತೆರೆಕಾಣುತ್ತಿರುವ 114ನೇ ಸಿನಿಮಾ ‘ಎನ್ನ’ ಪ್ರೇಮಕತೆಯನ್ನೊಳಗೊಂಡಿದೆ. ತುಳು ಸಿನಿಮಾಗಳಿಗೆ ಪ್ರೇಕ್ಷಕರ ಪ್ರೋತ್ಸಾಹ ಅಗತ್ಯ ಎಂದು ಅವರು ಸಿನಿಮಾಕ್ಕೆ ಶುಭ ಹಾರೈಸಿದರು. 173 ಕಲಾವಿದರು ‘ಎನ್ನ’ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಮುಖ್ಯವಾಗಿ […]

ರಾಜ್ಯ ಬಜೆಟ್ ನಲ್ಲಿ ಕಾಫಿ ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸುವುದಾಗಿ ಮುಖ್ಯಮಂತ್ರಿ ಭರವಸೆ

Friday, February 14th, 2020
CM

ಮಡಿಕೇರಿ : ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಗುರುವಾರ ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿತ 2020-21ನೇ ಸಾಲಿನ ಆಯ-ವ್ಯಯ ಮೇಲಿನ ಪೂರ್ವಭಾವಿ ಚಚೆ೯ಯಲ್ಲಿ ಕನಾ೯ಟಕ ಬೆಳೆಗಾರರ ಒಕ್ಕೂಟದ ಪ್ರಮುಖರು ಪಾಲ್ಗೊಂಡು ಕಾಫಿ ಬೆಳೆಗಾರರ ಸಮಸ್ಯೆಗೆ ಬಜೆಟ್ ನಲ್ಲಿ ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದರು. ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳಿಗೆ ಕೂಲಂಕುಶವಾಗಿ ಮನವರಿಕೆ ಮಾಡಿಕೊಡಲಾಯಿತು. ಕನಾ೯ಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಯು.ಎಂ.ತೀರ್ಥ ಮಲ್ಲೇಶ್ ಕಾಫಿ ಬೆಳೆಗಾರರ ಹಲವಾರು ಬೇಡಿಕೆಗಳನ್ನು ಮುಖ್ಯಮಂತ್ರಿಗಳ […]

ವಿದ್ಯುತ್ ಅವಘಡದಿಂದ ಯುವಕ ಸಾವು : ತಪ್ಪಿತಸ್ಥರ ವಿರುದ್ದ ಪ್ರಕರಣ ದಾಖಲಿಸಲು ದ.ಕ.ದಲಿತ ಸೇವಾ ಸಮಿತಿ ಆಗ್ರಹ

Friday, February 14th, 2020
puttur

ಪುತ್ತೂರು : ಪೈಂಟ್ ಕೆಲಸ ಮಾಡುತ್ತಿದ್ದ ಯುವಕ ವಿದ್ಯುತ್ ಅವಘಡದಿಂದ ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ಕೇವಲ ಗುತ್ತಿಗೆದಾರರ ವಿರುದ್ಧ ಮಾತ್ರವಲ್ಲ. ನಿರ್ಲಕ್ಷ್ಯ ವಹಿಸಿದ ಮೆಸ್ಕಾಂ ಮತ್ತು ಆಸ್ಪತ್ರೆಯ ವಿರುದ್ಧವೂ ಪ್ರಕರಣ ದಾಖಲಿಸಬೇಕೆಂದು ದ.ಕ.ದಲಿತ ಸೇವಾ ಸಮಿತಿ ಆಗ್ರಹಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದ.ಕ.ದಲಿತ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು , ಫೆ.6ಕ್ಕೆ ಪ್ರಗತಿ ಆಸ್ಪತ್ರೆಯಲ್ಲಿ ಪೈಂಟಿಂಗ್ ಕೆಲಸ ಮಾಡುವ ಸಮಯ ಬಪ್ಪಳಿಗೆ ದಿ.ಬಾಬು ಆದಿದ್ರಾವಿಡ ಎಂಬವರ ಪುತ್ರ ದೀಕ್ಷಿತ್ ಅವರಿಗೆ ವಿದ್ಯುತ್ ಶಾಕ್ ಹೊಡೆದಿತ್ತು. ಗಂಭೀರ ಸ್ಥಿತಿಯಲ್ಲಿದ್ದ […]

ಮೇಕೇರಿಯಲ್ಲಿ ಮಹಾಶಿವರಾತ್ರಿ ಉತ್ಸವಕ್ಕೆ ಚಾಲನೆ

Friday, February 14th, 2020
temple

ಮಡಿಕೇರಿ : ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದ ಧ್ವಜಾರೋಹಣ ನೇರವೇರಿಸುವ ಮೂಲಕ ದಶದಿನಗಳ ಕಾಲ ನಡೆಯುವ ಮಹಾಶಿವರಾತ್ರಿ ಉತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು. ಈ ಸಂದರ್ಭ ದೇವಾಲಯ ಆಡಳಿತಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರುಗಳು, ಉತ್ಸವದ ಉಸ್ತುವಾರಿ ಸಮಿತಿ ಪದಾಧಿಕಾರಿಗಳು ಸೇರಿದಂತೆ ಸಮಿತಿ ಸದಸ್ಯರು ಹಾಜರಿದ್ದರು. ಇಂದಿನಿಂದ ಹತ್ತು ದಿನಗಳ ಕಾಲ ನಡೆಯುವ ಮಹಾಶಿವರಾತ್ರಿ ಉತ್ಸವದಲ್ಲಿ ಗ್ರಾಮದ ಭಜನಾಮಂಡಳಿಗಳು ಸೇರಿದಂತೆ ಮಡಿಕೇರಿ ತಾಲ್ಲೂಕಿನ ವಿವಿಧ ಭಜನಾ ಮಂಡಳಿಗಳ ಸದಸ್ಯರಿಂದ ದಿನಂಪ್ರತಿ ಸಂಜೆ 6.30 ರಿಂದ ಸಂಗೀತಾರ್ಚನೆ ಮತ್ತು ಸತ್ಸಂಗ […]

ಹೊಸಪೇಟೆ ಬಳಿ ಅಪಘಾತ ಪ್ರಕರಣ : ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ; ಡಿಸಿಎಂ ಅಶ್ವತ್ಥ್ ನಾರಾಯಣ್

Friday, February 14th, 2020
Ashwath-Narayan

ಶಿವಮೊಗ್ಗ : ಕಾನೂನಿನ ಅಡಿಯಲ್ಲಿ ಎಲ್ಲರೂ ಸಮಾನರು ಹೀಗಾಗಿ ಹೊಸಪೇಟೆ ಬಳಿಯ ಅಪಘಾತ ಪ್ರಕರಣದ ಆರೋಪಿಗಳು ಯಾರೇ ಆಗಿರಲಿ ಅವರಿಗೆ ಸೂಕ್ತ ಶಿಕ್ಷೆ ಖಂಡಿತ ಆಗುತ್ತದೆ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಫೆ.10 ರಂದು ಬಳ್ಳಾರಿ ಜಿಲ್ಲೆ ಹೊಸಪೇಟೆ ಬಳಿ ಒಂದು ಅಪಘಾತ ನಡೆದಿತ್ತು. ಈ ಅಪಘಾತದಲ್ಲಿ ಸಚಿನ್ ಮತ್ತು ರವಿನಾಯ್ಕ್ ಎಂಬ ಇಬ್ಬರು ಯುವಕರು ಮೃತಪಟ್ಟಿದ್ದರು. ಈ ವೇಳೆ ಕಾರು ಚಲಾಯಿಸುತ್ತಿದ್ದದ್ದು ಸಚಿವ ಆರ್. ಅಶೋಕ್ ಅವರ ಮಗ ಶರತ್. ಹೀಗಾಗಿ ಪೊಲೀಸರು […]