ಆಳ್ವಾಸ್‌ನ ವರುಣ್ ನಾಲ್ಕನೇ ಏಷ್ಯಾ ವಿಶ್ವ ಮಾದರಿ ಸಂಯುಕ್ತ ರಾಷ್ಟ್ರ ಮೀಟ್‌ಗೆ ಆಯ್ಕೆ

Monday, February 10th, 2020
varun

ಮಿಜಾರು : ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜಿನ ಎಂಬಿಎ ವಿದ್ಯಾರ್ಥಿ ವರುಣ್ ಕಟ್ಟಿ ಇಂಡೋನೇಷಿಯಾದ ಬಾಲಿಯಲ್ಲಿ ಜುಲೈ 3 ರಿಂದ 6ರವರೆಗೆ ನಡೆಯಲಿರುವ ನಾಲ್ಕನೇ ಏಷ್ಯಾ ವಿಶ್ವ ಮಾದರಿ ಸಂಯುಕ್ತ ರಾಷ್ಟ್ರ -2020ಕ್ಕೆ ಆಯ್ಕೆಯಾಗಿದ್ದರೆ. ‘ಕ್ರಿಯಾತ್ಮಕ ಭದ್ರತಾ ಆಯಾಮಗಳಲ್ಲಿ ಶಾಂತಿಯನ್ನು ಕಾಪಾಡುವುದು’ ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. ಜಾಗತಿಕ ಮಂಡಳಿಯಲ್ಲಿ ಭಾಗವಹಿಸಲು ನಾನಾ ದೇಶಗಳಿಂದ ಬಂದ 3500 ಅರ್ಜಿಗಳಲ್ಲಿ 4.33% ಜನರನ್ನು ಆಯ್ಕೆಮಾಡಲಾಗುತ್ತದೆ. ಶೈಕ್ಷಣಿಕ ಸಾಧನೆಯ ಆಧಾರದಲ್ಲಿ ವರುಣ್‌ನನ್ನು ಆಯ್ಕೆ ಮಾಡಲಾಗಿದೆ. ವಿದ್ಯಾರ್ಥಿಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ […]

ಜಾಗದ ವಿವಾದ : ಕೊಲೆಯಲ್ಲಿ ಅಂತ್ಯವಾದ ಜಗಳ, ತಂದೆ-ಮಗ ಬಂಧನ

Monday, February 10th, 2020
kole

ಬೆಳ್ತಂಗಡಿ : ಜಮೀನು ವಿವಾದಕ್ಕೆ ಸಂಬಂಧಿಸಿ ನೆರೆಹೊರೆಯವರ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಇಲ್ಲಿನ ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ. ಲಾಯಿಲ ಗ್ರಾಮದ ಪುತ್ರಬೈಲು 1 ನೇ ಅಡ್ಡ ರಸ್ತೆಯ ನಿವಾಸಿ ಉಮೇಶ್ (48) ಕೊಲೆಯಾದ ವ್ಯಕ್ತಿ. ಇವರ ನೆರೆಮನೆಯವರಾದ ಯೋಗೀಶ್ ಮತ್ತು ಆತನ ಮಗ ಜೀವನ್ ಕೊಲೆ ಆರೋಪಿಗಳಾಗಿದ್ದಾರೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನಲ್ಲಿ ಕೆಲಸದಲ್ಲಿದ್ದ ಉಮೇಶ್ ಸಮಗಾರ ಇತ್ತೀಚೆಗೆ ಊರಿಗೆ ಆಗಮಿಸಿದ್ದರು. ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ […]

ಆರೋಗ್ಯ ಸಚಿವ ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡದಿರೋದು ಬೇಸರವಿದೆ : ಶಾಸಕ ಗಾಲಿ ಸೋಮಶೇಖರ್ ರೆಡ್ಡಿ

Monday, February 10th, 2020
somashekhar

ಬಳ್ಳಾರಿ : ಆರೋಗ್ಯ ಸಚಿವ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ನೀಡದೇ ಇರೋದು ಬೇಸರವಿದೆ. ಇದು ಕೇವಲ ನನ್ನ ಬೇಡಿಕೆ ಅಲ್ಲ, ಬದಲಿಗೆ ನಮ್ಮ ವಾಲ್ಮೀಕಿ ಸಮುದಾಯದ ಬೇಡಿಕೆ ಎಂದು ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ಕೊಡಬೇಕು ಎನ್ನುವ ಹೇಳಿಕೆ ನೀಡಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಡಿಸಿಎಂ ಸ್ಥಾನವನ್ನು ರಾಮುಲು ಅವರಿಗೆ ನೀಡಬೇಕು ಎಂದು ನಾನು ಒತ್ತಾಯ ಮಾಡುತ್ತೇನೆ […]

ವಿಧಾನ ಪರಿಷತ್​ ಚುನಾವಣೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಗೆಲುವು ನಿಶ್ಚಿತ : ಜಿಟಿ ದೇವೇಗೌಡ ವಿಶ್ವಾಸ

Monday, February 10th, 2020
GT-Deve-Gowda

ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಗೆದ್ದೆ ಗೆಲ್ಲುತ್ತಾರೆ ಎಂಬ ವಿಶ್ವಾಸವನ್ನು ಜೆಡಿಎಸ್ ನಾಯಕ, ಮಾಜಿ ಸಚಿವ ಜಿಟಿ ದೇವೇಗೌಡ ವ್ಯಕ್ತಪಡಿಸಿದ್ದಾರೆ. ಮಾತನಾಡಿದ ಜಿಟಿ ದೇವೇಗೌಡ ಅವರು, ಚುನಾವಣೆಯಲ್ಲಿ ಸವದಿ ಸೋಲಿಸುವುದನ್ನು ಜನ ಒಪ್ಪುವುದಿಲ್ಲ. ಈ ಹಿನ್ನೆಲೆ ಅವರು ಗೆಲುವು ಸುಲಭವಾಗಲಿದೆ. ಅಲ್ಲದೇ, ಅವರಿಗೆ ಬಹುಮತ ಕೂಡ ಇದೆ ಎನ್ನುವ ಮೂಲಕ ಪಕ್ಷದ ನಾಯಕರಿಗೆ ಶಾಕ್ ನೀಡಿದ್ದಾರೆ. ಮೈತ್ರಿ ಸರ್ಕಾರ ಪತನವಾದ ಬಳಿಕ ಸದಾ ಬಿಜೆಪಿ ನಾಯಕರ ಜೊತೆ ಗುರುತಿಸಿಕೊಳ್ಳುತ್ತಿರುವ ಜಿಟಿ ದೇವೇಗೌಡ, […]

ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ

Monday, February 10th, 2020
nikil

ಬೆಂಗಳೂರು : ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಇಂದು ಬೆಂಗಳೂರಿನ ತಾಜ್ ವೆಸ್ಟ್ ಹೋಟೆಲ್‌ನಲ್ಲಿ ಶಾಸ್ತ್ರೋಕ್ತವಾಗಿ ನಡೆದಿದೆ. ಈ ನಿಶ್ಚಿತಾರ್ಥಕ್ಕೆ ಅನಿತಾ ಕುಮಾರಸ್ವಾಮಿ ಸಹೋದರಿಯರಾದ ಶೈಲಜಾ ಮತ್ತು ಅನುಸೂಯ, ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಮಾರ್ಗದರ್ಶನದಲ್ಲಿ ಎಲ್ಲ ತಯಾರಿಗಳು ನಡೆದಿವೆ. ತಾಜ್‌ ವೆಸ್ಟ್‌ನ ಪೂರ್ವ ದಿಕ್ಕಿಗೆ ಇರುವ ವೆಸ್ಟೆಂಡ್‌ ಕೋರ್ಟ್‌ನಲ್ಲಿ ಈ ಕಾರ್ಯಕ್ರಮ ನಡೆಯುತ್ತದೆ. ತಾಜ್‌ ವೆಸ್ಟೆಂಡ್‌ ಹೊಟೇಲ್‌ನಲ್ಲಿರುವ ಮರಗಿಡಗಳ ನಡುವೆ ನಿಶ್ಚಿತಾರ್ಥ ನಡೆಯಬೇಕು ಎಂಬುದು ನಿಖಿಲ್‌ಕುಮಾರ್‌ ಅವರ ಆಸೆಯಾಗಿತ್ತು. ನಿಶ್ಚಿತಾರ್ಥ ಸಂಪೂರ್ಣ ವೈಟ್‌ ಥೀಮ್‌ನಲ್ಲಿ […]

ಮಡಿಕೇರಿ : ಪ್ರವಾಸಿ ಬಸ್ ಮಿನಿ ಲಾರಿಗೆ ಡಿಕ್ಕಿ

Monday, February 10th, 2020
accident

ಮಡಿಕೇರಿ : ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಪ್ರವಾಸಿ ಬಸ್ಸೊಂದು ಮಿನಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಮುಂಭಾಗದ ಕಾರಿಗೆ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಸುಂಟಿಕೊಪ್ಪದ 7ನೇ ಮೈಲು ಬಳಿಯಲ್ಲಿ ನಡೆದಿದೆ. ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗೆ ಡಿಕ್ಕಿಯಾದ ಪ್ರವಾಸಿ ಬಸ್ ನಂತರ ಬರೆಗೆ ಡಿಕ್ಕಿ ಹೊಡೆದು ನಿಂತಿದೆ. ಲಾರಿ ಅಳಿಕೆಯಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗೂ ತೀವ್ರ ಗಾಯಗಳಾಗಿಲ್ಲ. ಅಪಘಾತದಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ […]

ಸಕಾರಾತ್ಮಕ ಚಿಂತನೆಗಳಿಂದ ಮನುಷ್ಯ ಯಶಸ್ಸು ಕಾಣಲು ಸಾಧ್ಯ : ರಾಜಯೋಗಿನಿ ಬಿ.ಕೆ. ಶಿವಾನಿ

Monday, February 10th, 2020
shivani

ಮಂಗಳೂರು : ಸಂತೃಪ್ತಿಯ ಸಾರ್ಥಕ ಜೀವನಕ್ಕೆ  ಸಕಾರಾತ್ಮಕ ಚಿಂತನೆ ಗಳು, ಸಂತೋಷ, ಆರೋಗ್ಯ, ಆತ್ಮಶಕ್ತಿ ಕಾರಣ ವಾಗುತ್ತವೆ ಮತ್ತು ಸುಂದರ ಪರಿಸರ ಮತ್ತು ಸಮಾಜಕ್ಕೆ ಪೂರಕವಾಗುತ್ತದೆ ಎಂದು ಪ್ರಸಿದ್ಧ ವಾಗ್ಮಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದ ರಾಜಯೋಗಿನಿ ಬಿ.ಕೆ. ಶಿವಾನಿ ಹೇಳಿದರು. ಅವರು ರವಿವಾರ ನಗರದ ಟಿ.ಎಂ.ಎ. ಪೈ ಇಂಟರ್‌ನ್ಯಾಶನಲ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ಆರೋಗ್ಯ, ಸಂತೋಷ ಮತ್ತು ಸಾಮರಸ್ಯ (ಹೆಲ್ತ್‌, ಹ್ಯಾಪಿನೆಸ್‌ ಆ್ಯಂಡ್‌ ಹಾರ್ಮನಿ) ವಿಚಾರದಲ್ಲಿ ಉಪನ್ಯಾಸ ನೀಡಿದರು. ಮನುಷ್ಯನ ಚಿಂತನೆಗಳು ಆತನ ಜೀವನಕ್ರಮವನ್ನು ನಿರ್ಧರಿಸುತ್ತವೆ, ನಕಾರಾತ್ಮಕ ಚಿಂತನೆಗಳು […]

ಕಾರಿಂಜ : ಸ್ನಾನಕ್ಕೆ ಇಳಿದಿದ್ದ ಯುವಕ ಕೆರೆಯಲ್ಲಿ ಮುಳುಗಿ ಮೃತ್ಯು

Monday, February 10th, 2020
karinja

ಬಂಟ್ವಾಳ : ಸ್ನಾನಕ್ಕೆ ಇಳಿದಿದ್ದ ಯುವಕನೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಕಾರಿಂಜದಲ್ಲಿ ನಡೆದಿದೆ. ಕಡ್ತಲಬೆಟ್ಟು ನಿವಾಸಿ ಸುಕೇಶ್ (25) ಮೃತ ಯುವಕ. ಮಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸುಕೇಶ್ ಅವರು ತನ್ನಿಬ್ಬರು ಸ್ನೇಹಿತರೊಂದಿಗೆ ರಜಾದ ಹಿನ್ನೆಲೆಯಲ್ಲಿ ಕಾರಿಂಜ ಕ್ಷೇತ್ರಕ್ಕೆ ಭಾನುವಾರ ಸಂಜೆ ಆಗಮಿಸಿದ್ದರು. ಈ ಸಂದರ್ಭ ಸ್ನಾನಕ್ಕಿಳಿದ ವೇಳೆ ಕೆರೆಯ ಆಳ ತಿಳಿಯದೆ ಮುಳುಗಿದ್ದಾರೆ. ಸ್ನೇಹಿತರು ಮತ್ತು ಸ್ಥಳೀಯರು ಕೂಡಲೇ ಅಗ್ನಿ ಶಾಮಕದಳಕ್ಕೆ ಮತ್ತು ಪೊಲೀಸರಿಗೆ ಕರೆ ಮಾಡಿದ್ದರು. […]

ಮಾಲ್ದಾರೆ ಹಂಚಿತಿಟ್ಟು ಗ್ರಾಮದಲ್ಲಿ ಕಾಡಾನೆ ದಾಳಿಗೆ ಬೆಳೆಗಾರ ಬಲಿ

Monday, February 10th, 2020
kaadane

ಮಡಿಕೇರಿ : ಕಾಡಾನೆ ದಾಳಿಯಿಂದ ಬೆಳೆಗಾರರೊಬ್ಬರು ದಾರುಣವಾಗಿ ಮೃತ ಪಟ್ಟಿರುವ ಘಟನೆ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪ ಹಂಚಿತಿಟ್ಟು ಗ್ರಾಮದಲ್ಲಿ ನಡೆದಿದೆ. ಅವರೆಗುಂದ ಗ್ರಾಮದ ನಿವಾಸಿ ಪೆಮ್ಮಯ್ಯ(68) ಎಂಬುವವರೇ ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿಯಾಗಿದ್ದಾರೆ. ಮಾಲ್ದಾರೆ ಹಂಚಿತಿಟ್ಟು ಮಾರ್ಗದ ರಸ್ತೆ ಬದಿಯಲ್ಲಿ ಮೃತದೇಹ ಕಂಡ ಸ್ಥಳೀಯರು ತಕ್ಷಣ ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭ ಕಾಡಾನೆ ದಾಳಿ ಮಾಡಿರುವುದು ಖಾತ್ರಿಯಾಯಿತು. ಎದೆ, ತಲೆ ಹಾಗೂ ಕಾಲಿನ ಭಾಗಕ್ಕೆ […]

ಶ್ರದ್ಧಾ ಭಕ್ತಿಯಿಂದ ನಡೆಯುತ್ತಿರುವ ಲಿಂಗರೂಪಿ ಶ್ರೀದುರ್ಗಾ ಭಗವತಿ ದೇವಾಲಯದ ಬ್ರಹ್ಮ ಕಲಶೋತ್ಸವ

Monday, February 10th, 2020
madikeri

ಮಡಿಕೇರಿ : ತಾಳತ್ತಮನೆಯ ಪುರಾತನ ಲಿಂಗರೂಪಿ ಶ್ರೀದುರ್ಗಾ ಭಗವತಿ ದೇವಾಲಯದ ಪುನರ್ ಪ್ರತಿಷ್ಠಾಪನೆ ಹಾಗೂ ಬ್ರಹ್ಮ ಕಲಶೋತ್ಸವ ಪ್ರಯುಕ್ತ ದೇವರಿಗೆ ಗಣಪತಿ ಹೋಮ, ಪ್ರೋಕ್ತಹೋಮ, ಪ್ರಾಯಶ್ಚಿತ ಹೋಮ, ಬಿಂಬ ಶುದ್ಧಿ, ಅಂಕುರ ಪೂಜೆ ಶ್ರದ್ಧಾಭಕ್ತಿಯಿಂದ ಜರುಗಿತು. ಮಧ್ಯಾಹ್ನ ಮಹಾಪೂಜೆ ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಸಂಜೆ ಸುಳ್ಯದ ಧರ್ಮಾರಣ್ಯದ ಶ್ರೀ ಗುರು ಗಣಪತಿ ಭಕ್ತಜನ ಭಜನಾ ಮಂಡಳಿಯಿಂದ ಭಜನೆ, ಅರಂತೋಡು ಮಲ್ಲಿಕಾರ್ಜುನಾ ದೇವಸ್ಥಾನದ ಪ್ರಧಾನ ಅರ್ಚಕರಾದ ಕೇಶವಮೂರ್ತಿ ಅವರು ಉಪನ್ಯಾಸ ನೀಡಿದರು. ರಾತ್ರಿ ಮೈಸೂರಿನ ಸುಮಂತ್ ವಸಿಷ್ಠ […]