ಬಿಜೆಪಿ ಮೇಲೆ ವಿಶ್ವಾಸವಿಟ್ಟು ಮತದಾರರು ಅಭೂತಪೂರ್ವ ಜಯ ನೀಡಿದ್ದಾರೆ : ನಳಿನ್ ಕುಮಾರ್

Friday, November 15th, 2019
nalin-kumar

ಮಂಗಳೂರು : ಬಿಜೆಪಿಯ ಮೇಲೆ ವಿಶ್ವಾಸವಿಟ್ಟು ಮಂಗಳೂರಿನ ಜನತೆ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಜಯ ನೀಡಿದ್ದಾರೆ. ಜನತೆಯ ಆಶಯಕ್ಕೆ ತಕ್ಕಂತೆ ಮುಂದಿನ ದಿನಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಜವಾಬ್ದಾರಿಯುತ ಆಡಳಿತ ನೀಡಲಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಇರುವಾಗ ಮಂಗಳೂರು ಮಹಾನಗರ ಪಾಲಿಕೆಯಲ್ಲೂ ಬಿಜೆಪಿ ಆಡಳಿತ ಬರಬೇಕು ಎಂಬ ನೆಲೆಯಲ್ಲಿ ಮತದಾರರು ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ. ಮಂಗಳೂರು ಮಹಾನಗರ ಅಭಿವೃದ್ಧಿಗೆ ಈಗ […]

ಶಾಲೆ-ಕಾಲೇಜುಗಳ ಆವರಣದ ಬಳಿ ತಂಬಾಕು ಮಾರಾಟ ಕಂಡು ಬಂದಲ್ಲಿ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಜಿ.ಜಗದೀಶ್

Friday, November 15th, 2019
Jagadeesh

ಉಡುಪಿ : ಶಾಲೆ-ಕಾಲೇಜುಗಳ ಆವರಣದ ಬಳಿ ತಂಬಾಕು ಉತ್ಪನ್ನಗಳನ್ನು ಮಾರುವ ಪ್ರಕರಣ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು , ದಂಡ ವಿಧಿಸಿ, ದಂಡ ವಿಧಿಸುವಲ್ಲಿ ಯಾವುದೇ ದಾಕ್ಷಿಣ್ಯ ತೋರಬೇಡಿ ಎಂದು ಜಿಲ್ಲಾ ತಂಬಾಕು ನಿಯಂತ್ರಣ ದಳದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅವರು ಗುರುವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ತಂಬಾಕು ನಿಷೇಧ ಕೋಶದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳ ಸಮೀಪದ 100 […]

ಅಭಿವೃದ್ದಿಗೆ ಪ್ರಾಮಾಣಿಕವಾಗಿ ದುಡಿದಿದ್ದೇನೆ : ನನಗೆ ಟಿಕೆಟ್ ನೀಡಿ; ಅನರ್ಹ ಶಾಸಕ ಆರ್. ಶಂಕರ್

Friday, November 15th, 2019
Shankar

ಬೆಂಗಳೂರು : ರಾಣೆಬೆನ್ನೂರು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಬಿಜೆಪಿ ಟಿಕೆಟ್ ನೀಡಲೇಬೇಕು. ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಅವಕಾಶ ನೀಡಲೇಬೇಕು ಎಂದು ಅನರ್ಹ ಶಾಸಕ ಆರ್. ಶಂಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ನನ್ನ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯಿಲ್ಲ. ನನಗೆ ವಿಧಾನಪರಿಷತ್ ಸದಸ್ಯ ಸ್ಥಾನದ ಅಗತ್ಯವಿಲ್ಲ. ಎರಡು ಬಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ನನ್ನ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಪ್ರಾಮಾಣಿಕವಾಗಿ ದುಡಿದಿದ್ದೇನೆ ಹಾಗಾಗಿ ಟಿಕೆಟ್ ನೀಡಬೇಕು ಎಂದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ನನಗೆ ಪೂರ್ಣ […]

ಡಿ.ಕೆ.ಶಿವಕುಮಾರ್ ಗೆ ಇಂದು ಸುಪ್ರೀಂ ಕೋರ್ಟ್​ನಲ್ಲಿ ಇಡಿ ಮೇಲ್ಮನವಿ ಅರ್ಜಿ ವಿಚಾರಣೆ

Friday, November 15th, 2019
DKShi

ನವದೆಹಲಿ : ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ನ್ಯಾಯಾಂಗ ಬಂಧನದಲ್ಲಿದ್ದ ಕಾಂಗ್ರೆಸ್ನ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ದೆಹಲಿ ಹೈಕೋರ್ಟ್ನಿಂದ ಜಾಮೀನು ಪಡೆದಿದ್ದರು. ಈ ಕುರಿತು ಇಡಿ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಂದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಲಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಇಡಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಮಾಡುವಂತೆ ಡಿ.ಕೆ. […]

ಇಂದು ಉಡುಪಿಗೆ ಆಗಮಿಸಲಿದ್ದಾರೆ ಯೋಗಗುರು ಬಾಬಾ ರಾಮದೇವ್‌

Friday, November 15th, 2019
Udupi

ಉಡುಪಿ : ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್‌ ಪ್ರದೇಶದಲ್ಲಿ ನ. 16ರಿಂದ 20ರ ವರೆಗೆ ನಡೆಯುವ ಐದು ದಿನಗಳ ಬೃಹತ್‌ ಯೋಗ ಚಿಕಿತ್ಸೆ ಮತ್ತು ಯೋಗ ಶಿಬಿರವನ್ನು ನಡೆಸಿಕೊಡುವ ಪ್ರಸಿದ್ಧ ಯೋಗಪಟು ಬಾಬಾ ರಾಮದೇವ್‌ ನ. 15ರ ಸಂಜೆ ಉಡುಪಿಗೆ ಆಗಮಿಸಲಿದ್ದಾರೆ. ಮಂಗಳೂರಿಗೆ ವಿಮಾನದ ಮೂಲಕ ರಾಮದೇವ್‌ ಬರಲಿದ್ದಾರೆ. ಮಂಗಳೂರಿನಿಂದ ಉಡುಪಿಗೆ ರಸ್ತೆ ಮಾರ್ಗದಲ್ಲಿ ಬರುವ ರಾಮದೇವ್‌ ಅವರನ್ನು ಸಂಜೆ 5.30ಕ್ಕೆ ಕರಾವಳಿ ಬೈಪಾಸ್‌ ಬಳಿ ಸ್ವಾಗತಿಸಲಾಗುವುದು. ಕಲ್ಸಂಕದಿಂದ ಸುಮಾರು 5.45ಕ್ಕೆ ಬಡಗು ಪೇಟೆ ಮಾರ್ಗವಾಗಿ ಅವರನ್ನು […]

ಇಂದಿನ ರಾಶಿ ಫಲ : ಮಕರ ರಾಶಿಗೆ ಉದ್ಯೋಗದಲ್ಲಿ ಸಮಸ್ಯೆಗಳು ಸೃಷ್ಟಿ ಆಗಲಿದೆ, ಜಾಗ್ರತೆ ವಹಿಸಿ

Friday, November 15th, 2019
durgaparameshwari

ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಅನುಗ್ರಹದಿಂದ ಈ ದಿನದ ಭವಿಷ್ಯವಾಣಿಯನ್ನು ತಿಳಿಯೋಣ. ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ. ಜ್ಯೋತಿಷ್ಯರು ಪರಶುರಾಮ ಶಾಸ್ತ್ರಿ 9380281393 ವಿಕಾರಿ ನಾಮ ಸಂವತ್ಸರ ಭಾದ್ರಪದ ಮಾಸ ನಕ್ಷತ್ರ : ಮೃಗಶಿರ ಋತು : ಶರದ್ ರಾಹುಕಾಲ 10:38 – 12:04 ಗುಳಿಕ ಕಾಲ 07:45 – 09:12 ಸೂರ್ಯೋದಯ 06:19:10 ಸೂರ್ಯಾಸ್ತ 17:48:50 ತಿಥಿ : ತೃತೀಯ ಪಕ್ಷ : ಕೃಷ್ಣ ಮೇಷ ರಾಶಿ ಕುಟುಂಬಸ್ಥರ ಹಾಗೂ ಬಾಳಸಂಗಾತಿಯ […]

ಪತ್ನಿ ಜೊತೆ ಸಂಬಂಧಿಯ ಹತ್ಯೆ : ಆರೋಪಿಗೆ ಮರಣದಂಡನೆ

Thursday, November 14th, 2019
Mysuru

ಮೈಸೂರು : ಪತ್ನಿ ಹಾಗೂ ಅಕ್ಕನ ಮಗಳನ್ನು ಹತ್ಯೆಗೈದು ಪರಾರಿಯಾಗಿದ್ದ ವ್ಯಕ್ತಿಗೆ 8 ವರ್ಷದ ನಂತರ ಮೈಸೂರು ಜಿಲ್ಲಾ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿ ತೀರ್ಪು ವಿಧಿಸಿದೆ. ಮರಣ ದಂಡನೆ ಶಿಕ್ಷೆಗೆ ಗುರಿಯಾದ ಇಷಾದ್ ಪಾಷ ಉತ್ತರ ಪ್ರದೇಶ ಮೂಲದವನಾಗಿದ್ದು, ಕೆಲಸ ಅರಸಿ ಮೈಸೂರಿಗೆ ಬಂದ ಸಂದರ್ಭದಲ್ಲಿ ಇಲ್ಲಿಯ ಸಿದ್ದಿಕಿ ಬಾನು ಎಂಬ ಮಹಿಳೆಯನ್ನು ವಿವಾಹವಾಗಿದ್ದ. ಮದ್ಯ ಸೇವನೆಯ ಚಟಕ್ಕೆ ದಾಸನಾಗಿದ್ದ ಈತ 2008ರ ಮೇ 7 ರಂದು ಪತ್ನಿಯೊಂದಿಗೆ ಗಲಾಟೆ ಮಾಡಿ ಮಾರಕಾಸ್ತ್ರಗಳಿಂದ ಕತ್ತಿಗೆ […]

ಟೆಸ್ಟ್ ಕ್ರಿಕೆಟ್ ನಲ್ಲಿ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆ ಬರೆದ ಅಶ್ವಿನ್

Thursday, November 14th, 2019
Ashwin

ಇಂಧೋರ್ : ಭಾರತದ ಕೇರಂ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಹೋಳ್ಕರ್ ಮೈದಾನದಲ್ಲಿ ಬಾಂಗ್ಲಾ ನಾಯಕ ಮೊಮಿನುಲ್ ಹಕ್ ವಿಕೆಟ್ ಪಡೆದ ಅಶ್ವಿನ್ ಭಾರತದಲ್ಲಿ 250 ಟೆಸ್ಟ್ ವಿಕೆಟ್ ಪಡೆದ ಸಾಧನೆ ಮಾಡಿದರು. ಟೆಸ್ಟ್ ಕ್ರಿಕೆಟ್ ನಲ್ಲಿ ತವರಿನಲ್ಲಿ 250ಕ್ಕೂ ಹೆಚ್ಚು ವಿಕೆಟ್ ಪಡೆದ ಮೂರನೇ ಭಾರತೀಯ ಎಂಬ ಖ್ಯಾತಿಗೆ ರವಿ ಅಶ್ವಿನ್ ಪಾತ್ರರಾದರು. ಈ ಮೊದಲು ಅನಿಲ್ ಕುಂಬ್ಳೆ ಮತ್ತು ಹರ್ಭಜನ್ ಸಿಂಗ್ ಈ ಮೊದಲು 250 ವಿಕೆಟ್ […]

ಮನೆಗೆ ತೆರಳಿ ಪೂಜೆ ಮಾಡಿದ ಅರ್ಚಕನಿಗೆ ಬ್ಲಾಕ್‌ ಮೇಲ್‌ ಮಾಡಿ 20 ಲಕ್ಷ ರೂಪಾಯಿ ವಸೂಲಿ ಮಾಡಿದ ಐನಾತಿಗಳು

Thursday, November 14th, 2019
Purohith

ಮೈಸೂರು ; ಅರ್ಚಕ ವೃತ್ತಿ ನಡೆಸಿಕೊಂಡಿರುವ ವ್ಯಕ್ತಿಯೊಬ್ಬರಿಗೆ ಮೂವರು ಐನಾತಿಗಳು ಸೇರಿ ಬ್ಲಾಕ್‌ ಮೇಲ್‌ ಮಾಡಿ ಬರೋಬ್ಬರಿ 20 ಲಕ್ಷ ರೂಪಾಯಿ ವಸೂಲಿ ಮಾಡಿದ ಘಟನೆ ವರದಿ ಆಗಿದೆ. ಪೋಲೀಸರು ಆರೋಪಿಗಳ ಹೆಡೆಮುರಿ ಕಟ್ಟಿ 13.77 ಲಕ್ಷ ರೂಪಾಯಿಗಳನ್ನು ವಸೂಲಿ ಮಾಡಿದ್ದಾರೆ. ನಡೆದಿದ್ದೇನು ಗೊತ್ತಾ ? ಕೊಳ್ಳೇಗಾಲದಲ್ಲಿ ಆಂಜನೇಯ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾಗಿರುವ ರಾಘವನ್‌ ಭಕ್ತರ ಕೋರಿಕೆಯ ಮೇರೆಗೆ ವಿವಿಧ ಊರುಗಳಿಗೆ ತೆರಳಿ ಪೂಜಾ , ಹವನ ,ಹೋಮ ಕಾರ್ಯ ನಡೆಸಿಕೊಡುತಿದ್ದರು. ಅದರಂತೆ ಆರು ತಿಂಗಳ […]

ಯಾರನ್ನು ಬೇಕಾದರೂ ಸೋಲಿಸುವ ಶಕ್ತಿ ನನಗಿದೆ : ಎಚ್.ಡಿ.ದೇವೇಗೌಡರಿಗೆ ಕೆ.ಎನ್.ರಾಜಣ್ಣ ಟಾಂಗ್

Thursday, November 14th, 2019
Rajanna

ತುಮಕೂರು : ಯಾರನ್ನು ಬೇಕಾದರೂ ಸೋಲಿಸಬಹುದು ಎಂಬುದನ್ನು ನಾವು ತೋರಿಸಿಕೊಟ್ಟಿದ್ದೇವೆ ಎಂದು ಪರೋಕ್ಷವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸೋಲನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಪ್ರಸ್ತಾಪಿಸಿ ಟಾಂಗ್ ನೀಡಿದ್ದಾರೆ. ನಗರದಲ್ಲಿ ನಡೆದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ ಸುಪರ್ ಸೀಡ್ ಆದ ಸಂದರ್ಭದಲ್ಲಿ ನನ್ನ ಪರವಾಗಿ ನಿಂತು, ಸಾಕಷ್ಟು ಜನ ಪ್ರತಿಭಟಿಸಿದ್ದೀರಿ. ಆಗಲೇ ನನಗೆ ಧೈರ್ಯ ಬಂತು ಜಿಲ್ಲೆಯಾದ್ಯಂತ ನನ್ನೊಂದಿಗೆ ಜನ ಇದ್ದಾರೆ ಎಂದು ತಿಳಿಯಿತು. ಯಾರನ್ನು ಬೇಕಾದರೂ ಸೋಲಿಸುವ ಶಕ್ತಿ ನನಗಿದೆ […]