ಹರ್ಯಾಣ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಅಂತಿಮ ಫಲಿತಾಂಶ

Friday, October 25th, 2019
maharashtra

ನವದೆಹಲಿ : ಮಹಾರಾಷ್ಟ್ರ ಮತ್ತು ಹರ್ಯಾಣ ರಾಜ್ಯಗಳ ವಿಧಾನಸಭೆ ಚುನಾವಣೆಯ ಅಂತಿಮ ಫಲಿತಾಂಶ ಮಧ್ಯರಾತ್ರಿ ಹೊರಬಿದ್ದಿದೆ. ಯಾವ ರಾಜ್ಯದಲ್ಲಿ ಯಾವ ಪಕ್ಷ ಎಷ್ಟು ಕ್ಷೇತ್ರಗಳನ್ನು ಗೆದ್ದುಕೊಂಡಿದೆ ಎಂಬ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ. ಗುರುವಾರ ರಾತ್ರಿ 11.15ರ ಸುಮಾರಿಗೆ ಹರ್ಯಾಣ ವಿಧಾನಸಭೆಯ ಫಲಿತಾಂಶವನ್ನು ಚುನಾವಣಾ ಆಯೋಗ ಅಂತಿಮಗೊಳಿಸಿದೆ. ಒಟ್ಟು ವಿಧಾನಸಭಾ ಚುನಾವಣೆಯ ಒಟ್ಟು 90 ಕ್ಷೇತ್ರಗಳ ಪೈಕಿ ಆಡಳಿತಾರೂಢ ಬಿಜೆಪಿ 40 ಸ್ಥಾನವನ್ನಷ್ಟೇ ಗೆದ್ದುಕೊಳ್ಳಲು ಶಕ್ತವಾಗಿದೆ. ಉಳಿದಂತೆ ಕಾಂಗ್ರೆಸ್ 31, ಜೆಜೆಪಿ 10, ಹರ್ಯಾಣ ಲೋಕಹಿತ ಪಕ್ಷ ಒಂದು, […]

‘ಕ್ಯಾರ್’ ಚಂಡಮಾರುತ ಭೀತಿ : ಇಂದು ಕರಾವಳಿಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

Friday, October 25th, 2019
cyar

ಮಂಗಳೂರು : ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾದ ‘ಕ್ಯಾರ್’ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆ ಗೋಚರಿಸಿದ್ದು, ಮುಂದಿನ 48 ಗಂಟೆ ಕಾಲ ಭಾರಿ ಮಳೆ ಕರಾವಳಿಯನ್ನು ಅಪ್ಪಳಿಸುವ ಮುನ್ಸೂಚನೆ ದೊರೆತಿದೆ. ಗುರುವಾರ 15.4 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 70.4 ಡಿಗ್ರಿ ಪೂರ್ವ ರೇಖಾಂಶದಲ್ಲಿ ವಾಯುಭಾರ ಕುಸಿತ ಪ್ರದೇಶವಿದ್ದು ಮಹಾರಾಷ್ಟ್ರದ ರತ್ನಗಿರಿಯಿಂದ 360 ಕಿ.ಮೀ. ಪಶ್ಚಿಮ-ನೈಋತ್ಯ ಮತ್ತು 490 ಕಿ.ಮೀ. ನೈಋತ್ಯ ಹಾಗೂ ಓಮನ್‌ನ ಸಲಾಹ್‌ನಿಂದ 1750 ಕಿ.ಮೀ. ಪೂರ್ವ-ಆಗ್ನೇಯ ದಿಕ್ಕಿನಲ್ಲಿ ಕೇಂದ್ರೀಕೃತವಾಗಿದೆ. ಚಂಡಮಾರುತ ಅ.25ರಂದು ಸಾಯಂಕಾಲದ ವರೆಗೆ ಪೂರ್ವ-ಈಶಾನ್ಯದತ್ತ […]

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಐವತ್ತೆರಡನೆ ವರ್ಧಂತ್ಯುತ್ಸವ

Thursday, October 24th, 2019
Pattabhisheka

ಧರ್ಮಸ್ಥಳದ : ನ್ಯಾಯವೇ ನನ್ನ ತಂದೆ, ಸತ್ಯವೇ ನನ್ನ ತಾಯಿ ಎಂಬ ಭಾವನೆಯೊಂದಿಗೆ ತಾನು ನ್ಯಾಯ ಮತ್ತು ಸತ್ಯದ ನೆಲೆಯಲ್ಲಿ ಕೆಲಸ ಮಾಡುತ್ತೇನೆ ಎಂದು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಗುರುವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾ ಭವನದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಐವತ್ತೆರಡನೆ ವರ್ಧಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದರು. ನಮ್ಮ ದೇಶದಲ್ಲಿ ಅನೇಕ ಮಂದಿ ಆಚಾರ್ಯರಿದ್ದಾರೆ ಆದರೆ ಆಚಾರವಿಲ್ಲ. ದೇಶಕ್ಕೆ ದೊಡ್ಡ ಚರಿತ್ರೆ ಇದೆ, ಆದರೆ ಚಾರತ್ರ್ಯವಿಲ್ಲ. ಅಲ್ಲಲ್ಲಿ ಸಂಘರ್ಷವಿದೆ […]

ಭುವಿತಾ ಸಾವಿನ ಹಿಂದೆ ಮೂವರು ಹತಾಶ ಪ್ರೇಮಿಗಳು !

Thursday, October 24th, 2019
bhavitha

ಹಾಸನ :  ಅರಕಲಗೂಡು ತಾಲೂಕಿನ ಸಂತೆ ಮರೂರು ಗ್ರಾಮದ ನಿವಾಸಿ ಭುವಿತಾ ಮೂವರನ್ನು ಪ್ರೀತಿಸಿದ್ದಳು. ತನ್ನ ಪ್ರೀತಿಯನ್ನು ಮೂವರೊಂದಿಗೆ ಹಂಚಿಕೊಂಡ ನತದೃಷ್ಟೆ ಕೊನೆಗೆ ಅದಕ್ಕಾಗಿಯೇ ಬಲಿಯಾಗಬೇಕಾಯಿತು. ಹಾಸನದಲ್ಲಿ ಡಿಪ್ಲೊಮೊ ಮುಗಿಸಿದ್ದ ಭುವಿತ, 18 ವರ್ಷಕ್ಕೆ ನಂದಿತ್ ಎಂಬ ಹುಡುಗನ ಪ್ರೀತಿ ಮಾಡಿ, ಮದುವೆ ಆಗುತ್ತೇನೆ ಎಂದು ಆತನಿಗಾಗಿ  2014 ರಲ್ಲಿ ಮನೆ ಬಿಟ್ಟು ಬಂದಿದ್ದಳು. ಸುಂದರಿಯಾಗಿದ್ದ ಭುವಿತಾ ಸಿಕ್ಕ ಸಿಕ್ಕ ಹುಡುಗರ ಜೊತೆ ಪ್ರೀತಿ ಅಂತಾ ಸಮಯ ಕಳೆಯುತ್ತಿದ್ದಳು. ಕಳೆದ ಆರು ತಿಂಗಳಿಂದ ಹಾಸನದ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಪುನೀತ್ […]

ಡಿಕೆಶಿಗೆ ಜಾಮೀನು : ಕೊಡಗು ಕಾಂಗ್ರೆಸ್‌ನಿಂದ ದೇವಾಲಯದಲ್ಲಿ ಪೂಜೆ

Thursday, October 24th, 2019
Kodagu-Congress

ಮಡಿಕೇರಿ  : ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ದೊರೆತ ಹಿನ್ನೆಲೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಸಂಭ್ರಮಾಚರಿಸಿತು. ನಗರದ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಾಗೂ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುವ ಮೂಲಕ ಜನಪ್ರಿಯ ಪಕ್ಷವೆನಿಸಿಕೊಂಡ ಕಾಂಗ್ರೆಸ್‌ನ್ನು ನೇರವಾಗಿ […]

ಮಡಿಕೇರಿ ಕೋರ್ಟ್‌ಗೆ ಶಂಕಿತ ನಕ್ಸಲ್ ಮುಖಂಡ ರೂಪೇಶ್ ಹಾಜರು

Thursday, October 24th, 2019
roopesh naxal

ಮಡಿಕೇರಿ  : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ಎದುರಿಸುತ್ತಿರುವ ಶಂಕಿತ ನಕ್ಸಲ್ ಮುಖಂಡ ರೂಪೇಶ್‌ನನ್ನು ಬಿಗಿ ಭದ್ರತೆಯಲ್ಲಿ ಮಡಿಕೇರಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯ್ ಕುಮಾರ್ ಅವರ ಸಮ್ಮುಖದಲ್ಲಿ ಪ್ರಕರಣದ ಕುರಿತು ರೂಪೇಶ್‌ನ ವಿಚಾರಣೆ ನಡೆಯಿತು. ನ್ಯಾಯಾಧೀಶರು ಮುಂದಿನ ವಿಚಾರಣೆಯನ್ನು ನ.14ಕ್ಕೆ ಮುಂದೂಡಿದರು. ನ್ಯಾಯಾಲಯದ ಮುಖ್ಯ ದ್ವಾರದಿಂದ ಹೊರ ಬಂದ ರೂಪೇಶ್ ಯಾವುದೇ ಘೋಷಣೆಗಳನ್ನು ಮೊಳಗಿಸದೆ ಪೊಲೀಸ್ ವಾಹನವೇರಿದ. ಬಳಿಕ ಬಿಗಿ ಪೊಲೀಸ್ ಭದ್ರತೆಯಲ್ಲಿ ರೂಪೇಶ್‌ನನ್ನು ಕೇರಳದ ವೈವೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು. […]

ಚಾಮರಾಜನಗರದಲ್ಲಿ ಸೆರೆಯಾದ ಪುಂಡಾನೆಯನ್ನು ತಮಿಳುನಾಡಿಗೆ ಬಿಟ್ಟ ಅಧಿಕಾರಿಗಳು

Thursday, October 24th, 2019
Pundane

ಚಾಮರಾಜನಗರ : ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು  ಬನ್ನಿತಾಳಪುರ ಸಮೀಪ  ಕಳೆದ ಮೂರು ದಿನಗಳಿಂದ ರೈತರಲ್ಲಿ ಆತಂಕ ಹುಟ್ಟಿಸಿದ್ದ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ತಮಿಳುನಾಡಿನಲ್ಲಿ ಈ ಆನೆ 8  ಜನರನ್ನು  ಕೊಂದಿತ್ತು.  ಇಬ್ಬರು ರೈತರಿಗೆ ಗಾಯ ಮಾಡಿತ್ತು,  3 ಹಸುಗಳನ್ನು ತುಳಿದು ಸಾಯಿಸಿ ತ್ತು . ತಮಿಳುನಾಡಿನ ಮಧುಮಲೈ ಅರಣ್ಯದಿಂದ ಬಂದಿದ್ದ ಆನೆ ಬನ್ನಿತಾಳಪುರ ದಲ್ಲಿ ರೈತರ ಹೊಲದಲ್ಲಿ ರಂಪಾಟ ನಡೆಸಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿಗಳು ಅರವಳಿಕೆ ನೀಡಿ ಆನೆ ನೆ ಸೆರೆಹಿಡಿಯಲು ಯಶಸ್ವಿಯಾಗಿದ್ದಾರೆ.  ಅಭಿಮನ್ಯು, ಕೃಷ್ಣ, ಗೋಪಾಲಸ್ವಾಮಿ, […]

ಡಿಕೆಶಿಗೆ ಜಾಮೀನು : ಕೊಡಗು ಕಾಂಗ್ರೆಸ್‌ನಿಂದ ದೇವಾಲಯದಲ್ಲಿ ಪೂಜೆ

Thursday, October 24th, 2019
kodagu

ಮಡಿಕೇರಿ : ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ದೊರೆತ ಹಿನ್ನೆಲೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಸಂಭ್ರಮಾಚರಿಸಿತು. ನಗರದ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಾಗೂ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುವ ಮೂಲಕ ಜನಪ್ರಿಯ ಪಕ್ಷವೆನಿಸಿಕೊಂಡ ಕಾಂಗ್ರೆಸ್‌ನ್ನು ನೇರವಾಗಿ […]

ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ 52ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿ ಗಮನ ಸೆಳೆದ ಛದ್ಮವೇಷ ಸ್ಪರ್ಧೆ

Thursday, October 24th, 2019
chadmavesha

ಉಜಿರೆ : ಧರ್ಮಸ್ಥಳದಲ್ಲಿ ಗುರುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷಕದ 52ನೇ ವರ್ಧಂತ್ಯುತ್ಸವದ ಸಂಭ್ರಮ-ಸಡಗರ ಕೂಡಿತ್ತು. ದೇವಸ್ಥಾನ, ಹೆಗ್ಗಡೆಯವರ ಬೀಡು, ವಸತಿ ಛತ್ರಗಳನ್ನು ಪ್ರಾಕೃತಿಕ ಪರಿಕರಗಳಿಂದ ಅಲಂಕರಿಸಲಾಗಿತ್ತು.ದೇವಸ್ಥಾನ, ಬಸದಿಯಲ್ಲಿ ವಿಶೇಷ ಪೂಜೆ ನಡೆಯಿತು. ಧರ್ಮಸ್ಥಳದ ಭಕ್ತರು, ಅಭಿಮಾನಿಗಳು ಹಾಗೂ ಆಪ್ತರು ಹೆಗ್ಗಡೆಯವರನ್ನು ಭೇಟಿಯಾಗಿ ಫಲ-ಪುಷ್ಪ ಅರ್ಪಿಸಿ ಗೌರವಾರ್ಪಣೆ ಮಾಡಿದರು. ದೇವಳದ ನೌಕರರ ವೃಂದದವರ ಛದ್ಮವೇಷ ಸ್ಪರ್ಧೆ ಕಣ್ಮನ ಸೆಳೆಯಿತು. ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಿದರು. ಧರ್ಮಸ್ಥಳದಲ್ಲಿ ಗುರುವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂದರ್ಭ ನೌಕರರ ಛದ್ಮವೇಷ […]

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ರೆಡ್ ಅಲರ್ಟ್ ಘೋಷಣೆ

Thursday, October 24th, 2019
red-alert

ಮಂಗಳೂರು : ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ  ರೆಡ್ ಅಲರ್ಟ್ ಘೋಷಿಸಲಾಗಿದೆ. ಅರಬ್ಭಿ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ರೆಡ್ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಸೂಕ್ತ ಎಚ್ಚರಿಕೆ ವಹಿಸುವಂತೆ ಪ್ರಕಟನೆಯಲ್ಲಿ ತಿಳಿಸಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಆರಂಭವಾಗಿದ್ದು, ವಾಯುಭಾರ ಕುಸಿತ ಪ್ರಭಾವದಿಂದ ಕೇರಳ-ಕರ್ನಾಟಕ ಕರಾವಳಿ ಮತ್ತು […]