ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸೆಕೆಂಡರಿ ಸ್ಕೂಲ್ ಉದ್ಘಾಟನೆ
Saturday, July 2nd, 2022
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಶ್ರೀರಾಮ ಸೆಕೆಂಡರಿ ಸ್ಕೂಲ್ ಅನ್ನು ಶನಿವಾರ ವಿದ್ಯಾಕೇಂದ್ರದ ಪದವಿ ಸಭಾಂಗಣದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಉದ್ಘಾಟಿಸಿದರು. ಈ ವರ್ಷ ಸರಸ್ವತಿ ಪೂಜೆಗೆ ಹೊಸ ಶಿಕ್ಷಣ ನೀತಿಯ ಪುಸ್ತಕ ಹೊರತರುವ ಯೋಚನೆ ಇದೆ ಎಂದರು. ಸ್ವಾವಲಂಬಿ, ಸ್ವಾಭಿಮಾನದ ಸಮಾಜದ ನಿರ್ಮಾಣಕ್ಕೆ ಸ್ವಾತಂತ್ರ್ಯ ಬಂತು, ಶಿಕ್ಷಣ ವ್ಯವಸ್ಥೆಯೂ ವ್ಯಕ್ತಿಯನ್ನು ಸ್ವಾವಲಂಬಿಯನ್ನಾಗಿಸಬೇಕು ಎಂದರು. ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, […]